ಕೆಆರ್ ಐಡಿಎಲ್ ನಲ್ಲಿ ಭ್ರಷ್ಟಾಚಾರ ಆರೋಪ:ಸಿಬಿಐ ತನಿಖೆಗೆ ಅಶೋಕ್ ಆಗ್ರಹ

ಬೆಂಗಳೂರು: ಕರ್ನಾಟಕ ಮೂಲಸೌಕರ್ಯ ಅಭಿವದ್ಧಿ ನಿಗಮದ ಕೊಪ್ಪಳ ವಿಭಾಗದಲ್ಲಿ 93ಕ್ಕೂ ಹೆಚ್ಚು ಕಾಮಗಾರಿಗಳ ಹೆಸರಿನಲ್ಲಿ ಬೋಗಸ್ ಬಿಲ್ ಸೃಷ್ಟಿಸಿ 62 ಕೋಟಿ ರೂಪಾಯಿ ಗೋಲ್ಮಾಲ್ ನಡೆದಿರುವ ಹಗರಣ ಬೆಳಕಿಗೆ ಬಂದಿದ್ದು ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲಿಗೆ ಬಂದಿದೆ ಎಂದು ಆರ್.ಅಶೋಕ್ ದೂರಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಿಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ, ಅಕ್ರಮ, ಲೂಟಿ, ಅವ್ಯವಹಾರ ನಡೆಯದ ಒಂದಾದರೂ ಇಲಾಖೆ, ನಿಗಮ, ಮಂಡಳಿ ಇದೆಯೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾರವಾಗಿ ಪ್ರಶ್ನಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಆಯ್ತು ಮೂಡಾ ಆಯ್ತು, ಈಗ ಕೆಆರ್ ಐಡಿಎಲ್ ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ನಿಮ್ಮ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ಅವರು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ‌

ಕೆಆರ್ ಐಡಿಎಲ್ ನಲ್ಲಿ ಭ್ರಷ್ಟಾಚಾರ ಆರೋಪ:ಸಿಬಿಐ ತನಿಖೆಗೆ ಅಶೋಕ್ ಆಗ್ರಹ Read More

ಸಚಿವರ ಹನಿಟ್ರ್ಯಾಪ್‌, ನ್ಯಾಯಾಂಗ ತನಿಖೆ – ಸಿಬಿಐಗೆ ವಹಿಸಿ: ಆರ್‌.ಅಶೋಕ ಒತ್ತಾಯ

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೀಗೆ ಹೇಳಿ ಎಂದು ರಾಜಣ್ಣ ಅವರಿಗೆ ಸೂಚನೆ ನೀಡಿ ಕಳಿಸಿದ್ದಾರೆ ಎಂದು ಗೊತ್ತಾಗಿದೆ. ಇಷ್ಟೆಲ್ಲ ಆದ ಮೇಲೂ ಇದನ್ನು ತನಿಖೆ ಮಾಡದೆ ಸುಮ್ಮನೆ ಬಿಡಬಾರದು ಎಂದು ಹೇಳಿದರು.

ರಾಜಣ್ಣ ಅವರು ಪರಿಶಿಷ್ಟ ವರ್ಗಕ್ಕೆ ಸೇರಿದವರು, ಒಂದು ಕಡೆ ಕಾಂಗ್ರೆಸ್‌ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ದುರ್ಬಳಕೆ ಮಾಡುತ್ತಿದೆ. ಮತ್ತೊಂದು ಕಡೆ ಪರಿಶಿಷ್ಟ ವರ್ಗದವರ ಅಹವಾಲುಗಳನ್ನು ಆಲಿಸುತ್ತಿಲ್ಲ, ಕೂಡಲೇ ಸರ್ಕಾರ ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಸಚಿವ ಕೆ.ಎನ್‌.ರಾಜಣ್ಣ ಸದನದಲ್ಲೇ ಮಾತಾಡಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರ ಹೇಳಿಕೆ ಈಗ ಸದನದ ಆಸ್ತಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್‌ ನಡೆಯುತ್ತಿದೆ ಎಂದು ಛೇಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಹಲಾಲ್‌ ಬಜೆಟ್‌ ಮಂಡಿಸಿದ್ದಾರೆ. ಹಿಂದುಳಿದ ಜನರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಅಶೋಕ್ ತಿಳಿಸಿದರು.

ಸಚಿವರ ಹನಿಟ್ರ್ಯಾಪ್‌, ನ್ಯಾಯಾಂಗ ತನಿಖೆ – ಸಿಬಿಐಗೆ ವಹಿಸಿ: ಆರ್‌.ಅಶೋಕ ಒತ್ತಾಯ Read More

ಮುಡಾ ಕೇಸ್ ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ :ಸತ್ಯಕ್ಕೆ ಸಿಕ್ಕ ಜಯ- ತೇಜಸ್ವಿ

ಮೈಸೂರು:ಧಾರವಾಡ ಹೈಕೋರ್ಟ್ ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿರುವುದು ಸತ್ಯಕ್ಕೆ ಜಯ ಸಿಕ್ಕಿದಂತಾಗಿದೆ ಎಂದು
ಕೃಷ್ಣ ರಾಜ ಕ್ಷೇತ್ರದ ಯುವ ಕಾಂಗ್ರೆಸ್ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಸುಮಾರು 40 ವರ್ಷದ ರಾಜಕಾರಣದ ಇತಿಹಾಸದಲ್ಲಿ ಸಿದ್ದರಾಮಯ್ಯನವರು ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿಕೊಂಡು ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿ, ಉಪಮುಖ್ಯಮಂತ್ರಿಗಳಾಗಿ, ಸಚಿವರಾಗಿ ರಾಜ್ಯಕ್ಕೆ ಮತ್ತು ವಿಶೇಷವಾಗಿ ಮೈಸೂರಿಗೆ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಇಂತಹ ಧೀಮಂತ ನಾಯಕನ ವಿರುದ್ಧ ಬಿಜೆಪಿಯವರು ಮತ್ತು ಕಾಣದ ಕೈಗಳು ಎಷ್ಟೆ ಷಡ್ಯಂತ್ರ ಮಾಡಿದರೂ ಸತ್ಯಕ್ಕೆ ಜಯವಾಗಲಿದೆ ಎಂಬುದಕ್ಕೆ ಧಾರವಾಡ ಹೈಕೋರ್ಟ್ ತೀರ್ಪು ಸಾಕ್ಷಿ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.

ಮುಡಾ ಕೇಸ್ ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ :ಸತ್ಯಕ್ಕೆ ಸಿಕ್ಕ ಜಯ- ತೇಜಸ್ವಿ Read More

ಮುಡಾ ಕೇಸು ಸಿಬಿಐ ತನಿಖೆಗೆ ವಹಿಸಲು ಕೋರ್ಟ್‌ ನಿರಾಕರಣೆ: ಸಿದ್ದುಗೆ ಬಿಗ್‌ ರಿಲೀಫ್‌

ಧಾರವಾಡ: ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದ್ದು,ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಸಧ್ಯಕ್ಕೆ ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಯಿಂದ ಪಾರಾಗಿದ್ದಾರೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಜಾ ಮಾಡಿದೆ. ಸ್ನೇಹಮಯಿ ಕೃಷ್ಣ ಪರ ಮಣಿಂದರಸಿಂಗ್ ವಾದ ಮಂಡಿಸಿದ್ದರು.

ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಅಲ್ಲ ಎಂದು ಹೇಳಲು ಆಗುವುದಿಲ್ಲ, ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿ ತಾರತಮ್ಯ ಇದೆ‌ ಎಂದು ಹೇಳಲು ಆಧಾರ ಇಲ್ಲ,ಅದೊಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾ ತನಿಖೆ ಅಸಮರ್ಪಕ ಅಲ್ಲ ಎಂದು ಹೇಳಲು ಆಗಲ್ಲ. ಹೀಗಾಗಿ, ಸಿಬಿಐಗೆ ಇದನ್ನ ಕೊಡಲು ಹೈಕೋರ್ಟ್‌ ನಿರಾಕರಿಸಿದೆ.

ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆ ಪಕ್ಷಾತೀತ, ನಿಷ್ಪಕ್ಷಪಾತ ಅಥವಾ ಸಿಬಿಐ ತನಿಖೆಗೆ ನಿರ್ದೇಶಿಸಲು ಕಳಪೆಯಾಗಿದೆ ಎಂದು ದಾಖಲೆಯಲ್ಲಿರುವ ವಸ್ತು ವಿಷಯ ಸೂಚಿಸುವುದಿಲ್ಲ. ಪರಿಣಾಮವಾಗಿ ಸಿಬಿಐ ತನಿಖೆಯ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಏಕಸದಸ್ಯ ಪೀಠದ ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.

ಮುಡಾ ಕೇಸು ಸಿಬಿಐ ತನಿಖೆಗೆ ವಹಿಸಲು ಕೋರ್ಟ್‌ ನಿರಾಕರಣೆ: ಸಿದ್ದುಗೆ ಬಿಗ್‌ ರಿಲೀಫ್‌ Read More

ಸಿಬಿಐ ಅಧಿಕಾರಿ ಸೋಗಿನಲ್ಲಿ ನಿ.ಅಧಿಕಾರಿಗೆ 61 ಲಕ್ಷ ಪಂಗನಾಮ

ಮೈಸೂರು: ಸಿಬಿಐ ಅಧಿಕಾರಿ ಎಂದು ನಂಬಿಸಿ ನಿವೃತ್ತ ಅಧಿಕಾರಿಯೊಬ್ಬರಿಂದ 61 ಲಕ್ಷ ರೂಪಾಯಿ ಪಡೆದು‌ ವಂಚಿಸಿರುವ ಪ್ರಕರಣ ಮೈಸೂರಿನಲ್ಲಿ ನಡೆದಿದೆ.

ನಗರದ ಜಯಲಕ್ಷ್ಮಿಪುರಂ ನಿವಾಸಿ ಗೌರಿಶಂಕರ್ ಕೃಪಾನಿಧಿ (86) ಎಂಬುವರು ಹಣ ಕಳೆದುಕೊಂಡ ನಿವೃತ್ತ ಅಧಿಕಾರಿ.

ನಗರದ ಜಯಲಕ್ಷ್ಮಿಪುರಂ ನಿವಾಸಿ ಗೌರಿಶಂಕರ್ ಕೃಪಾನಿಧಿ (86) ಎಂಬುವರು ಹಣ ಕಳೆದುಕೊಂಡ ನಿವೃತ್ತ ಅಧಿಕಾರಿ.

ನವೆಂಬರ್ 16 ರಂದು ಗೌರಿಶಂಕರ್ ಅವರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ನಂಬಿಸಿ ಬ್ಯಾಂಕ್ ಖಾತೆ ಮಾಹಿತಿ ಪಡೆದುಕೊಂಡಿದ್ದಾನೆ.

ನಂತರ ಹಂತ ಹಂತವಾಗಿ 61 ಲಕ್ಷ ಹಣ ಪಡೆದು ನಂತರ ಫೋನ್ ಬಂದ್ ಮಾಡಿಕೊಂಡಿದ್ದಾನೆ. ಈ ಸಂಬಂಧ ಗೌರಿಶಂಕರ್ ಕೃಪಾನಿಧಿ ಅವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಿಬಿಐ ಅಧಿಕಾರಿ ಸೋಗಿನಲ್ಲಿ ನಿ.ಅಧಿಕಾರಿಗೆ 61 ಲಕ್ಷ ಪಂಗನಾಮ Read More

ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸುವಂತೆ ಹೈಕೋರ್ಟ್‌ಗೆ ಅರ್ಜಿ:ಸ್ನೇಹಮಯಿ ಕೃಷ್ಣ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವೆಬ್‌ಸೈಟ್‌ನಲ್ಲಿನ ಆದೇಶ ಪ್ರತಿಯಿಂದಲೇ ಎಫ್‌ಐಆರ್ ಮಾಡಿಕೊಳ್ಳಬಹುದು, ಇವತ್ತೇ ಎಫ್‌ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ನಮಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ, ಹಾಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ಕೊಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಿಎಂ ಮೇಲಿನ ಮುಡಾ ಪ್ರಕರಣದಲ್ಲಿ ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ ಎಂದಿದ್ದಾರೆ.

ಮುಡಾ ನಿವೇಶನ ಹಂಚಿಕೆಯಲ್ಲಿ ಪ್ರಭಾವ ಬೀರಿದ್ದಾರೆಂಬ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ. 3 ತಿಂಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಗಡುವು ವಿಧಿಸಿದೆ.

ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸುವಂತೆ ಹೈಕೋರ್ಟ್‌ಗೆ ಅರ್ಜಿ:ಸ್ನೇಹಮಯಿ ಕೃಷ್ಣ Read More