ಪತಿ ಮನೆಯವರ ಕಿರುಕುಳ:ಉಪನ್ಯಾಸಕಿ ಆತ್ಮಹತ್ಯೆ

ದೊಡ್ಡಬಳ್ಳಾಪುರ: ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್​ನಲ್ಲಿ ಹಾರಿ ಉಒನ್ಯಾಸಕಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುಷ್ಪಾವತಿ (30) ಮೃತ ಉಪನ್ಯಾಸಕಿ, 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಇವರು ವಿವಾಹವಾಗಿದ್ದರು, ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು,ಈ ಬಗ್ಗೆ ಆಕೆ ಆತ್ಮಹತ್ಯೆ ಗೂ ಮುಂಚೆ ವಿಡಿಯೋ ಮಾಡಿ ವಿವರ ನೀಡಿದ್ದಾರೆ.

ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಪುಷ್ಪಾವತಿ ನಾಪತ್ತೆ ಆಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಕುಟುಂಬಸ್ಥರು ಕೇಸ್​ ದಾಖಲಿಸಿದ್ದರು.

ನಾನು ಮದುವೆಯಾಗಿ ಗಂಡನ ಮನೆಗೆ ಹೋದ ದಿನದಿಂದ ನನ್ನ ಗಂಡ ನನ್ನ ಜೊತೆ ಸರಿಯಾಗಿ ಸಂಸಾರ ಮಾಡದೆ, ನನ್ನಿಂದ ದೂರ ಉಳಿಯುತ್ತಿದ್ದರು. ಸಂಸಾರ ಮಾಡಬೇಕೆಂದು ಎಷ್ಟು ಪ್ರಯತ್ನ ಪಟ್ಟರು ನನ್ನ ಜೊತೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಈ ವಿಚಾರವನ್ನು ನಮ್ಮ ಅತ್ತೆ ಮಾವನಿಗೆ ತಿಳಿಸಿದರೆ ಎಲ್ಲಾ ಸರಿ ಹೋಗುತ್ತೆ ಸುಮ್ಮನಿರು ಎಂದು ಆರಂಭದಲ್ಲಿ ಹೇಳುತ್ತಿದ್ದರು.

ಗಂಡನಿಗೆ ನಾವು ಮಗು ಮಾಡಿಕೊಳ್ಳೋಣ ಎಂದು ಕೇಳಿದರೆ, ಈಗ ಮಗು ಬೇಡ 1-2 ವರ್ಷ ಹೋಗಲಿ ನಂತರ ಮಗು ಮಾಡಿಕೊಳ್ಳೋಣ. ಈವಾಗ ಯಾಕೆ ಅರ್ಜೆಂಟ್ ಎಂದು ನನಗೆ ಬೈಯುತ್ತಿದ್ದರು. ನನಗೆ ಅನುಮಾನ ಬಂದು, ನಿನಗೇನಾದರೂ ತೊಂದರೆ ಇದ್ದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳೋಣ ಎಂದು ಗಂಡನಿಗೆ ತಿಳಿಸಿದ್ದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಅವರನ್ನು ಮುಟ್ಟಿದರೆ ಕಾಲಿನಿಂದ ನನ್ನ ಎದೆಗೆ ಒದೆಯುತ್ತಿದ್ದರು. ಮಗು ಬೇಕು ಎಂದರೆ ನನ್ನ ಚಿಕ್ಕ ಮಗನ ಬಳಿ ಹೋಗು ಎಂದು ಅತ್ತೆ-ಮಾವ ಹೇಳುತ್ತಿದ್ದರು. ಮೈದುನನೂ ಅದೇ ರೀತಿ ಮಾತಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ನನ್ನ ಹೆತ್ತವರಿಗೆ ತಿಳಿಸಿದ್ದು, ಅವರು ಬಂದು ಹೇಳಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಪುಷ್ಪಾವತಿ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಪತಿ ಮನೆಯವರ ಕಿರುಕುಳ:ಉಪನ್ಯಾಸಕಿ ಆತ್ಮಹತ್ಯೆ Read More

ಕಾರು ಉರುಳಿಬಿದ್ದು ನಾಲ್ವರು ದು*ರ್ಮರಣ

ದೊಡ್ಡಬಳ್ಳಾಪುರ: ಲಾರಿ ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿಬಿದ್ದು ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ,ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ದೊಡ್ಡಬಳ್ಳಾಪುರ ಸಮೀಪದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ, ಈಶ್ವರಪ್ಪ ಎಂದು ಗುರುತಿಸಲಾಗಿದೆ.

ಬೆಳಗ್ಗೆ ದೇವಸ್ಥಾನಕ್ಕೆ ಇನ್ನೋವಾ ಕಾರಿನಲ್ಲಿ 8 ಮಂದಿ ಬರುತ್ತಿದ್ದರು, ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಮುಂದೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಕಾರು ನುಗ್ಗಿದೆ.ಆಗ ಚಾಲಕನ ನಿಯಂತ್ರಣ ಕಳೆದುಕೊಂಡು‌ ಕಾರು ಉರುಳಿಬಿದ್ದಿದೆ.

ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ನಾಲ್ವರು ಗಾಯಗೊಂಡಿದ್ದು,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಮೃತದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಾರು ಉರುಳಿಬಿದ್ದು ನಾಲ್ವರು ದು*ರ್ಮರಣ Read More