ಮೂಡ ಪ್ರಕರಣ:ಮರೀಗೌಡ ರಾಜೀನಾಮೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.

ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ರಾಜೀನಾಮೆ ಕೊಡುವ ಬಗ್ಗೆ ಮುಖ್ಯ ಮಂತ್ರಿಗಳಿಗೆ ಮೊದಲು ಮಾಹಿತಿ ನೀಡಿದ್ದರು.

ರಾಜೀನಾಮೆ ಕೊಟ್ಟ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮರೀಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ‌ ಎಂದು ಸ್ಪಷ್ಟಪಡಿಸಿದರು.

ಮುಖ್ಯ ಮಂತ್ರಿಗಳು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ದರು,ಜತೆಗೆ ಇತ್ತೀಚೆಗೆ ನನ್ನ ಆರೋಗ್ಯವು ಸರಿಯಿಲ್ಲ ಆದ್ದರಿಂದ ರಾಜೀನಾಮೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಮೂಡ ಪ್ರಕರಣದ ತನಿಖೆ ನಡೆಯುತ್ತಿದೆ ನಡೆಯಲಿ, ಅಕ್ರಮ ಆಗಿದೆಯಾ ಇಲ್ಲವಾ ಎಂಬುದನ್ನು ನಾನು ಹೇಳುವುದಿಲ್ಲ. ಈಗ ತನಿಖೆ ನಡೆಯುತ್ತಿದೆ,ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದು ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ, ಸೈಟ್ ವಿಚಾರವಾಗಿ ಸಿಎಂ ಅವರು ನನ್ನ ಮೇಲೆ ಯಾವುದೇ ಒತ್ತಡ ಹಾಕಿಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು. 40 ವರ್ಷಗಳಿಂದ ಅವರ ಜೊತೆಯಲ್ಲಿ ಇದ್ದೇನೆ. ತಾಲೂಕು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ನನ್ನನ್ನು ಮಾಡಿದ್ದರು. ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತಾ ಹೇಳಿಲ್ಲ. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹಾಕಿಲ್ಲ ಎಂದು ಮರಿಗೌಡ ಸ್ಪಷ್ಟಪಡಿಸಿದರು.

ಎರಡು ಬಾರಿ ಸ್ಟ್ರೋಕ್ ಆಯ್ತು. ಆರೋಗ್ಯ ಸರಿಯಿಲ್ಲ. ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಸಾಧ್ಯವಿಲ್ಲ ಅಂತಾ ರಾಜೀನಾಮೆ ಕೊಟ್ಟಿದ್ದೇನೆ. ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಮಾಡಿದ್ದರು ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಮರೀಗೌಡ ತಿಳಿಸಿದರು.

ಮೂಡ ಪ್ರಕರಣ:ಮರೀಗೌಡ ರಾಜೀನಾಮೆ Read More

ಇನ್ನೂ 10 ದಿನ ದಸರಾ ದೀಪಾಲಂಕಾರ:ಡಿಕೆಶಿ

ಮೈಸೂರು: ಈ ಬಾರಿ ದಸರಾ ದೀಪಾಲಂಕಾರ ಇನ್ನೂ ಹತ್ತು ದಿನಗಳ ಕಾಲ ಇರಲಿದೆ ಎಂದು ‌ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ನಂದಿ ಧ್ವಜಕ್ಕೆ ಸಿಎಂ‌ ಸಿದ್ದರಾಮಯ್ಯ‌ ಅವರೊಂದಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈ‌ ಬಾರಿ ಅದ್ದೂರಿ ದಸರಾ‌ ಆಚರಣೆ ಮಾಡಲಾಗಿದೆ, ದೀಪಾಲಂಕಾರ ಅದ್ಭುತವಾಗಿದೆ, ಜನತೆ ಮೈಸೂರಿಗೆ ಬರಬೇಕು ಇದನ್ನೆಲ್ಲ ಕಣ್ ತುಂಬಿಕೊಳ್ಳಬೇಕು ಎಂದು ಕರೆ ನೀಡಿದರು.

ದಸರಾ ಇಂದು‌ ಮುಕ್ತಾಯ ಆದರೂ ಕೂಡಾ ಇನ್ನೂ ಹತ್ತು ದಿನಗಳವರೆಗೂ ದೀಪಾಲಂಕಾರ ಇರಲಿದೆ ಜನ ನೋಡಬೇಕು ಎಂದು ಹೇಳಿದರು. ಇದೇ‌ ವೇಳೆ ಡಿಕೆಶಿ ರಾಜ್ಯದ ಜನತೆಗೆ ದಸರಾ ಹಬ್ಬದ ಶುಭಾಶಯ ಸಲ್ಲಿಸಿದರು.

ಇನ್ನೂ 10 ದಿನ ದಸರಾ ದೀಪಾಲಂಕಾರ:ಡಿಕೆಶಿ Read More

ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ:ಸಿಎಂ

ಬೆಂಗಳೂರು,ಅ.1: ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿದಾಯಕ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಿರಿಯರ ಬದುಕನ್ನು ಕೇವಲ ಆದರ್ಶ ಎಂದುಕೊಳ್ಳದೆ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದರು.

ಮಂಗಳವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಉದ್ಘಾಟಿಸಿ ಸಿಎಂ ಮಾತನಾಡಿದರು.

ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ಘನತೆಯ ಬಾಳಿನೊಂದಿಗೆ ವಯೋಪಕ್ವತೆ, ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ’ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು

ಹಿರಿಯನ್ನು ಗೌರವದಿಂದ ಕಾಣಬೇಕು. ಅವರ ಅನುಭವಗಳನ್ನು ಗೌರವರಿಸಿ ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹಿರಿಯರ ಕೊಡುಗೆಗಳು ಹಾಗೂ ಅವರ ಮಾರ್ಗದರ್ಶನದಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು ಎಂದು ಸಿಎಂ ತಿಳಿಸಿದರು.

ನಮ್ಮ ಆತ್ಮಸಾಕ್ಷಿಯೇ ನ್ಯಾಯಾಲಯ
ವಿದ್ದಂತೆ ಎಂದು ಮಹಾತ್ಮಾಗಾಂಧೀಜಿ
ಹೇಳಿದ್ದರು. ಸಮಾಜದಲ್ಲಿ ಇಂದೂ ಮೌಢ್ಯಗಳು, ಕಂದಾಚಾರಗಳಿವೆ. ಇವುಗಳಿಗೆ ಜೋತುಬೀಳದೇ ವೈಚಾರಿಕತೆಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಸಲಹೆ ನೀಡಿದರು.

2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಸುಮಾರು 57.91ಲಕ್ಷದಷ್ಟು ಹಿರಿಯ ನಾಗರಿಕರಿದ್ದಾರೆ. ಇತ್ತೀಚಿನ ದಿನಗಳಲ್ಲಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ. ಇದಕ್ಕೆ ಕಾರಣ, ಮಕ್ಕಳು ವಿದೇಶದಲ್ಲಿ ನೆಲಿಸಿ, ತಂದೆತಾಯಿಯನ್ನು ಪೋಷಿಸಲು ಸಾಧ್ಯವಾಗದೆ ವೃದ್ಧಾಶ್ರಮಗಳಿಗೆ ಸೇರಿಸುತ್ತಾರೆ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ:ಸಿಎಂ Read More

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸೂಕ್ತ ಕ್ರಮ: ಸಿಎಂ ಎಚ್ಚರಿಕೆ

ಮೈಸೂರು: ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿಯ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ಉದ್ಘಾಟಿಸಿ ಸಿಎಂ ಮಾತನಾಡಿದರು‌.

ಹಿಂದೆಯೂ ಸಮಿತಿ ಇತ್ತು,ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದು ಹೇಳಿದರು

ಬೆಟ್ಟಕ್ಕಯ ಬರುವ ಭಕ್ತರಿಗೆ ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದು ಹೇಳಿದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು, ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮವನ್ನು ಶುಚಿತ್ವಕ್ಕೆ ಕೊಡಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದ್ದು ವಾಹನ ನಿಲುಗಡೆಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಿಎಂ ತಿಳಿಸಿದರು.

ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದೆ,ಆದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸುವುದಿಲ್ಲ, ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಕಠಿಣ ಎಚ್ಚರಿಕೆ ನೀಡಿದರು.

ಶಕ್ತಿ ದೇವತೆ,ತಾಯಿ ಚಾಮುಂಡೇಶ್ವರಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ,ಎಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಿದರು.

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ,ಈ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸೂಕ್ತ ಕ್ರಮ: ಸಿಎಂ ಎಚ್ಚರಿಕೆ Read More

ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.

ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಂತಾಗಿದೆ.

ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು ಸೋಮವಾರ ಕೂಡಾ ಎರಡು ಗಂಟೆಗಳ ಕಾಲ ಧೀರ್ಘ ವಿಚಾರಣೆ ನಡೆಸಲಾಯಿತು.

ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸಿಎಂ ಪರ ವಕೀಲರು ಮತ್ತು ಸಾಲಿಸಿಟರ್ ಜನರಲ್ ಸುದೀರ್ಘ ವಾದ ಮಂಡಿಸಿದ ಬಳಿಕ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್ ವಾದಮಂಡಿಸಿದರು.

ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲೇಖಿಸಿ, ಕಾನೂನು ಬಾಹಿರವಾಗಿಲ್ಲದಿದ್ದರೂ ಪ್ರಭಾವ ಬಳಸಿ ಲಾಭ ಪಡೆದರೆ ಅದು ಅಪರಾಧ. ಅನುಕೂಲ ಪಡೆಯಲು ಅಧಿಕಾರಿ ಮೇಲೆ ಪ್ರಭಾವ ಬಳಸಿದರೂ ಅಪರಾಧ.

ವೈಯಕ್ತಿಕ ಪ್ರಭಾವ ಬಳಸಿದರೂ ಅದು ಸೆಕ್ಷನ್ 7 ಅಡಿ ಅಪರಾಧ. ಒಬ್ಬ ಸಚಿವ ಇಲಾಖೆಯಲ್ಲದೇ ಬೇರೆಡೆ ಪ್ರಭಾವ ಬೀರಿದರೂ ಅಪರಾಧ. ಸಾರ್ವಜನಿಕ ಆಡಳಿತದಲ್ಲಿ ಪಾವಿತ್ರ್ಯತೆ ತರಲು ಸೆಕ್ಷನ್ 7ಸಿ ಜಾರಿಗೆ ತರಲಾಗಿದೆ ಎಂದು ವಾದಿಸಿದರು.

ಮುಡಾ ಪ್ರಕರಣದ ಬಗ್ಗೆ ಸರ್ಕಾರವೇ ತನಿಖೆ ಅಗತ್ಯವಿದೆ ಎಂದು ಭಾವಿಸಿ ಆಯೋಗ ರಚಿಸಿದೆ. ಹೀಗಾಗಿ ರಾಜ್ಯಪಾಲರು 17ಎ ಅಡಿ ಅನುಮತಿ ನೀಡಿರುವುದು ಸರಿಯಾಗಿದೆ. ಈ ಹಂತದಲ್ಲಿ ತನಿಖೆಯನ್ನು ತಡೆಹಿಡಿಯಬಾರದು. ಸತ್ಯ ಅನಾವರಣಗೊಳ್ಳಲು ಅವಕಾಶ ನೀಡಬೇಕು ಎಂದು ರಾಘವನ್ ಮನವಿ ಮಾಡಿದರು.

ರಾಘವನ್ ಅವರು ಸುದೀರ್ಘ ವಾದ ಮಂಡಿಸಿದ ಬಳಿಕ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಸಚಿವ ಸಂಪುಟದ ನಿರ್ಣಯದ ಬಗ್ಗೆ ವಾದ ಮಂಡಿಸಬೇಕಿದೆ, ಆದರೆ ಈ ವಾರಾಂತ್ಯ ಹಬ್ಬದ ರಜೆಗಳಿವೆ, ಆದ್ದರಿಂದ ಒಂದು ವಾರ ಕಾಲಾವಕಾಶ ನೀಡಬೇಕು ಎಂದು ಹೈಕೋರ್ಟ್​ಗೆ ಮನವಿ ಮಾಡಿದರು.

ಎಜಿ ಶಶಿಕಿರಣ್ ಶೆಟ್ಟಿ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಹಬ್ಬಕ್ಕೂ ಮೊದಲೇ ವಾದಮಂಡನೆ ಮುಗಿಸಿಬಿಡಿ ಎಂದು ಹೇಳಿದರು.

ಆದರೆ ಅಡ್ವೊಕೆಟ್ ಜನರಲ್ ವಾದಿಸಿದ ಮೇಲೆ ನಾನು ವಾದಿಸುತ್ತೇನೆ. ಸೆಪ್ಟೆಂಬರ್ 9 ಅಥವಾ 21 ರಂದು ನಾನು ವಾದಿಸುತ್ತೇನೆ ಎಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದರು.

ಅಷ್ಟು ದೂರದ ದಿನಾಂಕವನ್ನು ನೀಡಲು ಸಾಧ್ಯವಿಲ್ಲ ಎಂದ ನ್ಯಾಯಮೂರ್ತಿಗಳು, ನೀವು ಬೇಗ ವಾದಮಂಡನೆ ಮುಗಿಸಬೇಕು. ವಿಚಾರಣಾ ನ್ಯಾಯಾಲಯದ ಕಲಾಪ ಬಹಳ ಕಾಲ ಮುಂದೂಡುವುದು ಸೂಕ್ತವಲ್ಲ ಎಂದು ಹೇಳಿ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದರು.

ನಂತರ ಸೆಪ್ಟೆಂಬರ್ 12ರಂದು ತಾವು ವಾದಿಸುವುದಾಗಿ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದರು. ಇದಕ್ಕೆ ಒಪ್ಪಿಗೆ ಸೂಚಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಸೆಪ್ಟೆಂಬರ್ 12ರಂದು ಸಂಪೂರ್ಣ ವಿಚಾರಣೆ ಮುಗಿಸೋಣ ಎಂದು ತಿಳಿಸಿದರು.

ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Read More