ಬಸವ ಮೆಟ್ರೋ: ಸಿಎಂ ಹೇಳಿಕೆ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತ

ಮೈಸೂರು: ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸಂತಸ ತಂದಿದೆ ಎಂದು ಕನ್ನಡ‌ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ
ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ
ಬೆಂಗಳೂರಿನ ನಮ್ಮ ಮೇಟ್ರೋ ಗೆ ಬಸವ ಮೇಟ್ರೋ ಎಂದು ನಾಮಕರಣ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ,ಇದು ಸ್ವಾಗತಾರ್ಹ ಬಸವಣ್ಣನವರ ಅಭಿಮಾನಿಗಳಲ್ಲಿ ಅತ್ಯಂತ ಸಂತಸ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಮ ಸಮಾಜದ ನಿರ್ಮಾಣಕ್ಕೆ ಮತ್ತು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವವನ್ನು ಸಾರುತ್ತ ಜಾತಿ ಪದ್ಧತಿ ನಿರ್ಮೂಲನೆಗೆ ಪಣ ತೊಟ್ಟು ೧೨ ನೇ ಶತಮಾನದಲ್ಲಿ ವಿಶ್ವಕ್ಕೆ ಸಂದೇಶ ಸಾರಿದ ಜಗಜ್ಯೋತಿ ವಿಶ್ವಗುರು ಬಸವಣ್ಣನವರ ಹೆಸರನ್ನು ಕರ್ನಾಟಕದ ರಾಜಧಾನಿಯ ಲಕ್ಷಾಂತರ ಜನ ಪ್ರಯಾಣಿಸುವ ನಮ್ಮ ಮೆಟ್ರೋ ಸ್ಟೇಷನ್ ಗೆ ಇಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೃದಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತೇಜಸ್ವಿ ಹೇಳಿದ್ದಾರೆ.

ಬಸವ ಮೆಟ್ರೋ: ಸಿಎಂ ಹೇಳಿಕೆ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತ Read More

ದುರುಳರು ಯಾವುದೇ ಜಾತಿ, ಧರ್ಮದವರಾದರೂ ಕಠಿಣ ಕ್ರಮ: ಸಿಎಂ

ಬೆಂಗಳೂರು: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ಜಿಲ್ಲೆ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಡಿರುವುದು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ ಎಂದು ಸಿಎಂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಬರೆದಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೇ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ದುರುಳರು ಯಾವುದೇ ಜಾತಿ, ಧರ್ಮದವರಾದರೂ ಕಠಿಣ ಕ್ರಮ: ಸಿಎಂ Read More