ದರ್ಶನ್ ಗೆ ರಿಲೀಫ್ ನೀಡಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ.

ವಿಚಾರಣೆ ವೇಳೆ‌ ನನಗೆ ಸ್ವಲ್ಪ ವಿಷ ಕೊಡಿ ನನಗೆ ಈ ನರಕ ಸಾಕಾಗಿದೆ ಎಂದಿದ್ದ ದರ್ಶನ್ ಗೆ ಕೆಲ ಬೇಡಿಕೆಗಳನ್ನು ಈಡೇರಿಸಲು ಕೋರ್ಟ್ ಸಮ್ಮತಿ ನೀಡಿದೆ.

ದರ್ಶನ್ ಅವರನ್ನು ಮತ್ತೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಅನುಮತಿ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 64ನೇ ಸೆಷನ್ಸ್ ಕೋರ್ಟ್​, ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ತಿಳಿಸಿದೆ.

ವಿಚಾರಣೆ ವೇಳೆ ದರ್ಶನ್, ಬಿಸಿಲು ನೋಡದೆ ಒಂದು ತಿಂಗಳಾಗಿದೆ. ಕೈಗೆ ಫಂಗಸ್ ಬಂದಿದೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡರು.

ಅದಕ್ಕೆ ನ್ಯಾಯಾಧೀಶರು ಹಾಗೆಲ್ಲಾ ನೀವು ಕೇಳುವಂತಿಲ್ಲ. ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ ಎಂದು ಹೇಳಿ, ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ನೀಡಿದ್ದಾರೆ.ಜತೆಗೆ
ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​, ಹಾಸಿಗೆ ನೀಡಲು ಆದೇಶಿಸಿದೆ.

ದರ್ಶನ್ ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದು ಕೂಡಾ ನ್ಯಾಯಾಲಯ ತಿಳಿಸಿದೆ.

ದರ್ಶನ್ ಗೆ ರಿಲೀಫ್ ನೀಡಿದ ಕೋರ್ಟ್ Read More

ಸುಪ್ರೀಂ ಕೋರ್ಟ್ ಆದೇಶ‌ ಸ್ವಾಗತಿಸುವೆ:ರಮ್ಯಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುವುದಾಗಿ ಮೋಹಕ ತಾರೆ ರಮ್ಯಾ ತಿಳಿಸಿದ್ದಾರೆ.

ನಟ ದರ್ಶನ್ ಜಾಮೀನು ರದ್ದಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ,ಸುಪ್ರೀಂ ಕೋರ್ಟ್ ಆದೇಶಗಳಿಗೆ ಯಾವುದೇ ಕೇಸಾಗಲಿ ಎಲ್ಲರೂ ತಲೆಬಾಗಬೇಕು ಎಂದು ಹೇಳಿದರು.

ದರ್ಶನ್ ಅವರು ಲೈಟ್ ಬಾಯ್‌ ಆಗಿ ಸಿನಿಮಾರಂಗಕ್ಕೆ ಬಂದು ಬಹಳ ಕಷ್ಟಪಟ್ಟು ಮುಂದೆ ಬಂದಿದ್ದಾರೆ‌ ಎಂದು ತಿಳಿಸಿದರು.

ಅವರು ಮನಸು ಮಾಡಿದ್ದರೆ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು,ಆದರೆ ಎಲ್ಲವನ್ನೂ ಹಾಳು ಮಾಡಿಕೊಂಡರು ಎಂದು ಹೇಳಿದರು.

ತಮಗೆ ಬರುತ್ತಿದ್ದ ಅಶ್ಲೀಲ ಸಂದೇಶಗಳು ಕಡಿಮೆಯಾಗಿದೆ ಸಧ್ಯ ನೆಮ್ಮದಿ ಇದೆ,ಕಿರಿಕ್ ತಪ್ಪಿದೆ ಎಂದು ರಮ್ಯಾ ತಿಳಿಸಿದರು.

ಸುಪ್ರೀಂ ಕೋರ್ಟ್ ಆದೇಶ‌ ಸ್ವಾಗತಿಸುವೆ:ರಮ್ಯಾ Read More

ದರ್ಶನ್,ಪವಿತ್ರಾ ಗೌಡಾಗೆ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿ ಏಳು ಮಂದಿ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು ಬಿಗ್ ರಿಲೀಫ್ ದೊರೆತಿದೆ.

ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲಾ ಏಳು ಆರೋಪಿಗಳಿಗೂ ಜಾಮೀನು ನೀಡಿದೆ.

ನ್ಯಾ. ವಿಶ್ವಜಿತ್‌ ಶೆಟ್ಟಿ ಅವರಿದ್ದ ಪೀಠ ಏಳು ಎಂದಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂ.11 ರಂದು ನಟ ದರ್ಶನ್‌ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಈ ನಡುವೆ ಜೈಲಿನಲ್ಲಿ ರಾಜಾತಿಥ್ಯದ ಆರೋಪದ ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ‌ ದರ್ಶನ್ ರನ್ನು ಸ್ಥಳಾಂತರಿಸಲಾಗಿತ್ತು.

ಬೆನ್ನು ನೋವಿನ ಕಾರಣ ದರ್ಶನ್ ಗೆ ಶಸ್ತ್ರಚಿಕಿತ್ಸೆ ಅಗತ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇನ್ನೂ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ.

ಈ ಮಧ್ಯೆ ಜಾಮೀನಿಗಾಗಿ ದರ್ಶನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿತ್ತು.

ದರ್ಶನ್,ಪವಿತ್ರಾ ಗೌಡಾಗೆ ಜಾಮೀನು Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ 28ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿತು.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿ, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ,ಆದ್ದರಿಂದ ಅನಾರೋಗ್ಯದ ಕಾರಣಕ್ಕಾಗಿ ಜಾಮೀನು ಕೇಳುತ್ತಿದ್ದೇವೆ ಎಂದು ಹೇಳಿದರು.

ಜೈಲು ಅಧಿಕಾರಿಗಳಿಂದ ದರ್ಶನ್ ಅವರ ವೈದ್ಯಕೀಯ ವರದಿ ಕೇಳಿದ ನ್ಯಾಯಾಲಯ, ಆಕ್ಷೇಪ ಸಲ್ಲಿಕೆಗೆ ಎಸ್. ಪಿ. ಪಿ. ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿತು.

ದರ್ಶನ್ ಜಾಮೀನು ಅರ್ಜಿ ವಿಚಾರಣೆ 28ಕ್ಕೆ ಮುಂದೂಡಿಕೆ Read More

ದರ್ಶನ್‌ ಜಾಮೀನು ಅರ್ಜಿ ಭವಿಷ್ಯ ಅ.14 ರಂದು ಪ್ರಕಟ

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ.

ಸುದೀರ್ಘ ವಿಚಾರಣೆ ನಡೆಸಿದ ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರಾದ ಜೈಶಂಕರ್‌ ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಅದೇಶ ಪ್ರಕಟಿಸುವುದಾಗಿ ತಿಳಿಸಿದರು.

ಇಂದು ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.

ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್‌ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು.

ದರ್ಶನ್‌ ಜಾಮೀನು ಅರ್ಜಿ ಭವಿಷ್ಯ ಅ.14 ರಂದು ಪ್ರಕಟ Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದ್ದು,ಅವರಿಗೆ ಬಳ್ಳಾರಿ ಜೈಲೇ ಗತಿಯಾಗಿದೆ.

ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು, ಆದರೆ ಯಾವುದೇ ವಾದ ಮಂಡನೆ ಮಾಡದೆ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಯಿತು.

ದರ್ಶನ್ ಪರ ವಕೀಲರು
ವಾದ ಮಂಡನೆಗೆ ಕಾಲಾವಕಾಶ ಕೇಳಿದ ಕಾರಣ ಪ್ರಕರಣದ ವಿಚಾರಣೆಯನ್ನು ಸೆ. 30ಕ್ಕೆ ಮುಂದೂಡಲಾಗಿದೆ.

ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ವಿಚಾರಣೆಯನ್ನು ಮುಂದಕ್ಕೆ ಹಾಕಿಸಿಕೊಂಡಿದ್ದಾರೆ.

ಎಸ್​ಪಿಪಿ ಪ್ರಸನ್ನಕುಮಾರ್ ಅವರು ಮಾತನಾಡಿ, ನಾವು ಆಕ್ಷೇಪಣೆ ಸಲ್ಲಿಸಿಲ್ಲವೆಂದು ದರ್ಶನ್ ವಕೀಲರು ತಕರಾರು ತೆಗೆಯುತ್ತಿದ್ದರು, ಈಗ ಆಕ್ಷೇಪಣೆ ಸಲ್ಲಿಸಿದ್ದೇವೆ ವಾದ ಮಂಡನೆಗೆ ಸಿದ್ದ ಇದ್ದೇವೆ ಎಂದು ಹೇಳಿದರು.

ಪ್ರಕರಣ ಸಂಬಂಧ‌ ವಾದ ಮಂಡನೆಗೆ ಖುದ್ದು ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ಬರಬೇಕಿದೆ ಅವರು ಬಂದಿಲ್ಲ ಹಾಗಾಗಿ ಇನ್ನಷ್ಟು ದಿನದ ಕಾಲಾವಕಾಶ ಕೊಡಬೇಕೆಂದು ಅವರ ಸಹಾಯಕ ವಕೀಲರು ಕೇಳಿದರು.

ಹಾಗಾಗಿ ಸೆ. 30ಕ್ಕೆ ವಿಚಾರಣೆಯನ್ನು ನ್ಯಾಯಾಧೀಶರು ಮುಂದೂಡಿದರು.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Read More

ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ದರ್ಶನ್‌ ಮನವಿ

ಬೆಂಗಳೂರು: ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೊಲೆ ಆರೋಪಿ ದರ್ಶನ್‌ ಹೈಕೋರ್ಟ್‌ ಗೆ ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಸಾವಿರ ಪುಟಗಳಿರುವ ದೋಷಾರೋಪ ಪಟ್ಟಿಯನ್ನು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.

ಆ ದೋಷಾರೋಪ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ದರ್ಶನ್‌ ಪರ ವಕೀಲರು ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಏನು ಮಾಡಿದ್ದಾರೆ,ದರ್ಶನ್‌ ರೇಣಕಾಸ್ವಾಮಿಗೆ ಯಾವ ರೀತಿ ಟಾರ್ಚರ್‌ ನೀಡಿದ್ದಾರೆ, ಪವಿತ್ರಾ ಗೌಡ ಹೇಳಿದ್ದೇನು, ರೇಣುಕಾಸ್ವಾಮಿ ಹತ್ಯೆಯಲ್ಲಿ ಯಾರ ಪಾತ್ರ ಏನಿದೆ ಎನ್ನುವುದರ ಸಂಪೂರ್ಣವಾದ ವಿವರ ಚಾರ್ಜ್‌ಶೀಟ್‌ನಲ್ಲಿದೆ.

ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ದರ್ಶನ್‌ ಮನವಿ Read More

ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ಕೋರ್ಟ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

ದರ್ಶನ್ ಅಂಡ್ ಗ್ಯಾಂಗ್ ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನ 1.15ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ 17 ಆರೋಪಿಗಳನ್ನು ವಿಚಾರಣೆಗೆ ಹಾಜರುಪಡಿಸಲಾಯಿತು.

ಬಳ್ಳಾರಿ ಜೈಲಿನಿಂದ ವೀಡಿಯೋ ಕಾನ್ಫರೆನ್ಸ್‌ಗೆ ಆರೋಪಿ ದರ್ಶನ್ ಬಂದಿದ್ದರು.

ಪ್ರಕರಣದ ಹಾರ್ಡ್ ಡಿಸ್ಕ್, ಪೆನ್‌ಡ್ರೈವ್ ಎಲ್ಲವನ್ನೂ ಕೋರ್ಟ್‌ಗೆ ಎಸ್‌ಪಿಪಿ ಪ್ರಸನ್ನಕುಮಾರ್ ಸಲ್ಲಿಕೆ ಮಾಡಿದರು. ಡಿಜಿಟಲ್ ಎವಿಡೆನ್ಸ್ 2 ವಾರದಲ್ಲಿ ಕೊಡುವುದಾಗಿ ತಿಳಿಸಿದರು.

ವಿಚಾರಣೆ ವೇಳೆ, ಜೈಲಿಗೆ ಚಾರ್ಜ್‌ಶೀಟ್‌ ಕಳಿಸುತ್ತೇವೆ ಎಂದು ಎಸ್‌ಪಿಪಿ ಪ್ರಸನ್ನಕುಮಾರ್ ಕೋರ್ಟ್‌ಗೆ ಮನವಿ ಮಾಡಿದರು. ಆದರೆ ಆರೋಪಿಗಳ ಪರ ವಕೀಲರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ನ್ಯಾಯಾಧೀಶರು ಆರೋಪಿಗಳ ಬಳಿಯೇ ವಕೀಲರ ಹೆಸರು ಕೇಳಿದರು. ಸಿ.ವಿ.ನಾಗೇಶ್ ನನ್ನ ಪರ ಹಾಜರಾಗುತ್ತಿದ್ದಾರೆ ಎಂದು ದರ್ಶನ್ ತಿಳಿಸಿದರು.

ಉಳಿದ ಆರೋಪಿಗಳು ತಮ್ಮ ಪರ ವಾದ ಮಂಡಿಸುವ ವಕೀಲರ ಹೆಸರು ಹೇಳಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮತ್ತೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿತು.

ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್ Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಮತ್ತು ಗ್ಯಾಂಗ್‌ ವಿರುದ್ಧ ಕೋರ್ಟ್‌ಗೆ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಬುಧವಾರ 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌, ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್‌ ಕುಮಾರ್‌ ಅವರ ನೇತೃತ್ವದಲ್ಲಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇದುವರೆಗೆ ನಡೆಸಿದ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳ ಕುರಿತ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಈ ದೋಷಾರೋಪಣಾ ಪಟ್ಟಿಯು ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 7 ಸರಿಪುಟಗಳ 10 ಕಡತಗಳನ್ನು ಒಳಗೊಂಡಿದೆ.

ದರ್ಶನ್‌ ಮತ್ತು ಗ್ಯಾಂಗ್‌ ವಿರುದ್ಧ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ಕಲೆಹಾಕಲಾಗಿದ್ದು, ಇದರಲ್ಲಿ ಪ್ರತ್ಯಕ್ಷ ಸಾಕ್ಷಿದಾರರು 3, ಎಫ್ ಎಸ್‌ ಎಲ್/ಸಿಎಫ್‌ಎಸ್‌ಎಲ್‌ ಸಾಕ್ಷಿಗಳು 8, ಸಿಆರ್‌ಪಿಸಿ ಸೆಕ್ಷನ್‌ 161 ಮತ್ತು 164 ರ ಅಡಿಯಲ್ಲಿ 97 ಸಾಕ್ಷಿಗಳು (ಸಿಆರ್‌ಪಿಸಿ 164 ಅಡಿಯಲ್ಲಿ 27 ಜನ ಸಾಕ್ಷಿದಾರರು ಸೇರಿ), ಪಂಚರು 59, ಇತರೇ ಸರ್ಕಾರಿ ಅಧಿಕಾರಿಗಳು (ತಜಶೀಲ್ದಾರ್‌, ವೈದ್ಯರು, ಆರ್‌ಟಿಒ, ಅಭಿಯಂತರರು) 8 ಹಾಗೂ ಪೊಲೀಸರಿಂದ 56 ಸಾಕ್ಷಿಗಳನ್ನು ಸಂಗ್ರಹಿಸಿರುವುದಾಗಿ ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಪೊಲೀಸ್‌ ಆಯಿಕ್ತ ಬಿ.ದಯಾನಂದ್ ಹೆಚ್ಚುವರಿ ಆಯುಕ್ತ ಸತೀಶ್‌ ಕುಮಾರ್‌ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಎಸ್‌. ಗಿರೀಶ್, ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎನ್‌. ಚಂದನ್‌ ಕುಮಾರ್ ಹಾಗೂ ಅಧಿಕಾರಿ, ಸಿಬ್ಬಂದಿಯನ್ನೊಳಗೊಂಡ ತಂಡ ಭೇದಿಸಿದೆ.

ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ-173(8) ಸಿಆರ್‌ಪಿಸಿ ಅಡಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ Read More