ರಾಜ್ಯದ ಹಿತಕ್ಕೆ ಮಾರಕವಾದ ನಿರಾಶಾದಾಯಕ ಬಜೆಟ್:ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ವಿತ್ತ‌ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್
ರಾಜ್ಯದ ಹಿತಕ್ಕೆ ಮಾರಕವಾದ ನಿರಾಶಾದಾಯಕ ಬಜೆಟ್ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಕೇಂದ್ರ ಸರ್ಕಾರದ ಬಜೆಟ್ ಕುರಿತು ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಿಎಂ,
ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟಿದ್ದ ಬೇಡಿಕೆಗಳಲ್ಲಿ ಒಂದನ್ನೂ ಸರ್ಕಾರ ಈಡೇರಿಸಿಲ್ಲ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಬಜೆಟ್ ನಲ್ಲಿ ಎಂ ಎಸ್ ಪಿ ಬಗ್ಗೆ ಚಕಾರ ಎತ್ತದಿರುವುದು ರೈತ ಸಮುದಾಯಕ್ಕೆ ಮಾಡಿದ ದೊಡ್ಡ ದ್ರೋಹ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ,ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನ ಕೇಳಬೇಕು‌ ಎಂದು ಸಿದ್ದು ತಿಳಿಸಿದರು.

ಆಂದ್ರ-ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಅನ್ಯಾಯ ಆಗುದೆ,ಜೆಡಿಎಸ್-ಬಿಜೆಪಿ ಮೈತ್ರಿ ಇದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಟೀಕಿಸಿದರು.

ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ,ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿ ದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನ: ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದು ಸಿದ್ದರಾಮಯ್ಯ ವಿಶ್ಲೇಷಿಸಿದರು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ 2024-25 ರಲ್ಲಿ 8,250 ಕೋಟಿ ಅನುದಾನ ಒದಗಿಸಿದ್ದರೆ, ಈ ಬಜೆಟ್‌ನಲ್ಲಿ 8,260 ಕೋಟಿ ಮಾತ್ರ ಒದಗಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನೂ ಹೆಚ್ಚಿಸಿಲ್ಲ.

ರೈತರ ಬೆಳೆಗಳಿಗೆ ನೀಡಲಾಗುವ ಬೆಳೆ ವಿಮೆಗೆ 2024-25 ರಲ್ಲಿ 15,864 ಕೋಟಿ ರೂಪಾಯಿಗಳನ್ನು ಒದಗಿಸಿದ್ದರೆ, ಈ ವರ್ಷ ಕೇವಲ 12,242 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.

ನಿರ್ಮಲಾ ಸೀತಾರಾಮನ್ ಅವರು ಪೋಷಣ್ ಅಭಿಯಾನ-2 ರ ಬಗ್ಗೆ ಬಜೆಟ್‌ನಲ್ಲಿ ಹೊಸದಾಗಿ ಮತ್ತು ದೊಡ್ಡದಾಗಿ ಪೋಷಣ್-2 ಎಂದು ಅನುಷ್ಠಾನ ಮಾಡುವುದಾಗಿ ಓದಿದರು. ಆದರೆ 2023-24 ರಲ್ಲಿ 21,810 ಕೋಟಿ ರೂ. ಅನುದಾನ ಖರ್ಚು ಮಾಡಿದ್ದರೆ, ಈ ವರ್ಷ ಕೇವಲ 150 ಕೋಟಿ ರೂಪಾಯಿಗಳನ್ನು ಮಾತ್ರ ಹೆಚ್ಚು ಮಾಡಿ 21,960 ಕೋಟಿ ರೂಪಾಯಿಗಳನ್ನು ಒದಗಿಸಿದ್ದಾರೆ.

ಯಥಾ ಪ್ರಕಾರ ಈ ಬಜೆಟ್‌ನಲ್ಲಿ ಮೇಕ್ ಇನ್ ಇಂಡಿಯಾ, ಸ್ಟಾರ್ಟಪ್ ಇಂಡಿಯಾ, ಸಬ್ ಕಾ ಸಾಥ್-ಸಬ್ ಕಾ ವಿಕಾಸ್, ಮುಂತಾದ ಪದಗಳನ್ನು ಸಚಿವರು ಉಪಯೋಗಿಸಿದರು. ಆದರೆ, ಮೇಕ್ ಇನ್ ಇಂಡಿಯಾಗೆ ಕೇವಲ 100 ಕೋಟಿ ರೂಪಾಯಿಗಳನ್ನು ಒದಗಿಸಿದ್ದಾರೆ,ಹಾಗಾಗಿ ಇದು ಬರಿ ಬಾಯಿ ಮಾತಿನಲ್ಲಿ ಹೊಟ್ಟೆ ತುಂಬಿಸುವ ಬಜೆಟ್ ಆಗಿದೆ ಎಂದು ಸಿಎಂ ಟೀಕಿಸಿದರು.

ಕೃಷಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡುವುದಾಗಿ ಬಜೆಟ್‌ನ ಆರಂಭದಲ್ಲೇ ಹೇಳಿದರು. ಆದರೆ ಒದಗಿಸಿರುವ ಅನುದಾನ ಮಾತ್ರ ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಿದೆ.
ಕಾಟನ್ ಟೆಕ್ನಾಲಜಿ ಮಿಷನ್‌ಗೆ ಕೇವಲ 500 ಕೋಟಿ ಇಟ್ಟಿದ್ದಾರೆ,
ದೇಶದ ಬಡವರಿಗೆ ಆಹಾರ ಖಾತ್ರಿ ಯೋಜನೆಗೆ 2024-25 ರಲ್ಲಿ 2.06 ಲಕ್ಷ ಕೋಟಿ ರೂಪಾಯಿ ಅನುದಾನ ಒದಗಿಸಿದ್ದರೆ, ಈ ಬಾರಿ 2.03 ಕೋಟಿ ಅನುದಾನ ಒದಗಿಸಿದ್ದಾರೆ.
ರೈಲ್ವೇ ಇಲಾಖೆಗೆ ನೀಡುವ ಅನುದಾನಗಳನ್ನೂ ಕಡಿಮೆ ಮಾಡಲಾಗಿದೆ ಹೀಗೆ ಈ ಬಾರಿಯ ಬಜೆಟ್ ನಿರಾಶಾದಾಯಕ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಹಿತಕ್ಕೆ ಮಾರಕವಾದ ನಿರಾಶಾದಾಯಕ ಬಜೆಟ್:ಸಿದ್ದರಾಮಯ್ಯ Read More

ಮಹಿಳೆ, ಕೃಷಿ,ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದ ಬಜೆಟ್

ನವದೆಹಲಿ: ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಈ ಬಾರಿಯ ಬಜೆಟ್ ನಲ್ಲಿ ಕೇಂದ್ರೀಕರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ದಾಖಲೆಯ ಎಂಟನೇ ಬಜೆಟ್ ಮಂಡಿಸಿದ ಸಚಿವರು,ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು.. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಜೆಟ್ ಮಂಡನೆ ವೇಳೆ ವಿರೋಧ ಪಕ್ಷಗಳು ಗದ್ದಲ ಮಾಡಿದರೂ‌ ಕೂಡಾ ಲೆಕ್ಕಿಸದೆ ಸಚಿವೆ ಮುಂದುವರಿಸಿದರು.

2025-26ರ ಬಜೆಟ್ನಲ್ಲಿ ಬಡತನ, ಯುವಕರು, ಮಹಿಳೆಯರು, ಕೃಷಿ, ಉತ್ಪಾದನೆ, ಎಂಎಸ್ಎಂಇಗಳು, ಉದ್ಯೋಗ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ 10 ಪ್ರಮುಖ ಅಭಿವೃದ್ಧಿ ಕ್ರಮಗಳನ್ನು ನೀಡಿದ್ದಾರೆ.

ಮಹಿಳೆ, ಕೃಷಿ,ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದ ಬಜೆಟ್ Read More

ಧನ್ ಧಾನ್ಯ ಕೃಷಿ ಯೋಜನೆ ಘೋಷಿಸಿದ ವಿತ್ತ ಸಚಿವೆ

ನವದೆಹಲಿ,ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ವಿಶೇಷವಾಗಿ ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ.

ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಶನಿವಾರ 2025-26ರ ಕೇಂದ್ರ ಬಜೆಟ್ ಮಂಡಿಸಿದ ಸಚಿವರು ಈ ಯೋಜನೆ ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಇದು ಸಾಂಸ್ಕೃತಿಕ ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
ತರಕಾರಿಗಳು, ಹಣ್ಣುಗಳ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಲಾಭದಾಯಕ ಬೆಲೆಗಳನ್ನು ಒದಗಿಸಲು ಸಮಗ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಕೃಷಿಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ಬೇರೆಡೆ ವಲಸೆ ತಡೆಯಬಹುದು. ಯುವಕರನ್ನು ಕೃಷಿಯತ್ತ ಸೆಳೆಯುವ ಉದ್ದೇಶ ಹೊಂದಿದೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ ಮಾಡಲಾಗುವುದು. ಹಣ್ಣು ಮತ್ತು ತರಕಾರಿ ಬೆಳೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಹತ್ತಿ ಬೆಳೆಗೆ ಈ ಐದು ವರ್ಷದಲ್ಲಿ ಆದ್ಯತೆ ನೀಡಲಿದ್ದು, ತಂತ್ರಜ್ಞಾನದ ಸಹಕಾರ ನೀಡಲಾಗುವುದು, ಇದು ಟೆಕ್ಸ್‌ಟೈಲ್ಸ್‌ ವಲಯದಲ್ಲಿ ಹೆಚ್ಚು ಆದಾಯ ತಂದು ಕೊಡಲಿದೆ ಎಂದು ತಿಳಿಸಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಿತಿ ಹೆಚ್ಚಳ ಮಾಡಲಾಗಿದೆ. ಐದು ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಧನ್ ಧಾನ್ಯ ಕೃಷಿ ಯೋಜನೆ ಘೋಷಿಸಿದ ವಿತ್ತ ಸಚಿವೆ Read More

ಮಧ್ಯಮ ವರ್ಗ, ವೇತನದಾರರಿಗೆ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗ ಮತ್ತು ವೇತನದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಶನಿವಾರ ಕೇಂದ್ರ ಬಜೆಟ್ ಮಂಡನೆ ಮಾಡಿದ ಸಚಿವರು, 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ. ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ವಿನಾಯಿತಿ ನೀಡಿದ್ದಾರೆ.

ಹಾಗಾಗಿ ಇದು ಮಧ್ಯಮವರ್ಗಕ್ಕೆ ಗಿಫ್ಟ್ ನೀಡಿದಂತಾಗಿದೆ‌, ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ನಿರ್ಮಲಾ ತಿಳಿಸಿದ್ದಾರೆ.

ಮಧ್ಯಮ ವರ್ಗ, ವೇತನದಾರರಿಗೆ ಗುಡ್ ನ್ಯೂಸ್ Read More