ಡಿ.ಕೆ.ಶಿ ಭೇಟಿಯಾದ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದರು.

ವೆಂಕಟೇಶ್ ಪ್ರಸಾದ್ ಅವರು ಡಿ.ಕೆ.ಶಿವಕುಮಾರ್ ಅವರನ್ನು
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಈ ವೇಳೆ ಕಾರ್ಯದರ್ಶಿ ಸಂತೋಷ್ ಮೆನನ್, ಉಪಾಧ್ಯಕ್ಷ ಸುಜಿತ್ ಸೋಮಸುಂದರ್, ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಮತ್ತಿತರರು ವೆಂಕಟೇಶ್ ಪ್ರಸಾದ್ ಗೆ ಸಾಥ್ ನೀಡಿದರು.

ಡಿ.ಕೆ.ಶಿ ಭೇಟಿಯಾದ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ Read More

ಪಾಕ್ ವಿರುದ್ಧ ಭಾರತ ಗೆಲುವು:ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು

ಮೈಸೂರು: ಏಷ್ಯಾ ಕಪ್ ಟಿ20 ಟೂರ್ನಿಯ ಹೈ ವೋಲ್ಟೇಜ್ ಫೈನಲ್ ಪಂದ್ಯದ ರೋಚಕ ಹಣಾಹಣಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿದ‌ ಹಿನ್ನೆಲೆಯಲ್ಲಿ ಅಭಿಮಾನಿಗಳು‌ ಸಿಹಿ ಹಂಚಿ‌ ಸಂಭ್ರಮಿಸಿದರು.

ಭಾರತವು 5 ವಿಕೆಟ್ ಗಳಿಂದ ಪಾಕಿಸ್ತಾನವನ್ನು ವಿರೋಚಿತವಾಗಿ ಸೋಲಿಸಿದ್ದು ಅದರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗ ಹಾಗೂ ಕ್ರಿಕೆಟ್ ಅಭಿಮಾನಿಗಳು ಭಾರತದ ಧ್ವಜ ಹಿಡಿದು,
ನಮ್ಮ ಕ್ರಿಕೆಟ್ ತಂಡದ ಆಟಗಾರರಿಗೆ ಜೈಕಾರ ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.

ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಮೈಸೂರ್ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ನಗರ ಪಾಲಿಕೆ ಮಾಜಿ ಸದಸ್ಯ ಜಗದೀಶ್, ಆನಂದ್, ಸುಚೇಂದ್ರ, ಪುರುಷೋತ್ತಮ್, ಜತ್ತಿ ಪ್ರಸಾದ್, ಶಿವಲಿಂಗ ಸ್ವಾಮಿ, ಎಸ್ ಎನ್ ರಾಜೇಶ್, ರಾಕೇಶ್, ಚಕ್ರಪಾಣಿ ಸೇರಿದಂತೆ ಅನೇಕ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪಾಕ್ ವಿರುದ್ಧ ಭಾರತ ಗೆಲುವು:ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು Read More

ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಕೊಹ್ಲಿ

ಮುಂಬೈ: ಭಾರತ ಕ್ರಿಕೆಟ್ ತಂಡದ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದು,ಕ್ರಿಕೆಟ್ ಪ್ರೇಮಿಗಳು ತೀವ್ರ ನಿರಾಶರಾಗಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಅವರು ಈ ಕುರಿತು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಪೋಸ್ಟ್ ನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲು ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಕರೆದೊಯ್ಯುವ ಪ್ರಯಾಣವನ್ನು ನಾನು ಎಂದಿಗೂ ಊಹಿಸಿರಲಿಲ್ಲ.

ಅದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ. ವೈಟ್ ಜೆರ್ಸಿಯಲ್ಲಿ ಆಡುವುದರಲ್ಲಿ ಆಳವಾದ ವೈಯಕ್ತಿಕ ಅಂಶವಿದೆ. ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು ಆದರೆ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ ಎಂದಿದ್ದಾರೆ.

ಅಂತೆಯೇ ನಾನು ಈ ಸ್ವರೂಪದಿಂದ ದೂರ ಸರಿಯುವ ನಿರ್ಧಾರ ಕೈಗೊಂಡಿದ್ದು ಅದು ಸುಲಭವಾಗಿರಲಿಲ್ಲ. ಆದರೆ ಅದು ಸರಿ ಎಂದು ಅನಿಸುತ್ತದೆ. ನಾನು ಅದಕ್ಕೆ ನನ್ನಲ್ಲಿದ್ದ ಎಲ್ಲವನ್ನೂ ನೀಡಿದ್ದೇನೆ ಮತ್ತು ನಾನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನದನ್ನು ಅದು ನನಗೆ ಹಿಂತಿರುಗಿಸಿದೆ ಎಂದು ವಿರಾಟ್ ಸ್ಮರಿಸಿದ್ದಾರೆ.

ಈ ಆಟಕ್ಕಾಗಿ, ನಾನು ಮೈದಾನವನ್ನು ಹಂಚಿಕೊಂಡ ಜನರಿಗಾಗಿ ಮತ್ತು ದಾರಿಯುದ್ದಕ್ಕೂ ನನ್ನನ್ನು ನೋಡುವಂತೆ ಮಾಡಿದ ಪ್ರತಿಯೊಬ್ಬ ವ್ಯಕ್ತಿಗಾಗಿ ನಾನು ಕೃತಜ್ಞತೆ ತುಂಬಿದ ಹೃದಯದಿಂದ ಹೊರಡುತ್ತಿದ್ದೇನೆ. ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ನಗುವಿನೊಂದಿಗೆ ಹಿಂತಿರುಗಿ ನೋಡಲು ಬಯಸುತ್ತೇನೆ ಎಂದು ಕೊಹ್ಲಿ ಪೋಸ್ಟ್ ಮಾಡಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ಅವರು ಇತ್ತೀಚೆಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅವರಿಗೆ ಅಧಿಕಾರಿಗಳು ಸಲಹೆ ನೀಡಿದ್ದರು, ಆದರೂ ಕೊಹ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿಯದೆ ನಿವೃತ್ತಿ ಘೋಷಿಸಿದ್ದಾರೆ.

2011ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಈ ವರೆಗೂ 123 ಪಂದ್ಯಗಳನ್ನಾಡಿದ್ದು, 210 ಇನ್ನಿಂಗ್ಸ್ ಗಳಲ್ಲಿ 46.9 ಸರಾಸರಿಯಲ್ಲಿ 9230 ರನ್ ಗಳಿಸಿದ್ದಾರೆ. ಅಜೇಯ 254 ರನ್ ಅವರ ವೈಯುಕ್ತಿಕ ಗರಿಷ್ಛ ಸ್ಕೋರ್ ಆಗಿದ್ದು, 30 ಶತಕ ಮತ್ತು 31 ಅರ್ಧಶತಕಗಳನ್ನು ಗಳಿಸಿರುವುದು ಅವರ ಹೆಗ್ಗಳಿಕೆಯಾಗಿದೆ.

ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಕೊಹ್ಲಿ Read More

ಭಾರತ ಗೆದ್ದು ಬರಲೆಂದು ಪ್ರಾರ್ಥಿಸಿ 101 ಗಣಪತಿಗೆ ಈಡುಗಾಯಿ

ಮೈಸೂರು, ಮಾ.9: ಕರ್ನಾಟಕ ಸೇನಾ ಪಡೆ ವತಿಯಿಂದ ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಾಲಯದಲ್ಲಿ, ಭಾರತ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ‌ ಗೆದ್ದು ಬರಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಭಾರತ ನ್ಯೂಜಿಲೆಂಡ್ ತಂಡದ ವಿರುದ್ಧ ಜಯಗಳಿಸಲೆಂದು ವಿಘ್ನ ವಿನಾಶಕ ವಿಘ್ನೇಶ್ವರನಲ್ಲಿ ವಿಶೇಷ ಪೂಜೆ ಮಾಡಿಸಿ, 101 ತೆಂಗಿನಕಾಯಿಗಳನ್ನು ಈಡುಗಾಯಿ ಹೊಡೆಯಲಾಯಿತು.

ಭಾರತ ಕ್ರಿಕೆಟ್ ತಂಡ ಚಾಂಪಿಯನ್ಸ್ ಟ್ರೋಫಿ ಕಪ್ ಗೆಲ್ಲಲಿ ಎಂದು ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ನೇತೃತ್ವದಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಂಸ್ಕೃತಿ ಪೋಷಕ ಡಾ. ರಘುರಾಮ್ ವಾಜಪೇಯಿ, ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್ ಜಯಪ್ರಕಾಶ್, ಸುರೇಶ್ ಗೋಲ್ಡ್, ಪ್ರಭಾಕರ್, ಕುಮಾರ್ ಗೌಡ, ಪ್ರಜೀಶ್, ಪ್ರಭುಶಂಕರ್, ಕೇದಾರ್ ಲೋಕೇಶ್ , ನೇಹಾ, ಕೃಷ್ಣಪ್ಪ, ಸಿಂಧುವಳ್ಳಿ ಶಿವಕುಮಾರ್, ಹನುಮಂತಯ್ಯ, ನಂದಕುಮಾರ್, ಚಂದ್ರಶೇಖರ್, ರವೀಶ್, ರವಿ ನಾಯಕ್, ವಿಷ್ಣು, ಮಹದೇವಸ್ವಾಮಿ ಪರಿಸರ ಚಂದ್ರು, ಆನಂದ್ ಗೌಡ, ತ್ಯಾಗರಾಜ್ ಸುಬ್ಬೇಗೌಡ, ಜಗದೀಶ್ ಮತ್ತಿತರರು ಹಾಜರಿದ್ದರು.

ಭಾರತ ತಂಡದ‌ ಆಟಗಾರರ ಭಾವಚಿತ್ರಗಳು ಮತ್ತು ಭಾರತದ ಬಾವುಟಗಳನ್ನು ಭಾರತ ಗೆದ್ದು ಬಾ ಮುಂತಾದ ಘೋಷಣೆಗಳನ್ನು ಕೂಗಿದರು.ಗೆದ್ದು‌ ಬಾ ಭಾರತ ಗೆದ್ದು ಬಾ,ಬೊಲೊ ಭಾರತ್ ಮಾತಾಕೀ‌ ಜೈ, ಒಂದೇ ಮಾತರಂ, ಜೈ ಹಿಂದ್ ಮುಂತಾದ ಘೋಷಣೆಗಳು ಮೊಳಗಿದವು.

ಭಾರತ ಗೆದ್ದು ಬರಲೆಂದು ಪ್ರಾರ್ಥಿಸಿ 101 ಗಣಪತಿಗೆ ಈಡುಗಾಯಿ Read More