ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಇಡಿ ಶಾಕ್

ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ‌ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ.

ಕಾರವಾರದ ಶಾಸಕ ಸತೀಶ್ ಸೈಲ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಹಣ ಮತ್ತು ಚಿನ್ನವನ್ನು ವಶಪಡಿಸಿಕೊಂಡು‌ ಶಾಕ್ ನೀಡಿದೆ

ಕಳೆದ ಎರಡು ದಿನಗಳಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ಶೋಧ ನಡೆಸಿದ್ದರು. ಕಾರವಾರ, ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ಸೈಲ್ ಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಶೋಧ ನಡೆದಿತ್ತು.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಶೋಧಿಸಲಾದ ಇತರ ಸಂಸ್ಥೆಗಳಲ್ಲಿ ಆಶಾಪುರ ಮಿನೆಕೆಮ್, ಶ್ರೀ ಲಾಲ್ ಮಹಲ್, ಸ್ವಸ್ತಿಕ್ ಸ್ಟೀಲ್ಸ್, ಐಎಲ್‌ಸಿ ಇಂಡಸ್ಟ್ರೀಸ್, ಶ್ರೀ ಲಕ್ಷ್ಮಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗಳು ಸೇರಿವೆ ಎಂದು ಇಡಿ ತಿಳಿಸಿದೆ.

ದಾಳಿ‌ವೇಳೆ ಇಡಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ. ಶಾಸಕ ಸತೀಶ್ ಸೈಲ್ ಮನೆ ಮತ್ತು ಬ್ಯಾಂಕ್ ಖಾತೆಯಲ್ಲಿದ್ದ 1.68 ಕೋಟಿ ನಗದು, ಮತ್ತು ಅಂದಾಜು 6.20 ಕೋಟಿಗೂ ಅಧಿಕ ಮೌಲ್ಯದ 6.75 ಕೆ‌ಜಿ ಚಿನ್ನವನ್ನು ಜಪ್ತಿ ಮಾಡಲಾಗಿದೆ

ಇಡಿ ಅಧಿಕಾರಿಗಳು ಚರಾಸ್ತಿ, ಸ್ಥಿರಾಸ್ತಿ ಸೇರಿ ಒಟ್ಟು 14.13 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. 2 ಟ್ರಂಕ್​ನಲ್ಲಿ ಚಿನ್ನ, ಹಣ, ದಾಖಲೆ ಕೊಂಡೊಯ್ದಿದ್ದಾರೆ.

ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸೈಲ್ ಅವರಿಗೆ ಶಿಕ್ಷೆ ವಿಧಿಸಿತ್ತು. ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್​​​ನಲ್ಲಿ ವಿಚಾರಣೆ ನಡೆಸಿದ್​ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್​​​ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿ,ದಂಡ ಮೊತ್ತದ ಶೇ 25 ರಷ್ಟನ್ನು ಠೇವಣಿ ಇಡುವಂತೆ ಆದೇಶಿಸಿದ ಹೈಕೋರ್ಟ್ ಸೈಲ್​ಗೆ ಜಾಮೀನು ನೀಡಿತ್ತು.

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಇಡಿ ಶಾಕ್ Read More

ಬೆಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ:ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಬೆಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ನ್ಯಾ.ಗಜಾನನ ಭಟ್ ಅವರು ಈ ಶಿಕ್ಷೆಯ ಆದೇಶವನ್ನು ಪ್ರಕಟಿಸಿದರು. ಒಟ್ಟು ಮೂರು ಪ್ರಕರಣಗಳಲ್ಲಿ ಶಿಕ್ಷೆಯನ್ನು ವಿಧಿಸಲಾಗಿದೆ.

ಸತೀಶ್ ಸೈಲ್ ಗೆ ನ್ಯಾಯಾಲಯ ಒಟ್ಟು 4 ಪ್ರಕರಣದಲ್ಲಿ ಶಿಕ್ಷೆ ಪ್ರಕಟ ಮಾಡಿದೆ.
420 ವಂಚನೆ ಪ್ರಕರಣದಲ್ಲಿ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅದಿರು ಕಳ್ಳತನ ಪ್ರಕರಣದಲ್ಲಿ 3 ವರ್ಷ ಹಾಗೂ ಒಳಸಂಚು ಪ್ರಕರಣದಲ್ಲಿ 5 ವರ್ಷ ಶಿಕ್ಷೆಯನ್ನು ವಿಧಿಸಲಾಗಿದೆ.ಅಲ್ಲದೆ, 9 ಕೋಟಿ 60 ಲಕ್ಷ ರೂಪಾಯಿ ದಂಡ ಪಾವತಿ ಮಾಡುವಂತೆ ಆದೇಶ ಮಾಡಿದೆ.

ಸತೀಶ್ ಸೈಲ್‌ ವಿರುದ್ಧ ಬೆಲೆಕೇರಿ ಅದಿರು ಅಕ್ರಮ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ದಾಖಲಾಗಿತ್ತು.

ಸುದೀರ್ಘ 14 ವರ್ಷಗಳ ವಿಚಾರಣೆಯ ಬಳಿಕ ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿತ್ತು.ಇಂದು ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಘೋಷಣೆ ಮಾಡಿದೆ.

ಈ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಕಾರಾಪುಡಿ ಮಹೇಶ್, ಸ್ವಸ್ತಿಕ್ ನಾಗರಾಜು ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿಯನ್ನು ಸಿಬಿಐ ದಾಖಲಿಸಿತ್ತು.

ಬೆಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ:ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ Read More