ಮೋದಿ ಅವರಿಂದ ಮಾತ್ರ ಮೇಕೆದಾಟು ಯೋಜನೆ ಸಾಧ್ಯ:ಹೆಚ್ ಡಿ ಡಿ

ಚನ್ನಪಟ್ಟಣ: ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದರು.

ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಮಾತನಾಡಿದ ದೇವೇಗೌಡರು,ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌‌ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು ಮಾತಿಲ್ಲ, ಆದರೆ ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ಮೇಕೆದಾಟು ಯೋಜನೆ ಬಗ್ಗೆ ನಾನು ಮೋದಿ ಅವರಿಗೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ ಎಂದು ತಿಳಿಸಿದರು.

ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು ಎಂದು ಕಿಡಿಕಾರಿದರು.

ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು, ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ. ನಿಮ್ಮನ್ನು ‌ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ ಎಂದರು ದೇವೇಗೌಡರು ನುಡಿದರು.

ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ ಎಲ್ಲಿಯ ಡಿಕೆ,ಎಲ್ಲಿಯ ಹೆಚ್ ಡಿ ಕೆ
ಎಂದು ಗುಡುಗಿದರು.

ನಿಖಿಲ್ ನ ನಾನೇ ರಾಜ್ಯ ನಾಯಕನನ್ನಾಗಿ ಮಾಡುತ್ತೇನೆ ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದು ದೇವೆಗೌಡರು ಪ್ರಕಟಿಸಿದರು.

ಮೋದಿ ಅವರಿಂದ ಮಾತ್ರ ಮೇಕೆದಾಟು ಯೋಜನೆ ಸಾಧ್ಯ:ಹೆಚ್ ಡಿ ಡಿ Read More

ಬ್ರಹ್ಮಣಿಪುರ ಗ್ರಾಮದಲ್ಲಿ ನಿಖಿಲ್ ಪರ ಜೆಡಿಎಸ್,ಬಿಜೆಪಿ ಮತ ಪ್ರಚಾರ

ಚನ್ನಪಟ್ಟಣ: ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ಅವರ ಪರ ಇಂದು ಸಂಜೆ
ಬ್ರಹ್ಮಣಿಪುರ ಗ್ರಾಮದಲ್ಲಿ ಜೆಡಿಎಸ್,ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರ ನಡೆಸಿದರು.

ಬ್ರಹ್ಮಣಿಪುರ ಗ್ರಾಮದ ಪ್ರತಿ ಮನೆಗಳಿಗೂ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಿರಿಯಾಪಟ್ಟಣದ ಮಾಜಿ ಶಾಸಕ ಮಹದೇವ್, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಆರ್. ಲಿಂಗಪ್ಪ, ಲೋಕೇಶ್, ಮೈಸೂರು ನಗರದ ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ನವೀನ್, ವೆಂಕಟೇಶ್ ಹಾಗೂ ಗ್ರಾಮದ ಮುಖಂಡರು, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟುಗೂಡಿ ಮತಯಾಚನೆ ಮಾಡಿ‌ ನಿಖಿಲ್ ಕುಮಾರಸ್ವಾಮಿ ಅವರನ್ನು ಆಶೀರ್ವದಿಸಿ ಬಹುಮತದಿಂದ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಬ್ರಹ್ಮಣಿಪುರ ಗ್ರಾಮದಲ್ಲಿ ನಿಖಿಲ್ ಪರ ಜೆಡಿಎಸ್,ಬಿಜೆಪಿ ಮತ ಪ್ರಚಾರ Read More

ನಿಖಿಲ್ ಪರ ಮತ ಯಾಚಿಸಿದ ಕೆ. ಬಿ ಪ್ರಸನ್ನ ಕುಮಾರ್

ಮೈಸೂರು: ಚನ್ನಪಟ್ಟಣ ಉಪ
ಚುನಾವಣೆಯಲ್ಲಿ ಎನ್‌ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಶಾಸಕ ಕೆ. ಬಿ ಪ್ರಸನ್ನ ಕುಮಾರ್ ಅವರು ಬ್ರಾಹ್ಮಣ ಮುಖಂಡರ ಮನೆಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ಮಾಡಿದರು.

ಚನ್ನಪಟ್ಟಣದ ವರದರಾಜ ದೇವಸ್ಥಾನ ರಸ್ತೆಯಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ ದೇವಸ್ಥಾನದ ಮುಂಭಾಗ ನಿಖಿಲ್ ಪರ ಪ್ರಸನ್ನ ಕುಮಾರ್ ಅವರು ಕರಪತ್ರ ನೀಡಿ ಮತಯಾಚನೆ ಮಾಡಿದರು.

ನಂತರ ಪ್ರಸನ್ನ ಕುಮಾರ್ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸಂಘಟನೆ ಜೊತೆ ಸೇರಿ ಬ್ರಾಹ್ಮಣ ಸಮುದಾಯದ ಮುಖಂಡರೊಂದಿಗೆ ಮನೆ ಮನೆಗೆ ತೆರಳಿ ಮತ ಯಾಚಿಸಿದರು.

ಈ ವೇಳೆ ಮಾತನಾಡಿದ ಕೆ.ಬಿ ಪ್ರಸನ್ನ ಕುಮಾರ್, ಬ್ರಾಹ್ಮಣ ಸಮುದಾಯದಕ್ಕೆ ಕೊಟ್ಟ ಮಾತಿನಂತೆ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ನಿಗಮವನ್ನ ಹೆಚ್. ಡಿ ಕುಮಾರಸ್ವಾಮಿ ರವರು ಮುಖ್ಯಮಂತ್ರಿಯಾಗಿದ್ದ ಸಂಧರ್ಭದಲ್ಲಿ ಜಾರಿಗೆ ತಂದರು ಎಂದು ಸ್ಮರಿಸಿದರು.

ಶಂಕರ ಜಯಂತಿ ಆಚರಣೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಸಭಾಗೆ ನಿವೇಶನವನ್ನ ಮಂಜೂರು ಮಾಡಿ ವಿಪ್ರ ಸಮಾಜದ ಚಟುವಟಿಕೆಗಳಿಗೆ, ಅಭಿವೃದ್ಧಿಗೆ ಸಹಕರಿಸಿದ್ದಾರೆ ಇದರಿಂದ ಆರ್ಥಿಕವಾಗಿ ಹಿಂದುಳಿದ ವಿಪ್ರ ಕುಟುಂಬಗಳಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಹಕಾರಿ ಸಾಂಸ್ಕೃತಿಕ ಕ್ಷೇತ್ರದ ಸಾಕಷ್ಟು ಮಂದಿ ಮುಖ್ಯ ವಾಹಿನಿಗೆ ಬರವಲ್ಲಿ ಉಪಯುಕ್ತವಾಯಿತು ಎಂದು ತಿಳಿಸಿದರು.

ಅರ್ಚಕ ಪುರೋಹಿತರು, ಶಿಕ್ಷಕರು, ವಿಪ್ರ ಉದ್ಯಮಿಗಳು, ಅಡುಗೆ ಸಂಘದವರು, ಕಲಾವಿದರು ಸೇರಿದಂತೆ ವಿಪ್ರ ಸಮಾಜದ ಜೊತೆ ಚಟುವಟಿಕೆಗಳೊಂದಿಗೆ ನಿಕಟಸಂಪರ್ಕವಿರುವ ಎನ.ಡಿ.ಎ ಅಭ್ಯರ್ಥಿ ನಿಖಲ್ ಕುಮಾರಸ್ವಾಮಿ ಅವರಿಗೆ ಈ ಭಾರಿ ವಿಪ್ರ ಸಮಾಜ ಆಶೀರ್ವಾದಿಸಿ ಭಾರಿಮತಗಳಿಂದ ಜಯಗೊಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಪ್ರಶಾಂತ್ (ಪಚ್ಚಿ),ರಾಘವೇಂದ್ರ ಮಯ್ಯ, ಕಡಕೋಳ ಜಗದೀಶ್, ಮಹಾನ್ ಶ್ರೇಯಸ್, ವೆಂಕಟೇಶ್ ಮೂರ್ತಿ, ಚಂದ್ರಶೇಖರ್, ನರಸಿಂಹ, ಮಧುಸೂದನ್, ಆತ್ಮರಾಮ್, ಮಾಧವ್ ಭಟ್, ಸುಬ್ರಹ್ಮಣ್ಯಂ, ಬಿ ಮುರಳಿಧರ್, ಮತ್ತಿತರರು ಪ್ರಚಾರದಲ್ಲಿ ಭಾಗಿಯಾಗಿದ್ದರು.

ನಿಖಿಲ್ ಪರ ಮತ ಯಾಚಿಸಿದ ಕೆ. ಬಿ ಪ್ರಸನ್ನ ಕುಮಾರ್ Read More

ಸಿಡಿ ಬ್ರದರುಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ:ಹೆಚ್.ಡಿ.ಕೆ

ಚನ್ನಪಟ್ಟಣ: ಸಿಡಿ ಬ್ರದರುಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ ಎಂದು ಕೇಂದ್ರ ಸಚಿವ‌ ಹೆಚ್‌.ಡಿ.ಕುಮಾರಸ್ವಾಮಿ ಡಿ.ಕೆ.ಸಹೋದರರ ಬಗ್ಗೆ ‌ವ್ಯಂಗ್ಯವಾಡಿದ್ದಾರೆ.

ಹಾಸನದಲ್ಲಿ ಇಂಥದೇ ಷಡ್ಯಂತ್ರ ಮಾಡಿದರು. ಚನ್ನಪಟ್ಟಣದಲ್ಲಿಯೂ ಅದನ್ನೇ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಚನ್ನಪಟ್ಟಣದ ಸೋಗಾಲಪಾಳ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನು ವಿಧಾನಸೌಧದಲ್ಲಿ ಮಾತಾಡಿರುವ ಆಡಿಯೋವನ್ನು ಅವರು ಎಲ್ಲಾ ಸಭೆಗಳಲ್ಲಿ ಕೇಳಿಸುತ್ತಿದ್ದಾರೆ. ಅವರಿಗೆ ಎಷ್ಟು ಹತಾಶೆ, ಸೋಲಿನ ಭೀತಿ ಕಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಕೇವಲ ಒಂದು ತುಣುಕು ಕತ್ತರಿಸಿ ಬಿಡುವುದಲ್ಲ, ಪೂರ್ಣ ಆಡಿಯೋ ಬಿಡಲಿ, ಆಗ ಅವರ ಮರ್ಯಾದೆ ಏನು ಎಂಬುದು ಗೊತ್ತಾಗುತ್ತದೆ ಎಂದು ಟಾಂಗ್ ಕೊಟ್ಟರು.

ಸಿಡಿ ಆಡಿಯೋ, ವಿಡಿಯೋ ಬಿಡುವುದಲ್ಲಿ ಡಿಕೆ ಸಹೋದರರು ನಿಪುಣರು, ಅವರು ಇಂಥದ್ದೇ ದಂಧೆ ಮಾಡಿಕೊಂಡು ಬರುತ್ತಿದ್ದಾರೆ,ಆ ಆಡಿಯೋ ಹಳೆಯದು. ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು. ಒಂದು ವಾರದಿಂದ ಅದನ್ನು ಕತ್ತರಿಸಿ ಹಂಚುತ್ತಿದ್ದಾರೆ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೆ. ಪಕ್ಕದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಹೇಳಿದ್ದ ಆಡಿಯೋ ಅದು. ಇಸ್ಪೀಟ್, ಕ್ರಿಕೆಟ್‌ ಬೆಟ್ಟಿಂಗ್ ದಂಧೆ ನಡೆಸುವವರು ಐದು ವರ್ಷ ಅವರು ಕೆಲಸ ಮಾಡಲಿ. ನಾನು ಎರಡು ದಿನದಲ್ಲಿ ಬದಲಾವಣೆ ಮಾಡುತ್ತೇನೆ ಎಂದು ನಾನು ಹೇಳಿದ್ದೆ. ಅದನ್ನೇ ಇವರು ಚನ್ನಪಟ್ಟಣಕ್ಕೆ ತಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಇವರಂತೆ ನಾನು ಅಕ್ರಮ ಮಾಡಿ ಚುನಾವಣೆ ಮಾಡುವುದಿಲ್ಲ. ನನ್ನ ಚುನಾವಣೆಯನ್ನು ಕಾರ್ಯಕರ್ತರೇ ಮಾಡುತ್ತಾರೆ, ಅವರೇ ಮತ ಕೇಳುತ್ತಾರೆ. ನಾನು ಆ ರೀತಿ ಮಾತನಾಡುವ ಅವಶ್ಯಕತೆ ಇಲ್ಲ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಉತ್ತಮ ಕೆಲಸ ಮಾಡಿದವರು ಇಂತವರಿಂದ ನಗಣ್ಯ ಆಗುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಹೇಳಿದ್ದೆ. ಆ ಆಡಿಯೋವನ್ನು ಪೂರ್ತಿ ಹಾಕಿ ಕೇಳಿಸಿದರೆ ಇವರ ಬಂಡವಾಳ, ಯೋಗ್ಯತೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು.

ಸಿಡಿ ಬ್ರದರುಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ:ಹೆಚ್.ಡಿ.ಕೆ Read More

ನಮ್ಮದು ಅಭಿವೃದ್ಧಿ ರಾಜಕಾರಣ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ : ನಮ್ಮದು ಅಭಿವೃದ್ಧಿ ರಾಜಕಾರಣ ಎದುರಾಳಿಗಳ ಸ್ಟಾಟರ್ಜಿ ಏನೇ ಆಗಿರಲಿ.ನಾನು ಯಾವುದಕ್ಕೂ ಪ್ರವೋಕ್ ಆಗೋದಿಲ್ಲ‌ ಎಂದು ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ವಿವಿಧೆಡೆ ಪ್ರಚಾರ ಕಾರ್ಯ ನಡೆಸಿದ ನಂತರ ಅವರು ಮಾತನಾಡಿದರು.

ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿಖಿಲ್,ತಮ್ಮ ಹಿನ್ನಲೆ, ಸಂಸ್ಕೃತಿಗೆ ತಕ್ಕಂತೆ ಅವರು ಮಾತಾಡ್ತಾರೆ.ನಾನು ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ ಎಂದು ಡಿ ಕೆ ಶಿಗೆ ತಿರುಗೇಟು ನೀಡಿದರು.

ನಮ್ಮದು ಅಭಿವೃದ್ಧಿ ರಾಜಕಾರಣ
ಎದುರಾಳಿಗಳ ಸ್ಟಾಟರ್ಜಿ ಏನೇ ಆಗಿರಲಿ.ನಾನು ಯಾವುದಕ್ಕೂ ಪ್ರವೋಕ್ ಆಗೋದಿಲ್ಲ‌. ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ನನ್ನ ಜತೆ ಹೆಜ್ಜೆ ಹಾಕುತಿದ್ದಾರೆ.ಯಡಿಯೂರಪ್ಪ ಅವರೆ ನನ್ನ ಹೆಸರು ಘೋಷಣೆ ಮಾಡಿದ್ದಾರೆ
ದೇವೆಗೌಡರು ನಾಳೆಯಿಂದ ಗ್ರಾಮಪಂಚಾಯತಿ ಮಟ್ಟದಿಂದ ಪ್ರಚಾರ ಮಾಡಬೇಕಿತ್ತು. ಆದರೆ ಆರೋಗ್ಯ ಸ್ವಲ್ಪ ಸರಿ ಇಲ್ಲ ಎಂದು ತಿಳಿಸಿದರು.

ನಮ್ಮದು ಅಭಿವೃದ್ಧಿ ರಾಜಕಾರಣ: ನಿಖಿಲ್ ಕುಮಾರಸ್ವಾಮಿ Read More

ಚನ್ನಪಟ್ಟಣಕ್ಕೂ ಚಾಚಿದ ವಕ್ಫ್ ಕಬಂಧ ಬಾಹುಗಳು: ಅಶೋಕ್ ಟೀಕೆ

ಚನ್ನಪಟ್ಟಣ: ವಕ್ಫ್ ಕಬಂಧ ಬಾಹುಗಳು ಚನ್ನಪಟ್ಟಣಕ್ಕೂ ಚಾಚಿಕೊಳ್ಳುತ್ತಿದೆ ಎಂದು ‌
ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಚಕ್ಕೆರೆ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದ ಅಶೋಕ್,ರೈತರು ಕೂಡಲೇ ತಾಲ್ಲೂಕು ಕಚೇರಿಗೆ ಹೋಗಿ ತಮ್ಮ ಭೂ ದಾಖಲೆಗಳನ್ನು ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನೂರಾರು ವರ್ಷಗಳಿಂದ ರೈತರು ಭೂಮಿಯಲ್ಲಿ ಬಾಳಿ ಬದುಕುತ್ತಿದ್ದಾರೆ. ಆದರೆ, ಇವರು ಖೊಟ್ಟಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಅದಕ್ಕೂ ಹಿಂದಿನಿಂದಲೂ ಈ ಭೂಮಿ ನಮ್ಮ ವಶದಲ್ಲಿ ಇತ್ತು ಎಂದು ತಗಾದೆ ತೆಗೆಯುತ್ತಿದ್ದಾರೆ. ವಕ್ಫ್ ಎಷ್ಟರ ಮಟ್ಟಿಗೆ ಭೂಮಿಯನ್ನು ಹೊಂದಿದೆ ಎಂದರೆ ಭಾರತೀಯ ಸೇನೆಗಿಂತ ಜಾಸ್ತಿ ಭೂಮಿ ವಕ್ಫ್ ಮಂಡಳಿ ವಶದಲ್ಲಿದೆ ಎಂದು ದೂರಿದರು.

17 ಕೆರೆ ತುಂಬಿಸಲು ಹಣ ನೀಡಿದ್ದು ಅಂದಿನ ಸಿಎಂ ಡಿ.ವಿ.ಸದಾನಂದ ಗೌಡರು. ಹಣ ಬಿಡುಗಡೆಗೆ ಆದೇಶ ಮಾಡಿದ್ದು ಬಸವರಾಜ್ ಬೊಮ್ಮಾಯಿ ಹಾಗೂ ಯೋಜನೆಗೆ ಚಾಲನೆ ನೀಡಿದ್ದು ನೀರಾವರಿ ಎಂಜಿನಿಯರ್ ವೆಂಕಟೇ ಗೌಡ. ಈ ವೆಂಕಟೇ ಗೌಡ ಹಲವು ಸಲ ನಮ್ಮ ಮೇಲೆ ಒತ್ತಡ ಹಾಕಿ ಈ ಯೋಜನೆ ಜಾರಿಗೆ ಬರುವಂತೆ ನೋಡಿಕೊಂಡು, ಅದನ್ನು ಅನುಷ್ಠಾನ ಮಾಡಿದರು. ಇದಕ್ಕೂ ಯೋಗೇಶ್ವರ್ ಅವರಿಗೂ ಸಂಬಂಧವೇ ಇಲ್ಲ ಎಂದು ಅಶೋಕ್ ಹೇಳಿದರು.

ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ರಾಮನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಚನ್ನಪಟ್ಟಣಕ್ಕೆ ಹದಿನೆಂಟು ಸಲ ಸುತ್ತು ಹಾಕಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗದೆ ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದು ಯಾಕೆ? ಎಂದು ಪ್ರಶ್ನಿಸಿದರು.

ಚನ್ನಪಟ್ಟಣಕ್ಕೂ ಚಾಚಿದ ವಕ್ಫ್ ಕಬಂಧ ಬಾಹುಗಳು: ಅಶೋಕ್ ಟೀಕೆ Read More

ಡಿಕೆಶಿ ಚನ್ನಪಟ್ಟಣದ ಮನೆ ಮಗನಾದರೆ ಜಿಲ್ಲಾ ಉಸ್ತುವಾರಿ ವಹಿಸಲಿ:ಅಶೋಕ

ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿ ಹೊಣೆ ವಹಿಸಿಕೊಳ್ಳಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದ್ದಾರೆ.

ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ ಮಾತು ಆಡುತ್ತಾರೆ ಎಂದು ಟೀಕಿಸಿದರು.

ನಿಖಿಲ್ ಪರ ಪ್ರಚಾರ‌ ಸಭೆಯ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅಶೋಕ್, ನಿಖಿಲ್‌ ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎರಡೂ ಪಕ್ಷ ಇರುವುದರಿಂದ ಗೆಲುವು ಸುಲಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು ಈ ಹಿಂದೆ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಬಿಜೆಪಿಯ ಸಾಂಪ್ರದಾಯಿಕ ಮತಗಳೂ ಸಿಗುವುದರಿಂದ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್‌ ಸರ್ಕಾರದಲ್ಲಿನ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಹಣವನ್ನು ಬೇರೆಡೆ ವರ್ಗಾಯಿಸಿರುವುದು ಮೊದಲಾದ ಕಾರಣಗಳಿಂದ ಜನರಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದರು.

ಈ 16 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕಾಗಲೀ, ರಾಮನಗರಕ್ಕಾಗಲೀ ಭೇಟಿ ನೀಡಿಲ್ಲ. ಭೇಟಿ ನೀಡಲು ಕೂಡ ಸಮಯವಿಲ್ಲವೆಂದಾದರೆ ಅಭಿವೃದ್ಧಿ ಹೇಗೆ ಮಾಡುತ್ತಾರೆ, ಡಿ.ಕೆ.ಶಿವಕುಮಾರ್‌ ನಾನು ಮನೆ ಮಗ ಎಂದು ಜನರ ಕಿವಿ ಮೇಲೆ ಹೂ ಇಡಲು ನೋಡಿದ್ದರು. ನಂತರ ತಾಯಿ ಜಿಲ್ಲೆಯನ್ನು ಬಿಟ್ಟು ಬೆಂಗಳೂರಿನ ಉಸ್ತುವಾರಿ ಪಡೆದುಕೊಂಡರು. ರಾಮಲಿಂಗಾರೆಡ್ಡಿ ಅವರನ್ನು ಇಲ್ಲಿನ ಜಿಲ್ಲಾ ಉಸ್ತುವಾರಿ ಮಾಡಿದ್ದರೂ, ಅವರಿಗೆ ಇಲ್ಲಿಗೆ ಬರಲು ಇಷ್ಟವಿಲ್ಲ. ಚುನಾವಣೆ ಬಂದಿರುವುದರಿಂದ ನಾಟಕ ಮಾಡಲು ಇಲ್ಲಿಗೆ ಬಂದಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರಿಗೆ ಅಷ್ಟೊಂದು ಪ್ರೀತಿ ಇದ್ದರೆ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಬೇಕಿತ್ತು. ಬೆಂಗಳೂರಿನಲ್ಲಿ ಸಮೃದ್ಧಿ ಮಾಡಲು ಹೊರಟಿದ್ದಾರೆ. ಆದರೆ ಚನ್ನಪಟ್ಟಣ ಅಭಿವೃದ್ಧಿಗೆ ಹತ್ತು ಪೈಸೆ ಹಣವಿಲ್ಲ ಎಂದು ಅಶೋಕ್ ಟೀಕಾಪ್ರಹಾರ ನಡೆಸಿದರು.

ಸಿ.ಪಿ.ಯೋಗೇಶ್ವರ್‌ ತಾವೇ ನೀರಾವರಿ ಯೋಜನೆ ತಂದಿದ್ದೇನೆಂದು ಹೇಳಿಕೊಂಡರು ಕೂಡ, ಅನುದಾನ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರವೇ ಹೊರತು ಅವರಲ್ಲ. ಅದಕ್ಕಿಂತ ಹೆಚ್ಚಾಗಿ ಇಲ್ಲಿ ಎಂಜಿನಿಯರ್‌ ಆಗಿದ್ದ ವೆಂಕಟೇಗೌಡ ನಮ್ಮ ಬಳಿ ಬಂದು ಅನುದಾನ ಮಂಜೂರು ಮಾಡಿಸಿಕೊಂಡಿದ್ದರು ಎಂದು ತಿಳಿಸಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಭಾವನಾತ್ಮಕ ಜೀವಿ, ಆದರೆ ಕಾಂಗ್ರೆಸ್ ನಾಯಕರು ಕಟುಕರು. ಕುಮಾರಸ್ವಾಮಿ ಕಾರಿನಲ್ಲಿ ಹೋಗುತ್ತಿರುವಾಗ ಬಡ ವ್ಯಕ್ತಿ ಕಂಡರೆ ಅವನ ಬಳಿ ಹೋಗಿ ಸಹಾಯ ಮಾಡುತ್ತಾರೆ. ಆದರೆ ಕಾಂಗ್ರೆಸ್ ನವರು ಈ ಭಾವನೆಯನ್ನೇ ತಮಾಷೆ ಮಾಡುತ್ತಾರೆ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ಚನ್ನಪಟ್ಟಣದ ಮನೆ ಮಗನಾದರೆ ಜಿಲ್ಲಾ ಉಸ್ತುವಾರಿ ವಹಿಸಲಿ:ಅಶೋಕ Read More

ಯೋಗೀಶ್ವರ್ 50 ಸಾವಿರ ಲೀಡ್ ನಲ್ಲಿ ಗೆಲ್ಲಬೇಕು:ಸಿದ್ದರಾಮಯ್ಯ

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಜಯ ಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಯೋಗೀಶ್ವರ್ ಪರ ರೋಡ್ ಶೋ ನಲ್ಲಿ‌ ಭಾಗವಹಿಸಿ ಮಾತನಾಡಿದ ಸಿಎಂ,
ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ, ಅವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲಿಸುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮದು ಜನಕಲ್ಯಾಣದ ಸರ್ಕಾರ,ಈ ಸರ್ಕಾರದಲ್ಲಿ ಯೋಗೀಶ್ವರ್ ಇರಬೇಕು ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಮುಂದುವರೆಸುತ್ತಾರೆ, ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದು ಸಿದ್ದು ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ,ಮಾಜಿ ಸಂಸದ ಡಿ.ಕೆ.ಸುರೇಶ್ ಮತ್ತಿತರರು ಹಾಜರಿದ್ದರು.

ಯೋಗೀಶ್ವರ್ 50 ಸಾವಿರ ಲೀಡ್ ನಲ್ಲಿ ಗೆಲ್ಲಬೇಕು:ಸಿದ್ದರಾಮಯ್ಯ Read More