ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಕ್ರಮ: ಸಿಎಂ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಲಕಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿ ಸಿಎಂ ಮಾತನಾಡಿದರು.

ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು ಎಂದು ಮನವಿ ಮಾಡಿದರು.

ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು,ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ.
ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಖ್ಯ ಮಂತ್ರಿಗಳಲ್ಲಿ ತಿಳಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಕ್ರಮ: ಸಿಎಂ Read More

2 ತಿಂಗಳೊಳಗೆ ಕೆಪಿಎಸ್‌ಸಿ ಮರು ಪರೀಕ್ಷೆ: ಸಿದ್ದರಾಮಯ್ಯ

ಬೆಂಗಳೂರು: ಇನ್ನು ಎರಡು ತಿಂಗಳೊಳಗೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮರು ಪರೀಕ್ಷೆಯ ನಿರ್ಧಾರವನ್ನು ಸಿಎಂ ಪ್ರಕಟಿಸಿದ್ದಾರೆ.

ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟಿಸಿದ್ದರು.

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದ್ದಾರೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ, ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕೆ ಅರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

2 ತಿಂಗಳೊಳಗೆ ಕೆಪಿಎಸ್‌ಸಿ ಮರು ಪರೀಕ್ಷೆ: ಸಿದ್ದರಾಮಯ್ಯ Read More

ಮುಡಾ ವಿಚಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಆತಂಕ ಇಲ್ಲ:ಪರಮೇಶ್ವರ್

ಬೆಂಗಳೂರು: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಆತಂಕ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ, ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ ಎಂದು ತಿಳಿಸಿದರು.

ಇದರಲ್ಲಿ ಸಿದ್ದರಾಮಯ್ಯ ಅವರ ತಪ್ಪು ಏನೂ ಇಲ್ಲ, ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ, ತಾವು ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ ಅವರು ಹೇಳ್ತಾನೇ ಇದ್ದಾರೆ ಎಂದು ಪರಂ ಸಿದ್ದು ಪರ ಬ್ಯಾಟಿಂಗ್ ಮಾಡಿದರು.

ಸಿಎಂ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ಇತ್ತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಹೇಳಿದ ಕೆಲವು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿದೆವು. ಇಲ್ಲಿನ ವಿದ್ಯಮಾನ, ಕೋರ್ಟ್ ನಡೆ ನೋಡಿಕೊಂಡು ನಂತರ ರಾಷ್ಟ್ರಪತಿಗಳ ಭೇಟಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಮುಡಾ ವಿಚಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಆತಂಕ ಇಲ್ಲ:ಪರಮೇಶ್ವರ್ Read More