ಚಿಕ್ಕಮಗಳೂರು: ಶ್ರಮಜೀವಿಗಳ ಆಸ್ತಿ ಜಾನಪದ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್ ಬಾಲಾಜಿ ತಿಳಿಸಿದರು.
ಅಜ್ಜಂಪುರದ ಚಿಕ್ಕಾನಂಗಲ ಗ್ರಾಮದ ಬಸವೇಶ್ವರ ಸಮುದಾಯ ಭವನದಲ್ಲಿ ಕನ್ನಡ ಜಾನಪದ ಪರಿಷತ್ ಶಿವನಿ ಹೋಬಳಿ ಮಹಿಳಾ ಘಟಕದ ಉದ್ಘಾಟನೆ ಹಾಗೂ ಪದ ಪ್ರಧಾನ ನೆರವೇರಿಸಿ ಅವರು ಮಾತನಾಡಿದರು.
ಜಾನಪದ ಮಹಿಳಾ ಪ್ರಧಾನವಾದದ್ದು, ಇದು ನಮ್ಮ ಪೂರ್ವಜರಿಂದ ಬಂದ ಬಳುವಳಿ, ಅದನ್ನು ಮುಂದಿನ ಪೀಳಿಗೆಗೆ ಕೊಂಡಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಜಾನಪದ ನಮ್ಮ ಸಂಸ್ಕೃತಿಯ ಮೂಲ ಬೇರು ಇದನ್ನು ತರಬೇತಿ ಹಾಗೂ ದಾಖಲಿಕರಣದ ಮೂಲಕ ಉಳಿಸಿ ಬೆಳೆಸುವ ಕಾರ್ಯ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಮೂಲಕ ಆಗುತ್ತಿದೆ, ಸರ್ಕಾರ ಕಲಾವಿದರ ಮಾಶಾಸನ ಹೆಚ್ಚಿಸಬೇಕೆಂದು ಸರ್ಕಾರವನ್ನು ಡಾ.ಜನಪದ ಬಾಲಾಜಿ ಆಗ್ರಹಿಸಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಜಾನಪದ ಪರಿಷತ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿಶಾಲಕ್ಷಮ್ಮ ಎಂ ಎಸ್ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ರಾಜ್ಯಮಟ್ಟದ ಪ್ರಥಮ ಮಹಿಳಾ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಮಹಿಳಾ ಘಟಕಗಳನ್ನು ಶೀಘ್ರದಲ್ಲಿ ಸ್ಥಾಪಿಸಲಾಗುವುದು ಹಾಗೂ ಶಾಲಾ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷವಾಗಿ ಜನಪದ ಕಲಾ ಪ್ರಾಕಾರಗಳು ತರಬೇತಿಗಳನ್ನು ನೀಡಲಾಗುವುದು ಎಂದು ಹೇಳಿದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ ಸಂಜು ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಯ ಭರಾಟೆಯಿಂದ ನಮ್ಮ ಸಂಸ್ಕೃತಿ ಸಂಸ್ಕಾರಗಳು ಕುಸಿಯುತ್ತಿದೆ, ಇದನ್ನು ತಿಳಿಯುವ ಕೆಲಸ ಮಹಿಳಾ ಘಟಕದಿಂದ ಆಗಲಿ ಎಂದು ಸಲಹೆ ನೀಡಿದರು.
ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಉದ್ದೇಶ ಹಾಗೂ ಮುಂದಿನ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಜಯಕುಮಾರಿ ತಿಳಿಸಿದರು.
ಅಜ್ಜಂಪುರ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ತಾಲೂಕ ಅಧ್ಯಕ್ಷೆ ಪುಷ್ಪ ಮಾತನಾಡಿ ಡಿಸೆಂಬರ್ ತಿಂಗಳ ಒಳಗಾಗಿ ಅಜ್ಜಂಪುರ ತಾಲೂಕಿನ ಎಲ್ಲಾ ಗ್ರಾಮ ಘಟಕಗಳನ್ನು ರಚಿಸಲಾಗುವುದು ಎಂದು ಹೇಳಿದರು.
ಶಿವನಿ ಹೋಬಳಿ ಅಧ್ಯಕ್ಷರಾಗಿ ಮಧು ನಿಂಗ ಪ್ಪ ಅವರಿಗೆ ಪದ ಪ್ರಧಾನ ಮಾಡಲಾಯಿತು.
ಮೂಲ ಜನಪದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೀಡಲಾಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮೀದೇವಮ್ಮ, ಶಿವಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಶಿವ ಮೂರ್ತಿ, ಸಹಾಯಕ ನಿರ್ದೇಶಕ ನವೀನ್ ಕುಮಾರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಿಡಿಒ ಹರ್ಷ ಕೆ ಎಸ್, ತಿಕನಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಸಮ್ಮ, ಓಂಕಾರಯ್ಯ, ಕಲಾವಿದರಾದ ಶಂಕ್ರಪ್ಪ, ತಿಪ್ಪೇಶ್, ಕಲೆನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ನೂತನ ಪದಾಧಿಕಾರಿಗಳಾದ ಪುಣ್ಯವತಿ, ಮಹಾದೇವಿ, ಪ್ರೇಮ, ಗಿರಿಜಾ, ಸವಿತಾ, ಕಡೂರು ತಾಲೂಕ ಅಧ್ಯಕ್ಷರಾದ ಶೋಭಾ ಶ್ರೀನಿವಾಸ್, ಮಧುಮಾಲತಿ ಸತೀಶ್ ಲೋಕೇಶ್ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲೆನಾಡು ಭಾಗಕ್ಕೂ, ಬಯಲು ಸೀಮೆಗೂ ಇರೋ ವ್ಯತ್ಯಾಸವೇ ಗೊತ್ತಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.
ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ಬಾಳೆಹೊನ್ನೂರು ಉಪ ವಿಭಾಗ ವಲಯ ಅರಣ್ಯಾಧಿಕಾರಿಗಳ ಕಚೇರಿ ಬಳಿ ಮಳೆಯಲ್ಲೂ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಿರಂತರವಾಗಿ ಈ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಇದಕ್ಕೆ ಶಾಶ್ವತವಾಗಿ ಪರಿಹಾರ ಒದಗಿಸಬೇಕೆಂದು ನಿಖಿಲ್ ಒತ್ತಾಯಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್, ಕೂಡಲೇ ಅರಣ್ಯ ಸಚಿವರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಬೇಕು ಬೇಕೆಂದು ಆಗ್ರಹಿಸಿದರು.
ನಿರಂತರವಾಗಿ ಈ ಭಾಗದ ರೈತರು ಆನೆದಾಳಿಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ.ಕೂಡಲೇ ಕಾಡನೆಯನ್ನ ಹಿಡಿದು ಆನೆ ಶಿಬಿರಕ್ಕೆ ಬಿಡಬೇಕು, ಮೃತಪಟ್ಟ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸಬೇಕು ಇಲ್ಲಿನ ಅರಣ್ಯ ಅಧಿಕಾರಿಗಳು ಹಾಗೂ ಸರ್ವ ಪಕ್ಷದ ಮುಖಂಡರ ಜೊತೆ ಸಭೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.
ಈ ಭಾಗದಲ್ಲಿ ಕಾಡನೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಬೇಕು,ಇಲ್ಲದಿದ್ದಲ್ಲಿ ಈ ಹೋರಾಟವನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತೇವೆ. ಇದನ್ನ ವಿಧಾನಮಂಡಲದಲ್ಲೂ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ಅವರು ಹೇಳಿದರು.
ಈ ವೇಳೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಸುಧಾಕರ್ ಶೆಟ್ಟಿ , ಮುಖಂಡರಾದ ವಿನಯ್ ಕಣಿವೆ, ಕೊಪ್ಪ, ಎನ್.ಆರ್. ಪುರ ಕ್ಷೇತ್ರದ ಮುಖಂಡರು ಹಾಜರಿದ್ದರು.
ಚಿಕ್ಕಮಗಳೂರು,ಮಾ.8: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಬಯಲು ರಂಗ ಮಂದಿರ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಡಾ ಮರಳು ಸಿದ್ದಪ್ಪ ಪಾಟೀಲ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲಾ ಇಪ್ಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಾನಪದ ಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಅವರನ್ನು ಸರ್ವಾಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಸೂರಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಗೌರವಿಸಲಾಯಿತು.
ಕನ್ನಡ ಭಗವಾನ್, ಮಂಸಾದ್ ಬೇಗಂ, ಇಮ್ರಾನ್ ಚಿಕ್ಕಮಗಳೂರು, ಏನ್ ಆರ್ ಪುರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್, ತರಿಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ದಳವಾಯಿ ಈ ವೇಳೆ ಉಪಸ್ಥಿತರಿದ್ದರು.
ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಹಾಗೂ ಅವರ ಮಗ ಸೂರ್ಯನಿಗೆ ಅನಾಮಧೇಯ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಪತ್ರ ಬಂದಿದೆ.
ಚಿಕ್ಕಮಗಳೂರಿನ ಸಿ.ಟಿ ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ. ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ, ನಿನ್ನ ಮಗನನ್ನೂ ಸಾಯಿಸುತ್ತೇವೆ. ಹುಷಾರ್ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
ತರೀಕೆರೆ: ಪ್ರತಿಬಾರಿ ಗೌರಿ,ಗಣೇಶ ಹಬ್ಬ ಬಂದಾಗ ಎಲ್ಲಾದರೂ ಒಂದು ಕಡೆ ಅವಘಡ ನಡೆಯುತ್ತಲೇ ಇರುತ್ತದೆ,ಆದರೂ ಯುವಜನತೆ ಎಚ್ಚೆತ್ತುಕೊಳ್ಳದಿರುವುದು ನಿಜಕ್ಕೂ ದುರ್ಧೈವ.
ಎಲ್ಲಡೆ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ ಆದರೆ ಗಣೇಶ ಪ್ರತಿಷ್ಠಾಪನೆಗೆ ಗಣೇಶ ಮೂರ್ತಿ ತರಲು ಹೋಗುವ ವೇಳೆ ಇಬ್ಬರ ಯುವಕರು ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಗಣಪತಿ ತರಲು ಟಾಟಾ ಏಸ್ ವಾಹನದಲ್ಲಿ 9 ಮಂದಿ ಯುವಕರು ಹೋಗುತ್ತಿದ್ದಾಗ ವಾಹನ ಉರಿಳಿಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದು ಊರಿನಲ್ಲಿ ಸೂತಕದ ಛಾಯೆ ಮನೆ ಮಾಡಿದೆ.
ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದ ಈ ದುರ್ಘಟನೆಯಲ್ಲಿ ಗಾಯಗೊಂಡ ಇಬ್ಬರು ಯುವಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ದಾಖಲಿಸಲಾಗಿದ್ದು ಇನ್ನು ಮೂವರು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಿಂಗದಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಚಿಕ್ಕಮಗಳೂರು: ಪ್ರತಿದಿನ ಒಂದಲ್ಲಾ ಒಂದು ಲೈಂಗಿಕ ದೌರ್ಜನ್ಯದ ಬಗ್ಗೆ ಸುದ್ದಿ ಬರುತ್ತಲೇ ಇರುತ್ತದೆ,ಆದರೂ ವಿದ್ಯಾವಂತ ಮಹಿಳೆಯರೂ ಕೂಡ ಹೀಗೆ ಮೋಸ ಹೋಗಿ ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ನಿಜಕ್ಕೂ ದುರ್ಧೈವದ ಸಂಗತಿಯಾಗಿದೆ.
ಇದಕ್ಕೆ ಇಲ್ಲೊಂದು ಉದಾಹರಣೆ ಇದೆ. ಯೋಗ ಕಲಿಯಲು ಬಂದ ಎನ್ ಆರ್ ಐ ವೈದ್ಯೆಯ ಮೇಲೆ ಯೋಗ ಗುರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಆಶ್ರಮವೊಂದರಲ್ಲಿ ಈ ಕೃತ್ಯ ನಡೆದಿದ್ದು, ಸಂತ್ರಸ್ತೆ ವೈದ್ಯೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಯೋಗಗುರು ಪ್ರದೀಪ್ ನನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
3 ತಿಂಗಳ ಹಿಂದೆ ಆಶ್ರಮಕ್ಕೆ ಯೋಗ, ಧ್ಯಾನ ಕಲಿಯಲು ಬಂದಿದ್ದ ಅಮೆರಿಕ ಪೌರತ್ವ ಪಡೆದಿರುವ ಪಂಜಾಬ್ ಮೂಲದ ವೈದ್ಯೆ ಮೇಲೆ ಯೋಗಗುರು ಪ್ರದೀಪ್ ಅತ್ಯಾಚಾರವೆಸಗಿದ್ದಾನೆ ಎಂದು ದೂರು ನೀಡಲಾಗಿದೆ.
ಯೋಗಗುರು ಪ್ರದೀಪ್ ವಿರುದ್ಧ ಎನ್ಆರ್ಐ ವೈದ್ಯೆ ಟ್ವಿಟರ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪ್ರದೀಪನ ಆಶ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿದುಕೊಂಡಿದ್ದ ವೈದ್ಯೆ, 3 ತಿಂಗಳ ಹಿಂದೆ ಆಶ್ರಮಕ್ಕೆ ಬಂದು ನೆಲೆಸಿದ್ದರು.
ಯೋಗಗುರು ಪ್ರದೀಪ್ ಕೇವಲ ಫೌಂಡೇಷನ್ ಮೂಲಕ ಯೋಗ ತರಬೇತಿ ನೀಡುತ್ತಿದ್ದು, ಇಲ್ಲಿಗೆ ದೇಶ, ವಿದೇಶದ ಅನೇಕ ಮಂದಿ ಬಂದು ಯೋಗ ಶಿಕ್ಷಣ ಪಡೆಯುತ್ತಾರೆ.
ಆನ್ ಲೈನ್ ಮೂಲಕವೂ ಯೋಗ ತರಬೇತಿ ನೀಡಲಾಗುತ್ತದೆ,ಪಂಜಾಬ್ ಮೂಲದ ವೈದ್ಯೆ 2020ರಲ್ಲಿ ಅಮೇರಿಕಾದಲ್ಲಿ ವೃತ್ತಿಯಲ್ಲಿದ್ದ ಸಂದರ್ಭದಲ್ಲಿ ಅವರ ಸ್ನೇಹಿತರಿಂದ ಈ ಯೋಗ ಕೇಂದ್ರದ ಬಗ್ಗೆ ಮಾಹಿತಿ ಪಡೆದು ಆನ್ಲೈನ್ ತರಗತಿಗೆ ಸೇರಿಕೊಂಡಿದ್ದರು.
ನಂತರ ಇಲ್ಲಿಗೆ ಬಂದು ತರಗತಿಯಲ್ಲಿ ಪಾಲ್ಗೊಳ್ಳುವಂತೆ ಪ್ರದೀಪ್ ಹೇಳಿದ್ದರಿಂದ ಆಕೆ ಚಿಕ್ಕಮಗಳೂರಿಗೆ ಬಂದು ಆತನ ಕೇಂದ್ರಕ್ಕೆ ಭೇಟಿ ನೀಡಿ 20 ದಿನ ತರಗತಿಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ಆ ವೈದ್ಯೆಯ ಜತೆಗೆ ಸಲುಗೆ ಬೆಳೆಸಿಕೊಂಡ ಗುರು ಆತ್ಮೀಯನಾದ ದೈಹಿಕವಾಗಿಯೂ ಆಕೆಯನ್ನು ಬಳಸಿಕೊಂಡಿದ್ದಾನೆ.
ನಂತರ 2020-21ರಲ್ಲೂ ಇಲ್ಲಿಗೆ ಬಂದು ಯೋಗ ತರಗತಿಯಲ್ಲಿ ಆಕೆ ಭಾಗಿಯಾಗಿದ್ದಾರೆ.ಆಗ ಕೂಡಾ ಯೋಗದ ಜತೆಗೆ ದೈಹಿಕ ಸಂಬಂಧ ಬೆಳೆಸಿದ್ದ ಗುರು.
ಯೋಗಗುರು ಪ್ರದೀಪ್ ಇತರರ ಜತೆಗೂ ಇದೇ ರೀತಿ ಸಂಬಂಧ ಹೊಂದಿದ್ದಾನೆ ಎಂಬುದು ವೈದ್ಯಗೆ ಗೊತ್ತಾಗಿದೆ.
ನೊಂದ ವೈದ್ಯೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,ಈಗ ಯೋಗಗುರು ಪ್ರದೀಪ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.