ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ಸರ್ಕಾರದ ನಿರ್ಧಾರ ಸ್ವಾಗತಾರ್ಹ:ತೇಜಸ್ವಿ

ಮೈಸೂರು: ಈ ಬಾರಿ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಬೂಕರ್ ಪ್ರಶಸ್ತಿ ಪಡೆದ ಸಂದರ್ಭದಲ್ಲೇ ಈ ಬಾರಿಯ ದಸರಾ ಉತ್ಸವವನ್ನು ಬಾನು ಮುಷ್ತಾಕ್ ಅವರಿಂದ ಉದ್ಘಾಟನೆ ಮಾಡಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೆ ಅನೇಕ ಪತ್ರಿಕೆಗಳಲ್ಲಿ ಈ ಕುರಿತು ವರದಿ ಕೂಡ ಆಗಿತ್ತು ಎಂದು ಹೇಳಿದ್ದಾರೆ.

ಈಗ ರಾಜ್ಯ ಸರ್ಕಾರ ಅಧಿಕೃತವಾಗಿ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಣೆ ಮಾಡಿರುವುದು ಸಂತಸ ತಂದಿದೆ ಎಂದು ತೇಜಸ್ವಿ ಹೇಳಿದ್ದಾರೆ.

ಕೆಲವರು ಬಾನು ಮುಷ್ತಾಕ್ ಅವರು ಮುಸ್ಲಿಂ ಸಮುದಾಯದ ದವರು ಅವರಿಂದ ದಸರಾ ಉದ್ಘಾಟನೆ ಮಾಡಿಸದಂತೆ ವಿರೋಧ ಮಾಡಿ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಮ್ಮದು ಜಾತ್ಯತೀತ ರಾಷ್ಟ್ರ ವಾಗಿದ್ದು ಸರ್ವ ಧರ್ಮದ ಶಾಂತಿಯ ತೋಟ ವಾಗಿದೆ, ಕೆಲವು ರಾಜಕಾರಣಿಗಳ ಈ ರೀತಿಯ ಹೇಳಿಕೆಗಳಿಂದ ಕೋಮು ಸೌಹಾರ್ದತೆಗೆ ದಕ್ಕೆ ಉಂಟಾಗುತ್ತದೆ ದಸರಾ ಸಂದರ್ಭದಲ್ಲಿ ಸಮಾಜದಲ್ಲಿ ಅಶಾಂತಿ ನಿರ್ಮಾಣಕ್ಕೆ ಇಂತಹಾ ಹೇಳಿಕೆ ಕಾರಣ ವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ

ಕೂಡಲೇ ರಾಜ್ಯ ಸರ್ಕಾರ ಅಥವಾ ಪೋಲಿಸ್ ಇಲಾಖೆ ಜಾತಿ ಧರ್ಮದ ಹೆಸರಿನಲ್ಲಿ ಈ ರೀತಿಯ ಹೇಳಿಕೆ ಕೊಡುವವರಿಗೆ ತಿಳುವಳಿಕೆ ನೀಡಬೇಕು ಮೀತಿ ಮೀರಿದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ಸರ್ಕಾರದ ನಿರ್ಧಾರ ಸ್ವಾಗತಾರ್ಹ:ತೇಜಸ್ವಿ Read More

ಮೈಸೂರು ದಸರಾ ಮಹೋತ್ಸವದ ಸ್ತಬ್ಧ ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

ಮೈಸೂರು: ಮೈಸೂರು ದಸರಾ ಮಹೋತ್ಸವ- 2024 ಸ್ತಬ್ಧ ಚಿತ್ರ ಉಪ ಸಮಿತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ನೀಡಿದ ಪ್ರಥಮ ಬಹುಮಾನವನ್ನು ಇಲಾಖೆಯ ಅಧಿಕಾರಿಗಳು ಸ್ವೀಕಾರಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ, ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಹಾಗೂ ಕಲಾವಿದರಾದ ಪ್ರಸಾದ್ ಬಹುಮಾನ ಸ್ವೀಕಾರ ಮಾಡಿದರು.

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ 39ನೇ ಅಧಿವೇಶನ ನಡೆದಿತ್ತು.ಈ ವರ್ಷ ಅಧಿವೇಶನಕ್ಕೆ 100 ವರ್ಷಗಳು ತುಂಬಿದೆ.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದ ಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕರ್ಷಕವಾಗಿ ಬಿಂಬಿಸಿ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.

ಮೈಸೂರು ದಸರಾ ಮಹೋತ್ಸವದ ಸ್ತಬ್ಧ ಚಿತ್ರಗಳಿಗೆ ಪ್ರಶಸ್ತಿ ಪ್ರದಾನ Read More

ಹೆಚ್.ಸಿ.ಮಹದೇವಪ್ಪಗೆ‌ ದಸರಾ ಉತ್ಸವಕ್ಕೆ ಆಹ್ವಾನ

ಮೈಸೂರು: ಮೈಸೂರು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ. ಮಹದೇವಪ್ಪ ಅವರಿಗೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು.

ಬೆಂಗಳೂರಿನಲ್ಲಿರು ಮಹದೇವಪ್ಪ ಅವರ ಸ್ವಗೃಹಕ್ಕೆ ತೆರಳಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಅವರು ಮೈಸೂರು ದಸರಾಗೆ ಅಧಿಕೃತವಾಗಿ ಆಮಂತ್ರಣ ನೀಡಿದರು.

ಈ ವೇಳೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಚ್.ಸಿ.ಮಹದೇವಪ್ಪಗೆ‌ ದಸರಾ ಉತ್ಸವಕ್ಕೆ ಆಹ್ವಾನ Read More

ದಸರಾ ಗೋಲ್ಡ್‌ ಕಾರ್ಡ್‌ ಬೆಲೆ 6,500 ರೂ: ಡಾ. ಹೆಚ್ ಸಿ ಮಹದೇವಪ್ಪ

ಮೈಸೂರು: ನಾಡಹಬ್ಬ ದಸರಾದ ಎಲ್ಲ ಕಾರ್ಯಕ್ರಮ ಮತ್ತು ಪ್ರವಾಸಿ ತಾಣಗಳನ್ನ ವೀಕ್ಷಣೆ ಮಾಡಲು ಒಂದು ಗೋಲ್ಡ್‌ ಕಾರ್ಡ್‌ ಬೆಲೆ 6,500 ರೂ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ‌

ಆನ್​​ಲೈನ್​ನಲ್ಲಿ ಈ ಗೋಲ್ಡ್‌ ಕಾರ್ಡ್‌ ಸೆಪ್ಟೆಂಬರ್‌ 26 ರಿಂದ ಸೆಪ್ಟೆಂಬರ್‌ 30ರ ವರೆಗೆ ಐದು ದಿನಗಳ ಕಾಲ ಲಭ್ಯವಿರಲಿದೆ ಎಂದು ಅವರು ಮಾಹಿತಿ ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಗೋಲ್ಡ್‌ ಕಾರ್ಡ್‌ ಬೆಲೆ, 6,500 ರೂಪಾಯಿ, ಇದನ್ನ ಪಡೆದವರು ದಸರಾ ಸಂದರ್ಭದಲ್ಲಿ ಜಂಬೂ ಸವಾರಿ, ಬನ್ನಿಮಂಟಪದ ಪಂಜಿನ ಕವಾಯತು, ಚಾಮುಂಡಿ ಬೆಟ್ಟ, ಮೃಗಾಲಯ ಹಾಗೂ ಅರಮನೆ ಎಲ್ಲವನ್ನು ವೀಕ್ಷಣೆ ಮಾಡಬಹುದು ಎಂದು ಹೇಳಿದರು.

ಇದಲ್ಲದೇ 3,500 ರೂಪಾಯಿ ಗೋಲ್ಡ್‌ ಪಾಸ್‌ ಪಡೆದರೆ ಒಬ್ಬರು ಜಂಬೂ ಸವಾರಿ ಮಾತ್ರ ವೀಕ್ಷಣೆ ಮಾಡಬಹುದು. ಇದರ ಜತೆಗೆ ಪಂಜಿನ ಕವಾಯತು ವೀಕ್ಷಣೆ ಮಾಡಲು ಒಂದು ಸಾವಿರ ರೂಪಾಯಿಯ ಗೋಲ್ಡ್‌ ಕಾರ್ಡ್‌ ಪಡೆಯಬೇಕಾಗುತ್ತದೆ.

ಈ ಎಲ್ಲಾ ಗೋಲ್ಡ್‌ ಪಾಸ್​ಗಳು ಆನ್​ಲೈನ್​ನಲ್ಲಿ ಖರೀದಿ ಮಾಡಬೇಕು. ಈ ಬಾರಿ 1,000 ದಿಂದ 1,500 ಗೋಲ್ಡ್‌ ಪಾಸ್​ಗಳನ್ನ ಆನ್​ಲೈನ್​ನಲ್ಲಿ ಖರೀದಿ ಮಾಡಬಹುದಾಗಿದೆ ಎಂದು ಮಹದೇವಪ್ಪ ವಿವರಿಸಿದರು.

ದಸರಾ ಗೋಲ್ಡ್‌ ಕಾರ್ಡ್‌ ಬೆಲೆ 6,500 ರೂ: ಡಾ. ಹೆಚ್ ಸಿ ಮಹದೇವಪ್ಪ Read More

ದಸರಾ ದೀಪಾಲಂಕಾರದಲ್ಲಿ ಡ್ರೋನ್ ಪ್ರದರ್ಶನದ ಮೆರಗು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು ನೀಡಲಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದೀಪಾಲಂಕಾರದ ಪೋಸ್ಟರ್ ಗಳನ್ನು ಚೆಸ್ಕ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಬಿಡುಗಡೆ ಮಾಡಿ ಈ ಬಾರಿ ದೀಪಾಲಂಕಾರಕ್ಕೆ ಡ್ರೋಣ್ ಮೆರಗು ಇರಲಿದೆ, 1500 ಡ್ರೋನ್ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ ಎಂದು ತಿಳಿಸಿದರು.

ದಸರಾ ದೀಪಾಲಂಕಾರ ಪ್ರಮುಖ ಆಕರ್ಷಣೆಯಾಗಿದ್ದು, 21 ದಿನದಗಳ ಕಾಲ ಮೈಸೂರು ನಗರವನ್ನು ಬೆಳಗಲಿದೆ. ಈ ಬಾರಿಯ ದೀಪಾಲಂಕಾರವನ್ನು ಅತ್ಯಂತ ಆಕರ್ಷಣೀಯಗೊಳಿಸಲು ಸೆಸ್ಕ್‌ ಅಧಿಕಾರಿಗಳ ತಂಡ ಸಾಕಷ್ಟು ಮುತುವರ್ಜಿ ವಹಿಸಿದೆ ಎಂದು ಹೇಳಿದರು.

ಒಟ್ಟು 130 ಕಿ.ಮೀ. ದೀಪಾಲಂಕಾರ ಮಾಡುತ್ತಿದ್ದು, 100 ವೃತ್ತಗಳನ್ನು ಅಲಂಕರಿಸುವುದರ ಜತೆಗೆ 65 ಪ್ರತಿಕೃತಿಗಳನ್ನು ನಿರ್ಮಿಸಲಾಗುತ್ತಿದೆ. ದಸರಾ ದೀಪಾಲಂಕಾರಕ್ಕಾಗಿ 6.50 ಕೋಟಿ ರೂ. ವೆಚ್ಚವಾಗುತ್ತಿದ್ದು, 2881 ಕಿ.ವ್ಯಾ. ಅಂದಾಜು ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಭಾರ ಹಾಗೂ 242012 ಯೂನಿಟ್‌ಗಳ ವಿದ್ಯುತ್‌ ಬಳಕೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಎಲ್.ಇ.ಡಿ. ಬಲ್ಪ್‌ಗಳನ್ನು ಅಳವಡಿಸಿರುವ ಸುಮಾರು 1500 ಡೋನ್‌ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲಾಗುವುದು. ಅಕ್ಟೋಬರ್‌ 6, 7ರಂದು ಹಾಗೂ 11, 12ರಂದು ರಾತ್ರಿ 8 ಗಂಟೆಯಿಂದ 8.15ರವರೆಗೆ ಡ್ರೋನ್‌ ಪ್ರದರ್ಶನ ನಡೆಯಲಿದ್ದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅ. 6 ಮತ್ತು 7ರಂದು ಡ್ರೋನ್‌ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶವಿರುತ್ತದೆ ಎಂದು ಸಚಿವರು ತಿಳಿಸಿದರು.

ದಸರಾ ಸಂದರ್ಭದಲ್ಲಿ ಪವರ್‌ ಮ್ಯಾನ್
ಗಳ ಕರ್ತವ್ಯಗಳು, ಗೃಹಜ್ಯೋತಿ, ಕೃಷಿ ಬಳಕೆಗೆ ಸೌರ ವಿದ್ಯುತ್ ಪಂಪ್ ಸೆಟ್ ಗಳು, ವಿದ್ಯುತ್ ಸುರಕ್ಷತೆ ಹಾಗೂ ನುಡಿದಂತೆ ನಡೆದ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ವಿದ್ಯುತ್ ರಥವನ್ನು ರೂಪಿಸಲಾಗುವುದು. ಈ ರಥ ಅ.3ರಂದು ಉದ್ಘಾಟನೆಗೊಳ್ಳಲಿದೆ ಎಂದು ಮಹದೇವಪ್ಪ‌ವಿವರಿಸಿದರು.

ನಿಗಮದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಮಾತನಾಡಿ, ವಾರಣಾಸಿ, ಹರಿದ್ವಾರಗಳಲ್ಲಿ ಡ್ರೋನ್‌ ಪ್ರದರ್ಶನ ನೀಡಿರುವ ಕಂಪನಿಯ ಮೂಲಕ ಈ ಪ್ರದರ್ಶನ ನಡೆಸುತ್ತಿದ್ದು, 10-15 ವಿನ್ಯಾಸಗಳನ್ನು ಪ್ರದರ್ಶನ ಮಾಡಲಾಗುವುದು. ಈ ಬಾರಿ ದಸರಾ ದೀಪಾಲಂಕಾರವನ್ನು ವಿಭಿನ್ನವಾಗಿ ನಡೆಸಲು ನಿಗಮದ ವತಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು, ಸೆಸ್ಕ್‌ ಹಣಕಾಸು ನಿರ್ದೇಶಕ ಶೇಖ್ ಮಹೀಮುಲ್ಲಾ, ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ದಸರಾ ದೀಪಾಲಂಕಾರದಲ್ಲಿ ಡ್ರೋನ್ ಪ್ರದರ್ಶನದ ಮೆರಗು Read More

ಮೈಸೂರು ದಸರಾ ಯುವ ಸಂಭ್ರಮದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು

ನಂತರ ದಸರಾ ವೆಬ್ ಸೈಟ್ ಗೂ ಚಾಲನೆ ನೀಡಲಾಯಿತು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ,ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೈಸೂರು ದಸರಾ ಯುವ ಸಂಭ್ರಮದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ Read More

ನಾಡಹಬ್ಬ ಮೈಸೂರು ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ಧತೆ:ಮಹದೇವಪ್ಪ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ತಿಳಿಸಿದರು.

ಶುಕ್ರವಾರ ಜಿಲ್ಲಾ ಪಂಚಾಯಿತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ದಸರಾ ಸಿದ್ಧತೆ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ದಸರಾ ಹಬ್ಬವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲಾಗಿತ್ತು. ಆದರೆ, ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಆಗಿರುವುದರಿಂದ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಅಲ್ಲದೆ ಈ ಬಾರಿ ದಸರಾದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು ಹಾಗೂ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸ್ಥಬ್ಧ ಚಿತ್ರಗಳು ಪ್ರದರ್ಶನ ಗೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಮಾತನಾಡಿ, ಕಳೆದ ಬಾರಿ ಆಗಿರುವ ನ್ಯೂನತೆಗಳನ್ನು ಈ ಬಾರಿ ಸರಿಪಡಿಸಿಕೊಂಡು ಯಾವುದೇ ಅಡಚಣೆ ಹಾಗೂ ತೊಂದರೆ ಉಂಟಾಗದಂತೆ ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು ಎಂದು ತಿಳಿಸಿದರು.

ಈ ಬಾರಿಯ ವಿಶ್ವ ವಿಖ್ಯಾತ ದಸರಾ
ಸ್ಥಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕ ಸಂಭ್ರಮ:೫೦, ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳನ್ನು ರಚಿಸಬೇಕು,ದಸರಾದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದ ಬಗ್ಗೆ ಎಚ್ಚರಿಕೆ ವಹಿಸಿ, ದಸರಾ ವೀಕ್ಷಿಸಲು ಬಂದಂತಹ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ರೀತಿಯ ನಿರಾಸೆಯಾಗದಂತೆ
ನೋಡಿಕೊಳ್ಳಬೇಕು. ಉಪಸಮಿತಿಯಲ್ಲಿನ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸಿ ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ ಪುಷ್ಪ ಅಮರನಾಥ್,ಸಂಸದ ಸುನಿಲ್ ಬೋಸ್ , ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ.ಗಾಯತ್ರಿ, ಅಪರ ಜಿಲ್ಲಾಧಿಕಾರಿ ಪಿ ಶಿವರಾಜು,ಕಮಿಷನರ್ ಸೀಮಾ ಲಾಟ್ಕರ್, ಎಸ್ ಪಿ ವಿಷ್ಣುವರ್ಧನ್, ದಸರಾ 19 ಉಪ ಸಮಿತಿಯಕಾರ್ಯದರ್ಶಿಗಳು,
ಅಧಿಕಾರಿಗಳು ಹಾಜರಿದ್ದರು.

ನಾಡಹಬ್ಬ ಮೈಸೂರು ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ಧತೆ:ಮಹದೇವಪ್ಪ Read More

ಸಾಹಿತಿ ಹಂಪ ನಾಗರಾಜಯ್ಯದಸರಾ ಮಹೋತ್ಸವ ಉದ್ಘಾಟಕರು

ಮೈಸೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರ ಹೆಸರನ್ನ ಘೋಷಣೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ಅಕ್ಟೋಬರ್ 3 ರಿಂದ ಅ.12 ರವರೆಗೆ ಮೈಸೂರು ದಸರಾ ನಡೆಯಲಿದೆ. ಅಕ್ಟೋಬರ್ 3 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದ್ದು ಉದ್ಘಾಟಕರಾಗಿ ಸಾಹಿತಿ ಹಂಪ ನಾಗಾರಾಜಯ್ಯ ಆಯ್ಕೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸಾಹಿತಿ ಹಂಪ ನಾಗರಾಜಯ್ಯದಸರಾ ಮಹೋತ್ಸವ ಉದ್ಘಾಟಕರು Read More

ಕುಶಾಲತೋಪು ಸಿಡಿಸುವ ತಾಲೀಮುಪ್ರಾರಂಭ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯ ದಿನ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಿ, ರಾಷ್ಟ್ರಗೀತೆ ಮೊಳಗುವಾಗ ಹಾರಿಸುವ 21 ಕುಶಾಲ ತೋಪು ಸಿಡಿಸುವ ತಾಲೀಮಿಗೆ ಚಾಲನೆ ನೀಡಲಾಗಿದೆ.

ಅರಮನೆ ಆವರಣದ ಆನೆ ಬಾಗಿಲಿನಲ್ಲಿ ಒಂದು ತಿಂಗಳ ಕಾಲ ಈ ತಾಲೀಮು ನಡೆಯಲಿದೆ.

ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಂದು ಗಣ್ಯರು ಅಂಬಾರಿಗೆ ಪುಷ್ಪಾರ್ಚನೆ ಮಾಡುವಾಗ ರಾಷ್ಟ್ರಗೀತೆ ಹಾಡಲಾಗುತ್ತದೆ.ಆ ಸಂದರ್ಭದಲ್ಲಿ ಅರಮನೆಯ ಪಕ್ಕದ ಮಾರಮ್ಮ ದೇವಾಲಯದ ಪಾರ್ಕಿಂಗ್‌ ಪ್ರದೇಶದಲ್ಲಿ ರಾಜಪರಂಪರೆಯಂತೆ ಸಾಂಪ್ರದಾಯಿಕ 21 ಸುತ್ತು ಕುಶಾಲತೋಪು ಹಾರಿಸಲಾಗುತ್ತದೆ.

ಅದಕ್ಕಾಗಿ ಪ್ರತಿದಿನ ನುರಿತ ಸಿಬ್ಬಂದಿ ತಾಲೀಮು ನಡೆಸುತ್ತಾರೆ.ಸಿಎಆರ್‌ ಪೊಲೀಸ್‌ ತಂಡದ ಎಸಿಪಿ ನೇತೃತ್ವದಲ್ಲಿ ಪ್ರತಿದಿನ ಎಎಸ್​​ಐ ಸಿದ್ದರಾಜು ಮುಂದಾಳತ್ವದಲ್ಲಿ ಅರಮನೆ ಆನೆ ಬಾಗಿಲಿನಲ್ಲಿರುವ 7 ಫಿರಂಗಿಗಳ ಮೂಲಕ ಕುಶಾಲತೋಪು ಸಿಡಿಸುವ ತಾಲೀಮು ನಡೆಯಲಿದೆ.

ಒಂದೊಂದು ಫಿರಂಗಿಗೂ ಐವರು ಸಿ‌ಎಆರ್ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.

ಸೆ.25ರ ಬಳಿಕ ಮೂರು ಬಾರಿ ಗಜಪಡೆ, ಅಶ್ವಪಡೆ ಮುಂದೆ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲು ನಿರ್ಧರಿಸಲಾಗಿದೆ. ಮೊದಲ ತಾಲೀಮಿನಲ್ಲಿ ಒಂದು ಸುತ್ತಿನ ಸಿಡಿಮದ್ದು ಸಿಡಿತದ ಬಳಿಕ ಕೆಲ ನಿಮಿಷ ವಿಶ್ರಾಂತಿ ನೀಡಿ, ಎರಡನೇ ಸುತ್ತಿನ ಸಿಡಿಮದ್ದು ತಾಲೀಮು ನಡೆಸಲಾಗುತ್ತದೆ.

ಆನೆ, ಕುದುರೆಗಳ ವರ್ತನೆಯನ್ನು ಪರಿಶೀಲಿಸಿ ಮೂರನೇ ಸುತ್ತಿನ ತಾಲೀಮು ನಡೆಯಲಿದೆ. ಎರಡನೇ ತಾಲೀಮಿನಲ್ಲಿ ಪ್ರತಿ ಸುತ್ತು ಕುಶಾಲತೋಪು ಸಿಡಿಸುವ ಸಮಯಾವಕಾಶದಲ್ಲಿ ಕಡಿತ ಮಾಡಲಾಗುತ್ತದೆ. ಮೂರನೇ ತಾಲೀಮಿನಲ್ಲಿ ಒಂದೇ ನಿಮಿಷದೊಳಗೆ ಮೂರು ಸುತ್ತಿನ ಸಿಡಿಮದ್ದು ಸಿಡಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಶಾಲತೋಪು ಸಿಡಿಸುವ ತಾಲೀಮುಪ್ರಾರಂಭ Read More

ದಸರಾದಲ್ಲಾದರೂ ದ್ರೋಣ,ರಾಜೇಂದ್ರನ ಸಮಾಧಿಗಳಿಗೆ ಪೂಜೆ ಸಲ್ಲಿಸಿ

ಮೈಸೂರು: ನಾಡಹಬ್ಬ ದಸರಾದಲ್ಲಿ ವಿಶ್ವ ವಿಖ್ಯಾತ ಜಂಬೂಸವಾರಿ ಪ್ರಮುಖ ಆಕರ್ಷಣೆಯಾಗಿದೆ.

ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಆನೆಗಳಿಗೂ ಅಷ್ಟೇ ಪ್ರಾಮುಖ್ಯತೆ ಇದೆ,ಆದರೆ ದಸರಾ ಮುಗಿದ ಕೂಡಲೇ ಎಲ್ಲರೂ ಮರೆತೇ ಬಿಡುತ್ತಾರೆ.

18 ಬಾರಿ ಅಂಬಾರಿ ಹೊತ್ತ ಆನೆ ದ್ರೋಣ ಹಾಗೂ 3 ಬಾರಿ ಅಂಬಾರಿ ಹೊತ್ತ ರಾಜೇಂದ್ರ ಆನೆಗಳ ಸಮಾಧಿಗಳನ್ನೇನೊ ನಿರ್ಮಿಸಲಾಗಿದೆ.

ಸಮಾಧಿಗಳನ್ನು ಹೆಚ್.ಡಿ ಕೋಟೆ ತಾಲೂಕು ಬಳ್ಳೆಹಾಡಿ ಗ್ರಾಮದಲ್ಲಿ ನಿರ್ಮಿಸಲಾಗಿದೆ.

ರಾಜೇಂದ್ರ ಆನೆಯನ್ನು ಗಂಧದಗುಡಿ ಸಿನಿಮಾದಲ್ಲಿ ಕೂಡಾ ಬಳಸಿಕೊಳ್ಳಲಾಗಿತ್ತು.
ಆದರೆ ಜಂಬೂಸವಾರಿ ಯಶಸ್ವಿಯಾಗಿ ನಡೆಸಿಕೊಟ್ಟ ದ್ರೋಣ ಮತ್ತು ರಾಜೇಂದ್ರನಿಗೆ ಪ್ರತಿವರ್ಷ ಗೌರವ ಸಲ್ಲಿಸಬೇಕು.

ಜತೆಗೆ ಈ ಆನೆಗಳ ಸಾಮಾಧಿ ಸ್ಥಳಗಳನ್ನು ‌ಅಭಿವೃದ್ಧಿಮಾಡಿ ಅವುಗಳ ಬಗ್ಗೆ ಮಾಹಿತಿ ಸಿಗುವಂತೆ ಮಾಡುವುದು ಜಿಲ್ಲಾಡಳಿತದ ಕರ್ತವ್ಯವಾಗಿದೆ.

ದಸರಾ ಮಹೋತ್ಸವ ಹತ್ತಿರ ಬರುತ್ತಿದೆ ತಕ್ಷಣವೇ‌ ದ್ರೋಣ ಮತ್ತು ರಾಜೇಂದ್ರನ ಸಮಾಧಿಗಳಿಗೆ ಕಾಯಕಲ್ಪ ನೀಡಿ ಪೂಜೆ ಸಲ್ಲಿಸುವ ಕಾರ್ಯವಾಗಲಿ.

ದಸರಾದಲ್ಲಾದರೂ ದ್ರೋಣ,ರಾಜೇಂದ್ರನ ಸಮಾಧಿಗಳಿಗೆ ಪೂಜೆ ಸಲ್ಲಿಸಿ Read More