ಬಸ್ ದರ ಶೇ.15 ರಷ್ಟು ಏರಿಕೆ

ಬೆಂಗಳೂರು, ಜ.2: ಬಸ್ ದರ ಏರಿಕೆ ಫಿಕ್ಸ್ ಆಗಿದ್ದು ಜ.5 ರಿಂದಲೇ ಪ್ರಯಾಣಿಕರ ಮೇಲೆ ಶೇ.15 ರಷ್ಟು ಹೊರೆ ಬೀಳೋದು ಗ್ಯಾರಂಟಿ.

ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ದರವು ಜನವರಿ 5 ರಿಂದ ಜಾರಿಗೆ ಬರಲಿದೆ.

ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಎಂಟಿಸಿ ಗೆ ಹತ್ತು ವರ್ಷಗಳ ಹಿಂದೆ ದರ ಪರಿಷ್ಕರಣೆ ಆಗಿತ್ತು. ಅಂದು ಡೀಸೆಲ್ ದರ ಲೀಟರ್ ಗೆ 60ರೂ 98 ಪೈಸೆ ಇತ್ತು. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಂದಿನ ಡೀಸೆಲ್ ವೆಚ್ಚ 9 ಕೋಟಿ 16ಲಕ್ಷ ಇದ್ದು ಪ್ರಸ್ತುತ 13.21ಕೋಟಿ ಹೆಚ್ಚಳ ಆಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ಸಿಬ್ಬಂದಿ ವೆಚ್ಚ 12.85ಕೋಟಿ ಇದ್ದದ್ದು ಪ್ರಸ್ತುತ 18.36 ಕೋಟಿ ಆಗಿದೆ ಪ್ರತಿ ದಿನ 9.56ಕೋಟಿ ಹೆಚ್ಚುವರಿ ಹೊರೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಆಗಿದೆ ಎಂದು ಸಚಿವರು ತಿಳಿಸಿದರು.

ಎಲ್ಲಾ ಕಾರ್ಪೋರೇಷನ್ ಗಳು, ನಗರ ಬಸ್ಸುಗಳು, ಐಷಾರಾಮಿ ಬಸ್ಸುಗಳು ಸೇರಿದಂತೆ ಎಲ್ಲರಿಗೂ ಶೇ 15ರಷ್ಟು‌ ದರ ಪರಿಷ್ಕರಿಸಲಾಗಿದೆ. ಇದರಿಂದ ಪ್ರತಿ ತಿಂಗಳು 74.85 ಕೋಟಿಯಷ್ಟು ಆದಾಯ ಹೆಚ್ಚಾಗಲಿದೆ. ಶಕ್ತಿ ಯೋಜನೆಗಾಗಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ 5015 ಕೋಟಿಗಳನ್ನು ಮೀಸಲಿರಿಸಿದೆ. ಪ್ರತಿ ತಿಂಗಳು ನಾಲ್ಕೂ ನಿಗಮಗಳಿಗೆ 417.92 ಕೋಟಿ ಗಳ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುವುದಿಲ್ಲ. ಕರ್ನಾಟಕ ಅತ್ಯುತ್ತಮ ಆರ್ಥಿಕ ಹೊಣೆಗಾರಿಕೆಯನ್ನು ಅನುಷ್ಠಾನ ಮಾಡಿರುವ ರಾಜ್ಯ ಎಂದು ಹೆಚ್.ಕೆ.ಪಾಟೀಲ್ ಹೇಳಿದರು.

ಬಸ್ ದರ ಶೇ.15 ರಷ್ಟು ಏರಿಕೆ Read More

ರಾಜ್ಯದಲ್ಲಿ,ಬಿಜೆಪಿಯವರ ಮನೆಯಲ್ಲಿ ಏನೇ‌ ಆದ್ರೂ ನಾನು ಕಾರಣಾನಾ:ಡಿಕೆಶಿ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಏನೇ ಆದ್ರೂನು ನಾನೇ ಕಾರಣನಾ, ಬಿಜೆಪಿಯವರ ಮನೆಯಲ್ಲಿ,ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆ ಒಳಗೆ ಏನಾದ್ರೂ ನಾನೇ ಕಾರಣನಾ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ವ್ಯಂಗ್ಯ ವಾಗಿ ಪ್ರಶ್ನಿಸಿದರು.

ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಗೆ ಕೋರ್ಟ್‌ ಜಾಮೀನು ನೀಡಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಬೇಲ್ ವಿಚಾರ ಕೋರ್ಟ್‌ಗೆ ಸಂಬಂಧಿಸಿದ್ದು, ಕಾನೂನು ಉಂಟು, ಕೋರ್ಟ್ ಉಂಟು, ಅವರು ಉಂಟು ಎಲ್ಲದಕ್ಕೂ ನನ್ನನ್ನ ಕೇಳಿದರೆ ನಾನೇನು ಹೇಳಲಿ ಎಂದು ‌ಪ್ರಶ್ನಿಸಿದರು.

ರಾಜ್ಯದಲ್ಲಿ ಏನಾದ್ರೂ ನಾನೇ ಕಾರಣ, ನನ್ನ ನೆನಸಿಕೊಂಡಿಲ್ಲ ಅಂದ್ರೆ ಬಿಜೆಪಿ ಅವರಿಗೆ ನಿದ್ದೆ ಬರಲ್ಲ ಎಂದು ಟೀಕಿಸಿದರು.

ಕಾನೂನಿಗೆ, ಕೋರ್ಟ್‌ಗೆ ನಾವು ಏನು ಗೌರವ ಕೊಡಬೇಕೊ ಕೊಡುತ್ತೇವೆ. ಕೋರ್ಟ್ ಏನು ಬೇಕೋ ನಿರ್ಧಾರ ತೆಗೆದುಕೊಳ್ಳುತ್ತೆ. ಮೊದಲು ಅವರು ಮಾತನಾಡಿದ್ದು ಸರೀನಾ ಅಂತ ಕೇಳಿ ಎಂದು ಮಾಧ್ಯಮದವರಿಗೆ ಹೇಳಿದರು.

ಅವರ ಭಾಷೆ, ಸಂಸ್ಕ್ರತಿಯಿಂದ ಹರುಕು ಬಾಯಿ ಅನ್ನೋದು ಗೊತ್ತಾಗಿದೆ. ಈ ಹಿಂದೆ ಜಯಮಾಲಾಗೂ ಮಾತಾಡಿದ್ರು, ಸಿಎಂ ಬಗ್ಗೆನೂ ಮಾತನಾಡಿದ್ರು, ನಿತ್ಯ ಸುಮಂಗಲಿ ಅಂತ ಹೇಳಿದ್ರು, ಇದು ಸರಿನಾ, ತಪ್ಪಾ ನೀವು ಹೇಳಿ ಎಂದು ಪ್ರಶ್ನಿಸಿದರು.

ಸಿ.ಟಿ ರವಿ ಮೇಲೆ ನನಗೂ ಸಿಂಪತಿ ಇತ್ತು. ಚಿಕ್ಕಮಗಳೂರು ಜನ ಅಂದರೆ ಸಂಸ್ಕೃತಿಯುಳ್ಳ ಜನ. ಆದ್ರೆ ಆ ಪಾರ್ಟಿಯಲ್ಲಿ ಇರೋರು ಹೆಣ್ಣು ಮಕ್ಕಳ ಬಗ್ಗೆ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಆತ್ಮ ಸಾಕ್ಷಿ ಇದ್ರಲ್ಲಿ ಮುಖ್ಯ ಆಗುತ್ತೆ. ಪಕ್ಷದ ಸುಮ್ಮನೆ ಸಪೋರ್ಟ್ ಮಾಡೋದಲ್ಲ, ಅದನ್ನ ಖಂಡಿಸಬೇಕಲ್ವಾ, ಸರಿ ಇಲ್ಲ ಅಂತ ಹೇಳಬೇಕಲ್ವಾ, ನನ್ನ ಪಕ್ಷದಲ್ಲಿ ಯಾರು ಹಾಗೇ ಮಾತಾಡಿದ್ರೆ ಖಂಡಿಸ್ತಿದ್ದೆ ಎಂದು ಡಿಕೆಶಿ ಹೇಳಿದರು.

ರಾಜ್ಯದಲ್ಲಿ,ಬಿಜೆಪಿಯವರ ಮನೆಯಲ್ಲಿ ಏನೇ‌ ಆದ್ರೂ ನಾನು ಕಾರಣಾನಾ:ಡಿಕೆಶಿ ಪ್ರಶ್ನೆ Read More

ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್; ಆಗ ಬಿಜೆಪಿನೋರು ಎಲ್ಲಿ ಹೋಗಿದ್ದರು-ಡಿಕೆಶಿ

ಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ದರಲ್ಲಾ ಆಗ ಬಿಜೆಪಿಯವರು ಎಲ್ಲಿ ಹೋಗಿದ್ದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಪಕ್ಷಗಳಿಗೆ‌ ಟಾಂಗ್ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ
ಮುಸ್ಲಿಮರಿಗೆ ಮತದಾನ ಇಲ್ಲದಂತೆ ಮಾಡಬೇಕು ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ,
ವಿಧಾನಸೌಧದಲ್ಲಿ ಸಿಎಂ ಉತ್ತರ ಕೊಟ್ಟಿದ್ದಾರೆ. ನಾನು ನಮ್ಮ ಸ್ವಾಮೀಜಿಗಳಿಗೆ ಹಾಗೂ ಎಲ್ಲ ಸ್ವಾಮೀಜಿಗಳಿಗೂ ಸಂವಿಧಾನ, ಯಾರ ಹಕ್ಕುಗಳ ಬಗ್ಗೆಯಾಗಲಿ, ಜಾತಿಗಳ ಬಗ್ಗೆಯಾಗಲಿ ಮಾತನಾಡುವುದು ಬೇಡ ಎಂದು ಮನವಿ ಮಾಡುತ್ತೇನೆ ಎಂದರು.

ನಮ್ಮದು ಮಾನವ ಧರ್ಮ, ನಮ್ಮದು ಸಂವಿಧಾನ, ಎರಡಕ್ಕೂ ನಾವು ಹೆಚ್ಚಿಗೆ ಒತ್ತು ಕೊಟ್ಟು ಹೋಗಬೇಕು. ನಾನು ಸ್ವಾಮೀಜಿಗಳು ಹಾಗೂ ಪೊಲೀಸರಿಗೆ ಹೇಳುತ್ತೇನೆ, ಯಾರು ಕೂಡ ಕಾನೂನಿಗಿಂತ ದೊಡ್ಡವರಲ್ಲ. ನಾನು ಮಾತಾಡಿದ್ರೂ ಕೇಸ್ ಹಾಕುತ್ತಾರೆ ಎಂದು ಹೇಳಿದರು.

ನಮ್ಮ ಕಾಂಗ್ರೆಸ್ ಆಫೀಸ್ ಹುಡುಗರ ಮೇಲೆ ಬಿಜೆಪಿ ಸರ್ಕಾರ ಇದ್ದಾಗ ಕೇಸ್ ಹಾಕಿದ್ದಾರೆ. ಸ್ವಾಮೀಜಿಗಳ ವಿಚಾರಕ್ಕೆ ಉಗ್ರ ಹೋರಾಟ ಮಾಡುತ್ತೇನೆ ಅಂತ ಅಶೋಕ್ ಹೇಳ್ತಾರಲ್ಲಾ ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಎಲ್ಲೋಗಿದ್ರು, ಬಿಜೆಪಿಯವರು ಏನು ಮಾಡ್ತಿದ್ದರು ಎಂದು ಪ್ರಶ್ನಿಸಿದರು.

ನಿರ್ಮಲಾನಂದನಾಥ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ, ಆಗ ಅಶೋಕ್ ಎಲ್ಲಿದ್ದರು, ಶ್ರೀಗಳು ಕ್ರಿಮಿನಲ್‌ ತರಹ ಅವರ ನಂಬರ್‌ ಕೊಟ್ಟಿದ್ದರು. ಅದರ ರಿಪೋರ್ಟ್‌ ಬಗ್ಗೆ ಗೊತ್ತಿದ್ಯಾ, ಸುಮ್ಮನೆ ಒಣ ರಾಜಕಾರಣ ಬಿಟ್ಟು ಬಿಡಿ, ಬೆಂಕಿ ಹಚ್ಚಿ ಅದರಲ್ಲಿ ಬಿಡಿ ಸೇದ್ಕೊಂಡು ಕೂತ್ ಕೊಂಡಿದಾರೆ ಅಶೋಕ್ ಎಂದು ಡಿಕೆಶಿ ಗೇಲಿ ಮಾಡಿದರು.

ಸಮಾವೇಶದಿಂದ ಸ್ಥಳೀಯ ಚುನಾವಣೆಗಳಿಗೆ ಸಹಾಯಕವೆ ಎಂಬ ವರದಿಗಾರರ ಪ್ರಶ್ನೆಗೆ, ಏನಾದ್ರೂ ಒಂದು ಉದ್ದೇಶ ಇರಬೇಕು ಅಲ್ವಾ ಎಲೆಕ್ಷನ್ ಬರುತ್ತಲೇ ಇರುತ್ತದೆ. ನಾವು ಕೂಡ ತಯಾರಿ ಮಾಡಿಕೊಳ್ಳಬೇಕು ಮುಂದಿನ ಫ್ರಬವರಿಯಲ್ಲಿ ಚುನಾವಣೆ ಮಾಡಬೇಕೆಂದು ತೀರ್ಮಾನ ಆಗಿದೆ. ಎಲ್ಲಾ ಕಂಪ್ಲೀಟ್ ಆಗಿ ಎಲೆಕ್ಟರೋಲ್‌ ವರ್ಕ್ಸ್ ಆಗಿದೆ ಎಂದು ತಿಳಿಸಿದರು.

ಸಚಿವ ಸಂಪುಟ ಪುನಾರಚನೆ ಇದೆಯೆ ಎಂದು ಕೇಳಿದ್ದಕ್ಕೆ ನಾನು ಮುಖ್ಯಮಂತ್ರಿ ಅಲ್ಲ ಡಿಸಿಎಂ. ಆದ್ರೆ ಪಾರ್ಟಿ ಅಧ್ಯಕ್ಷ. ಸದ್ಯಕ್ಕೆ ಇದರ ಬಗ್ಗೆ ಚರ್ಚೆ ಇಲ್ಲ, ಅದರ ಅವಶ್ಯಕತೆಯೂ ಇಲ್ಲ, ವಿಧಾನಸಭೆಯಲ್ಲಿ ಯಾವ ಸ್ಥಾನವೂ ಖಾಲಿ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಉತ್ತರಿಸಿದರು.

ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್; ಆಗ ಬಿಜೆಪಿನೋರು ಎಲ್ಲಿ ಹೋಗಿದ್ದರು-ಡಿಕೆಶಿ Read More

ರಾಜ್ಯದ ನೀರಾವರಿ ವಿಚಾರ ಕುರಿತು ಚರ್ಚಿಸಲು ಪ್ರಧಾನಿ ಭೇಟಿ:ಡಿಕೆಶಿ

ನವದೆಹಲಿ: ರಾಜ್ಯದ ನೀರಾವರಿ ವಿಚಾರ ಸೇರಿದಂತೆ ಕೆಲವು ವಿಷಯಗಳ ಕುರಿತು ಚರ್ಚಿಸಲು ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ,ವನ್ಯಜೀವಿ ಇಲಾಖೆ ಸಚಿವರು ಮತ್ತು ಮಂಡಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಈಗಾಗಲೇ ಭೇಟಿ ಮಾಡಿದ್ದೇವೆ. ವನ್ಯಜೀವಿ ಮಂಡಳಿಗೆ ಪ್ರಧಾನಿಯವರೇ ಅಧ್ಯಕ್ಷರಾಗಿದ್ದಾರೆ. ಸ್ಥಾಯಿ ಸಮಿತಿಗೆ ಸಚಿವರು ಅಧ್ಯಕ್ಷರಾಗಿದ್ದಾರೆ ಎಂದು ಹೇಳಿದರು.

ಕಳಸಾ ಬಂಡೂರಿ ನಾಲಾ ಯೋಜನೆ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಗತ್ಯವಿರುವ ಅರಣ್ಯ ಮತ್ತು ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದು ಡಿಕೆಶಿ ತಿಳಿಸಿದರು.

ಹಾಸನ ಸಮಾವೇಶ ವಿರುದ್ಧ ಎಐಸಿಸಿ ನಾಯಕರಿಗೆ ಪತ್ರ ಹೋಗಿದೆಯಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ,
ಪತ್ರ ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಆದರೆ ಮುಖ್ಯಮಂತ್ರಿಗಳು ನನಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಅದಕ್ಕಿಂತ ಹೆಚ್ಚು ನನಗೆ ಗೊತ್ತಿಲ್ಲ, ಪಕ್ಷದ ಉಪಸ್ಥಿತಿ ಇದ್ದೇ ಇರುತ್ತದೆ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ರಾಜ್ಯದ ನೀರಾವರಿ ವಿಚಾರ ಕುರಿತು ಚರ್ಚಿಸಲು ಪ್ರಧಾನಿ ಭೇಟಿ:ಡಿಕೆಶಿ Read More

ಡೆಪಾಸಿಟ್ ಬಂತಾ: ಅಶೋಕ್‍ಗೆ ಟಾಂಗ್ ನೀಡಿದ ಡಿಕೆಶಿ

ಬೆಂಗಳೂರು: ಕನಕಪುರದಲ್ಲಿ ನನ್ನ ಮುಂದೆ ಡಿಚ್ಚಿ ಹೊಡಿತಿನಿ ಅಂತ ಬಂದು ನಿಂತ್ಯಲ್ಲ ಡೆಪಾಸಿಟ್ ಬಂತಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನಾನು ಒಕ್ಕಲಿಗ ನಾಯಕ ಎಂದು ಎಲ್ಲಿ ಹೇಳಿದ್ದೇನೆ. ಎನಪ್ಪ ಅಶೋಕ, ಅಲ್ಲಲ್ಲ ಅಶೋಕ್ ಅಣ್ಣ. ನನಗಿಂತ ದೊಡ್ಡವನ ಚಿಕ್ಕವನ ಗೊತ್ತಿಲ್ಲ, ಅಶೋಕಣ್ಣ. ಹೌದಪ್ಪ ನನ್ನ ತಮ್ಮ ಸೋತಿದ್ದಾನೆ. ಆದರೆ ಸೋಲಿಸಿದ ಕೊಂಡಿಗಳು ಒಂದೊಂದೆ ಕಳಚಿಕೊಂಡವಲ್ಲ. ರಾಜರಾಜೇಶ್ವರಿ ನಗರದಲ್ಲಿ ಏನಾಯ್ತು, ಚನ್ನಪಟ್ಟಣದಲ್ಲಿ ಏನಾಯ್ತು, ರೆವಿನ್ಯೂ ಮಿನಿಸ್ಟರ್ ಆಗಿ ನನ್ನ ಮುಂದೆ ಕನಕಪುರಕ್ಕೆ ಬಂದು ನಿಂತ್ಯಲ್ಲ ಏನಾಯ್ತು ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿ ತಿರುಗೇಟು ನೀಡಿದರು.

ಬಿಜೆಪಿ ಅವಧಿಯಲ್ಲಿ ರೈತರಿಗೆ ವಕ್ಫ್ ನಿಂದ ಹೆಚ್ಚು ನೋಟಿಸ್ ಹೋಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ನಾಯಕರಿಗೆ ಬೇಕಿದ್ದು ಪ್ರಚಾರ. ಅವರ ಮುಖಗಳನ್ನು ಕನ್ನಡಿಯಲ್ಲಿ ನೋಡಿ ಎಂದು ಹೇಳಿದ್ದೇನೆ,ಚನ್ನಪಟ್ಟಣ ಚುನಾವಣೆ ಸಂದರ್ಭದಲ್ಲಿ ಕೆಲವು ಹುಡುಗರು ರೈತರ ಪಹಣಿ ಸಂಗ್ರಹ ಮಾಡಿದ್ದಾರೆ. ಅದು ನನ್ನ ಹಳೆಯ ಕ್ಷೇತ್ರ. 2020 ರಲ್ಲಿ ಅಲ್ಲಿ ತಿದ್ದುಪಡಿ ಆಗಿದೆ. ಈಗ ಅದನ್ನು ಮನೆ ಮನೆಗೆ ಹೋಗಿ ಸಂಗ್ರಹ ಮಾಡ್ತಿದ್ದಾರೆ. ಆಂತರಿಕ ಸಮಸ್ಯೆ ಮುಚ್ಚಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ. ನಾವು ಸತ್ಯಾಂಶವನ್ನು ಬಿಚ್ಚಿಡುತ್ತೇವೆ. ಅವರೆಲ್ಲ ಗೋಮುಖ ವ್ಯಾಘ್ರರು ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

ಮುಸ್ಲಿಂ ಮತಗಳು ಕೈ ಕೊಟ್ಟ ಕಾರಣ ಚನ್ನಪಟ್ಟಣದಲ್ಲಿ ಸೋಲು ಎಂಬ ನಿಖಿಲ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಕುಮಾರಸ್ವಾಮಿಗೆ ಮೊದಲು ಪಾಪ ಆ ಜನ ಮತ ಹಾಕಿದ್ದರು.ಈಗ ಬಿಜೆಪಿ ಜೊತೆಗೆ ಹೋಗಿರುವಾಗ ಯಾಕೆ ಮತ ಹಾಕ್ತಾರೆ? ಅವರು ಮುಸ್ಲಿಮರನ್ನು ನಂಬಿಲ್ಲ. ಅವರಿಗೆ ಸೀಟ್ ಕೊಟ್ರಾ, ಮಂತ್ರಿ ಮಾಡಿದ್ರಾ,ಶೇ 4ರಷ್ಟು ಮೀಸಲಾತಿ ಕಿತ್ತು ಹಾಕಿದ್ದಾರೆ. ಅವರ ಬಳಿ ಮತ ಕೇಳುವ ಹಕ್ಕು ಅವರಿಗೆ ಇಲ್ಲ. ಈ ಬಗ್ಗೆ ನಿಖಿಲ್ ಅಲ್ಲ, ಇದರ ಬಗ್ಗೆ ದೇವೇಗೌಡರು ಮಾತನಾಡಬೇಕು ಎಂದು ಒತ್ತಾಯಿಸಿದರು.

ನಾನು ಹೋದರೂ ಕಾಂಗ್ರೆಸ್ ಹೋಗಲ್ಲ, ಯಾರು ಹೋದರು ಕಾಂಗ್ರೆಸ್ ಹೋಗಲ್ಲ. ಕಾಂಗ್ರೆಸ್ ದೇಶವನ್ನು ವಿಭಜನೆ ಮಾಡಲು ಬಿಡುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಜೆಡಿಎಸ್ ಇಬ್ಭಾಗದ ಕುರಿತು ಸಿ.ಪಿ ಯೋಗೇಶ್ವರ್ ಮಾತನಾಡಿದ್ದಾರಲ್ಲಾ ಎಂಬ‌ ಮಾಧ್ಯಮದವರ ಪ್ರಶ್ನೆಗೆ ಅದು ನನಗೆ ಗೊತ್ತಿಲ್ಲ,ಹಾಗಾಗಿ ಆ ಬಗ್ಗೆ ಮಾತನಾಡಲ್ಲ. ಜಿ.ಟಿ ದೇವೇಗೌಡರು ಹಿರಿಯ ನಾಯಕರು. ಅವರು ಆ ಪಕ್ಷಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ನಾವು ಈ ಹಿಂದೆ ಆಫರ್ ಮಾಡಿದ್ದೆವು. ಆದರೆ ದಳದಲ್ಲೇ ಇರುತ್ತೇನೆ ಎಂದಿದ್ದರು. ಆದರೆ ಇವಾಗ ಅವರಿಗೆ ಅಸಮಾಧಾನ ಆಗಿದೆ. ಆದರೆ ನನ್ನ ಬಳಿ ಅವರು ಯಾವುದನ್ನೂ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಡೆಪಾಸಿಟ್ ಬಂತಾ: ಅಶೋಕ್‍ಗೆ ಟಾಂಗ್ ನೀಡಿದ ಡಿಕೆಶಿ Read More

ಕೈ ಶಾಸಕರಿಗೆ ಬಿಜೆಪಿ ಆಫರ್;ಸಿಎಂ ಹೇಳಿಕೆ ಸಮರ್ಥಿಸಿದ ಡಿಸಿಎಂ

ಬೆಂಗಳೂರು: ನಮ್ಮ ಶಾಸಕರಿಗೆ ಬಿಜೆಪಿ ಅವರು ಆಫರ್ ಕೊಡುತ್ತಿರುವುದು ನಿಜ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್,ಸಿಎಂ ಸಿದ್ದರಾಮಯ್ಯ ಅವರ ಆರೋಪವನ್ನು ಸಮರ್ಥಿಸಿಕೊಂಡರು

ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡಲು ಬಿಜೆಪಿಯವರು 50 ಕೋಟಿ ಆಮಿಷ ಕೊಟ್ಟಿದ್ದಾರೆ ಎಂಬ ಸಿಎಂ ಹೇಳಿಕೆ ಬಗ್ಗೆ ವಿಧಾನಸೌಧದಲ್ಲಿ ‌ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಡಿಕೆಶಿ,ನಮ್ಮ ಶಾಸಕರಿಗೆ ಬಿಜೆಪಿಯವರು 50 ಕೋಟಿ ಅಫರ್ ನೀಡುತ್ತಿದ್ದಾರೆ. ನಮ್ಮ ಶಾಸಕರ ಜೊತೆ ಬಿಜೆಪಿ ಅವರು ಮಾತಾಡಿದ್ದಾರೆ. ಅದನ್ನ ನಮ್ಮ ಶಾಸಕರು ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಮಿಕ್ಕಿದ ವಿಚಾರ ನಾನು ಮುಂದೆ ತಿಳಿಸುತ್ತೇನೆ‌ ಎಂದು ಹೇಳಿದರು.

ನಮ್ಮ ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ಆಫರ್‌ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದರು.

ಅದರ ಬೆನ್ನಲ್ಲೇ ಆಪರೇಷನ್‌ ಕಮಲ ಮೂಲಕ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

ಕೈ ಶಾಸಕರಿಗೆ ಬಿಜೆಪಿ ಆಫರ್;ಸಿಎಂ ಹೇಳಿಕೆ ಸಮರ್ಥಿಸಿದ ಡಿಸಿಎಂ Read More