ಪತಿ ಮನೆಯವರ ಕಿರುಕುಳ:ಉಪನ್ಯಾಸಕಿ ಆತ್ಮಹತ್ಯೆ

ದೊಡ್ಡಬಳ್ಳಾಪುರ: ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್​ನಲ್ಲಿ ಹಾರಿ ಉಒನ್ಯಾಸಕಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುಷ್ಪಾವತಿ (30) ಮೃತ ಉಪನ್ಯಾಸಕಿ, 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಇವರು ವಿವಾಹವಾಗಿದ್ದರು, ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು,ಈ ಬಗ್ಗೆ ಆಕೆ ಆತ್ಮಹತ್ಯೆ ಗೂ ಮುಂಚೆ ವಿಡಿಯೋ ಮಾಡಿ ವಿವರ ನೀಡಿದ್ದಾರೆ.

ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಪುಷ್ಪಾವತಿ ನಾಪತ್ತೆ ಆಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಕುಟುಂಬಸ್ಥರು ಕೇಸ್​ ದಾಖಲಿಸಿದ್ದರು.

ನಾನು ಮದುವೆಯಾಗಿ ಗಂಡನ ಮನೆಗೆ ಹೋದ ದಿನದಿಂದ ನನ್ನ ಗಂಡ ನನ್ನ ಜೊತೆ ಸರಿಯಾಗಿ ಸಂಸಾರ ಮಾಡದೆ, ನನ್ನಿಂದ ದೂರ ಉಳಿಯುತ್ತಿದ್ದರು. ಸಂಸಾರ ಮಾಡಬೇಕೆಂದು ಎಷ್ಟು ಪ್ರಯತ್ನ ಪಟ್ಟರು ನನ್ನ ಜೊತೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಈ ವಿಚಾರವನ್ನು ನಮ್ಮ ಅತ್ತೆ ಮಾವನಿಗೆ ತಿಳಿಸಿದರೆ ಎಲ್ಲಾ ಸರಿ ಹೋಗುತ್ತೆ ಸುಮ್ಮನಿರು ಎಂದು ಆರಂಭದಲ್ಲಿ ಹೇಳುತ್ತಿದ್ದರು.

ಗಂಡನಿಗೆ ನಾವು ಮಗು ಮಾಡಿಕೊಳ್ಳೋಣ ಎಂದು ಕೇಳಿದರೆ, ಈಗ ಮಗು ಬೇಡ 1-2 ವರ್ಷ ಹೋಗಲಿ ನಂತರ ಮಗು ಮಾಡಿಕೊಳ್ಳೋಣ. ಈವಾಗ ಯಾಕೆ ಅರ್ಜೆಂಟ್ ಎಂದು ನನಗೆ ಬೈಯುತ್ತಿದ್ದರು. ನನಗೆ ಅನುಮಾನ ಬಂದು, ನಿನಗೇನಾದರೂ ತೊಂದರೆ ಇದ್ದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳೋಣ ಎಂದು ಗಂಡನಿಗೆ ತಿಳಿಸಿದ್ದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಅವರನ್ನು ಮುಟ್ಟಿದರೆ ಕಾಲಿನಿಂದ ನನ್ನ ಎದೆಗೆ ಒದೆಯುತ್ತಿದ್ದರು. ಮಗು ಬೇಕು ಎಂದರೆ ನನ್ನ ಚಿಕ್ಕ ಮಗನ ಬಳಿ ಹೋಗು ಎಂದು ಅತ್ತೆ-ಮಾವ ಹೇಳುತ್ತಿದ್ದರು. ಮೈದುನನೂ ಅದೇ ರೀತಿ ಮಾತಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ನನ್ನ ಹೆತ್ತವರಿಗೆ ತಿಳಿಸಿದ್ದು, ಅವರು ಬಂದು ಹೇಳಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಪುಷ್ಪಾವತಿ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಪತಿ ಮನೆಯವರ ಕಿರುಕುಳ:ಉಪನ್ಯಾಸಕಿ ಆತ್ಮಹತ್ಯೆ Read More

ಕಾನೂನು ತೊಡಕು ನಿವಾರಿಸಿ ರೈತರ ಸಭೆ- ಸಿದ್ದರಾಮಯ್ಯ

ಬೆಂಗಳೂರು: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ದೇವನಹಳ್ಳಿಯ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಸಿಎಂ ಮಾತನಾಡಿದರು.

ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಕಾಶ ಬೇಕಿದೆ, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಎಂ ಎಲ್ ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ,ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾನೂನು ತೊಡಕು ನಿವಾರಿಸಿ ರೈತರ ಸಭೆ- ಸಿದ್ದರಾಮಯ್ಯ Read More

ದೇವನಹಳ್ಳಿ ರೈತರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 495 ಎಕರೆ ರೈತರ ಜಮೀನು ಭೂಸ್ವಾಧೀನ ವಿರೋಧಿಸುವ ರೈತರ ಹೋರಾಟದಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತು.

ಇಂದು ಹೋರಾಟದಲ್ಲಿ ಆಪ್ ಪದಾಧಿಕಾರಿಗಳು ಗಭಾಗವಹಿಸಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ರೈತರ ಹೋರಾಟದಲ್ಲಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ ಮುಖ್ಯಮಂತ್ರಿ ಚಂದ್ರು , ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಹಾಗೂ ಇನ್ನಿತರ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಧರಣಿ ಸತ್ಯಾಗ್ರಹದ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ನುಡಿದಂತೆ ನಡೆಯುವ ಸರ್ಕಾರವೆಂದು ಪದೇ ಪದೇ ಕೊಚ್ಚಿಕೊಳ್ಳುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದಲ್ಲಿ ಇದ್ದಾಗ ಈ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿತ್ತು. ಆದರೆ ಅಧಿಕಾರಕ್ಕೆ ಬಂದ ಕೂಡಲೇ ತಮ್ಮ ನಿಲುವನ್ನು ಬದಲಾಯಿಸಿ ರಿಯಲ್ ಎಸ್ಟೇಟ್ ಮಾಫಿಯಾಗಳ ಒತ್ತಡಗಳಿಗೆ ಬಲಿಯಾಗಿರುವುದು ನಿಜಕ್ಕೂ ಶೋಭೆ ತರುವ ವಿಚಾರವಲ್ಲ ಎಂದು ಹೇಳಿದರು.

ಕೊನೆಗೂ ರೈತರ ಹೋರಾಟಕ್ಕೆ ಮಣಿದಿರುವ ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಟ್ಟಿರುವುದು ನಮಗೆಲ್ಲರಿಗೂ ಸಂದ ಜಯ. ರಾಜ್ಯದಲ್ಲಿ ಎಲ್ಲೇ ಆದರೂ ಈ ರೀತಿಯ ಅಕ್ರಮ ಭೂಸ್ವಾಧೀನವನ್ನು ನಮ್ಮ ಪಕ್ಷ ಸದಾ ವಿರೋಧಿಸಿ ರೈತರ ಜೊತೆಯಲ್ಲಿ ನಿಲ್ಲುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಆಪ್ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿ, ಕೆ ಐ ಎ ಡಿ ಬಿ ಯು ರಿಯಲ್ ಎಸ್ಟೇಟ್ ಮಾಫಿಯಾಗಳ ಅಡ್ಡೆ ಯಾಗಿದೆ. ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕೈಗಾರಿಕೆಗಳ ಸ್ಥಾಪನೆ ಹೆಸರಿನಲ್ಲಿ ಭ್ರಷ್ಟರು ಹಾಗೂ ಪ್ರಭಾವಿ ರಾಜಕಾರಣಿಗಳು ಬಡ ರೈತರ ಜಮೀನುಗಳನ್ನು ಕಿತ್ತುಕೊಂಡು ಸಹಸ್ರಾರು ಕೋಟಿ ರೂ ಕೊಳ್ಳೆ ಹೊಡೆಯುತ್ತಿದ್ದಾರೆ, ಈ ಅಕ್ರಮಗಳ ವಿರುದ್ಧ ಆಮ್ ಆದ್ಮಿ ಪಕ್ಷವು ಸದಾ ಹೋರಾಟದಲ್ಲಿ ರೈತರ ಜೊತೆ ನಿಲ್ಲುತ್ತದೆ ಎಂದು ಹೇಳಿದರು.

ಧರಣಿ ಸತ್ಯಾಗ್ರಹದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ಸುರೇಶ್, ಮಾಲೂರು, ನಾಗರಾಜ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಹೋರಾಟದಲ್ಲಿ ರೈತರ ಪರವಾಗಿ ಪಾಲ್ಗೊಂಡಿದ್ದ ಬಹುಭಾಷಾ ನಟ‌ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು ಮುಖ್ಯ ಮಂತ್ರಿ ಚಂದ್ರು ಅವರಿಗೆ ನಮಸಿ ಮಾತುಕತೆ ನಡೆಸಿದರು.

ದೇವನಹಳ್ಳಿ ರೈತರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ Read More