ಎರಡನೆ ಹಂತದ ಗಜಪಡೆಗೆ ತೂಕ:ಸುಗ್ರೀವನೆ ಬಲವಾನ್

ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಎರಡನೇ ಹಂತದ ಗಜಪಡೆಗೆ ಶುಕ್ರವಾರ ತೂಕ ನಡೆಸಲಾಯಿತು.

ಗುರುವಾರ ಸಂಜೆ ಹುಣಸೂರಿನಿಂದ ಆಗಮಿಸಿದ ಗಜಪಡೆಯನ್ನು ಅರಮನೆಯ ದ್ವಾರದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಮಾಡಿ ಬರಮಾಡಿಕೊಳ್ಳಲಾಯಿತು.

ಶುಕ್ರವಾರ ಬೆಳಗ್ಗೆ ಮೊದಲನೇ ಗಜಪಡೆಯ ಜೊತೆಗೆ ಎರಡನೇ ಗಜ ಪಡೆಯನ್ನು ಕೆಆರ್ ಸರ್ಕಲ್ ಮಾರ್ಗವಾಗಿ ವೇ ಬ್ರಿಡ್ಜ್ ಗೆ ಕರೆತರಲಾಯಿತು.

ಎರಡನೇ ಹಂತದಲ್ಲಿ ಆಗಮಿಸಿರುವ ಆನೆಗಳಲ್ಲಿ ಪ್ರಶಾಂತ 4875 ಕೆ.ಜಿ, ಹಿರಣ್ಯ 2930, ಮಹೇಂದ್ರ 4910, ದೊಡ್ಡ ಲಕ್ಷ್ಮಿ 3485 ಮತ್ತು ಸುಗ್ರೀವ 5190 ಕೆಜಿ ತೂಗುತ್ತಿವೆ.ಸುಗ್ರೀವ ಹೆಚ್ಚು ತೂಕ ಹೊಂದಿರುವ ಆನೆ.

ತೂಕ ಮಾಡಿಸಿದ ನಂತರ ಎಲ್ಲಾ ಆನೆಗಳನ್ನು ಮತ್ತೆ ಅರಮನೆ ಆವರಣಕ್ಕೆ ಕರೆತರಲಾಯಿತು.

ಈ ವೇಳೆ ರಸ್ತೆಗಳ ಎರಡು ಬದಿ ನಿಂತು ಸಾರ್ವಜನಿಕರು ಮೈಸೂರು ದಸರಾ ಆನೆಗಳನ್ನು ಕಣ್ತುಂಬಿ ಕೊಂಡು ಸಂಭ್ರಮಿಸಿದರು.

ಎರಡನೆ ಹಂತದ ಗಜಪಡೆಗೆ ತೂಕ:ಸುಗ್ರೀವನೆ ಬಲವಾನ್ Read More

ಅದ್ದೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿ: ಉಪ ಸಮಿತಿಗಳಿಗೆ ಹೆಚ್ ಸಿಎಂ ಸಲಹೆ

ಮೈಸೂರು: ಈ ಬಾರಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನಿಸಿದ್ದು,ಅದಕ್ಕಾಗಿ ರಚಿಸಿರುವ 19 ಉಪಸಮಿತಿಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಬುಧವಾರ ಅರಮನೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಸಚಿವರು,ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು ಎಂದು ಸೂಚಿಸಿದರು.

ಸ್ತಬ್ಧ ಚಿತ್ರಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತೆ ಹಾಗೂ ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ದ ಚಿತ್ರ ತಯಾರಿಕೆ ಮಾಡಬೇಕು ಎಂದು ಸಲಹೆ ನೀಡಿದರು.

ರೈತರು ದೇಶದ ಬೆನ್ನೆಲುಬು. ರೈತ ದಸರಾದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆದುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು.

ದಸರಾ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಇವರಿಗೆ ಉತ್ತಮ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು.

ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಗಳನ್ನು ಆಯೋಜನೆ,ಕರಕುಶಲ ವಸ್ತುಗಳ ಸ್ಪರ್ಧೆ, ವಿಶಿಷ್ಟ ಕವಿಗೋಷ್ಠಿ ಆಯೋಜನೆ ಮಾಡಬೇಕು, ಆಹಾರ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು,
ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು‌ ಹಾಗೂ ಉಪಸಮಿತಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅದ್ದೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿ: ಉಪ ಸಮಿತಿಗಳಿಗೆ ಹೆಚ್ ಸಿಎಂ ಸಲಹೆ Read More