ರಾಷ್ಟ್ರ ಅಭಿವೃದ್ಧಿ ಹೊಂದಲು ಆ ದೇಶದ ಸಂವಿಧಾನದ ಪಾತ್ರ ಮುಖ್ಯ:ರಾಮಪ್ರಸಾದ್

ನಂಜನಗೂಡು: ಒಂದು ರಾಷ್ಟ್ರ ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕಾದರೆ ಆ ದೇಶದ ಸಂವಿಧಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ ರಾಮಪ್ರಸಾದ್ ತಿಳಿಸಿದರು.

ಕಾಲೇಜಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಂವಿದಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸಂವಿದಾನವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.

ರಾಜ್ಯಶಾಸ್ತ್ರ ಉಪನ್ಯಾಸಕ ಹೆಚ್. ಕೆ ಸ್ವಾಮಿಗೌಡ ಅವರು ಸಂವಿಧಾನದ ಪೀಠಿಕೆ ,ಹಕ್ಕುಗಳು, ಕರ್ತವ್ಯಗಳ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು.

ಆಂಗ್ಲ ಭಾಷೆ ಉಪನ್ಯಾಸಕ ರಂಗಸ್ವಾಮಿ ಅವರು ಭಾರತ ದೇಶದಲ್ಲಿ ಸಾಮಾನ್ಯ ವ್ಯಕ್ತಿಯು ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯ ಇದಕ್ಕೆ ಮುಖ್ಯ ಕಾರಣ ನಮ್ಮ ದೇಶದ ಸಂವಿಧಾನ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್. ದಿನೇಶ್ ಅವರು ಒಂದು ಕುಟುಂಬಕ್ಕೆ, ಒಂದು ಕಾಲೇಜಿಗೆ, ಒಂದು ಕಾರ್ಖಾನೆಗೆ, ಒಂದು ಸಂಸ್ಥೆಗೆ ಯಾವ ರೀತಿಯಲ್ಲಿ ಕಾನೂನುಗಳು ಇರುತ್ತದೆಯೋ ಹಾಗೆಯೇ ಒಂದು ರಾಷ್ಟ್ರಕ್ಕೆ ಸಂವಿಧಾನ ಇರುತ್ತದೆ ಎಂದು ಹೇಳಿದರು.

ಯಾವ ರಾಷ್ಟ್ರ ಸಂವಿಧಾನ ಮತ್ತು ಕಾನೂನುಗಳನ್ನು ಕ್ರಮಬದ್ಧವಾಗಿ ಪಾಲಿಸುತ್ತದೆಯೋ ಆ ದೇಶ ಉನ್ನತ ಮಟ್ಟಕ್ಕೆ ಹೋಗುತ್ತದೆ ಎಂದು ತಿಳಿಸಿದರು.

ಇಂದು ಪ್ರಪಂಚ ನಮ್ಮ ದೇಶದತ್ತ ಕಣ್ಣು ಹಾಯಿಸಬೇಕಾದರೆ ನಮ್ಮ ದೇಶದ ಸಂವಿಧಾನವೇ ಕಾರಣ. ಹಾಗಾಗಿ ಭಾರತೀಯರು ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಮನಪೂರ್ವಕವಾಗಿ ಧನ್ಯವಾದಗಳು ಅರ್ಪಿಸಬೇಕು ಎಂದು ಸಲಹೆ ನೀಡಿದರು.

ಎಚ್ ಕೆ ಸ್ವಾಮಿ ಗೌಡ, ಡಾ ಟಿ ಕೆ ರವಿ, ಹಿರಿಯ ಉಪನ್ಯಾಸಕರಾದ ಅಶ್ವತ ನಾರಾಯಣ ಗೌಡ,ಲಿಂಗಣ್ಣ ಸ್ವಾಮಿ,ಪ್ರಕಾಶ್, ರೂಪ,ವತ್ಸಲ, ರಾಮಾನುಜ ,ದಿನೇಶ್ ,ಹರೀಶ್ ನಾಗರಾಜು ,ಮೀನಾ, ವಸಂತ್ ಕುಮಾರಿ, ಪದ್ಮಾವತಿ ,ಬಸವಣ್ಣ, ಹರೀಶ್ ,ಚೇತನ, ನಾಗವೇಣಿ ,ಸಿದ್ದಪ್ಪಾಜಿ ,ನಾಗರಾಜು,ಮೋಹನ್, ಹರೀಶ್ ,ಬಿಂದು ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟ್ರ ಅಭಿವೃದ್ಧಿ ಹೊಂದಲು ಆ ದೇಶದ ಸಂವಿಧಾನದ ಪಾತ್ರ ಮುಖ್ಯ:ರಾಮಪ್ರಸಾದ್ Read More

ಸಂವಿಧಾನದ ಆಶಯಗಳನ್ನು ಎಲ್ಲರೂ ಅರಿತಿರಬೇಕು – ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಸಂವಿಧಾನವು ನಮ್ಮ ದೇಶದ ಕಾನೂನು,ಅದರ ಮೂಲ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಮೈಸೂರು ವಿಶ್ವ ವಿದ್ಯಾನಿಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ, ಸೆನೆಟ್ ಭವನದಲ್ಲಿ ದಸರಾ ರಾಷ್ಟ್ರೀಯ ಸಮ್ಮೇಳನ ಉಪಸಮಿತಿ, ಜಿಲ್ಲಾಡಳಿತ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಸಂವಿಧಾನ ಅಂಗಿಕಾರದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಭುತ್ವ ಮತ್ತು ಸಂವಿಧಾನ ಆಶಯ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಅಕ್ಟೋಬರ್ 03 ರಿಂದ 12 ರವರೆಗೆ ದಸರಾ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಈ ಸಂದರ್ಭದಲ್ಲಿ ಸಂವಿಧಾನ ಕುರಿತ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಸಂವಿಧಾನದ ಬಗ್ಗೆ ಪ್ರತಿಯೊಬ್ಬರೂ ಅರಿವು ಮೂಡಿಸಿಕೊಳ್ಳಬೇಕು. ಈ ಕಾರ್ಯಕ್ರಮದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಮನೋಜ್ ಮಿತ್ತ ಅವರು ಮಾತನಾಡಿ ಭಾರತದ ಸಂವಿಧಾನವು ವಾಕ್ ಸ್ವತಂತ್ರ್ಯವನ್ನು ಆರ್ಟಿಕಲ್ 19(1) ರಲ್ಲಿ ನೀಡಿದೆ. ಸಂವಿಧಾನವು ಭಾರತೀಯ ಪ್ರಜೆಗಳಿಗೆ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನೀಡಿದೆ. ಭಾರತ ಸಂವಿಧಾನವು ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವಾಗಿದೆ. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಕೊಡುಗೆಯನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.

ಕಾನೂನು ಕಾಲೇಜಿನ ಪ್ರೊ. ಸುಧೀರ್ ಕೃಷ್ಣಮೂರ್ತಿ ಭಾರತದ ಸಂವಿಧಾನ ರಚನೆಯಾದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಪ್ರೊ ನಿರಂಜನ್, ಪ್ರೊ ಸೋಮಶೇಖರ್, ವಿಜಯ್ ಕುಮಾರ್ ಹೆಚ್. ಬಿ, ಪ್ರೊ ಸುದೀರ್ ಕೃಷ್ಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಸಂವಿಧಾನದ ಆಶಯಗಳನ್ನು ಎಲ್ಲರೂ ಅರಿತಿರಬೇಕು – ಜಿ ಲಕ್ಷ್ಮೀಕಾಂತ ರೆಡ್ಡಿ Read More