ಛತ್ತೀಸ್‌ಗಢದಲ್ಲಿ 26 ನಕ್ಸಲರ ಎನ್‌ *ಕೌಂಟರ್‌

ರಾಯ್ಪರ್‌: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಬಲಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಗೃಹ ಸಚಿವ ವಿಜಯ್ ಶರ್ಮಾ ತಿಳಿಸಿದ್ದಾರೆ.

ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಏ.21 ರಿಂದ ಮೇ 11 ರ ನಡುವೆ ಛತ್ತೀಸ್‌ಗಢ ಹಾಗೂ ತೆಲಂಗಾಣ ಗಡಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆಯಲ್ಲಿ ಒಟ್ಟು 214 ನಕ್ಸಲ್ ಅಡಗುತಾಣಗಳನ್ನು ನಾಶಮಾಡಲಾಗಿತ್ತು.

ಆಗಿನ ಕಾರ್ಯಾಚರಣೆಯಲ್ಲಿ ಒಟ್ಟು 450 ಐಇಡಿಗಳು, 818 ಬಿಜಿಎಲ್ ಶೆಲ್‌ಗಳು, 899 ಬಂಡಲ್ ಕೋಡೆಕ್ಸ್, ಡಿಟೋನೇಟರ್‌ಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಛತ್ತೀಸ್‌ಗಢದಲ್ಲಿ 26 ನಕ್ಸಲರ ಎನ್‌ *ಕೌಂಟರ್‌ Read More

ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಬಲಿ

ರಾಯ್ಪುರ: ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಬಲಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ನಕ್ಸಲರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ.

ಘಟನಾ ಸ್ಥಳದಿಂದ ಭದ್ರತಾ ಪಡೆ ಸಿಬ್ಬಂದಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ,
ಘಟನೆ ಸಂಬಂಧ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಎನ್‌ಕೌಂಟರ್ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಬಲಿ Read More