ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ತೇಜಸ್ವಿ ಆಗ್ರಹ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳನ್ನು ತೆರವು ಮಾಡಬೇಕೆಂದು‌
ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಪವಿತ್ರ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಅಂದವನ್ನು‌ ಹಾಳು ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ.

ಬೆಟ್ಟದಲ್ಲಿ ಯಾವುದೇ ಹೊಸ ಮನೆಗಳ ನಿರ್ಮಾಣ ಮಾಡಬಾರದು ಮತ್ತು ಮೊದಲ ಮಹಡಿ ಗಳನ್ನು ಕಟ್ಟಬಾರದು ಈಗಾಗಲೇ ಇರುವ ಮನೆಗಳ ಯಾತಸ್ಥಿತಿ ಕಾಪಾಡುವಂತೆ ಸರ್ಕಾರ ಆದೇಶ ನೀಡಿದ್ದರು ಕೆಲವರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಕನ್ನಡ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಮಿ ಆರೋಪ ಮಾಡಿದ್ದಾರೆ.

ಕೆಲವರು ಅರಣ್ಯ ಇಲಾಖೆಯ‌ ಗಡಿಯನ್ನು ದಾಟಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಅಂತವರ ಮೇಲೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ಮನೆಗಳ ನಿರ್ಮಾಣ ಕಾರ್ಯ ಸ್ಥಗಿತ ಗೋಳಿಸ ಬೇಕು ಎಂದು ತೇಜಸ್ವಿ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಈಗಾಗಲೇ ಅನೇಕ ಬಾರಿ ಚಾಮುಂಡಿ ಬೆಟ್ಟದಲ್ಲಿ ಕುಸಿತ ಉಂಟಾಗಿದ್ದು ಕಳೆದ ನಾಲ್ಕು ಐದು ವರ್ಷಗಳ ಹಿಂದೆಯೇ ನಂದಿ ರಸ್ತೆ‌ ಕುಸಿತ ವಾಗಿದ್ದರೂ ಈವರೆಗೂ ಕೂಡ ಸರಿಪಡಿಸಿಲ್ಲ.

ಚಾಮುಂಡಿ ಬೆಟ್ಟದಲ್ಲಿ ಕೆಲವರು ಬೆಟ್ಟದ ತುದಿಯಲ್ಲಿಯೂ ಕೂಡ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಮುಂದಿನ ದಿನಗಳಲ್ಲಿ ಇಂತಹಾ ಮನೆಗಳು ಕುಸಿತ ಊಂಟಾಗಿ ಸಾವು ನೋವುಗಳು ಊಂಟಗುವುದರಲ್ಲಿ ಸಂಶಯವೇ ಇಲ್ಲ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಇಲಾಖೆಯ‌ ಗಡಿಯನ್ನು ದಾಟಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಮನೆಗಳ ನಿರ್ಮಾಣ ಕಾರ್ಯ ಕೂಡಲೇ ಸ್ಥಗಿತ ಗೋಳಿಸಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ತೇಜಸ್ವಿ ಆಗ್ರಹ Read More

ಚಾ.ಬೆಟ್ಟ ಬಸ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ: 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಆಗ್ರಹ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಾಲ್ಕೈದು ದಿನದ ಹಿಂದೆ ಕೆಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ದುಃಖಕರ ಸಂಗತಿ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಈ ಅಪಘಾತದಲ್ಲಿ ಅನೇಕ ಜನರಿಗೆ ಗಾಯಗಳಾಗಿದ್ದು ಒಬ್ಬ ವ್ಯಕ್ತಿ ಕೂಡಾ ಮೃತಪಟ್ಟಿದ್ದಾರೆ.

ರಾಜ್ಯ ಸರ್ಕಾರ ಅಥವಾ ಜಿಲ್ಲಾಡಳಿತ ಈ ವರೆಗೆ ಗಾಯಾಳುಗಳಿಗೆ ಯಾವುದೇ ರೀತಿಯ ಚಿಕಿತ್ಸಾ ವೆಚ್ಚವನ್ನು ನೀಡಿಲ್ಲ ಮತ್ತು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರವನ್ನು ಘೋಷಿಸಿಲ್ಲ ಎಂದು ತೇಜಸ್ವಿ ಗಂಭೀರ ಆರೋಪ ಮಾಡಿದ್ದಾರೆ.

ಕೂಡಲೇ ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಒಂದು ಲಕ್ಷ ರೂಪಾಯಿ ಚಿಕಿತ್ಸಾ ವೆಚ್ಚವನ್ನು ನೀಡಬೇಕು ಮತ್ತು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯಿಸಿದ್ದಾರೆ

ಹಾಸನ ಗಣೇಶೋತ್ಸವ ಮೆರವಣಿಗೆಯಲ್ಲಿ ಖಾಸಗಿ ಟ್ರಕ್ ಅಪಘಾತದಲ್ಲಿ ಅನೇಕ ಜನ ಮೃತಪಟ್ಟಿದ್ದರು. ಅಂತವರಿಗೆ ಸರ್ಕಾರ ಮತ್ತು ಅಲ್ಲಿನ ಜನಪ್ರತಿನಿಧಿಗಳು ಸ್ಥಳಕ್ಕೆ ತೆರಳಿ ಪರಿಹಾರ ಹಣವನ್ನು ಘೋಷಣೆ ಮಾಡಿದ್ದರು,ಅದೂ ಒಳ್ಳೆಯದೆ. ಆದರೆ‌
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸರ್ಕಾರದ್ದೇ ಬಸ್ ಅಪಘಾತ ಮಾಡಿದ್ದರೂ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಈ ವರೆಗೂ ಪರಿಹಾರ ನೀಡದೆ ಇರುವುದು ಸರಿಯಲ್ಲ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಇನ್ನಾದರೂ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೇಜಸ್ವಿ ನಾಗಲಿಂಗಸ್ವಾಮಿ ರಾಜ್ಯ ಸರ್ಕಾರ ಮತ್ತು ಮೈಸೂರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಬೆಟ್ಟದಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪುತ್ರ ರಾಜೇಂದ್ರ ಅವರು ವಕೀಲರೂ ಆಗಿದ್ದು,ಬಸ್‌ ಅಪಘಾತ ಮಾಡಿದ ಚಾಲಕನ ವಿರುದ್ಧ ಕಠಿಣ ಕ್ರಮ‌ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ವರ್ಷಿಣಿ ನ್ಯೂಸ್ ವೆಬ್ ಪೋರ್ಟಲ್ ಜತೆ ಮಾತನಾಡಿದ ಅವರು, ನಮ್ಮ ತಂದೆಯ ದೇಹ ಅಪಘಾತವಾದ ಮರುದಿನ ಪತ್ತೆಯಾಗಿದೆ.ಅಲ್ಲಿಯ ತನಕ ಅವರ ದೇಹವನ್ನು ಹುಡುಕುವ ಕೆಲಸವನ್ನೂ ಮಾಡಿರಲಿಲ್ಲ ಎಂದು ನೊಂದು ನುಡಿದರು.

ಇದು‌ ಅತ್ಯಂತ ನಿರ್ಲಕ್ಷ್ಯ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.ತಕ್ಷಣ ನಿರ್ಲಕ್ಷ್ಯ ವಹಿಸಿದವರೆಲ್ಲರ ವಿರುದ್ಧ ಕ್ರಮ ಜರುಗಿಸಲೇಬೇಕೆಂದು ಅವರು ಆಗ್ರಹಿಸಿದ್ದಾರೆ.

ಚಾ.ಬೆಟ್ಟ ಬಸ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ: 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಆಗ್ರಹ Read More

ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಸಾಧ್ಯ: ಜಿ.ಟಿ.ದೇವೇಗೌಡ

ಮೈಸೂರು: ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಚಾಮುಂಡಿಬೆಟ್ಟ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಯೋಗ ದಸರಾ ಉಪ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಯೋಗ ಚಾರಣ ಮತ್ತು ಯೋಗ ನಮಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿ ಹುಟ್ಟಿದ ಯೋಗವು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ವಿಶ್ವ ಮನ್ನಣೆ ಪಡೆದುಕೊಂಡಿದೆ. ಯೋಗ ಮಾಡುವುದರಿಂದ ರಕ್ತ ಪರಿಚಲನ ಸರಿಯಾಗಿ ಮನಸ್ಸು ಮತ್ತು ದೇಹ ಆರೋಗ್ಯದಿಂದಿರಲು ಸಹಕಾರಿಯಾಗುತ್ತದೆ ಎಂದು ಹೇಳಿದರು ‌

ಯೋಗದ ಮೂಲಕ ದ್ಯಾನ ಮತ್ತು ಉಪಾಸನೆ ಮಾಡುವುದರಿಂದ ಮಾನವೀಯ ಮೌಲ್ಯಗಳು, ಶಿಸ್ತು, ಶಾಂತಿ ಹಾಗೂ ನೆಮ್ಮದಿಯನ್ನು ಕಂಡುಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರು ಯೋಗಾಭ್ಯಾಸ ಮಾಡಿದರೆ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ ಎಂದು ಜಿ.ಟಿ.ಡಿ ತಿಳಿಸಿದರು.

ಯೋಗ ದಸರಾ ಉಪ ಸಮಿತಿ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಮೈಸೂರಿನ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಯೋಗ ಚಾರಣ ಮತ್ತ ದುರ್ಗಾ ನಮಸ್ಕಾರದಲ್ಲಿ ಬೆಳಗ್ಗೆ 6 ಗಂಟೆಗೆ ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತಿ, ಚಾಮುಂಡಿ ಬೆಟ್ಟದ ಮೇಲಿನ ಆವರಣ ತಲುಪಿ, ವಜ್ರಾಸನ, ವೀರಾಸನ, ವೀರಭದ್ರ ಆಸನ ಹಾಗೂ ಸಿಂಹ ಘರ್ಜನೆ ಸೇರಿದಂತೆ ಹಲವು ಯೋಗಾ ಆಸನಗಳನ್ನು ಮಾಡುವುದರ ಜೊತೆಗೆ 5 ಸುತ್ತು ದುರ್ಗಾ ನಮಸ್ಕಾರ ಮಾಡಿದರು.

ಈ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಯೋಗಪಟುಗಳು ಹಾಗೂ ಯೋಗಾಸಕ್ತರು ಸೇರಿದಂತೆ 500ಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಜವರೇಗೌಡ, ಯೋಗ ದಸರಾ ಉಸ ಸಮಿತಿ ಅಧ್ಯಕ್ಷ ಎನ್.ಆರ್.ನಾಗೇಶ್, ಯೋಗ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ರಮ್ಯ ಕೆ, ಶಿಕ್ಷಣಾಧಿಕಾರಿ ನಿರೂಪ್ ವೆಸ್ಲಿ, ಯೋಗ ದಸರಾ ಸಮಿತಿ ಸಹ ಕಾರ್ಯಧ್ಯಕ್ಷರಾದ ಶಿಲ್ಪ ಕೆ, ಜಿಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಸಿ ಹಾಗೂ ಯುವ ದಸರಾ ಉಪ ಸಮಿತಿ ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಸಾಧ್ಯ: ಜಿ.ಟಿ.ದೇವೇಗೌಡ Read More

ಚಾ.ಬೆಟ್ಟದಲ್ಲಿ ಅಪಘಾತ;ಗಾಯಾಳುಗಳಿಗೆ 1 ಲಕ್ಷ ರು ಚಿಕಿತ್ಸಾ ವೆಚ್ಚ ನೀಡಿ-ತೇಜಸ್ವಿ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಕೆಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಒಂದು ಲಕ್ಷ ರೂ ಚಿಕಿತ್ಸಾ ವೆಚ್ಚ ನೀಡಬೇಕೆಂದು ಸರ್ಕಾರವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಬಸ್ ಚಾಲಕನ ನಿರ್ಲಕ್ಷ್ಯದಿಂದ ಕಾರು, ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ಗಾಯಗಳಾಗಿರುವುದು ಬೇಸರದ ಸಂಗತಿ ಎಂದು ತಿಳಿಸಿದ್ದಾರೆ.

ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಗಂಭೀರ ಅನಾಹುತ ಸಂಭವಿಸುವುದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ ಎಂದು ತಿಳಿಸಿದ್ದಾರೆ_

ಈ ಅಪಘಾತಕ್ಕೆ ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತೇಜಸ್ವಿ ಆರೋಪಿಸಿದ್ದಾರೆ.

ಚಾಲಕನ ಮೇಲೆ ಈಗಾಗಲೇ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಚಾಲಕನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ತೇಜಸ್ವಿ ಒತ್ತಾಯಿಸಿದ್ದಾರೆ.

ಈ ಘಟನೆಯಿಂದ ಕಾರುಗಳಿಗೆ ಸಣ್ಣಪುಟ್ಟ ಹಾನಿಯಾಗಿದ್ದು, ವಿದ್ಯುತ್ ಕಂಬಗಳು ಒಡೆದಿವೆ. ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಗಾಯಗೊಂಡವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ,
ಆದರೆ ಕೆಲವು ಪ್ರಯಾಣಿಕರಿಗೆ ಮೂಗೇಟು ಬಿದ್ದಿದ್ದು ಮೂಳೆ ಮುರಿತ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚು ಗಾಯಗೊಂಡವರನ್ನು ಗುರುತಿಸಿ ಒಂದು ಲಕ್ಷ ರೂ ಚಿಕಿತ್ಸಾ ವೆಚ್ಚವನ್ನು ನೀಡುವಂತೆ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಚಾ.ಬೆಟ್ಟದಲ್ಲಿ ಅಪಘಾತ;ಗಾಯಾಳುಗಳಿಗೆ 1 ಲಕ್ಷ ರು ಚಿಕಿತ್ಸಾ ವೆಚ್ಚ ನೀಡಿ-ತೇಜಸ್ವಿ Read More

ಚಾಮುಂಡಿ ಬೆಟ್ಟದ ಮಹಿಷ ವೃತ್ತದಲ್ಲಿ 144 ಸೆಕ್ಷನ್ ಜಾರಿ‌

ಮೈಸೂರು: ಚಾಮುಂಡಿ ಬೆಟ್ಟದ ಮಹಿಷ ವೃತ್ತದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಮಹಿಷ ವಿಗ್ರಹದ ಸುತ್ತ 200 ಮೀಟರ್ ವರೆಗರ ನಿಷೇದಾಜ್ಞೆ ಜಾರಿ ಮಾಡಲಾಗಿದ್ದು,
ನಿನ್ನೆ ಮಧ್ಯರಾತ್ರಿಯಿಂದ ನಾಳೆ ಬೆಳಿಗ್ಗೆ 6 ಗಂಟೆ ತನಕ ಸೆಕ್ಷನ್ 144 ಜಾರಿ ಇರುತ್ತದೆ.

ಮಹಿಷ ಆಚರಣೆ ಸಮಿತಿ ಪುಷ್ಪಾರ್ಚನೆ ಅನುಮತಿ ಕೇಳಿದ್ದರ ಹಿನ್ನಲೆಯಲ್ಲಿ
ಚಾಮುಂಡಿ ಬೆಟ್ಟದ ಮಹಿಷ ವಿಗ್ರಹದ ಸುತ್ತ 200 ಮೀಟರ್ 144 ಜಾರಿ ಮಾಡಲಾಗಿದ್ದು,
ಮಹಿಷ ವಿಗ್ರಹ ಪೂಜೆಗೆ ಪೊಲೀಸರು ತಡೆ ನೀಡಿದ್ದಾರೆ.

ಆದರೆ‌ ಭಕ್ತರು ಎಂದಿನಂತೆ ಚಾಮುಂಡಿ ಬೆಟ್ಟಕ್ಕೆ ಹೋಗಬಹುದಾಗಿದೆ.

ಭಕ್ತರಿಗೆ ಎಂದಿನಂತೆ ತಾಯಿ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು,ಬೆಟ್ಟಕ್ಕೆ ಯಾವುದೇ ಆತಂಕವಿಲ್ಲದೆ ಬರಬಹುದಾಗಿದೆ.

ಚಾಮುಂಡಿ ಬೆಟ್ಟದ ಮಹಿಷ ವೃತ್ತದಲ್ಲಿ 144 ಸೆಕ್ಷನ್ ಜಾರಿ‌ Read More

ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ:ದೇವಿಗೆ ಪುಷ್ಪ ನಮನ‌ ಸಲ್ಲಿಸಿದ ಬಾನು

ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 10 ರಿಂದ 10.40 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು.

ನವವಧುವಿನಂತೆ ಶೃಂಗಾರಗೊಂಡಿದ್ದ ಚಾಮುಂಡಿ ಬೆಟ್ಟದ ಸಮೀಪದ ಬೃಹತ್ ವೇದಿಕೆಯಲ್ಲಿ ನಾಡಹಬ್ಬ 415ನೇ ದಸರಾ ಮಹೋತ್ಸವಕ್ಕೆ ಸಾಹಿತಿ, ಬೂಕರ್ ಪ್ರಶಸ್ತಿ ವಿಜೇತರಾದ ಭಾನು ಮುಷ್ತಾಕ್ ಅವರು ಚಾಮುಂಡೇಶ್ವರಿ ದೇವಿಯ ವಿಗ್ರಹಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಉದ್ಘಾಟನಾ ಭಾಷಣ ಮಾಡಿದ ಬಾನು ಮುಷ್ತಾಕ್ ಅವರು,ದಸರಾ ಕೇವಲ ಹಬ್ಬವಲ್ಲ ಅದು ಶಾಂತಿಯ ಸಂಕೇತ, ಹೃದಯಗಳನ್ನು ಒಂದು ಮಾಡುವ ಸೌಹಾರ್ದತೆಯ ಸಾಂಸ್ಕೃತಿಕ‌ ಹಬ್ಬವಾಗಿದೆ ಎಂದು ಹೇಳಿದರು.

ಸಂಸ್ಕೃತಿಯೇ ನಮ್ಮ ಬೇರು, ನೂರಾರು ದೀಪಗಳನ್ನು ಬೆಳಗಿಸಿದ್ದೇನೆ, ಮಂಗಳಾರತಿ ಸ್ವೀಕರಿಸಿದ್ದೇನೆ, ಪುಷ್ಪಾರ್ಚನೆ ಮಾಡಿದ್ದೇನೆ ಎಂದು ಹೇಳುವ ಮೂಲಕ ತಮ್ಮನ್ನು ವಿರೋಧಿಸಿದವರಿಗೆ ಅವರು ಟಾಂಗ್ ನೀಡಿದರು.

ಈ ನೆಲದ ಪರಂಪರೆ ಸರ್ವಜನಾಂಗದ ಶಾಂತಿಯ ತೋಟ ಅಂತ ಹೇಳುತ್ತದೆ,ಪ್ರತಿ ಹೂ ತನ್ನ ತೋಟದಲ್ಲಿ ಅರಳಲಿ, ಒಟ್ಟಿಗೆ ಸೇರಿದಾಗ ಎಲ್ಲರೂ ಒಂದಾಗಲಿ, ನಾವೆಲ್ಲರೂ ಒಂದೇ ಗಗನದ ಪಯಣಿಗರು, ಭೂಮಿ ಯಾರನ್ನು ಹೊರ ತಳ್ಳೋದಿಲ್ಲ, ಮನುಷ್ಯ ಮಾತ್ರ ಗಡಿ ಹಾಕುತ್ತಾನೆ, ಇದನ್ನು ನಾವೇ ಅಳಿಸಬೇಕು, ಅಕ್ಷರಗಳಿಂದ ನಾವು ಗೆಲ್ಲಬೇಕು ಎಂದು ವಿರೋಧ ಮಾಡಿದವರಿಗೆ ಭಾಷಣದ ಮೂಲಕ ಬಾನು ಮುಷ್ತಾಕ್ ಟಾಂಗ್ ಕೊಟ್ಟರು.

ಕೃಷ್ಣರಾಜ ಒಡೆಯರ್ ಅವರು ಸಾಮಾಜಿಕ ನ್ಯಾಯದ ದೊರೆ ಆಗಿದ್ದರು. ಭೇದ ಭಾವ ತೋರಲಿಲ್ಲ. ಶಕ್ತಿಯನ್ನು ಹಂಚಿಕೊಂಡರೆ ಧೀರ್ಘ ಕಾಲ ಉಳಿಯುತ್ತೆ ಅಂತ ಹೇಳಿದ್ದಾರೆ ಎಂದು ಸ್ಮರಿಸಿದರು.

ನಾನು ಒಬ್ಬ ಸಾಹಿತಿ, ಲೇಖಕಿ. ಸಾಹಿತ್ಯದ ಮೂಲಕ ಸಂದೇಶ ಸಾರುತ್ತೇನೆ. 10 ವರ್ಷದ ಹಿಂದೆ ಬರೆದಿದ್ದ ಪ್ರಕಟಣೆ ಆಗಿದೆ, ಬಾಗಿನ ಅಂತ ಅದರ ಹೆಸರು. ಪ್ರೀತಿಯ ಸಮಾಜವ ಕಟ್ಟೋಣ ಎಲ್ಲರಿಗೂ ಸಮಪಾಲು ಸಮಬಾಳು ಇರಲಿ ಎಂದು ಬಾನು ಮುಷ್ತಾಕ್ ಹಾರೈಸಿದರು.

ನನ್ನ ಹಿಂದೂ ಧರ್ಮದ ಸಂಬಂಧ ನನ್ನ ಆತ್ಮಕಥೆಯಲ್ಲಿ ಬರೆದಿದ್ದೇನೆ. ಅದು ನಾಳೆ ಪ್ರಕಟ ಆಗತ್ತಿದೆ, ಎಷ್ಟೇ ಸವಾಲು ಬಂದರೂ ದಿಟ್ಟವಾಗಿ ನನ್ನನ್ನು ಆಹ್ವಾನ ನೀಡಿ ನೈತಿಕ ಬೆಂಬಲ ನೀಡಿದ ಮುಖ್ಯ ಮಂತ್ರಿಗಳು ಮತ್ತು ಜಿಲ್ಲಾಡಳಿತಕ್ಕೆ ನನ್ನ ಧನ್ಯವಾದಗಳು ಎಂದು ಬಾನು ಮುಸ್ತಾಕ್ ತಿಳಿಸಿದರು.

ಇದೇ ವೇಳೆ ಬಾನು ಮುಸ್ತಾಕ್ ಅವರು ರಚಿಸಿದ್ದ 10 ವರ್ಷ ಹಿಂದಿನ ಕವನ ಒಂದನ್ನು ವಾಚಿಸಿದರು.

ನನ್ನ ಸ್ನೇಹಿತೆ ಬೂಕರ್ ಪ್ರಶಸ್ತಿ ಸಂದರ್ಭದಲ್ಲಿ ನನ್ನನ್ನು ಚಾಮುಂಡಿ ಬೆಟ್ಟಕ್ಕೆ ಕರೆ ತರುತ್ತೇನೆ ಎಂದು ಹರಕೆ ಹೊತ್ತಿದ್ದಳು,ಆದರೆ ಬರಲಾ ಗಿರಲಿಲ್ಲ,ಆದರೆ ಈಗ ಚಾಮುಂಡೇಶ್ವರಿ ದೇವತೆಯೇ ನನ್ನನ್ನು ಆಕೆಯ ದರ್ಶನಕ್ಕೆ ಕರೆಸಿಕೊಂಡಿದ್ದಾಳೆ ಎಂದು ಭಾನು ಮಷ್ತಾಕ್ ಹೇಳಿದರು.

ಇಲ್ಲಿಗೆ ಬರಲು ನನಗೆ ಹಲವು ಅಡೆತಡೆಗಳು ಆಗಿತ್ತು ಆದರೆ ಅದೆಲ್ಲವನ್ನು ಕಳೆದು ದೇವಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ ಎಂದು ಪುನರುಚ್ಛರಿಸಿದರು.

ನನ್ನ ಮಾವ ಮೊಹಮ್ಮದ್ ಘೋಷ್ ಅವರು ಮೈಸೂರು ಅರಸರ ಅಂಗರಕ್ಷಕ ಪಡೆಯ ಸೈನಿಕರಾಗಿ ಸೇವೆ ಸಲ್ಲಿಸಿದ್ದಾರೆ, ಮಹಾರಾಜರು ಒಬ್ಬ ಮುಸ್ಲಿಮನನ್ನು ನಂಬಿ ಆತನನ್ನು ತಮ್ಮ ರಕ್ಷಣಾ ಪಡೆಯಲ್ಲಿ ಇಟ್ಟುಕೊಂಡಿದ್ದು ವಿಶೇಷವಾಗಿತ್ತು ಎಂದು ಅವರು ಸ್ಮರಿಸಿದರು.

ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್.ಸಿ. ಮಹದೇವಪ್ಪ, ಶಿವರಾಜ್ ತಂಗಡಗಿ,ಹೆಚ್.ಕೆ ಪಾಟೀಲ್,ಕೆ.ಹೆಚ್. ಮುನಿಯಪ್ಪ,ಕೆ. ವೆಂಕಟೇಶ್, ಶಾಸಕರುಗಳಾದ ಜಿ ಟಿ ದೇವೇಗೌಡ,ಟಿ.ಎಸ್. ಶ್ರೀವತ್ಸ, ತನ್ವೀರ್ ಸೇಟ್, ಶಿವಕುಮಾರ್, ಹರೀಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ:ದೇವಿಗೆ ಪುಷ್ಪ ನಮನ‌ ಸಲ್ಲಿಸಿದ ಬಾನು Read More

ದಸರಾ ಉದ್ಘಾಟನೆ ವೇಳೆ ಅತಿ ಹೆಚ್ಚು ಮುಂಜಾಗ್ರತೆ ವಹಿಸಿ:ಡಿ ಜಿ‌‌ ಸೂಚನೆ

ಮೈಸೂರು: ದಸರಾ ಮಹೋತ್ಸವ ಉದ್ಘಾಟಕರ ವಿಚಾರದಲ್ಲಿ ವಿವಾದ ಇರುವ ಕಾರಣ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ವೇಳೆ ಪ್ರತಿಭಟನೆ, ಗೌಜಲು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಸೂಚನೆ ನೀಡಿದರು.

ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ದಸರಾ ಭದ್ರತೆ ಸಂಬಂಧ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಅವರು‌ ಈ ಆದೇಶ ನೀಡಿದರು.

ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಬೇಕು. ಹಂತ ಹಂತವಾಗಿ ಭದ್ರತಾ ಕಾರ್ಯ ಹೆಚ್ಚಿಸಬೇಕು. ದಸರಾ ಉದ್ಘಾಟಕರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಬಂದು ಕಾರ್ಯಕ್ರಮ ಮುಗಿಸಿ ಸುರಕ್ಷಿತವಾಗಿ ತೆರಳುವವರೆಗೆ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.

ಸೆ. 22ರಿಂದ ಅ. 2ರವರೆಗೆ ನಡೆಯಲಿರುವ ದಸರಾ ಉತ್ಸವಕ್ಕೆ ಸ್ಥಳೀಯರು ಸೇರಿದಂತೆ ಲಕ್ಷಾಂತರ ಪ್ರವಾಸಿಗರು ಆಗಮಿಸಲಿದ್ದು, ಪ್ರಮುಖ ಕಾರ್ಯಕ್ರಮ ಸೇರಿದಂತೆ ಎಲ್ಲೆಡೆ ನಡೆಯಲಿರುವ ಸಮಾರಂಭಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಬೇಕೆಂದು ಆದೇಶಿಸಿದರು.

ಅರಮನೆ ಸೇರಿದಂತೆ ಪಂಜಿನ ಕವಾಯತು ಮೈದಾನ, ಆಹಾರ ಮೇಳ ಮತ್ತು ಯುವ ದಸರಾ ಕಾರ್ಯಕ್ರಮಗಳಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಂತಹ ಪ್ರಕರಣ ನಡೆಯದಂತೆ ಸಾರ್ವಜನಿಕರ ಮೇಲೆ ನಿಗಾವಹಿಸಬೇಕು.

ವಿಜಯದಶಮಿ ಮೆರವಣಿಗೆ, ಟಾರ್ಚ್‌ಲೈಟ್ ಪರೇಡ್ ಮೈದಾನ, ಚಾಮುಂಡಿಬೆಟ್ಟ, ಯುವ ದಸರಾ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ದಸರಾ ವಸ್ತುಪ್ರದರ್ಶನ, ವೈಮಾನಿಕ ಪ್ರದರ್ಶನದಂತಹ ಕಾರ್ಯಕ್ರಮ ನಡೆಯುವ ಸ್ಥಳದಲ್ಲೂ ಮೆಟಲ್ ಡಿಟೆಕ್ಟರ್ ಅಳವಡಿಸಿ, ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಪ್ರವೇಶಾವಕಾಶ ನೀಡಬೇಕು ಎಂದು ಸೂಚಿಸಿದರು.

ಮೈಸೂರು ನಗರ ಪೊಲೀಸ್ ಘಟಕವು ಜಿಲ್ಲಾಡಳಿತದೊಂದಿಗೆ ನಿರಂತರ ಚರ್ಚೆ ನಡೆಸಿ ದಸರಾ ಬಂದೋಬಸ್ತ್ ಯೋಜನೆಯನ್ನು ಅಂತಿಮಗೊಳಿಸಬೇಕು ಎಂದು ಡಾ.ಎಂ.ಎ.ಸಲೀಂ ಸೂಚಿಸಿದರು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿಗಳಾದ ಆರ್.ಎನ್.ಬಿಂದು ಮಣಿ, ಕೆ.ಎಸ್.ಸುಂದರ್ ರಾಜ್, ಸಿದ್ದನಗೌಡ ಪಾಟೀಲ್, ಅಶ್ವಾರೋಹಿ ದಳದ ಪೊಲೀಸ್ ಕಮಾಂಡೆಂಟ್ ಎ.ಮಾರುತಿ, ನಗರ ಸಂಚಾರ ವಿಭಾಗದ ಎಸಿಪಿ ಎಂ.ಶಿವಶಂಕರ್, ಅರಮನೆ ಭದ್ರತಾ ವಿಭಾಗದ ಎಸಿಪಿ ಚಂದ್ರಶೇಖರ್ ಸೇರಿದಂತೆ ಎಲ್ಲಾ ಉಪ ವಿಭಾಗಗಳ ಎಸಿಪಿಗಳು ಉಪಸ್ಥಿತರಿದ್ದರು.

ದಸರಾ ಉದ್ಘಾಟನೆ ವೇಳೆ ಅತಿ ಹೆಚ್ಚು ಮುಂಜಾಗ್ರತೆ ವಹಿಸಿ:ಡಿ ಜಿ‌‌ ಸೂಚನೆ Read More

ಸೆ.9 ರಂದು ದಲಿತ ಮಹಾಸಭಾ ದಿಂದ ಚಾಮುಂಡಿ ನಡಿಗೆ:ಅನುಮತಿಗೆ ಮನವಿ

ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆ ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದ್ದು ಇದಕ್ಕೆ ಪ್ರತಿಯಾಗಿ ದಲಿತ ಮಹಾಸಭಾ ಚಾಮುಂಡಿ ನಡಿಗೆ ಆಯೋಜಿಸಿದೆ.

ರಾಜಕೀಯಕ್ಕೆ ಹಾಗೂ ಕೋಮುಗಲಭೆ ಸೃಷ್ಟಿಸಲು ಬಳಸಿಕೊಳ್ಳೂತ್ತಿರುವವರ ವಿರುದ್ಧ
ಸೆ.9 ರಂದು ಕುರುಬರಹಳ್ಳಿ ವೃತ್ತದಿಂದ
ಚಾಮುಂಡಿ ನಡಿಗೆ ಮಾಡಲು ನಿರ್ಧರಿಸಿದ್ದು ಅನುಮತಿ ನೀಡುವಂತೆ ದಲಿತ ಮಹಾಸಭಾ ಅಧ್ಯಕ್ಷ ಎಸ್.ರಾಜೇಶ್ ಅವರು ಪೊಲೀಸ್ ಆಯಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಈ ಹಿಂದೆ ನಿಸಾರ್ ಅಹಮದ್ ಹಾಗೂ ಜೈನ ಸಮುದಾಯಕ್ಕೆ ಸೇರಿದ್ದ ಹಂಪಾ ನಾಗರಾಜ ಅವರನ್ನು ಕರೆದು ದಸರಾ ಉದ್ಘಾಟಿಸುವ ಸಂದರ್ಭದಲ್ಲಿ ಬಿಜೆಪಿ ಮತ್ತು ಹಿಂದು ಸಂಘಟನೆಯೆಂದು ಹೇಳಿಕೊಳ್ಳುತ್ತಿರುವವರು ಚಕಾರವೆತ್ತಿರಲಿಲ್ಲ. ಆದರೆ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತರಾಗಿರುವ ಬಾನು ಮಸ್ತಾಕ್ ಅವರನ್ನು ದಸರಾ ಉದ್ಘಾಟಿಸಲು ಸರ್ಕಾರ ಅಹ್ವಾನ ಮಾಡಿರುವುದನ್ನು ಕೆಲ ಸಂಘಟನೆಗಳು ವಿರೋಧಿಸುವುದರ ಮೂಲಕ ನಗರದಲ್ಲಿ ಕೋಮು ಗಲಭೆ ಸೃಷ್ಟಿಸಬೇಕೆಂದು ಪ್ರಯತ್ನ ನಡೆಯುತ್ತಿದೆ.

ಆದ್ದರಿಂದ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಸುಮಾರು 10000 ಜನರು ದಿನಾಂಕ 9 ರಂದು ಬೆಳಿಗ್ಗೆ 7.30ಕ್ಕೆ ಚಾಮುಂಡಿತಾಯಿಯನ್ನು ರಾಜಕೀಯಗೊಳಿಸದಿರಿ ಹಾಗು ಕೋಮುಗಲಭೆ ಸೃಷ್ಟಿಸದಿರಿ” ಎಂಬ ಘೋಷವಾಕ್ಯದಡಿ ಚಾಮುಂಡಿಬೆಟ್ಟ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ,ಅದಕ್ಜಾಗಿ ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಸೆ.9 ರಂದು ದಲಿತ ಮಹಾಸಭಾ ದಿಂದ ಚಾಮುಂಡಿ ನಡಿಗೆ:ಅನುಮತಿಗೆ ಮನವಿ Read More

ಅರವಿಂದ್ ಬೆಲ್ಲದ್ ಹುಟ್ಟು ಹಬ್ಬ: ಸಾಮಾಜಿಕ ಸೇವಾಕಾರ್ಯ

ಮೈಸೂರು: ಬಿಜೆಪಿ ಮುಖಂಡ ಜಿ ಎಂ ಪಂಚಾಕ್ಷರಿ ಅವರ ನೇತೃತ್ವದಲ್ಲಿ
ಚಾಮುಂಡಿ ಬೆಟ್ಟದಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಂತರ ನಗರದ ಕೃಷ್ಣಮೂರ್ತಿಪುರಂ
ಶಾರದಾ ನೆಲೆ ಉಚಿತ ವಿದ್ಯಾರ್ಥಿನಿಲಯದ ಮಕ್ಕಳ ಜೊತೆ ಕೇಕ್ ಕಟ್ ಮಾಡಿ
ಮಕ್ಕಳಿಗೆ ಭೋಜನದ ವ್ಯವಸ್ಥೆ ಮಾಡುವ ಮೂಲಕ ಅರವಿಂದ್ ಬೆಲ್ಲದ್ ಅವರ ಜನುಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಜಿ.ಎಂ ಪಂಚಾಕ್ಷರಿ ಅವರು,ಆರ್ ಎಸ್ ಎಸ್ ಮೂಲ ದಿಂದ ಗುರುತಿಸಿಕೊಂಡು ಕ್ಷೇತ್ರದ ಹ್ಯಾಟ್ರಿಕ್ ಶಾಸಕ ಎಂದೆ ಹೆಸರು ಮಾಡಿರುವ
ಅರವಿಂದ್ ಬೆಲ್ಲದ್ ಅವರಿಗೆ
ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಉನ್ನತ ಸ್ಥಾನ ಸಿಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಎಂ.ಡಿ ಪಾರ್ಥಸಾರಥಿ ,ಸುಚೇಂದ್ರ
ಮತ್ತಿತರರು ಹಾಜರಿದ್ದರು.

ಅರವಿಂದ್ ಬೆಲ್ಲದ್ ಹುಟ್ಟು ಹಬ್ಬ: ಸಾಮಾಜಿಕ ಸೇವಾಕಾರ್ಯ Read More

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಟಿ ಭವ್ಯ

ಮೈಸೂರು: ಕೊನೆಯ ಆಷಾಢ ಶುಕ್ರವಾರ ಪ್ರಯುಕ್ತ ಹಿರಿಯ ನಟಿ ಭವ್ಯ ಅವರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು.

  • ಭವ್ಯ ಅವರು ಸರತಿ ಸಾಲಿನಲ್ಲೇ ಆಗಮಿಸಿದರು.

ಶಕ್ತಿ ದೇವತೆ ಚಾಮುಂಡೇಶ್ವರಿ ಅಮ್ಮನ ದರ್ಶನ ಪಡೆದ ನಟಿ ಭವ್ಯ ಅವರು ಪ್ರಸಾದ ಸ್ವೀಕರಿಸಿ ಪುನೀತರಾದರು.

ಭವ್ಯ ಅವರೊಂದಿಗೆ ಕುಟುಂಬಸ್ಥರು ಹಾಗೂ ಸ್ಥಳೀಯ ಮುಖಂಡರಾದ ಜಿ ಶ್ರೀನಾಥ್ ಬಾಬು ಇದ್ದರು.

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಟಿ ಭವ್ಯ Read More