ಮುರುಘಾ ಶ್ರೀಗಳಿಗೆ ರಿಲೀಫ್

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಬುಧವಾರ ಬಿಗ್ ರಿಲೀಫ್ ನೀಡಿದ್ದು, ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಹಾಗೂ ಇತರ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸೆಪ್ಟೆಂಬರ್‌ 1ರಂದು ಶ್ರೀಗಳನ್ನು ಬಂಧಿಸಲಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದರು, 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಅವರು ಹೊರಗೆ ಬಂದಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ, ಮೊದಲ ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.

ಪ್ರಕರಣದ ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ಅವರನ್ನು ಕೂಡ ನಿರ್ದೋಷಿ ಎಂದು ಕೋರ್ಟ್​​ ತೀರ್ಪು ನೀಡಿದೆ.ಶ್ರೀಗಳ ಮೇಲಿನ ಮತ್ತೊಂದು ಕೇಸು ವಿಚಾರಣೆಯಲ್ಲಿದೆ.

ಮುರುಘಾಶ್ರೀ ಪರವಾಗಿ ವಕೀಲ ಸಿ.ವಿ.ನಾಗೇಶ್​ ವಾದ ಮಂಡಿಸಿದ್ದರು.

ಮುರುಘಾ ಶ್ರೀಗಳು ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರೊಂದಿಗೆ ಪ್ರಕರಣದ ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಮಠದ ಮ್ಯಾನೇಜರ್ ಪರಮಶಿವಯ್ಯ ಕೋರ್ಟ್‌ಗೆ ಆಗಮಿಸಿದ್ದರು.

ಮುರುಘಾ ಶ್ರೀಗಳಿಗೆ ರಿಲೀಫ್ Read More

ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ: ಮೂವರ ಸಾವು

ಚಿತ್ರದುರ್ಗ, ಮಾ.5: ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮಂಗಳವಾರ ಮುಂಜಾನೆ ಸಿಬಾರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು,ಎರಡೂ ಟ್ರಕ್ ಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.

ನಿದ್ರೆ ಮಂಪರಿನಲ್ಲಿ ಟ್ರಕ್ ಚಾಲಕ ಡ್ರೈವ್ ಮಾಡಿದ್ದರಿಂದ ಅಪಘಾತವಾಗಿದೆ, ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ: ಮೂವರ ಸಾವು Read More