ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿದ್ದರಾಮಯ್ಯ ಕರೆ

ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನತೆಗೆ ಕರೆ ನೀಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ ಬಿ.ಎಸ್. ವಿಶ್ವನಾಥ್ ಅವರ ಪುತ್ತಳಿ ಅನಾವರಣಗೊಳಿಸಿ ಮಾತನಾಡಿದ ಸಿಎಂ,ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿ.ಎಸ್.ವಿಶ್ವನಾಥ್ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರಿ ಮುಖಂಡರು. ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪ್ರತಿಮೆಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಿದ್ದೇನೆ ಎಂದು ಹೇಳಿದರು.

ಇಂದಿನ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಸಹಕಾರಿ ಧುರೀಣರಾದ ಜಿ.ಟಿ.ದೇವೇಗೌಡರು, ಸೋಮಶೇಖರ್ , ಷಡಕ್ಷರಿ , ರೇವಣ್ಣನವರು ಸೇರಿದಂತೆ ಎಲ್ಲ ಸಹಕಾರಿಗಳನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ, ಅವರ ಕುಟುಂಬ ವರ್ಗದವರಿಗೆ ಶುಭಕೋರಿದರು.

ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿದ್ದರಾಮಯ್ಯ ಕರೆ Read More

ಅಂಜನಾದ್ರಿ ಬೆಟ್ಟ ಆದ್ಯಾತ್ಮಿಕ ಮಹತ್ವ ತಿಳಿಸುವ ರೀತಿಯಲ್ಲಿ ಅಭಿವೃದ್ಧಿ:ಸಿಎಂ

ಬೆಂಗಳೂರು: ಅಂಜನಾದ್ರಿ ಬೆಟ್ಟ ಪ್ರವಾಸೋದ್ಯಮ, ಪೌರಾಣಿಕ ಆದ್ಯಾತ್ಮಿಕ ಮಹತ್ವ ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಪಡಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ವಯಸ್ಕರೂ ಕೂಡಾ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸಿದರು.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸಭೆ ನಡೆಸಿ ಚರ್ಚಿಸಿದರು.

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ.ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ
ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಸಿಎಂ ಸಲಹೆ ನೀಡಿದರು.

ಈ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿ ವೆಚ್ಚದ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ 10 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿದೆ ಎಂದು ಅಧಿಕಾರಿಗಳು ಮನವಿ ಮಾಡಿದರು.

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿಲ್ಲ,ಆದ್ದರಿಂದ ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101.30 ಎಕರೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ ಎನ್ ಒ ಸಿ ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಚಿವರಾದ ಎಚ್ ಕೆ ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಅಂಜನಾದ್ರಿ ಬೆಟ್ಟ ಆದ್ಯಾತ್ಮಿಕ ಮಹತ್ವ ತಿಳಿಸುವ ರೀತಿಯಲ್ಲಿ ಅಭಿವೃದ್ಧಿ:ಸಿಎಂ Read More

ಮೇಕೆದಾಟು ಯೋಜನೆ ಮಾಡುತ್ತೇವೆ:ಸಿಎಂ

ಮೈಸೂರು‌: ಮೇಕೆದಾಟು ಯೋಜನೆಯನ್ನು ನಾವು ಮಾಡಯೇ ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಡಕ್ಕಾಗಿ ಹೇಳಿದ್ದಾರೆ.

ಮೈಸೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,
ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟ ತಕ್ಷಣ ಮೇಕೆದಾಟುವಿನಲ್ಲಿ ಕಾರ್ಯ ಶುರು ಆಗತ್ತದೆ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಮೇಕೆದಾಟುವಿನಲ್ಲಿ ಕಚೇರಿ ಕೂಡಾ ಮಾಡಿದ್ದೇವೆ ಎಂದು ಹೇಳಿದ ಸಿಎಂ,
ನಮ್ಮಲ್ಲಿರುವ ನಮ್ಮ ನೀರನ್ನು ನಾವು ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿದ್ದೇವೆ,
ರಾಜ್ಯದಲ್ಲಿ ಶೇ.6 ರಷ್ಟು ನೀರಾವರಿ ನಾವು ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ಟ್ರಿಬ್ಯೂನಲ್ ಆರ್ಡರ್ ಪ್ರಕಾರ ತಮಿಳುನಾಡಿಗೆ ನಾವು ನೀರು ಬಿಟ್ಟಿದ್ದೇವೆ,
ಕಳೆದ ವರ್ಷ ಕೂಡಾ ಜಾಸ್ತಿ ನೀರು ಬಿಟ್ಟಿದ್ದೇವೆ
ಒಟ್ಟು 22 ಟಿಎಂಸಿ ನೀರು ಬಿಟ್ಟಿದ್ದೇವೆ ಎಂದು ಹೇಳಿದರು.

ಒಮ್ಮೊಮ್ಮೆ ಮಳೆ ಸರಿಯಾಗಿ ಆಗದಿದ್ದಾಗ ಒಂದು ವರ್ಷ ಎರಡು ವರ್ಷ ಕಡಿಮೆ ನೀರು ಕೊಟ್ಟಿದ್ದೇವೆ,ಅದು ಬಿಟ್ಟರೆ
ಮಿಕ್ಕೆಲ್ಲಾ ವರ್ಷ ನಾವು ಹೆಚ್ಚು ನೀರು ಕೊಟ್ಟಿದ್ದೇವೆ,ಸಂಕಷ್ಟದ ಸಮಯದಲ್ಲಿ ನೀರು ಹಂಚಿಕೆ ಆಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಸರ್ಕಾರ ಬಂಡೆ ತರ:
ಸರ್ಕಾರ ಇರಲ್ಲ ಬೀಳುತ್ತೆ ಎಂಬೆಲ್ಲ ವದಂತಿ ಇದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಸಿದ್ದರಾಮಯ್ಯ ನಗುತ್ತಾ
ನಮ್ಮ ಸರ್ಕಾರ ಬಂಡೆ ತರ 5 ವರ್ಷ ಇರತ್ತೆ ರೀ ಎಂದು ಪ್ರತಿಕ್ರಿಯಿಸಿದರು.

ಅಲ್ಲದೆ ಪಕ್ಕದಲ್ಲೇ ಇದ್ದ ಉಪ ಮುಖ್ಯ ಮಂತ್ರಿ
ಡಿ.ಕೆ.ಶಿವಕುಮಾರ್ ಅವರ ಕೈ ಎತ್ತಿ ತೋರಿಸಿ
ಬಂಡೆ ತರ ನಮ್ಮ ಸರ್ಕಾರ ಇರುತ್ತೆ ನಾವು ಒಗ್ಗಟ್ಟಾಗಿ ಇರುತ್ತೇವೆ‌ಎಂದು ಹೇಳಿದ್ದು ಎಲ್ಲರಲ್ಲೂ ನಗು ತರಿಸಿತು.

ಸುರ್ಜೆವಲಾ ಅವರು ರಾಜ್ಯಕ್ಕೆ ಬರುತ್ತಿದ್ದಾರಲ್ಲಾ ಎಂಬ ಮತ್ತೊಂದು ಪ್ರಶ್ನೆಗೆ, ಪಕ್ಷ ಸಂಘಟನೆ ಬಲ ಪಡಿಸಲು ರಾಜ್ಯಕ್ಕೆ ಬರುತ್ತಿದ್ದಾರೆ,ಅವರ ಕೆಲ್ಸ ಅವರು ಮಾಡುತ್ತಾರೆ ಅವರು ಬರುವುದರಲ್ಲಿ ಅಂತಹ ವಿಶೇಷತೆ‌ ಇಲ್ಲ ಎಂದು ಸಿಎಂ ಉತ್ತರಿಸಿದರು.

ಈ ಬಾರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡಲ್ಲ ಎಂಬ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು,
ನಿಮಗೇನು ಅನ್ನಿಸುತ್ತೆ ಎಂದು ಮಾದ್ಯಮದವರನ್ನೇ ಪ್ರಶ್ನಿಸಿ
ನಾನು ದಸರಾ ಉದ್ಘಾಟನೆ ಮಾಡುತ್ತೇನೆ ಅದರಲ್ಲಿ ಸಂಶಯ ಬೇಡ ಎಂದು ಹೇಳಿದರು.

ಮೇಕೆದಾಟು ಯೋಜನೆ ಮಾಡುತ್ತೇವೆ:ಸಿಎಂ Read More