ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ತಂತ್ರ: ಡಿ.ಕೆ ಶಿವಕುಮಾರ್ ಆರೋಪ

ಬೆಂಗಳೂರು: ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹೀಗಾಗಿ ಜನರು ಜಾಗೃತರಾಗಿರಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದರು

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿ, ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿವೆ,ಜನ ಹುಷಾರಾಗಿರಬೇಕು ಎಂದು ಎಚ್ಚರಿಸಿದರು.

ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದಾರೆ, ಈ ಬಾರಿ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಬಗ್ಗೆ ಪ್ರಧಾನಿಗಳ ಆರೋಪಿಸಿದ್ದಾರಲ್ಲಾ ಎಂಬ ಪ್ರಶ್ನೆಗೆ ಅಮೈದಾನಇದು ಸುಳ್ಳು ಆರೋಪ, ಅವರನ್ನು ಯಾರೋ ದಾರಿತಪ್ಪಿಸಿದ್ದಾರೆ. ಈ ವಿಚಾರವಾಗಿ ಆರೋಪ ಸಾಬೀತುಪಡಿಸಿದರೆ ರಾಜಕೀಯ ತ್ಯಜಿಸುವುದಾಗಿ ಮುಖ್ಯಮಂತ್ರಿಗಳು ಬಹಿರಂಗ ಸವಾಲು ಹಾಕಿದ್ದಾರೆ ಇದಕ್ಕಿಂತ ಬೇರೇನು ಬೇಕು ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

ಕೋವಿಡ್ ಅಕ್ರಮ ವಿಚಾರದಲ್ಲಿ ನ್ಯಾ.ಕುನ್ಹಾ ಅವರ ಸಮಿತಿ ಸರ್ಕಾರದ ಏಜೆಂಟ್ ರಂತೆ ನಡೆದುಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ,ಬಿಜೆಪಿಯವರ ಪರವಾಗಿ ವರದಿ ಕೊಟ್ಟರೆ ಎಲ್ಲವೂ ನ್ಯಾಯಬದ್ಧ, ಅವರ ವಿರುದ್ಧವಾಗಿ ವರದಿ ಬಂದರೆ ಹೀಗೆ ಆರೋಪ ಮಾಡುತ್ತಾರೆ, ಅವರು ಏನು ಬೇಕಾದರೂ ಆರೋಪ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ತಂತ್ರ: ಡಿ.ಕೆ ಶಿವಕುಮಾರ್ ಆರೋಪ Read More

ಯಾವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ರಾಜಕೀಯ ಉದ್ದೇಶದಿಂದ ಜೆಪಿಸಿ ಭೇಟಿ; ಡಿ.ಕೆ ಶಿ

ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ,ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ನಾವು ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು

ಯಾವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ರಾಜಕೀಯ ಉದ್ದೇಶದಿಂದ ಜೆಪಿಸಿ ಭೇಟಿ; ಡಿ.ಕೆ ಶಿ Read More

ಲೆಕ್ಕಾಚಾರ ಹಾಕಿ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ- ಡಿ.ಕೆ. ಶಿ

ಮೈಸೂರು: ರಾಜಕಾರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೇಗೆ ಲೆಕ್ಕಾಚಾರ ಹಾಕುತ್ತಿದ್ದಾರೋ ಅದೇ ರೀತಿ ನಾವೂ ಕೂಡಾ ಲೆಕ್ಕಚಾರ ಹಾಕಿ ಅಭ್ಯರ್ಥಿ ತೀರ್ಮಾನ ಮಾಡುತ್ತೇವೆ ಎಂದು
ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಾವು ಗೆಲ್ಲಬೇಕು ಅಷ್ಟೇ, ಅದಕ್ಕೆ ಪೂರಕವಾಗಿಯೇ ಅಭ್ಯರ್ಥಿ ಆಯ್ಕೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ನಾವು ಶೀಘ್ರದಲ್ಲೇ ತೀರ್ಮಾನ ಮಾಡಿ ಪ್ರಕಟಿಸುತ್ತೇವೆ ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ,ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚನ್ನಪಟ್ಟಣದಲ್ಲಿ ಯಾರು ಅಭ್ಯರ್ಥಿ, ಯೋಗೇಶ್ವರ್ ಅವರು ಪಕ್ಷಕ್ಕೆ ಸೇರುವ ಮಾಹಿತಿ ಇದೆಯೆ ಎಂಬ ಪ್ರಶ್ನೆಗೆ ನಾನೇ ಅಭ್ಯರ್ಥಿ ಎಂದು ಹೇಳಿದ್ದೇನೆ. ಪಕ್ಷದ ಚಿಹ್ನೆ ಮೇಲೆಯೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ, ಯೋಗೇಶ್ವರ್ ಅವರ ವಿಚಾರ ನಾನು ಮಾತನಾಡಲು ಆಗುವುದಿಲ್ಲ, ನಾನು ಯಾರ ಜತೆಗೂ ಮಾತುಕತೆ ನಡೆಸಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಅಭ್ಯರ್ಥಿ ಘೋಷಣೆಗೆ ಕಾಯುತ್ತಿದ್ದೀರಾ ಎಂಬ ಪ್ರಶ್ನೆಗೆ ಹಾಗೇನಿಲ್ಲ, ಇನ್ನೂ ಸಮಯವಿದೆ, ನಾನು ಅಲ್ಲೇ ಇರುತ್ತೇನೆ,ನಾನೇ ಬಿ ಫಾರಂ ನೀಡುವುದು. ಈಗಾಗಲೇ ಪ್ರಧಾನ ಕಾರ್ಯದರ್ಶಿಗಳು, ಸಿಎಂ ಹಾಗೂ ನಾನು ಕೂತು ಚರ್ಚೆ ಮಾಡಿದ್ದೇವೆ, ಖರ್ಗೆ ಅವರಿಂದ ಅನುಮತಿ ಪಡೆದು ಬಿ ಫಾರಂಗೆ ನಾನೇ ಸಹಿ ಹಾಕಿ ಕೊಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಲೆಕ್ಕಾಚಾರ ಹಾಕಿ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ- ಡಿ.ಕೆ. ಶಿ Read More

ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಬಾಬಾ ಕೊಲೆ ಸಾಕ್ಷಿ:ಡಿಕೆಶಿ

ಮೈಸೂರು: ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ ನನಗೂ ಆತ್ಮೀಯರಾಗಿದ್ದರು, ನಮ್ಮ ಪಕ್ಷದಲ್ಲಿದ್ದಾಗ ಮಂತ್ರಿಯೂ ಅಗಿದ್ದರು ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಸ್ಮರಿಸಿದರು.

ಮೈಸೂರಿನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ‌ ಡಿಸಿಎಂ,ಆದರೆ‌ ಈಗ ಬಾಬಾ ಸಿದ್ದಿಕಿ ಅವರ ಹತ್ಯೆಯಾಗಿದೆ, ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬುದು ಈ ಘಟನೆಯಿಂದ ಗೊತ್ತಾಗುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಚುನಾವಣೆ ಎದುರಾಗಲಿದೆ,ಅಲ್ಲಿ ಶಾಂತಿ ಕಾಪಾಡುವ‌ ಅಗತ್ಯವಿದೆ ಮುಂಬೈನಲ್ಲಿ ನಡೆದ ಬಾಬಾ ಸಿದ್ದಿಕಿ ಕೊಲೆಯನ್ನು ಖಂಡಿಸುತ್ತೇನೆ. ಕೃತ್ಯ ಮಾಡಿದವರ ವಿರುದ್ಧ ಶೀಘ್ರ ಕ್ರಮ ಆಗಬೇಕು ಎಂದು ಒತ್ತಾಯಿಸಿದರು.

ಈ ಬಾರಿ ದಸರಾ ತುಂಬಾ ವಿಜೃಂಭಣೆಯಿಂದ ನಡೆಯಿತು. ಆದರೆ, ಜಂಬೂಸವಾರಿ ಆರಂಭವಾಗುವುದು ಸ್ವಲ್ಪ ತಡವಾಯಿತು. ನಾಡಿನ ಜನತೆಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ನಮ್ಮ ಕುಟುಂಬದವರ ಸ್ಪರ್ಧೆ ಇಲ್ಲ, ನಾನೇ ಅಭ್ಯರ್ಥಿ ಎಂದು ಮತ ಕೇಳುತ್ತೇನೆ. ನಾವು ನಮ್ಮ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದ್ದೇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗೆ ಎದುರಾಳಿ ವಿರುದ್ಧ ಕಡಿಮೆ ಅಂತರದ ಮತಗಳು ಬಂದವು. ಬಳಿಕ ವಿಧಾನಸಭಾ ಚುನಾವಣೆಯಲ್ಲಿ ಬಹಳಷ್ಟು ಕಡಿಮೆ ಅಂತರದ ಮತಗಳು‌‌‌ ಲಭಿಸಿದ್ದು, ನಮ್ಮ ಮೇಲೆ ಜನರಿಗೆ ಭರವಸೆ ಇದೆ ಎಂದು ಡಿಕೆಶಿ ವಿಶ್ವಾಸ‌ ವ್ಯಕ್ತಪಡಿಸಿದರು.

ಚನ್ನಪಟ್ಟಣದಿಂದ ಎನ್​ಡಿಎ ಅಭ್ಯರ್ಥಿಯಾಗಿ ನಿಖಲ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ,ಅದು ಅವರ ಪಾರ್ಟಿಗೆ ಬಿಟ್ಟಿದ್ದು. ಚನ್ನಪಟ್ಟಣದಲ್ಲಿ‌ ವ್ಯಕ್ತಿಯ ಮೇಲೆ ಚುನಾವಣೆ ‌ನಡೆಯುವುದಿಲ್ಲ, ಸಿದ್ಧಾಂತದ ಮೇಲೆ ನಡೆಯುತ್ತದೆ. ಅವರು ಯಾರನ್ನಾದರೂ ಅಭ್ಯರ್ಥಿ ಮಾಡಿಕೊಳ್ಳಲಿ. ನಾವು ನಮ್ಮ‌ ಮನೆಯನ್ನು ರಿಪೇರಿ‌ ಮಾಡಿಕೊಂಡರೆ ಸಾಕು ಎಂದು ತಿಳಿಸಿದರು.

ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಬಿಜೆಪಿ‌ ನಾಯಕರು ಹೇಳುತ್ತಿದ್ದಾರಲ್ಲಾ ಮಾಧ್ಯಮದವರ ಪ್ರಶ್ನೆಗೆ, ಬಿಜೆಪಿ‌ಯವರು ಇನ್ನೂ 10 ವರ್ಷ ಇದನ್ನೇ ಮಾತನಾಡುತ್ತಾ ಇರಲಿ, ಮುಂದಿನ ಹತ್ತು ವರ್ಷ ನಾವೇ ಸಿಎಂ ಆಗಿರುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಬಾಬಾ ಕೊಲೆ ಸಾಕ್ಷಿ:ಡಿಕೆಶಿ Read More

ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ‌ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಿ:ಡಿಕೆಶಿ

ಬೆಂಗಳೂರು: ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ‍್ಯ ದಿನದ ರೀತಿ ಸಂಭ್ರಮ ಮಾಡಬೇಕು ಎಂದು ಹೇಳಿದರು.

ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಚರಣೆ ಮಾಡಿ ನಿಮ್ಮ ಸಂಸ್ಥೆಯಲ್ಲಿ ಏನು ಮಾಡಿದ್ದೀರಿ ಎನ್ನುವುದಕ್ಕೆ ನಾವು ನೀಡುವ ನಂಬರ್‌ಗೆ ಪೋಸ್ಟ್ ಮಾಡಬೇಕು. ಕನ್ನಡ ಭೂಮಿಯಲ್ಲಿ ಕನ್ನಡ ಕಲಿಯಬೇಕಾಗಿರುವಯದು ಎಲ್ಲರಿಗೂ ಕಡ್ಡಾಯ ಎಂದು ಹೇಳಿದರು.

ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು,ಒಂದು ವೇಳೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.

ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ‌ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಿ:ಡಿಕೆಶಿ Read More

ಸರ್ಕಾರ ಬೀಳಿಸಲು 1,200 ಕೋಟಿ ರೂ: ಐಟಿ, ಇಡಿ ತನಿಖೆಗೆ ಡಿಕೆಶಿ ಒತ್ತಾಯ

ಬೆಂಗಳೂರು: ಸರ್ಕಾರ ಬೀಳಿಸಲು 1,200 ಕೋಟಿ ರೂ ಇಡಲಾಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಐಟಿ, ಇಡಿ ತನಿಖೆ ಆಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಯತ್ನಾಳ್ ಹೇಳಿಕೆ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ಚರ್ಚಿಸಲು ​ಕಾಂಗ್ರೆಸ್ ಕಾನೂನು ತಂಡದ ಸಭೆ ಕರೆದಿದ್ದೇನೆ. 1,200 ಕೋಟಿ ರೂಪಾಯಿ ರೆಡಿಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಇದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ರೂಪಿಸಲಾಗಿದೆ, ಅದಕ್ಕಾಗಿ 1,200 ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಈ ಮಾಹಿತಿಯನ್ನು ತಿಳಿಸಿದ್ದೇನೆ ಇದು ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ವ್ಯಾಪ್ತಿಗೆ ಬರುವ ವಿಚಾರ. ದೂರು ನೀಡುವ ಸಂಬಂಧ ಚರ್ಚೆ ಮಾಡುತ್ತೇವೆ ಎಂದರು.

ಈ ವಿಷಯವನ್ನು ಆದಾಯ ತೆರಿಗೆ ಇಲಾಖೆಯಿಂದ ತನಿಖೆ ಮಾಡಬೇಕು. ಈ ಬಗ್ಗೆ ಕಾನೂನು ಏನು ಹೇಳುತ್ತದೆ ಎಂಬುದನ್ನು ತಿಳಿಯಲು ನಾನು ಕೆಪಿಸಿಸಿ ಸಭೆ ಕರೆದಿದ್ದೇನೆ. ಅಲ್ಲದೆ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಭೇಟಿ ಮಾಡಿ, ಈ ಕುರಿತು ಕಾನೂನು ಆಯ್ಕೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಡಿಕೆಶಿ ತಿಳಿಸಿದರು.

ಸರ್ಕಾರ ಬೀಳಿಸುವ ಷಡ್ಯಂತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಇದ್ದಾರೆ. ಬಿಜೆಪಿ ಹೈಕಮಾಂಡ್‌ಗೆ ಆಸಕ್ತಿಯಿಲ್ಲದಿದ್ದರೂ ಬಿಜೆಪಿಯೊಳಗಿನ ಕೆಲವು ವಿಭಾಗಗಳು ಆಪರೇಷನ್ ಕಮಲದ ಬಗ್ಗೆ ಯೋಚಿಸುತ್ತಿವೆ, ಈ ಸಂಚಿನ ಬಗ್ಗೆ ನನಗೆ ಮಾಹಿತಿ ಇದೆ ಎಂದು ಯತ್ನಾಳ್ ಹೇಳಿದ್ದರು.

ಸರ್ಕಾರ ಬೀಳಿಸಲು 1,200 ಕೋಟಿ ರೂ: ಐಟಿ, ಇಡಿ ತನಿಖೆಗೆ ಡಿಕೆಶಿ ಒತ್ತಾಯ Read More

15 ದಿನದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಕಠಿಣ ಕ್ರಮ-ಡಿಸಿಎಂ ಕಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಗುಂಡಿಮಯವಾಗಿದ್ದು ಇನ್ನ 15 ದಿನದೊಳಗೆ ಗುಂಡಿಗಳನ್ನು ಮುಚ್ಚದಿದ್ದರೆ ಕಠಿಣ ಕ್ರಮ ಖಂಡಿತಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದಾಗಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಎಂಜಿನೀಯರ್‌ಗಳು, ಬಿಬಿಎಂಪಿ ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು.

ನಂತನ‌ ಮಾಧ್ಯಮದೊಂದಿಗೆ ಮಾತನಾಡಿದ ಡಿಕೆಶಿ,ಹಿರಿಯ ಅಧಿಕಾರಿಗಳು, ಮುಖ್ಯ ಎಂಜಿನೀಯರ್‌ಗಳು, ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. 15 ದಿನಗಳ ಕಾಲ ಗಡುವುದು ನೀಡಿದ್ದೇನೆ, ಎಲ್ಲಾ ಕೆಲಸಗಳನ್ನು ಬಿಟ್ಟು ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಒಂದು ವೇಳೆ ಈ ಕೆಲಸ ಮಾಡದೇ ಇದ್ದರೆ ಸಂಬಂಧಪಟ್ಟವರ ಮೇಲೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ,ಯಾರು ಸಸ್ಪೆಂಡ್ ಆಗುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.

ಸೆಪ್ಟೆಂಬರ್‌ನಲ್ಲೂ ಮಳೆ ಬರುವ ಸಾಧ್ಯತೆ ಇದೆ, ಕಂಟ್ರೋಲ್ ರೂಂ ಪ್ರತಿಯೊಂದನ್ನು ಗಮನಿಸುತ್ತಾ ಇರಬೇಕು ನೀರು ನುಗ್ಗುವುದು, ಅವಾಂತರಗಳು ಆಗುವುದನ್ನು ತಡೆಯಬೇಕು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಡಿಕೆಶಿ ತಿಳಿಸಿದರು.

ಮಹಾತ್ಮ ಗಾಂಧೀಜಿ ಅವರು ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ನಾಯಕತ್ವ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಲ್ಲಿ ನವೆಂಬರ್ 2 ರಂದು ಸ್ವಚ್ಛತೆ ಬಗ್ಗೆ ಪ್ರತಿಜ್ಞೆ ಮಾಡಬೇಕು. ಅವರವರ ಮನೆಗಳನ್ನು, ಏರಿಯಾಗಳನ್ನು ಸ್ವಚ್ಛವಾಗಿ ಇಡುವುದರ ಬಗ್ಗೆ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದ್ದೇನೆ ಎಂಬುದಾಗಿ ಡಿಸಿಎಂ ತಿಳಿಸಿದರು.

ರಸ್ತೆಗಳಿಗೆ ವಾಲಿದ ಮರಗಳ ಟೊಂಗೆಗಳನ್ನು ಟ್ರಿಮ್ಮಿಂಗ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಜತೆಗೆ ಒಣಗಿದ ಮರಗಳನ್ನು ‌ತೆರವು ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಸಭೆಯಲ್ಲಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

15 ದಿನದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಕಠಿಣ ಕ್ರಮ-ಡಿಸಿಎಂ ಕಡಕ್ ಎಚ್ಚರಿಕೆ Read More