ಗಾಡಿ ಚೌಕದಲ್ಲಿ ದರ್ಗಾ ನಿರ್ಮಾಣ ವಿವಾದ: ಪಾಲಿಕೆ ಆಯುಕ್ತರ ಪಾತ್ರ‌ ಇಲ್ಲ-ತೇಜಸ್ವಿ

ಮೈಸೂರು: ಮೈಸೂರಿನ ಕೆ ಆರ್ ಮೊಹಲ್ಲಾ ಗಾಡಿ ಚೌಕದಲ್ಲಿ ದರ್ಗಾ ನಿರ್ಮಾಣ ವಿವಾದದಲ್ಲಿ ನಗರಪಾಲಿಕೆ ಆಯುಕ್ತರ ಪಾತ್ರ ಇಲ್ಲ,ಆದರೂ ಕೆಲವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಹೇಳಿದ್ದಾರೆ.

ಗಾಡಿಚೌಕದ ಸ್ವತ್ತಿನ ಸಂಖ್ಯೆ 2192 ಕೆ -65 ರಲ್ಲಿ ಧಾರ್ಮಿಕ ಕಟ್ಟಡ (ಪದರ್ಗಾ) ನಿರ್ಮಿಸಲು ಕಾರ್ಯದರ್ಶಿ ದಿಲ್ ಬರ್ ಷಾವಲಿ ಮಕಾನ್ (ಸುನ್ನಿ ದರ್ಗಾ) ಅವರು ಅನುಮತಿ ಕೋರಿ ಮೈಸೂರು ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯು ಈ ಕುರಿತು ತಕರಾರು ಅರ್ಜಿ ಸಲ್ಲಿಸುವಂತೆ ಸಾರ್ವಜನಿಕ ಪ್ರಕಟಣೆ ಯನ್ನು ಹೊರಡಿಸಿದೆ.

ಇವೆಲ್ಲ ಕಾನೂನಿನ ಪ್ರಕಾರವೇ ನಡೆದಿರುತ್ತದೆ ಆದರೆ ಈಗ ಕೆಲವರು ಮೈಸೂರು ಪಾಲಿಕೆ ಆಯುಕ್ತರಾದ ಶೇಕ್ ತನ್ವೀರ್ ಆಫಿಸ್ ಅವರ ಪಾತ್ರ ವಿದೆ ಎಂದು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ದೂರಿದ್ದಾರೆ.

ಶೇಖ್ ತನ್ವೀರ್ ಆಫಿಸ್ ಅವರು ಒಬ್ಬ ನಿಷ್ಠಾವಂತ ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ,ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಿಂದ ಇಲ್ಲಿಯ ವರೆಗೆ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ ಎಂದು ತೇಜಸ್ವಿ ತಿಳಿಸಿದ್ದಾರೆ.

ಈಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ವಿನಾಕಾರಣ ಅವರ ಮೇಲೆ ಕೆಲವರು ಆರೋಪಿಸುತ್ತಿದ್ದಾರೆ ಇದು ಸರಿಯಲ್ಲ ಇದು ಖಂಡನೀಯ ಎಂದು ತಿಳಿಸಿದ್ದಾರೆ.

ಶೇಕ್ ತನ್ವೀರ್ ಆಫಿಸ್ ಅವರು ಕಾನೂನಿನಲ್ಲಿ ಇರುವ ನಿಯಮಾನುಸಾರ ಈ ವಿಷಯದಲ್ಲಿ ನಡೆದುಕೊಂಡು ಯಾರಿಗಾದರೂ ತಕರಾರು ಇದ್ದಲ್ಲಿ ಅರ್ಜಿ ಸಲ್ಲಿಸುವಂತೆ ಸಾರ್ವಜನಿಕ ಪ್ರಕಟಣೆ ಯನ್ನು ಹೊರಡಿಸಿದ್ದಾರೆ.

ಈಗಾಗಲೇ ಹಲವರು ತಕಾರಾರು ಅರ್ಜಿಗಳನ್ನು ಸಲ್ಲಿಸಿದ್ದಾರೆ ಇದು ಸಾಮಾನ್ಯ ಪ್ರಕ್ರಿಯೆ, ಇದನ್ನು ವಿನಾಕಾರಣ ಕೆಲವರು ಗೊಂದಲ ಉಂಟುಮಾಡಿ ಆಯುಕ್ತರಾದ ಶೇಕ್ ತನ್ವೀರ್ ಆಫಿಸ್ ಅವರ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.

ಒಂದು ವೇಳೆ ಇದೇ ರೀತಿ ದಕ್ಷ ಅಧಿಕಾರಿಯ ಮೇಲೆ ಸುಳ್ಳು ಆರೋಪಗಳನ್ನು ಮುಂದುವರೆಸಿದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ತೇಜಸ್ವಿ ಎಚ್ಚರಿಸಿದ್ದಾರೆ.

ಗಾಡಿ ಚೌಕದಲ್ಲಿ ದರ್ಗಾ ನಿರ್ಮಾಣ ವಿವಾದ: ಪಾಲಿಕೆ ಆಯುಕ್ತರ ಪಾತ್ರ‌ ಇಲ್ಲ-ತೇಜಸ್ವಿ Read More

ಉದಯಗಿರಿ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಿ-ಸಿಎಂ ಕಡಕ್ ಸೂಚನೆ

ಬೆಂಗಳೂರು: ಮೈಸೂರಿನ ಉದಯಗಿರಿ ಘಟನೆಯಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಡಕ್ ಸೂಚನೆ ನೀಡಿದ್ದಾರೆ.

ಸಂಜೆ ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿ ಹಿರಿಯ ಅಧಿಕಾರಿಗಳಿಗೆ ಕಡಕ್ ಸೂಚನೆಗಳನ್ನು ನೀಡಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ತಪ್ಪು ಯಾರೇ ಮಾಡಿದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಿ,ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ ಎಂದು ಆದೇಶಿಸಿದ್ದಾರೆ.

ಅಮಾಯಕರಿಗೆ ತೊಂದರೆ ಕೊಡಬಾರದು,
ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು,ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಇದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ ಎಂದು ಸಿದ್ದರಾಮಯ್ಯ ಕಠಿಣ ಸೂಚನೆ ನೀಡಿದ್ದಾರೆ.

ಉದಯಗಿರಿ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಿ-ಸಿಎಂ ಕಡಕ್ ಸೂಚನೆ Read More

ಕಮಿಷನರ್ ಸೀಮಾ ಲಾಟ್ಕರ್ ಗೆ‌ ತೇಜಸ್ವಿ ಅಭಿನಂದನೆ

ಮೈಸೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಯಶಸ್ವಿ ದಸರಾ ನಡೆಸಿಕೊಟ್ಟ ಮೈಸೂರಿನ ಪ್ರಥಮ ಮಹಿಳಾ ಕಮೀಷನರ್ ಸೀಮಾ ಲಾಟ್ಕರ್ ರವರಿಗೆ ಕನ್ನಡ ಚಳವಳಿ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಸೀಮಾ ಲಾಟ್ಕರ್ ಅವರು 2024 ರ ಮೈಸೂರು ದಸರಾ ಮಹೋತ್ಸವದಲ್ಲಿ ಯಾವುದೇ ಕ್ಷಣದಲ್ಲೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಯಶಸ್ವಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮ ವಹಿಸಿ ಭದ್ರತೆ ಒದಗಿಸಿದ್ದಾರೆ.

ಮೈಸೂರು ದಸರಾ ಮಹೋತ್ಸವದಲ್ಲಿ ಲಕ್ಷಾಂತರ ಜನ ಪಾಲ್ಗೊಳ್ಳುತ್ತಾರೆ ಮತ್ತು ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾವಹಿಸಿ ವ್ಯವಸ್ಥಿತವಾಗಿ ಭದ್ರತೆ ಒದಗಿಸುವಲ್ಲಿ ಸೀಮಾ ಲಾಟ್ಕರ್ ಮತ್ತು ಪೋಲಿಸ್ ಸಿಬ್ಬಂದಿ ಶ್ರಮವಹಿಸಿ ಯಶಸ್ವಿಯಾಗಿ ದಸಾರ ನಡೆಸಿದ್ದು ಹೆಮ್ಮೆಯ ಸಂಗತಿ ಎಂದು ತೇಜಸ್ವಿ ಶ್ಲಾಘಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕಮೀಷನರ್ ರವರ ಕಛೇರಿಗೆ ತೆರಳಿ ಸೀಮಾ ಲಾಟ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿ ಗೌರವಿಸುವುದಾಗಿ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಕಮಿಷನರ್ ಸೀಮಾ ಲಾಟ್ಕರ್ ಗೆ‌ ತೇಜಸ್ವಿ ಅಭಿನಂದನೆ Read More