ಸೆಶೆನ್ ಮುಗಿದ ನಂತರ ಡಿಕೆಶಿ ಮುಖ್ಯ ಮಂತ್ರಿ: ಇಕ್ಬಾಲ್‌ ಹುಸೇನ್‌ ಬಾಂಬ್

ಬೆಳಗಾವಿ: ಚಳಿಗಾಲದ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರದ ಕಾಂಗ್ರೆಸ್‌ ಶಾಸಕ ಇಕ್ಬಾಲ್‌ ಹುಸೇನ್‌ ಬಾಂಬ್ ಸಿಡಿಸಿದ್ದು,

ಸಂಚಲನವನ್ನೇ ಸೃಷ್ಟಿಸಿದೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಾನೇ ಶುಭ ಸುದ್ದಿ ನೀಡಿದ್ದೇನೆ. ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ರಾಜ್ಯಕೀಯದಲ್ಲಿ ದೊಡ್ಡ ಬದಲಾವಣೆ ಯಾಗಲಿದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗುದು ಖಚಿತ!,ಈ ಬಗ್ಗೆ ಹೈಕಮಾಂಡ್ ದೊಡ್ಡ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಡಿ.ಕೆ.ಶಿವಕುಮಾರ್ ಅವರು ಕಳೆದ ಹಲವು ದಶಕಗಳಿಂದ ಪಕ್ಷವನ್ನು ಸಂಘಟಿಸಿದ್ದಾರೆ. ಈಗ ಅವರಿಗೊಂದು ಅವಕಾಶ ಬಂದಿದೆ, ಹಾಗಾಗಿ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಇಕ್ಬಾಲ್‌ ಹುಸೇನ್‌ ಸ್ಪಷ್ಟವಾಗಿ ನುಡಿದರು.

ಇಕ್ಬಾಲ್‌ ಹುಸೇನ್‌ ಅವರ ಈ ಹೇಳಿಕೆ ನಿಜಕ್ಕೂ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.ಜತೆಗೆ ಚರ್ಚೆಗೆ‌ ಗ್ರಾಸ ಒದಗಿಸಿದೆ.

ಸೆಶೆನ್ ಮುಗಿದ ನಂತರ ಡಿಕೆಶಿ ಮುಖ್ಯ ಮಂತ್ರಿ: ಇಕ್ಬಾಲ್‌ ಹುಸೇನ್‌ ಬಾಂಬ್ Read More

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ-ಯದುವೀರ್

ಮಡಿಕೇರಿ: ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಜನತೆ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ಅವರಿಗೆ ಬಿಟ್ಡದ್ದು, ಆದರೆ ರಾಜ್ಯದ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಯದುವೀರ್ ತಿಳಿಸಿದರು.

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ-ಯದುವೀರ್ Read More

ಡಿ.ಕೆ.ಶಿ ಸಿಎಂ ಆಗಲೆಂದು ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಮಾನಿಗಳ ಪ್ರಾರ್ಥನೆ

ಮೈಸೂರು: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೆಂದು ಪ್ರಾರ್ಥಿಸಿ, ಅಭಿಮಾನಿಗಳು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಗೆ ಸಿದ್ಧರಾಗಿರುವ ಭಕ್ತರು, ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಹಿಡಿದು ಜಪ ಮಾಡಿ, ಭಜನೆ ಮತ್ತು ಶ್ಲೋಕ ಪಠಣ ನಡೆಸಿ, ಅವರ ರಾಜಕೀಯ ಜೀವನ ಸುಗಮವಾಗಲಿ, ಅಡೆತಡೆಗಳು ದೂರವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಈ‌ ವೇಳೆ ಅಯ್ಯಪ್ಪ ಭಕ್ತರು ಮಾತನಾಡಿ,
ಮಂಡಲ ಪೂಜೆ ಪೂರ್ಣಗೊಂಡ ನಂತರ ಶಬರಿಮಲೆ ಯಾತ್ರೆಯಲ್ಲಿ ಕೂಡ ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮಾತಿಗೆ ತಪ್ಪುವವರಲ್ಲ.ಅವರು ಮುಖ್ಯ ಮಂತ್ರಿ ಗಾದಿಯನ್ನ ಬಿಡುತ್ತಾರೆ,
ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ವಿಶ್ವಾಸದಿಂದ ನುಡಿದರು.

ಈ ವಿಶೇಷ ಪ್ರಾರ್ಥನೆಯಲ್ಲಿ
ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಹರೀಶ್ ಗೌಡ, ಎಸ್. ಎನ್ ರಾಜೇಶ್,ಅಯ್ಯಪ್ಪ ಮಾಲಧಾರಿಗಳಾದ
ಯೋಗೇಶ್, ಮಂಜುನಾಥ್, ರಾಮಣ್ಣ, ಪುಟ್ಟಾಚಾರ್, ಪ್ರಮೋದ್, ರಾಹುಲ್, ವಿಜಯಕುಮಾರ್, ಪ್ರಶಾಂತ್, ಮಹದೇವಸ್ವಾಮಿ ಮತ್ತು
ಹಲವು ಮಾಲಾಧಾರಿಗಳು, ಅಭಿಮಾನಿಗಳು ಮತ್ತು ಭಕ್ತರು ಹಾಜರಿದ್ದರು.

ಡಿ.ಕೆ.ಶಿ ಸಿಎಂ ಆಗಲೆಂದು ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಮಾನಿಗಳ ಪ್ರಾರ್ಥನೆ Read More

ಭಾರತದ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ವತಿಯಿಂದ ಆಯೋಜಿಸಲಾದ ಬೆಂಗಳೂರು ಟೆಕ್ ಸಮ್ಮಿಟ್ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು.

ಈ ಶೃಂಗಸಭೆಯಲ್ಲಿ, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದರು.

2034 ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ನಮ್ಮ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾ ನೀತಿ 2025-30 ಸಹಕಾರಿಯಾಗಲಿದೆ. ಹೊಸ ಸ್ಟಾರ್ಟ್ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿಯಂತಹ ಕ್ರಮಗಳ ಮೂಲಕ 25,000 ಸ್ಟಾರ್ಟ್ ಅಪ್ ಗಳ ಸ್ಥಾಪನೆಗೆ ನೆರವಾಗುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಿಎಂ ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಪರಿಣತರು ತಮ್ಮ ಜ್ಞಾನ, ಕೌಶಲ್ಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಂಡು ರಾಜ್ಯದ ಭವಿಷ್ಯವನ್ನು ರೂಪಿಸುವಲ್ಲಿ ಪರಿವರ್ತನೆಯ ಹರಿಕಾರರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವು ಉತ್ತಮ ಅವಕಾಶಗಳಿಗೆ ಜಾಗತಿಕ ವೇದಿಕೆಯಾಗಿ ಹೊಸ ಮುನ್ನುಡಿ ಬರೆಯಲಿ ಎಂದು ಸಿಎಂ ಹಾರಿಸಿದರು.

ಭವಿಷ್ಯೀಕರಣಗೊಳ್ಳಿ-ಅಜ್ಞಾತವನ್ನು ರೂಪಿಸುತ್ತಾ, ಊಹಿಸಿಲಾಗದ್ದನ್ನು ಅಳೆಯುತ್ತಾ, ಜಗತ್ತನ್ನು ಮುಂದೆ ಕೊಂಡೊಯ್ಯುವುದು ಈ ಬಾರಿಯ ದ್ಯೇಯ ವಾಖ್ಯವಾಗಿದೆ.

ಭಾರತದ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಸಿದ್ದರಾಮಯ್ಯ Read More

ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ:ಬೆಂಗಳೂರಿಗೆ ಅನ್ಯಾಯ-ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಮುಸುಕಿನ ಗುದ್ದಾಟದಲ್ಲಿ ಬೆಂಗಳೂರಿಗೆ ಮತ್ತೊಮ್ಮೆ ಅನ್ಯಾಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.

ಜಿಬಿಎ ಸಭೆಯಲ್ಲಿ ಅನುಮೋದನೆಗೊಂಡಿದ್ದ ಬಜೆಟ್ ನಲ್ಲಿ ಅರ್ಧದಷ್ಟು ಹಣವನ್ನ ನಗರಾಭಿವೃದ್ಧಿ ಇಲಾಖೆ ಕಡಿತಗೊಳಿಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಜಿಬಿಎ ಸಭೆಯಲ್ಲಿ ಅನುಮೋದನೆಗೊಂಡಿದ್ದ ಬಜೆಟ್ ಅನ್ನೇ ಕೊಡಿಸಲು ಆಗದ ನಿಮಗೆ ಕೇಂದ್ರ ಸರ್ಕಾರವನ್ನ ಪ್ರಶ್ನಿಸುವ ಯಾವ ನೈತಿಕತೆ ಇದೆ ಎಂದು ಟ್ವೀಟ್ ಮಾಡಿ ಅಶೋಕ್ ಪ್ರಶ್ನಿಸಿದ್ದಾರೆ.

ನಿಮಗೆ ನಿಜವಾಗಿಯೂ ಬೆಂಗಳೂರಿನ ಬಗ್ಗೆ ಬದ್ಧತೆ ಇದ್ದರೆ, ಪೂರ್ತಿ ಅನುದಾನವನ್ನು ಬಿಡುಗಡೆ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.

ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ:ಬೆಂಗಳೂರಿಗೆ ಅನ್ಯಾಯ-ಅಶೋಕ್ Read More

ದಸರಾ ಆಹಾರ ಮೇಳದಲ್ಲಿ ತಿಂಡಿ ಸವಿದ ಸಿದ್ದರಾಮಯ್ಯ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ರುಚಿಯೊಂದಿಗೆ ಸ್ವಚ್ಛತೆಯ ಸಿರಿ ಎಂಬ ಧ್ಯೇಯ ವಾಕ್ಯದೊಂದಿಗೆ ಜನಪ್ರಿಯ ಆಹಾರ ಮೇಳವನ್ನು ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಉದ್ಘಾಟಿಸಿ ಆಹಾರ ಸವಿದು ಮೆಚ್ಚುಗೆ ಪಟ್ಟರು.

ಈ ವೇಳೆ ಮಾತನಾಡಿದ ಮುನಿಯಪ್ಪ, ಯುಪಿಎ ಅವಧಿಯ ಸರ್ಕಾರದಲ್ಲಿ ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತರಲಾಯಿತು ಅಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದು ಬಡವರಿಗೆ ಉಚಿತವಾಗಿ ಅಕ್ಕಿ ಯನ್ನು ವಿತರಿಸಲಾರಂಬಿಸಲಾಯಿತು ಎಂದು ಹೇಳಿದರು.

ಅಂದಿನಿಂದ ಆರಂಭಗೊಂಡ ಈ ಯೋಜನೆ ಇಂದಿನವರೆಗೂ ಮುಂದುವರೆಯುತ್ತಿದ್ದು ನಮ್ಮ ಸರ್ಕಾರ ಮುಖ್ಯಮಂತ್ರಿ ಗಳ ನೇತೃತ್ವದಲ್ಲಿ 10ಕೆಜಿ ಅಕ್ಕಿಯನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುತ್ತಿದೆ ಎಂದು ತಿಳುಸಿದರು.

ನಮ್ಮ ಆಹಾರ ಪದ್ದತಿಗಳು ವಿಶೇಷ ಹಾಗೂ ವಿಭಿನ್ನವಾಗಿರುವುದರಿಂದ ಜನರು ಈ ದಸರಾ ಹಬ್ಬದ ಆಹಾರ ಮೇಳಕ್ಕೆ ಬಂದು ಇಷ್ಟವಾದುದನ್ನು ಸವಿಯಿರಿ ಎಂದು ಕರೆ ನೀಡಿದರು.

ಈ ಮೇಳದಲ್ಲಿ ಒಟ್ಟು 160 ಕ್ಕೂ ಹೆಚ್ಚು ಮಳಿಗೆಗಳು ತೆರೆದಿದ್ದು, ಅವುಗಳಲ್ಲಿ 121 ಸಸ್ಯಾಹಾರಿ ಹಾಗೂ 39 ಮಾಂಸಾಹಾರಿ ಮಳಿಗೆಗಳಿವೆ. ಇಲ್ಲಿ ಸ್ಥಳೀಯವಾಗಿ ಮೈಸೂರಿನ ವಿಶೇಷ ಆಹಾರ ಶೈಲಿ, ಬುಡಕಟ್ಟು, ಮಲೆನಾಡು, ಕೊಡವ, ಕರಾವಳಿ, ಉತ್ತರ ಹಾಗೂ ಮಧ್ಯ ಕರ್ನಾಟಕದ ಪಾಕಶೈಲಿಗಳ ಜೊತೆಗೆ ಗುಜರಾತಿ, ರಾಜಸ್ಥಾನಿ, ಹೈದರಬಾದಿ, ಕೇರಳ, ಚೈನೀಸ್ ಮತ್ತು ಅಂತರಾಷ್ಟ್ರೀಯ ಪಾಕಶೈಲಿಗಳನ್ನೂ ಪರಿಚಯಿಸಲಾಗಿದೆ.

ಆಹಾರ ಮೇಳಕ್ಕೆ ಆಗಮಿಸುವ ಪ್ರತಿಯೊಬ್ಬರೂ ಸ್ವಚ್ಚತೆಯನ್ನು ಕಾಪಾಡಿ, ಆಹಾರ ವ್ಯರ್ಥ ಮಾಡದೆ, ತಮಗೆ ಬೇಕಾದಷ್ಟು ಮಾತ್ರ ಆಹಾರವನ್ನು ಕೊಂಡು ಉಪಯೋಗಿಸಬೇಕೆಂದು ಮುನಿಯಪ್ಪ ಮನವಿ‌ ಮಾಡಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ ಜಾರ್ಜ್,ಶಾಸಕರಾದ ರವಿಶಂಕರ್,ರಮೇಶ್ ಬಂಡಿ ಸಿದ್ದೇಗೌಡ,ಡಾ.ತಿಮ್ಮಯ್ಯ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಸಚಿವರ ಆಪ್ತ ಕಾರ್ಯದರ್ಶಿ ಡಾ.ನಟರಾಜ್ ಹಾಗೂ ಜಂಟಿ ಉಪ‌ನಿರ್ದೇಶಕರಾದ ಮಂಟೇಶ್ವಾಮಿ ಹಾಗೂ ಅಧಿಕಾರಿಗಳು ಹಾಜರಿದ್ದರು.

ದಸರಾ ಆಹಾರ ಮೇಳದಲ್ಲಿ ತಿಂಡಿ ಸವಿದ ಸಿದ್ದರಾಮಯ್ಯ Read More

ಸಿಎಂ,ಡಿಸಿಎಂ,ಸಾರಿಗೆ‌ ಸಚಿವರಿಗೆ ಕೃತಜ್ಞತೆ

ಬೆಂಗಳೂರು: ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವತಿಯಿಂದ ವಿವಿಧ ಮುಖಂಡರು ಕೃತಜ್ಞತೆ ಸಲ್ಲಿಸಿದರು.

ಕಾಂಗ್ರೆಸ್ ಸರ್ಕಾರ ಕ್ಷೇತ್ರದ ಜನತೆಯ ಒಳಿತಿಗಾಗಿ ನಂದಿನಿ ಬಡಾವಣೆಯಿಂದ ನಾಗಮಂಗಲಕ್ಕೆ ನೇರ ಬಸ್ ಸೌಕರ್ಯ ಕಲ್ಪಿಸಿದ ಕಾರಣ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎಸ್ ಕೇಶವಮೂರ್ತಿ, ಕ್ಷೇತ್ರದ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ ಜಿ ಸುಧೀಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಬ್ಲಾಕ್ ಅಧ್ಯಕ್ಷ ಪರಿಸರ ರಾಮಕೃಷ್ಣ, ಮುಖಂಡರಾದ ಎಂ ಕುಮಾರ್ ಗೌಡ, ಆನಂದ ಹಾಗೂ ಅನುಷ್ಠಾನ ಸಮಿತಿಯ ಎಲ್ಲ ಸದಸ್ಯರು ಹಾಜರಿದ್ದರು.

ಸಿಎಂ,ಡಿಸಿಎಂ,ಸಾರಿಗೆ‌ ಸಚಿವರಿಗೆ ಕೃತಜ್ಞತೆ Read More

ಶಿಷ್ಟಾಚಾರ ಪಾಲಿಸದೇ ಬಿಜೆಪಿಯಿಂದ ಅಸೂಯೆ ರಾಜಕಾರಣ: ಬಿ ಸುಬ್ರಹ್ಮಣ್ಯ

ಮೈಸೂರು: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂಗೆ ತಡವಾಗಿ ಆಹ್ವಾನ ನೀಡಲಾಗಿದೆ ಎಂದು ‌
ಕರ್ನಾಟಕ ಪ್ರದೇಶ ಕುರುಬ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಮಾಡದೇ ಇರುವುದು ಬಿಜೆಪಿಯ ಅಸೂಯೆ ರಾಜಕಾರಣವನ್ನ ತೋರಿಸಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ ಕೂಡಾ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ಸಿಎಂ ಗಮನಕ್ಕೆ ತಾರದೇ ಕಾರ್ಯಕ್ರಮ ಇಂದೇ ಆಯೋಜಿಸಿದ್ದಾರೆ ಎಂದು ಸುಬ್ರಮಣ್ಯ ಆರೋಪಿಸಿದ್ದಾರೆ.

ಮೊದಲ ಕೇಬಲ್‌ ಸೇತುವೆ ನಿರ್ಮಾಣಕ್ಕೆ ಕೇಂದ್ರ, ರಾಜ್ಯ ಸರ್ಕಾರದ ಕೊಡುಗೆ ಇದೆ, ಆದರೆ, ರಾಜ್ಯ ಬಿಜೆಪಿ ನಾಯಕರು ಕ್ರೆಡಿಟ್‌ ಉದ್ದೇಶದಿಂದ ಸಿದ್ದರಾಮಯ್ಯ ಅವರನ್ನ ತಡವಾಗಿ ಆಹ್ವಾನಿಸಲಾಗಿದೆ. ಓರ್ವ ರಾಜ್ಯದ ಮುಖ್ಯಮಂತ್ರಿ ಇಲ್ಲದೇ ಸರ್ಕಾರಿ ಕಾರ್ಯಕ್ರಮ ಮಾಡುವುದು ಅಕ್ಷಮ್ಯ ಎಂದು ಅವರು ಕಿಡಿ ಕಾರಿದ್ದಾರೆ.

ಕೇಂದ್ರದ ಯಾವುದೇ ಯೋಜನೆ ಅನುಷ್ಠಾನ ಆಗಬೇಕಂದರೆ ಅದಕ್ಕೆ ರಾಜ್ಯ ಸರ್ಕಾರದ ಸಹಕಾರ ಬಹಳ ಮುಖ್ಯ.

ಸಿದ್ದರಾಮಯ್ಯ ಅವರೂ ಸಹ ಕೇಂದ್ರದ ಎಲ್ಲ ಯೋಜನೆಗಳಿಗೆ ಸಹಕಾರ ನೀಡುತ್ತಲೇ ಬಂದಿ ದ್ದಾರೆ,ಆದರೆ ಕೇಂದ್ರ ತಿಕ್ಕಾಟ ಸಾಧಿಸುವಂತ ಕೆಲಸ ಮಾಡುತ್ತಿದೆ, ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಸಬ್ರಮಣ್ಯ ಎಚ್ಚರಿಸಿದ್ದಾರೆ.

ಶಿಷ್ಟಾಚಾರ ಪಾಲಿಸದೇ ಬಿಜೆಪಿಯಿಂದ ಅಸೂಯೆ ರಾಜಕಾರಣ: ಬಿ ಸುಬ್ರಹ್ಮಣ್ಯ Read More

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿ.ಕೆ.ಶಿವಕುಮಾರ್

ಮಂಡ್ಯ: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗುತ್ತಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ, ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಬಾಗಿನ ಅರ್ಪಿಸಿ ನಂತರ ಅವರು ಮಾತನಾಡಿದರು.

ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಾನು ಭಕ್ತಿ, ವಿನಮ್ರತೆಯಿಂದ ಕೋರುತ್ತೇನೆ ಕಾವೇರಿ ಆರತಿಗೆ ಅಡ್ಡಿ ಪಡಿಸಬೇಡಿ,ಸಹಕಾರ ನೀಡಿ ಎಂದು ‌ಮನವಿ ಮಾಡಿದರು.

ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿಗೆ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ, ಯಾರದ್ದಾದರೂ ಅನುಮತಿ ಬೇಕೆ ಎಂದು ಡಿಸಿಎಂ ಪ್ರಶ್ನಿಸಿದರು

ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.

ಬೃಂದಾವನ ಉದ್ಯಾನವನ್ನು ಅತ್ಯಂತ ಹೆಚ್ಚು ಆಕರ್ಷಣೀಯಗೊಳಿಸುವುದು ನಮ್ಮ ಉದ್ದೇಶ. ಮೈಸೂರು ದಸರಾ ರೀತಿ ಅತ್ಯುತ್ತಮ ದೀಪಾಲಂಕಾರ ಮಾಡಲಾಗಿದೆ. ಅತ್ಯುತ್ತಮ ಕಾರಂಜಿಗಳನ್ನು ತರಿಸಲಾಗಿದೆ. ವಿದೇಶಗಳಿಂದ ಅಲಂಕಾರಿಕ‌ ಸಸ್ಯಗಳನ್ನು ತರಿಸಲಾಗಿದೆ.‌ ನಮ್ಮ ಮುಖ್ಯಮಂತ್ರಿಗಳು ಇದನ್ನು ಅತ್ಯುತ್ತಮ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಸಂಕಲ್ಪ ಮಾಡಿದ್ದಾರೆ. ಇದಕ್ಕೆ ಖಾಸಗಿಯವರು ಬಂಡವಾಳ ಹೂಡಬಹುದು ಎಂದು ಆಹ್ವಾನ ಮಾಡಿದ್ದೇವೆ” ಎಂದು ಡಿಕೆಶಿ ಹೇಳಿದರು.

ರಾಜ್ಯದ ಅಣೆಕಟ್ಟುಗಳ ಗೇಟ್ ಗಳನ್ನು ದುರಸ್ತಿಗೊಳಿಸಲು ಈಗಾಗಲೇ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದ್ದೇವೆ. ಆ ಸಮಿತಿಯಿಂದ ವರದಿ ತೆಗೆದುಕೊಂಡು ಹಂತ, ಹಂತವಾಗಿ ರಾಜ್ಯದ ಅಣೆಕಟ್ಟುಗಳ ಗೇಟ್ ದುರಸ್ತಿಯನ್ನು ಮಾಡಬೇಕು ಎಂದು ಮುಂದಾಗಿದ್ದೇವೆ ಎಂದು ತಿಳಿಸಿದರು.

ಬಜೆಟ್ ಮಂಡಿಸಿ ಒಂದು ತಿಂಗಳಾಗಿದೆ ತಾಳ್ಮೆಯಿಂದ ಇದ್ದರೆ ಅನುದಾನ ಬಂದೇ ಬರುತ್ತದೆ. ನಾವು ಕೊಟ್ಟ ಮಾತನ್ನು ತಪ್ಪುವವರಲ್ಲ. ಆರ್ಥಿಕ ಇಲಾಖೆಯವರು ಆರ್ಥಿಕ ಶಿಸ್ತಿಗಾಗಿ ಹಂತ, ಹಂತವಾಗಿ ಹಣ ಬಿಡುಗಡೆ ಮಾಡುತ್ತಾರೆ. ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಕಾಲದಲ್ಲಿ ಬಜೆಟ್ ಗಿಂತ ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ, ನಮ್ಮನ್ನು ಟೀಕೆ ಮಾಡುವವರಿಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು ಡಿ.ಕೆ.ಶಿವಕುಮಾರ್ ತಿಳಿಸಿದರು.

ಇದೇ ವೇಳೆ ಕಾವೇರಿ ಕುರಿತು ಕವನ ವಾಚುಸುವ ಮೂಲಕ ಡಿಕೆಶಿ ಎಲ್ಲರ ಗಮನ ಸೆಳೆದರು.

ಮೈಸೂರು ರಾಜಮಾತೆ ತಮ್ಮ ಒಡವೆಗಳನ್ನು ಅಡವಿಟ್ಟು ಈ ಅಣೆಕಟ್ಟು ನಿರ್ಮಾಣಕ್ಕೆ ಮುನ್ನುಡಿ ಬರೆದರು. ಈ ಕಾರಣಕ್ಕೆ ಕಬ್ಬಿನ ಸಿಹಿ ಹಂಚಲಾಗುತ್ತಿದೆ, ಇಡೀ ಬೆಂಗಳೂರಿಗೆ, ತಮಿಳುನಾಡಿಗೆ ‌ನೀರು ನೀಡಲಾಗುತ್ತಿದೆ ಎಂದು ಹೇಳಿದರು.

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿ.ಕೆ.ಶಿವಕುಮಾರ್ Read More

ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಸೀತಾರಾಮ್ ಗುಂಡಪ್ಪ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ಅಮಾಯಕ 11 ಜನ ಅಭಿಮಾನಿಗಳ ಮರಣದ ಹೊಣೆ ಹೊತ್ತು ಸಿಎಂ,ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ವನದಲ್ಲಿ
ಆಮ್ ಆದ್ಮಿ ಪಕ್ಷದಿಂದ‌ ಸರ್ಕಾರದ ‌ವಿರುದ್ಧ ಪ್ರತಿಭಟನೆ ನಡೆಸಿ ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ‌ ಒತ್ತಾಯಿಸಲಾಯಿತು.

ಈ ವೇಳೆ‌ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಅವರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ನಾಚಿಕೆಗೇಡಿನ, ಬಂಡತನದ ನಡೆಯಿಂದಾಗಿ 11 ಮಂದಿ ಅಮಾಯಕ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ನಿಸ್ಸಹಾಯಕ ಪೊಲೀಸ್ ಅಧಿಕಾರಿಗಳು ಹಾಗೂ ಕೆಲ ಕಂಪನಿಯ ನೌಕರರುಗಳನ್ನು ಬಂಧಿಸಿ ಪ್ರಕರಣವನ್ನು ಮುಚ್ಚಿ ಹಾಕುವ ಕುತಂತ್ರ ನಡೆಸುತ್ತಿದೆ,ಅಮಾಯಕರ ಈ ಸಾವು ಸರ್ಕಾರಿ ಪ್ರಾಯೋಜಿತ ಕಗ್ಗೊಲೆ ಎಂಬಂತೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಹೇಳಿದರು.

ಕೂಡಲೇ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಿ ತೊಲಗಬೇಕೆಂದು ಸೀತಾರಾಮ್ ಗುಂಡಪ್ಪ ಆಗ್ರಹಿಸಿದರು.

ಈಗಾಗಲೇ ಆಮ್ ಆದ್ಮಿ ಪಕ್ಷದ ಕಾನೂನು ಘಟಕವು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿದ ಪರಿಣಾಮವಾಗಿ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಲು ಹಾಗೂ ಪ್ರಕರಣದಿಂದ ನುಣಿಚಿಕೊಳ್ಳಲು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಅಂದಾಜುಂದಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ‌ಟೀಕಿಸಿದರು.

ಜನರು ಸೂಕ್ಷ್ಮ ಕಣ್ಣುಗಳಿಂದ ಎಲ್ಲವನ್ನು ಗಮನಿಸುತ್ತಿದ್ದಾರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಸೀತಾರಾಮ್ ಗುಂಡಪ್ಪ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಮಾತನಾಡಿ ನಮ್ಮ ಪಕ್ಷ ತಪ್ಪಿತಸ್ಥರಾಗಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ತನಕ ಸುದೀರ್ಘ ಹೋರಾಟವನ್ನು ನಡೆಸಲಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಮುಖಂಡರುಗಳಾದ ಜಗದೀಶ್ ಚಂದ್ರ, ಗೋಪಾಲ್, ಡಾ.ಯಲ್ಲಪ್ಪ, ಅನಿಲ್ ನಾಚಪ್ಪ ,ಶಶಿಧರ್ ಆರಾಧ್ಯ ,ಸರವಣನ್,ಬಸವರಾಜ್ ಮೋಹನ್ ರಾಜ್, ಅಶೋಕ್ ಮೃತ್ಯುಂಜಯ ,ಜಗದೀಶ್ ಬಾಬು,
ಭಾನು ಪ್ರಿಯಾ ,ಪುಷ್ಪಾ ಕೇಶವ್,
ಶರಣ್ಯ ,ಎಡ್ವರ್ಡ್,ಅನಿಲ್ ಕುಮಾರ್ ,ನವೀನ್ ಅಯ್ಯರ್,
ಅಣ್ಣಾ ನಾಯಕ್,ಪುಟ್ಟಣ್ಣ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಸೀತಾರಾಮ್ ಗುಂಡಪ್ಪ ಆಗ್ರಹ Read More