ಅಧ್ಯಯನ ಶಾಲೆಯಲ್ಲಿ ಮಕ್ಕಳ ವಾಕ್, ಭಾಷಾ ಬುದ್ಧಿಶಕ್ತಿ ಕುರಿತು ಸಮಾಲೋಚನೆ

ಮೈಸೂರು: ಮೈಸೂರಿನ ಅಧ್ಯಯನ ಶಾಲೆಯಲ್ಲಿ ಮಕ್ಕಳ ವಾಕ್ ಭಾಷಾ ಮತ್ತು ಬುದ್ಧಿಶಕ್ತಿ ಕುರಿತು ಸಮಾಲೋಚನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಒಂದರಿಂದ ಹತ್ತನೇ ತರಗತಿ ಮಕ್ಕಳು ಕಲಿಕೆಯಲ್ಲಿ ಎದುರಿಸುತ್ತಿರುವ ಸಮಸ್ಯೆ ಕುರಿತು ಡಾ. ಅರ್ಪಿತ (ವಾಕ್ ಭಾಷಾ ತಜ್ಞರು )ಅವರು ಒಂದೊಂದು ಮಗುವಿನ ಜೊತೆ ಸಮಾಲೋಚನೆ ಮಾಡಿ ಮಕ್ಕಳ ವಾಕ್ ಭಾಷಾ ಮತ್ತು ಬುದ್ಧಿಶಕ್ತಿ ಮಟ್ಟವನ್ನು ಅರಿತು ಕಲಿಕೆಗೆ ಸಹಾಯ ಆಗುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಎಂ ಪಾರ್ವತಿ ದೇವಿ, ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು ,ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.

ಅಧ್ಯಯನ ಶಾಲೆಯಲ್ಲಿ ಮಕ್ಕಳ ವಾಕ್, ಭಾಷಾ ಬುದ್ಧಿಶಕ್ತಿ ಕುರಿತು ಸಮಾಲೋಚನೆ Read More

ಪ್ರೇಮಿಗಳ ದಿನದಂದು ಪೋಷಕರಿಗೆ ಪಾದಪೂಜೆ ಮಾಡಿದ ಮಕ್ಕಳು

ಮೈಸೂರು: ನಗರದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯ ಮಕ್ಕಳು ಪೋಷಕರಿಗೆ ಪಾದಪೂಜೆ ಮಾಡುವ ಮೂಲಕ ಪ್ರೇಮಿಗಳ ದಿನದಂದು ನಮ್ಮ ಸಂಸ್ಕೃತಿಯನ್ನು ಮೆರೆದರು.

ನಮ್ಮ ಹಿಂದುತ್ವದ ಸಂಸ್ಕಾರ ಸಂಸ್ಕೃತಿ ಹಿರಿಯರನ್ನು ಪ್ರೀತಿಸೋಣ ಎನ್ನುವ ಘೋಷ ವಾಕ್ಯದೊಂದಿಗೆ ಪೋಷಕರ ಪಾದ ತೊಳೆದು ಕುಂಕುಮ, ಅರಿಶಿಣ ಹಚ್ಚಿ ಪೂಜೆ ಮಾಡಿ ಮಂಗಳಾರತಿ ಮಾಡಿ ಮಕ್ಕಳು ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಲೆಯ ಸಿ ಇ ಒ ತೇಜಸ್ ಶಂಕರ್ ಮಾತನಾಡಿ,ಪ್ರತಿ ವರ್ಷ ಫೆ. 14 ರಂದು ತಂದೆ-ತಾಯಿ ಪೂಜೆ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.

ತಂದೆ-ತಾಯಿ ಕಣ್ಣಿಗೆ ಕಾಣುವ ದೇವರು. ಮಕ್ಕಳು ನಿತ್ಯ ಪಾಲಕರ ಪೂಜೆ ಮಾಡಬೇಕು. ಅವರ ಆಜ್ಞೆ ಪಾಲಿಸಬೇಕು. ಅವರನ್ನು ಗೌರವದಿಂದ ಕಾಣಬೇಕು ಎಂದು ತಿಳಿಹೇಳಿದರು.

ತಂದೆ-ತಾಯಿ ಮಕ್ಕಳನ್ನು ಸಲಹುತ್ತಾರೆ. ಉತ್ತಮ ಸಂಸ್ಕಾರ ನೀಡುತ್ತಾರೆ. ಅವರಿಗಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡುತ್ತಾರೆ ಎಂದು ತಿಳಿಸಿದರು.

ಸಣ್ಣ ಮಕ್ಕಳು ವೃದ್ಧಾಪ್ಯದಲ್ಲಿ ತಂದೆ-ತಾಯಿಯನ್ನು ಪ್ರೀತಿಯಿಂದ ನೋಡಿಕೊಳ್ಳುವ ಮೂಲಕ ಅವರ ಋಣ ತೀರಿಸಬೇಕು. ಯಾವುದೇ ಕಾರಣಕ್ಕೂ ಅವರನ್ನು ವೃದ್ಧಾಶ್ರಮಕ್ಕೆ ಕಳುಹಿಸಬಾರದು ಎಂದು ಹೇಳಿದರು.

ಶಾಲೆಯ ಮುಖ್ಯಸ್ಥರಾದ ತೇಜಸ್ ಶಂಕರ್, ರಾಘವೇಂದ್ರ, ರೇಖಾ ಶ್ರೀನಿವಾಸ್, ಖುಷಿ,ಸವಿತಾ ಘಾಟ್ಕೆ, ಜಯಶ್ರೀ ಶಿವರಾಂ, ಅಪೂರ್ವ ಸುರೇಶ್, ಜೇತ್ತಿ ಪ್ರಸಾದ್,
ಅನಿತಾ, ಶೈಲಜಾ, ಪ್ರಿಯಾಂಕ , ಅಂಕಿತ, ಮತ್ತಿತರರು ಹಾಜರಿದ್ದರು.

ಪ್ರೇಮಿಗಳ ದಿನದಂದು ಪೋಷಕರಿಗೆ ಪಾದಪೂಜೆ ಮಾಡಿದ ಮಕ್ಕಳು Read More

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಹೆಚ್ ಎಂ ಪಿ ವಿ ವೈರಸ್ ಪತ್ತೆ

ಬೆಂಗಳೂರು: ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಭಾರತಕ್ಕೆ ಅದರಲ್ಲೂ ಬೆಂಗಳೂರಿಗೆ ಕಾಲಿಟ್ಟಿದ್ದು ಆತಂಕ ಕಾಡುತ್ತಿದೆ.

ಬೆಂಗಳೂರಿನಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿದೆ
ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದು ಇದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ.

ಈ ವೈರಸ್ ಇದ್ದ 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರೆ 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಐಸಿಎಂಆರ್‌, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡು ಪ್ರಕರಣಗಳನ್ನು ಗುರುತಿಸಲಾಗಿದೆ. HMPV ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು,ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.

ಇದು ಒಂದು ಉಸಿರಾಟದ ವೈರಸ್ ಆಗಿದ್ದು ಅದು ಸಾಮಾನ್ಯವಾಗಿ ಶೀತವನ್ನು ಹೋಲುವ ಸೌಮ್ಯ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ ಮಕ್ಕಳು, ಹಿರಿಯರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಂದಿಗೆ ಬೇಗ ಹರಡುವ ಸಧ್ಯತೆ ಇದರ ಎಂದು ಹೇಳಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ಹೆಚ್ಚಿನ ಪರೀಕ್ಷೆಗೆ ಮಕ್ಕಳ ಸ್ವಾಬ್‌ ಅನ್ನು ಪುಣೆ ಲ್ಯಾಬ್‌ಗೆ ಕಳುಹಿಸುವ ಬಗ್ಗೆ ಚರ್ಚಿಸುತ್ತೇವೆ‌ ಎಂದು ಹೇಳಿದರು.

ಐಸಿಎಂಆರ್, ಕೇಂದ್ರ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡುತ್ತೇವೆ. ಎಲ್ಲಾ ಕಡೆ ಟೆಸ್ಟ್ ಮಾಡಿದರೂ ಮಕ್ಕಳು, ವಯಸ್ಸಾದವರಲ್ಲೂ ಸಿಗಬಹುದು. ಹೀಗಾಗಿ ಎಚ್ಚರಿಕೆ ಅಗತ್ಯ, ಈ ಸಂಬಂಧ ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಹೆಚ್ ಎಂ ಪಿ ವಿ ವೈರಸ್ ಪತ್ತೆ Read More

ನಾಳೆ ಮಹಿಳೆಯರು,ಮಕ್ಕಳಿಗೆ ಆಟೋಟ ಸ್ಪರ್ಧೆ

ಮೈಸೂರು: ದಸರಾ ವಸ್ತುಪ್ರದರ್ಶನದ ಮಹಿಳಾ ಮತ್ತು ಮಕ್ಕಳ ಉಪಸಮಿತಿಯ ವತಿಯಿಂದ ಮಹಿಳೆಯರು ಮತ್ತು ಮಕ್ಕಳಿಗಾಗಿ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ನಾಳೆ ಮಧ್ಯಾಹ್ನ 2-00 ಗಂಟೆಯಿಂದ 18 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಹಾಗೂ ದೇಸಿ ಆಟಗಳನ್ನು ಪ್ರಾಧಿಕಾರದ ಆವರಣದಲ್ಲಿನ ಪಿ.ಕಾಳಿಂಗರಾವ್ ಗಾನಮಂಟಪದಲ್ಲಿ ಏರ್ಪಡಿಸಲಾಗಿದೆ.

ಕಣ್ಣಿಗೆ ಬಟ್ಟೆ ಕಟ್ಟಿ ಬಕೆಟ್‌ ಹೊಡೆಯುವುದು,
ಅಳಿಗುಳಿ ಮನೆ ಆಟ,
ಸೂಜಿಗೆ ದಾರ ಪೋಣಿಸುವುದು,ಚೌಕಾಬಾರ
ಚಮಚದಲ್ಲಿ ನಿಂಬೆಹಣ್ಣನ್ನು ಇಟ್ಟುಕೊಂಡು ಓಡುವುದು,ಘಟ್ಟಮನೆ ಗ್ಲಾಸ್‌ನಲ್ಲಿ ಪಿರಾಮಿಡ್ ಜೋಡಿಸುವುದು,ಆಣೆ ಕಲ್ಲು,
ಗುಂಡು ಎಸೆತ,ಕೆರೆದಡ ಆಟ ಮತ್ತಿತರ ಸ್ಪರ್ಧೆ ಏರ್ಪಡಿಸಲಾಗಿದೆ.

ಆಸಕ್ತರು ಹೆಸರನ್ನು ನೊಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ
9611600103 ಸಂಪರ್ಕಿಸುವಂತೆ ಸಮಿತಿಯ ಅಧ್ಯಕ್ಷರು ಕೋರಿದ್ದಾರೆ.

ನಾಳೆ ಮಹಿಳೆಯರು,ಮಕ್ಕಳಿಗೆ ಆಟೋಟ ಸ್ಪರ್ಧೆ Read More