ಡಿಕೆಶಿಯನ್ನು ಸಿಎಂ ಎಂದು ಬರೆದಚನ್ನರಾಜ ಹಟ್ಟಿಹೊಳಿ!

ಬೆಳಗಾವಿ: ಡಿ ಕೆ.ಶಿವಕುಮಾರ್ ಮುಖ್ಯ ಮಂತ್ರಿ ಆಗ್ತಾರೋ ಬಿಡ್ತಾರೊ ಗೊತ್ತಿಲ್ಲ.ಆದರೆ ಬಗೆಗೆ ದಿನಕ್ಕೊಂದು ಹೇಳಿಕೆಗಳು ಚರ್ಚೆ ಹುಟ್ಟು ಹಾಕುತ್ತಿರುವುದಂತೂ ಸತ್ಯ.

ಬೆಳಗಾವಿ ಅಧಿವೇಶನದ ಎರಡನೇ ದಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಸಿಎಂ ಡಿ.‌ಕೆ. ಶಿವಕುಮಾರ್ ಅವರ ಕುರಿತು ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮುಖ್ಯಮಂತ್ರಿ ಎಂದು ಹೇಳಿರುವುದು ಚರ್ಚೆಗೆ ಗ್ರಾಸ ಒದಗಿಸಿದೆ.

ಚನ್ನರಾಜ ಹಟ್ಟಿಹೊಳಿ ಜಾಲತಾಣದಲ್ಲಿ ಈ ರೀತಿ ಬರೆದುಕೊಂಡಿದ್ದು ಆಕಸ್ಮಿಕವಾಗಿ ಏನಲ್ಲ, ಜಾಣತನ ತೋರಿದ್ದಾರೆ ಎಂದು ರಾಜಕೀಯ ನಾಯಕರು ಮಾತನಾಡುತ್ತಿದ್ದಾರೆ.

ಡಿ.‌ಕೆ. ಶಿವಕುಮಾರ್ ಬಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ಗುರುತಿಸಿಕೊಂಡು ಡಿಕೆಶಿ ಮುಖ್ಯಮಂತ್ರಿ ಗಾದಿಗೆ ಸಪೋರ್ಟ್ ನೀಡುತಿದ್ದಾರೆ ಎಂದೇ ಬಿಂಬಿಸಲಾಗುತ್ತಿದೆ.

ಸಾಮಾಜಿಕ ಜಾಲತಾಣದ ತಮ್ಮ ಬರಹವನ್ನು ನಂತರ ಬದಲಾಯಿಸಿರುವ ಚನ್ನರಾಜ ಹಟ್ಟಿಹೊಳಿ ನಂತರ ಉಪ ಮುಖ್ಯಮಂತ್ರಿ ಎಂದು ಬರೆದುಕೊಂಡು ತೇಪೆ ಹಾಕಿದ್ದಾರೆ.
ಆದರೆ ಅವರು ಒಮ್ಮೆ ಬರೆದದ್ದು ವೈರಲ್ ಆಗಿಬಿಟ್ಟಿದೆ!

ಡಿಕೆಶಿಯನ್ನು ಸಿಎಂ ಎಂದು ಬರೆದಚನ್ನರಾಜ ಹಟ್ಟಿಹೊಳಿ! Read More

ಡಿ ಕೆ ಶಿಯವರನ್ನ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು

ಮೈಸೂರು: ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ತಂಗಿದ್ದ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಭೇಟಿ ಮಾಡಿದರು.

ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಜಿ ಪಂ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಾದೇವ್, ರತ್ನಮ್ಮ, ಲೇಖ ವೆಂಕಟೇಶ್ ಮತ್ತಿತರರು ಡಿ.ಕೆ.ಶಿವಕುಮಾರ್ ಅವರಿಗೆ ಹಾರ ಹಾಕಿ ಸನ್ಮಾನಿಸಿ ಶುಭ ಕೋರಿದರು.

ಡಿ ಕೆ ಶಿಯವರನ್ನ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು Read More

ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಲಿ: ಅಶೋಕ ಆಗ್ರಹ

ಬೆಂಗಳೂರು: ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ, ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಅಪಮಾನ ಮಾಡುತ್ತಿದೆ. ಧರ್ಮಸ್ಥಳದಿಂದ ಚಾಮುಂಡೇಶ್ವರಿ ದೇವಾಲಯದವರೆಗೂ ಈ ಕೃತ್ಯ ನಡೆಯುತ್ತಿದೆ ಎಂದು ಕಿಡಿಕಾರಿದರು.

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುವುದಾದರೆ, ಅದೇನು ವಕ್ಫ್ ಮಂಡಳಿಯ ಆಸ್ತಿಯೇ ಎಂದು ಪ್ರಶ್ನಿಸಿದರು.

ಮೈಸೂರು ಮಹಾರಾಜರು ಚಾಮುಂಡೇಶ್ವರಿಯನ್ನು ಕುಲದೇವತೆಯಾಗಿ ಪೂಜಿಸಿಕೊಂಡು ಬಂದಿದ್ದಾರೆ. ಇಂತಹ ಇತಿಹಾಸ ಇರುವ ದೇವರನ್ನು ಹಿಂದೂ ದೇವರಲ್ಲ ಎನ್ನುವ ಮೂಲಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಓಲೈಕೆ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ವಕ್ಫ್ ಮಂಡಳಿ, ಮಸೀದಿ, ಚರ್ಚ್ ಗಳನ್ನು ಯಾರಿಗೂ ಬಿಟ್ಟು ಕೊಡುವುದಿಲ್ಲ,ಆದರೆ ಹಿಂದೂ ದೇವಾಲಯ ಮಾತ್ರ ಎಲ್ಲರಿಗೂ ಸೇರಿದೆ ಎನ್ನುತ್ತಾರೆ. ಈ ದೇವಾಲಯವನ್ನು ಮುಟ್ಟಿದರೆ ಇಡೀ ರಾಜ್ಯದಲ್ಲಿ ದಂಗೆಯಾಗುತ್ತದೆ ಎಂದು ಅಶೋಕ್ ಎಚ್ಚರಿಸಿದರು.

ದಸರಾ ಹಬ್ಬವನ್ನು ಒಡೆಯರ್ ರಾಜವಂಶಸ್ಥರು ಆಚರಿಸಿಕೊಂಡು ಬಂದಿದ್ದಾರೆ. ಇಲ್ಲಿಗೆ ಬಂದ ಮುಸ್ಲಿಂ ದೊರೆಗಳು ದೇವಾಲಯಗಳನ್ನು ಒಡೆದುಹಾಕಿದ್ದರು‌. ಈಗ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಿಸಲು ಆಹ್ವಾನಿಸಲಾಗಿದೆ. ಕನ್ನಡ ಭುವನೇಶ್ವರಿ ದೇವಿಯ ಬಗ್ಗೆ ಇವರು ಮಾತಾಡುತ್ತಾರೆ. ಇನ್ನೇನು ಪಾಕಿಸ್ತಾನದ ಮಾತೆ ಮಾಡಬೇಕಿತ್ತೇ ಎಂದು ಕಾರವಾಗಿ ಪ್ರಶ್ನಿಸಿದರು.

ಕವಿ ನಿಸಾರ್ ಅಹ್ಮದ್ ಬಗ್ಗೆ ಯಾರೂ ಮಾತಾಡಲ್ಲ. ನಾನು ಕಂದಾಯ ಸಚಿವನಾಗಿದ್ದಾಗ ಅವರ ಹೆಸರಲ್ಲಿ ಸಂಸ್ಥೆ ‌ನಿರ್ಮಿಸಲು ಐದು ಎಕರೆ ಜಮೀನು ಮಂಜೂರು ಮಾಡಿಸಿದ್ದೆ. ಜೋಗದ ಸಿರಿಯ ಕವನ ಬರೆದು ಅವರು ತಾಯಿ ನಿನಗೆ ನಿತ್ಯೋತ್ಸವ ಎಂದಿದ್ದರು. ಅವರು ಎಂದಿಗೂ ಯಾವುದೇ ಧರ್ಮದ ವಿರುದ್ಧವಾಗಿ ಮಾತಾಡಲಿಲ್ಲ. ಅಂತಹವರಿಗೆ ಬಾನು ಮುಷ್ತಾಕ್ ಅವರನ್ನು ಹೋಲಿಸುವುದೇಕೆ, ನಿಸಾರ್ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ ಇದೆ ಎಂದು ಪ್ರತಿಪಕ್ಷ ನಾಯಕ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಕುರುಬ, ಒಕ್ಕಲಿಗರಲ್ಲಿ ಯಾರೂ ಸಾಧಕರು ಸಿಕ್ಕಲಿಲ್ಲವೇ? ಇನ್ನಾದರೂ ಒಬ್ಬ ಸಾಧಕರು, ಯೋಧರನ್ನು ಗುರುತಿಸಿ ಅವಕಾಶ ನೀಡಲಿ. ಬಾನು ಮುಷ್ತಾಕ್ ಬರೆದ ಎದೆಯ ಹಣತೆಗೆ ಬೂಕರ್ ಪ್ರಶಸ್ತಿಯಲ್ಲಿ ಮತ್ತೊಬ್ಬರ ಪಾಲು ಇದೆ. ಆದರೆ ಅವರನ್ನು ಆಹ್ವಾನಿಸಿಲ್ಲ. ಇದು ಅಲ್ಪಸಂಖ್ಯಾತರ ಸರ್ಕಾರ ಆಗಿರುವುದು ಖಂಡನೀಯ ಎಂದು ಗುಡುಗಿದರು.

ಯದುವೀರರ ವಂಶಸ್ಥರನ್ನು ಟಿಪ್ಪು ಕುಟುಂಬದವರು ಬಂಧನದಲ್ಲಿರಿಸಿದ್ದರು. ಅಂತಹವರನ್ನೇ ಮತ್ತೆ ಕರೆದುಕೊಂಡು ಬಂದು ತಾಯಿ ಚಾಮುಂಡೇಶ್ವರಿಗೆ ಅಪಮಾನ ಮಾಡಿದ್ದಾರೆ. ಮುಂದೆ ಬಿಜೆಪಿ ಸರ್ಕಾರ ಬಂದ‌ ನಂತರ ಉದ್ಘಾಟನೆ ಮಾಡುವ ಕುರಿತು ಕಾನೂನು ತರಲಾಗುವುದು ಎಂದು ಹೇಳಿದರು.

ಹಿಂದೆ ಘಜನಿ ಮಾಡಿದಂತೆಯೇ ಕಾಂಗ್ರೆಸ್ ಸರ್ಕಾರ ಲೂಟಿ ಮಾಡಲು ಮುಂದಾಗಿದೆ. ಮಂಜುನಾಥ ಸ್ವಾಮಿಗೆ ಕೆಟ್ಟ ಹೆಸರು ತರಲು ಎರಡು ವರ್ಷ ತಯಾರಿ ನಡೆಸಲಾಗಿದೆ. ಎಸ್ಐಟಿಗೆ 3-5 ಕೋಟಿ ರೂ. ಖರ್ಚಾಗಿದೆ. ಧರ್ಮವನ್ನು ರಕ್ಷಣೆ ಮಾಡಲು ಸೆಪ್ಟೆಂಬರ್ 1 ರಂದು ಬಿಜೆಪಿ ಸಮಾವೇಶ ಮಾಡಲಿದ್ದೇವೆ ಎಂದು ಅಶೋಕ ತಿಳಿಸಿದರು.

ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಲಿ: ಅಶೋಕ ಆಗ್ರಹ Read More

ಉರುಳಿಬಿದ್ದ ಡಿಸಿಎಂ ಬೆಂಗಾವಲು ವಾಹನ

ಮಂಡ್ಯ: ಮೈಸೂರಿನಲ್ಲಿ ನಡೆಯುತ್ತಿದ್ದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಬೆಂಗಾವಲು ವಾಹನ ಉರುಳಿ ಬಿದ್ದ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದ್ದು,ಬೆಂಗಾವಲು ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಸಾಧನಾ ಸಮಾವೇಶಕ್ಕೆ ತೆರಳಿದ್ದ ಡಿಕೆಶಿ ಬೆಂಗಳೂರಿಗೆ ವಾಪಸಾಗುತ್ತಿದ್ದರು. ಈ ವೇಳೆ ಡಿಕೆಶಿ ಬೆಂಗಾವಲು ವಾಹನ ಹೊಸೂರು ಬಳಿಯ ಎಕ್ಸ್‌ಪ್ರೆಸ್‌ವೇ ಬಳಿ ಡಿವೈಡರ್‌ಗೆ ಡಿಕ್ಕಿಯಾಗಿ ಉರುಳಿ ಬಿದ್ದಿದೆ.

ಸ್ಥಳೀಯ ಪೊಲೀಸರು ಧಾವಿಸಿ ಪರಿಶೀಲಿಸಿದರು,
ಗಾಯಾಳುಗಳನ್ನು ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಸುಯೋಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅದೃಷ್ಟವಶಾತ್‌ ಬೆಂಗಾವಲು ವಾಹನದ ಹಿಂದೆಯೇ ಇದ್ದ ಡಿಕೆಶಿ ಕಾರಿಗೆ ಯಾವುದೇ ಅಪಾಯ ಆಗಿಲ್ಲ.

ಉರುಳಿಬಿದ್ದ ಡಿಸಿಎಂ ಬೆಂಗಾವಲು ವಾಹನ Read More

ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತೆ-ಡಿಕೆಶಿ

ಮೈಸೂರು: ದುಃಖವನ್ನ ದೂರು ಮಾಡುವ ದೇವಿ ಚಾಮುಂಡಿಯಲ್ಲಿ ನಾನು ಪ್ರಾರ್ಥನೆ ಮಾಡಿದ್ದೇನೆ,ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತೆ ಎಂಬ ನಂಬಿಕೆ ಇದೆ ಹಾಗಾಗಿ ಒಳಿತಾಗಲೆಂದು ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಎರಡನೆ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಕುಟುಂಬ ಸಮೇತರಾಗಿ ತಾಯಿಯ ದರ್ಶನ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ದುಖವನ್ನು ದೂರ ಮಾಡುವ ದೇವಿ ಚಾಮುಂಡಿಯಲ್ಲಿ ಪ್ರಾರ್ಥಿಸಿದ್ದೆವು,ತಾಯಿ ಒಳಿತು ಮಾಡಿದ್ದಾಳೆ,ಈ ಭಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ.
ಎಲ್ಲರಿಗೂ ಒಳ್ಳೆಯದನ್ನ ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ‌ ಎಂದು ತಿಳಿಸಿದರು.

ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತೆ ಎಂಬ ನಂಬಿಕೆ ಇದೆ.
ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ‌,ಇಂದು ಕುಟುಂಬ ಸಮೇತ ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಡಿಕೆಶಿ ಹೇಳಿದರು.

ಪ್ರಾರ್ಥನೆಗೆ ಫಲ ಸಿಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ.ನನಗೆ ಏನು ಬೇಕು ಅದನ್ನ ಆ ತಾಯಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ,ಈಗ ಬೇರೆ ಯಾವುದೇ ಚರ್ಚೆ ಬೇಡ ಎಂದು ತಿಳಿಸಿದರು.

ಮುಖ್ಯ ಮಂತ್ರಿ ರೇಸ್ ನಿಂದ ಡಿ.ಕೆ ಶಿವಕುಮಾರ್ ಹೊರಬಿದ್ದಿದ್ದಾರ ಎಂಬ ಪ್ರಶ್ನೆಗೆ ಮೇಲಿನಂತೆ ಮಾರ್ಮಿಕವಾಗಿ ಉತ್ತರ ನೀಡಿದರು.

ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ.
ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು,ಅವರು ಬುದ್ಧಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ.
ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದಷ್ಟೇ ಹೇಳಿ ಡಿ.ಕೆ.ಶಿವಕುಮಾರ್ ಹೊರಟುಬಿಟ್ಟರು.

ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತೆ-ಡಿಕೆಶಿ Read More

ಗ್ರೇಟರ್ ಬೆಂಗಳೂರಿಗೆ ಶೀಘ್ರ ಚುನಾವಣೆ-ಡಿಕೆಶಿ

ಮೈಸೂರು: ಬಿಬಿಎಂಪಿ ಬದಲು ನಿನ್ನೆಯಷ್ಟೆ ಗ್ರೇಟರ್ ಬೆಂಗಳೂರು ಜಾರಿಗೆ ಬಂದಿದೆ,ಶೀಘ್ರದಲ್ಲೇ ಚುನಾವಣೆ ನಡೆಸುತ್ತೇವೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಚುನಾವಣೆ ಮಾಡುತ್ತೇವೆ. ಕ್ಯಾಬಿನೆಟ್ ನಲ್ಲಿ ಎಲ್ಲರೂ ಒಪ್ಪಿದ್ದಾರೆ,ಶೀಘ್ರವೇ ಸಬ್ ಕಮಿಟಿ ಮಾಡುತ್ತೇವೆ ಎಂದು ಹೇಳಿದರು ‌

ಗ್ರೇಟರ್ ಬೆಂಗಳೂರು ಅಲ್ಲ ಕ್ವಾಟರ್ ಬೆಂಗಳೂರು ಎಂಬ ಆರ್. ಅಶೋಕ್ ಟೀಕೆ ಕುರಿತು ಪ್ರತಿಕ್ರಿಯಿಸಿದ ಡಿ ಕೆ ಶಿ ಮೊದಲೇ ವಿರೋಧ ಮಾಡಬಹುದಿತ್ತು. ಆದರೆ ಅಶೋಕ್ ವಿರೋಧ ಮಾಡಲಿಲ್ಲ. ವಿಪಕ್ಷ ನಾಯಕನಾಗಿ ಅಷ್ಟು ಟೀಕೆ ಮಾಡದಿದ್ದರೆ ಹೇಗೆ, ಅವರಿಗೆ ನಾವು ಗೌರವ ಕೊಡುತ್ತೇವೆ ಎಂದು ತಿಳಿಸಿದರು.

ಅಶೋಕ್ ಅವರೇ ಗ್ರೇಟರ್ ಬೆಂಗಳೂರಿಗೆ ಸಲಹೆಗಳನ್ನು ಕೊಟ್ಟಿದ್ದಾರೆ. ಯಾಕೆ ಕೊಟ್ಟರು, ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ಇವರೆಲ್ಲರೂ ಒಪ್ಪಿದ್ದಾರೆ ಈಗ ವಿಪಕ್ಷವಾಗಿ ಟೀಕೆ ಮಾಡುತ್ತಾರೆ ಅವರ ಕೆಲಸ ಅವರು ಮಾಡಲಿ ಎಂದು ಡಿಕೆಶಿ ಟಾಂಗ್ ನೀಡಿದರು.

ರಾಮನಗರ ಹೆಸರು ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್, ಅದು ಕೂಡ ಶೀಘ್ರವೇ ಆಗಲಿದೆ, ಶುಭ ಗಳಿಗೆ ಶುಭ ಮುಹೂರ್ತ ಬರುತ್ತಿದೆ ಎಂದು ಹೇಳಿದರು.

ಯುದ್ಧ ವಿಚಾರದಲ್ಲಿ ಕ್ರೆಡಿಟ್ ವಾರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ ಕೆ ಶಿ, ಪಕ್ಷಕ್ಕಿಂತ ವ್ಯಕ್ತಿಗಿಂತ ದೇಶ ಮುಖ್ಯ ಅಂತ ಹೇಳಿದ್ದೇವೆ. ಪ್ರಧಾನಿ ಅವರ ತೀರ್ಮಾನಕ್ಕೆ ಬದ್ಧ ಅಂತ ಹೇಳಿದ್ದೇವೆ. ಎಲ್ಲಾ ಪಕ್ಷಗಳ ಮೀಟಿಂಗ್ ಕರೀರಿ ಅಂತ ಮನವಿ ಮಾಡಿದ್ದೇವೆ. ಪಾರ್ಲಿಮೆಂಟ್ ನಲ್ಲಿ ಹೇಗೆ ಕದನ ವಿರಾಮ ಆಯಿತು ಅಂತ ಹೇಳಿ ಅಂತ ಪ್ರಧಾನಿಗೆ ಮನವಿ ಮಾಡಿದ್ದೇವೆ. ಇಂದಿರಾ ಗಾಂಧಿ ಕಾಲದಿಂದ ಈ ರೀತಿ ಆಗಿರಲಿಲ್ಲ. ಹೊರಗಡೆ ದೇಶದವರು ನಮ್ಮ ದೇಶದ ವಿಷಯಕ್ಕೆ ಮೂಗು ತೂರಿಸುವುದು ಸರಿಯಲ್ಲ ಅನ್ನೋದು ಎಲ್ಲರ ಅಭಿಪ್ರಾಯ ಎಂದು ತಿಳಿಸಿದರು.

ಸಿಎಂ ಆಗಲು ಶುಭ ಗಳಿಗೆ ಬರುತ್ತಿದಿಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ತಮ್ಸಪ್ ಸಿಂಬಲ್ ತೋರಿಸಿದ ಡಿಕೆಶಿ ನಗುತ್ತಾ ಹೊರಟುಬಿಟ್ಟರು.

ಗ್ರೇಟರ್ ಬೆಂಗಳೂರಿಗೆ ಶೀಘ್ರ ಚುನಾವಣೆ-ಡಿಕೆಶಿ Read More

ಡಿ ಕೆ ಶಿವಕುಮಾರ್ ಕಾರ್ಯಕರ್ತರ ಶಕ್ತಿ: ಜಿ ಶ್ರೀನಾಥ್ ಬಾಬು

ಮೈಸೂರು: ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಹಳೆ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಿಸಿ ಪರಿಸರ ಸಂದೇಶ ಸಾರಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಜಿ ಶ್ರೀನಾಥ್ ಬಾಬು ಅವರು ಮಾತನಾಡಿ,
ಡಿ.ಕೆ ಶಿವಕುಮಾರ ಎಂದರೆ ಕಾಂಗ್ರೆಸ್ ಕಾರ್ಯಕರ್ತರ ಒಂದು ಶಕ್ತಿ ಎಂದು ಬಣ್ಣಿಸಿದರು.

ಡಿ.ಕೆ ಶಿವಕುಮಾರ್ ಅವರು ಕೇವಲ ರಾಜಕೀಯವಾಗಿ ಅಲ್ಲದೆ ಸಾಮಾಜಿಕವಾಗಿ ಕೂಡ ಜನಸೇವೆ ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕಿಟ್ಟು ಹೋರಾಡುತ್ತಿರುವ ಸಂದರ್ಭದಲ್ಲಿ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ನಾವು ಸರಳವಾಗಿ ಆಚರಿಸಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್
ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ
ಜಿ ರಾಘವೇಂದ್ರ,ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ದಿನೇಶ್ ಪಾಂಡುಪುರ,ಪರಿಸರ ಬಳಗದ ಕೃಷ್ಣಪ್ಪ ಗಂಟೆಯ, ಎಪಿಎಂಸಿ ರಾಮಚಂದ್ರ, ಸೇವಾದಳ ಮೋಹನ್, ಹರೀಶ್ ನಾಯ್ಡು, ರಮೇಶ ರಾಮಪ್ಪ, ಹಿನಕಲ್ ಉದಯ್,ಮತ್ತು ಡೈರಿ ವೆಂಕಟೇಶ ಉಪಸ್ಥಿತರಿದ್ದರು.

ಡಿ ಕೆ ಶಿವಕುಮಾರ್ ಕಾರ್ಯಕರ್ತರ ಶಕ್ತಿ: ಜಿ ಶ್ರೀನಾಥ್ ಬಾಬು Read More

ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಮೇ.15 ರಂದು ನನ್ನ ಜನ್ಮದಿನ.ಆದರೆ ಅಂದು ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು, ಅಂದು ನಾನು ಊರಿನಲ್ಲಿ ಇರುವುದಿಲ್ಲ, ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ, ಯಾರೂ ಅನ್ಯತಾ ಭಾವಿಸಬಾರದು,ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ಡಿ ಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.

ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಡಿಕೆಶಿ ತಿಳಿಸಿದ್ದಾರೆ.

ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ Read More

ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರು: ಸಿಎಂ ಟೀಕೆ

ಹಾವೇರಿ: ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರೂ ಆಗಿದ್ದಾರೆ ಎಂದು ‌ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.

ಹಾವೇರಿ ಜಿಲ್ಲೆಯಲ್ಲಿ 650 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಲೋಕಾರ್ಪಣೆಗೊಳಿಸಿ, ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಮಾತನಾಡಿದರು.

ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಪ್ರಶ್ನಿಸಿದರು.

ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ, ಈ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲೂ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ನೀವು ಕಾಂಗ್ರೆಸ್ ಪಕ್ಷಕ್ಕೆ, ಈ ಸರ್ಕಾರಕ್ಕೆ ಕೊಟ್ಟ ಮತಗಳಿಗೆ ನಾವು ಘನತೆಯಿಂದ ಗೌರವಿಸಿದ್ದೇವೆ. ಚುನಾವಣೆಗೆ ಮೊದಲು ಕೊಟ್ಟ ಮಾತಿನಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಿ ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ ಎಂದು ತಿಳಿಸಿದರು.

ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿದೆ ಎಂದು ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಸುಳ್ಳುಗಳನ್ನು ನಂಬಬೇಡಿ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ ಈ ಬಾರಿಯ ಬಜೆಟ್ ಗಾತ್ರ 38 ಸಾವಿರ ಕೋಟಿ ಹೆಚ್ಚಾಗಿದೆ. ಮಾತ್ರವಲ್ಲ ಈ ಬಾರಿ ಬಂಡವಾಳ ವೆಚ್ಚ 83 ಸಾವಿರ ಕೋಟಿ ತೆಗೆದಿರಿಸಿದ್ದೇವೆ ಎಂದು ಸಿದ್ದು ಹೇಳಿದರು.

ಆರ್.ಅಶೋಕ, ವಿಜಯೇಂದ್ರ ಈಗ ನಮ್ಮ ಸರ್ಕಾರದ ವಿರುದ್ಧ ನಕಲಿ ಜನಾಕ್ರೋಶ ಸಭೆ ನಡೆಸುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು ಎಂದು ವ್ಯಂಗ್ಯವಾಡಿದರು.

ಅಚ್ಛೇದಿನ್ ಆಯೆಗಾ ಅಂದ್ರಲ್ಲಾ ಮೋದಿ, ಎಲ್ರೀ ಬಂತು ಈ ಅಚ್ಛೆ ದಿನ್. ದುರ್ಬೀನು ಹಾಕಿ ಹುಡುಕಿದರೂ ಕಾಣಿಸುತ್ತಿಲ್ಲ ಎಂದು ಸಿಎಂ ಲೇವಡಿ ಮಾಡಿದರು.

ಡಾಲರ್ ಬೆಲೆ 59 ರೂನಿಂದ 85 ರೂಪಾಯಿಗೆ ಏರಿಕೆ ಆಗಿದೆ. ಅಡಗೆ ಅನಿಲ 400 ರೂಪಾಯಿಂದ 879 ರೂ ಆಗಿದೆ. ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಔಷಧ, ಚಿನ್ನ, ಅಕ್ಕಿ, ಬೇಳೆ, ಎಣ್ಣೆ, ಕಾಳು ಸೇರಿ ಎಲ್ಲದರ ಬೆಲೆಯನ್ನೂ ಮೋದಿ ಆಕಾಶಕ್ಕೆ ಏರಿಸಿದ್ದಾರಲ್ಲಾ ಇದೇನಾ ಅಚ್ಚೆ ದಿನ್ ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ಮೋದಿ ಭರವಸೆ ಕೊಟ್ಟಿದ್ದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು ಆಗಲಿಲ್ಲ ಅದಕ್ಕೇ ಹೇಳೋದು ಸುಳ್ಳು ಬಿಜೆಪಿಯ ಮನೆ ದೇವರು ಎಂದು ಟೀಕಿಸಿದರು.

ಶಾಸಕ ಶ್ರೀನಿವಾಸ್ ಮಾನೆಯವರು ಕ್ಷೇತ್ರಕ್ಕೆ ಮಾಡಿರುವ ಕೆಲಸ ಕಾಣುತ್ತಿದೆ. ಈ ಊರಿನ ಅಳಿಯ ಬೊಮ್ಮಾಯಿಯವರೇ ಕ್ಷೇತ್ರಕ್ಕೆ ಏನು ಮಾಡಿದ್ದೀರಿ ಜನರಿಗೆ ಉತ್ತರಿಸಿ ಎಂದು ಸವಾಲು ಹಾಕಿದ ಮುಖ್ಯಮಂತ್ರಿಗಳು, ಮುಂದೆ ಶಾಸಕ ಮಾನೆಯವರಿಗೆ ರಾಜಕೀಯವಾಗಿ ಉತ್ತಮ ಭವಿಷ್ಯ ಇದೆ ಎಂದು ಘೋಷಿಸಿದರು.

ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರು: ಸಿಎಂ ಟೀಕೆ Read More

ಸಿಎಂ ಡಿನ್ನರ್‌ ಸಭೆ ಪರ ಡಿಕೆಶಿ ಬ್ಯಾಟಿಂಗ್

ನವದೆಹಲಿ: ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಡಿನ್ನರ್‌ ಸಭೆ ಪರ ಬ್ಯಾಟಿಂಗ್ ಬೀಸಿದ್ದಾರೆ.

ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಬಂದ ವೇಳೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಡಿನ್ನರ್‌ ಸಭೆ‌ ನಡೆಸಿದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಭೆ ಪರವೇ ಮಾತನಾಡಿಧರು.

ನಮ್ಮ ಮನೆಗೆ ನೀವು ಬರೋದು, ನಿಮ್ಮ ಮನೆಗೆ ನಾವು ಬರೋದು ಸಹಜ. ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ. ನಾನು ಕೆಲವು ಬಾರಿ ಊಟಕ್ಕೆ ಕರೆಯುತ್ತೇನೆ ತಪ್ಪೇನು‌ ಎಂದು ತಿಳಿಸಿದರು.

ನಾಲ್ಕು ವರ್ಷದಿಂದ ಎಲ್ಲೂ ಹೊರಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬದ ಜೊತೆಗೆ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದೆ. ಕೆಲವರು ಕುಟುಂಬ ಜೊತೆಗೆ ಬೇರೆ ಕಡೆಗೆ ಹೋಗಿದ್ದಾರೆ ಎಂದು ಹೇಳಿದರು.

ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಜ.2ರ ರಾತ್ರಿ ನಡೆದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಲವು ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದರು. ಸಂಪುಟ ಸಭೆಯ ಬಳಿಕ ಸಚಿವರ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.

ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿತ್ತು.
ಡಾ.ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಜತೆಗೆ ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದರು.

ಸಿಎಂ ಡಿನ್ನರ್‌ ಸಭೆ ಪರ ಡಿಕೆಶಿ ಬ್ಯಾಟಿಂಗ್ Read More