ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು:ಡಾ.ಸುಬ್ರಮಣ್ಯ
ಮೈಸೂರು: ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬೇಕು ಎಂದು ಶ್ರೀ ಕಾವೇರಿ ಪ್ರಥಮ ದರ್ಜೆ ಕಾಲೇಜಿನ ಆಡಳಿತಾಧಿಕಾರಿ ಡಾಕ್ಟರ್ ಸುಬ್ರಮಣ್ಯ ಸಿ ಇ ತಿಳಿಸಿದರು
ನಗರದ ಕುವೆಂಪು ನಗರದಲ್ಲಿರುವ ಶ್ರೀ ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಕ್ತ ಹೀನತೆ, ವಿವಿಧ ಕಾಯಿಲೆಗಳಿಂದ ಬಳಲುವವರು ಮತ್ತು ಅಪಘಾತದಂತಹ ತುರ್ತು ಸಂದರ್ಭಗಳನ್ನು ನಿಭಾಯಿಸಲು ರಕ್ತ ಸಂಗ್ರಹದ ಅಗತ್ಯವಿರುತ್ತದೆ. ಆದ್ದರಿಂದ ಪರೋಪಕಾರದ ಉದ್ದೇಶವುಳ್ಳ ಇಂತಹ ರಕ್ತದಾನ ಶಿಬಿರಗಳು ಹೆಚ್ಚೆಚ್ಚು ನಡೆಯಬೇಕು ಎಂದು ಆಶಿಸಿದರು.

ಈ ವೇಳೆ 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಪ್ರಾಂಶುಪಾಲರಾದ ಪದ್ಮಾವತಿ ಕೆ ಎಂ,ರೆಡ್ ಕ್ರಾಸ್ ಸೊಸೈಟಿ ಸಂಯೋಜಕರಾದ ಸೋನಾಕ್ಷಿ.ಸಿ ಸುರೇಶ್ ಹಾಗೂ ಕಾಲೇಜಿನ ಶಿಕ್ಷಕ ವೃದ್ಧ ಹಾಜರಿದ್ದರು.
ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು:ಡಾ.ಸುಬ್ರಮಣ್ಯ Read More