ಜಮ್ಮು- ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಮೇಘಸ್ಫೋಟ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿ,ನಾಲ್ಕೈದು ಜನ ಮೃತಪಟ್ಟಿದ್ದಾರೆ.

ಆರು ಜನರು ಗಾಯಗೊಂಡಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿ ಕೂಡಾ ಹಾನಿಯಾಗಿದೆ.

ಕಥುವಾ ಜಿಲ್ಲೆಯ ಘಾಟಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಹಲವಾರು ಮನೆಗಳು ಮಣ್ಣಿನಡಿ ಮುಚ್ಚಿಹೋಗಿವೆ. ಪ್ರವಾಹದ ನೀರು ಎಲ್ಲೆಡೆ ಆವರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಗೂ ಹಾನಿಯಾಗಿದೆ.

ಕಥುವಾದ ಪೊಲೀಸ್ ಠಾಣೆಯೊಂದು ಸಂಪೂರ್ಣವಾಗಿ ಮುಳುಗಡೆಯಾಗಿದೆ. ರೈಲ್ವೆ ಹಳಿಗೂ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್ ಮತ್ತು ಚಾಂಗ್ಡಾ ಗ್ರಾಮಗಳಲ್ಲೂ ಭೂಕುಸಿತ ಸಂಭವಿಸಿದೆ. ಲಖನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಿಲ್ವಾನ್-ಹುಟ್ಲಿಯಲ್ಲಿಯೂ ಭೂಕುಸಿತವಾಗಿದೆ.

ಭಾರಿ ಮಳೆಯಿಂದಾಗಿ ನದಿಗಳ ಮಟ್ಟ ಹೆಚ್ಚಾಗಿದೆ. ಉಜ್ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಡಳಿತ ಜನರು ನದಿಗಳ ಬಳಿಗೆ ಹೋಗದಂತೆ ಎಚ್ಚರಿಕೆ ನೀಡಿದೆ.

ಕಿಶ್ತ್ವಾರ್‌ನಲ್ಲಿ ಇನ್ನೂ ನೂರಾರು ಜನರು ಕಾಣೆಯಾಗಿದ್ದಾರೆ. ಮಚ್ಚೇಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಪ್ರವಾಹ ಸಂಭವಿಸಿದೆ. ಅನೇಕರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಈವರೆಗೆ 167 ಜನರನ್ನು ರಕ್ಷಿಸಲಾಗಿದೆ ಅವರಲ್ಲಿ 38 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಮ್ಮು- ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಮೇಘಸ್ಫೋಟ Read More

ಪಾಕಿಸ್ತಾನದಲ್ಲಿ ಮೇಘಸ್ಫೋಟ:300 ಕ್ಕೂ ಹೆಚ್ವು ಮಂದಿ ಸಾವು;ಮನೆಗಳು ನಾಶ

ಪಾಕಿಸ್ತಾನ: ಮಳೆ ಮತ್ತು ಪ್ರವಾಹದಿಂದ ಪಾಕಿಸ್ತಾನದಲ್ಲಿ ಭಾರಿ ವಿನಾಶ ಉಂಟಾಗಿದೆ.

ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 300 ಕ್ಕೂ ಹೆಚ್ಚು ಮಂದಿ.

ಶುಕ್ರವಾರ ಧಾರಾಕಾರ ಮಳೆಯಿಂದಾಗಿ ಪ್ರಾಂತ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.ಮನೆಗಳೆಲ್ಲಾ ಕುಸಿದು ಜನ ನಾಪತ್ತೆಯಾಗಿದ್ದಾರೆ.

ಬುನೇರ್ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ, ಶುಕ್ರವಾರ ಸಂಭವಿಸಿದ ಹಠಾತ್ ಮೇಘಸ್ಫೋಟದಿಂದಾಗಿ ನೀರಿನ ಪ್ರವಾಹವು ಹಳ್ಳಿಗಳ ಕಡೆಗೆ ನುಗ್ಗಿದೆ. ಜನರು ತಪ್ಪಿಸಿಕೊಳ್ಳಲು ಕೂಡಾ ಆಗಲಿಲ್ಲ. ಈ ಜಿಲ್ಲೆಯಲ್ಲಿ ಮಾತ್ರ ಇಲ್ಲಿಯವರೆಗೆ 180ಕ್ಕೂ ಹೆಚ್ಚು ಸಾವುಗಳು ದೃಢಪಟ್ಟಿವೆ. ಹಳ್ಳಿಗಳಲ್ಲಿ ಮನೆಗಳು ಸಂಪೂರ್ಣವಾಗಿ ಕೊಚ್ಚಿಹೋಗಿದ್ದು ಬಹಳ ಕುಟುಂಬಗಳು ನಿರಾಶ್ರಿತವಾಗಿವೆ.

ಪಾಕಿಸ್ತಾನದಲ್ಲಿ ಮೇಘಸ್ಫೋಟ:300 ಕ್ಕೂ ಹೆಚ್ವು ಮಂದಿ ಸಾವು;ಮನೆಗಳು ನಾಶ Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ:40 ಮಂದಿ ಸಾ*ವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿ 40 ಮೃತಪಟ್ಟಂತಾಗಿದೆ

ಈವರೆಗೆ ಇಬ್ಬರು ಸಿಐಎಸ್ಎಫ್ ಜವಾನರು ಸೇರಿ ಒಟ್ಟು 40 ಮಂದಿ ಸಾವನ್ನಪ್ಪಿದ್ದರೆ, 120ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 220 ಮಂದಿ ನಾಪತ್ತೆಯಾಗಿದ್ದು ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

ಕಿಶ್ತ್ವಾರದ ಚಶೋತಿಯಲ್ಲಿರುವ ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದ್ದು, ಭಕ್ತರು ತೀರ್ಥಯಾತ್ರೆ ಕೈಗೊಳ್ಳುವ ಹಾದಿ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಯಾತ್ರಿಕರನ್ನ ಸ್ಥಳಾಂತರ ಮಾಡಲಾಗುತ್ತಿದೆ.

ಮೇಘಸ್ಫೋಟವಾದ ಪ್ರದೇಶಕ್ಕೆ ಎರಡು ತಂಡಗಳನ್ನು ರವಾನಿಸಲಾಗಿದೆ ಎಂದು ಎನ್‌ಡಿಆರ್‌ಎಫ್‌ ತಿಳಿಸಿದೆ.

ಈ‌ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ ಸಂಸದರೂ ಆಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ಮೇಘಸ್ಫೋಟವು ಭಾರೀ ಪ್ರಮಾಣದಲ್ಲಿ ಸಂಭವಿಸಿದೆ, ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು. ವೈದ್ಯಕೀಯ ಚಿಕಿತ್ಸೆಗಾಗಿ ಆಡಳಿತವು ಹೆಲಿ-ರಕ್ಷಣಾ ವ್ಯವಸ್ಥೆಗಳನ್ನು ಸಹ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದು
ದುರಂತ ನೆನೆದು ಮೃತರಿಗೆ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟದಿಂದ ಉಂಟಾದ ದುರಂತದ ಹಿನ್ನೆಲೆಯಲ್ಲಿ, ನಾಳೆ ಸಂಜೆ ʻಅಟ್ ಹೋಮ್ʼ ಟೀ ಪಾರ್ಟಿಯನ್ನ ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಬೆಳಗಿನ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ರದ್ದು ಮಾಡಲು ನಿರ್ಧರಿಸಿದ್ದು, ಔಪಚಾರಿಕ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ:40 ಮಂದಿ ಸಾ*ವು Read More