ನನ್ನದು ಕೃಷ್ಣತತ್ತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ತ್ವ:ಹೆಚ್ ಡಿ ಕೆ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು,ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ
ಎಂದು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್ ಡಿ ಕೆ,ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ, ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ ಎಂದು ಕಾರವಾಗಿ ಟೀಕಿಸಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.
ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ಮಾರ್ಗ ಯಾವುದು ಕಂಸ ಮಾರ್ಗವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ,ಹೇಳುವುದೂ ಇಲ್ಲ ಎಂದು ಹೆಚ್ ಡಿ ಕೆ ತಿಳಿಸಿದ್ದಾರೆ.

ನನ್ನದು ಕೃಷ್ಣತತ್ತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ತ್ವ:ಹೆಚ್ ಡಿ ಕೆ ತಿರುಗೇಟು Read More

ಮೈಸೂರಿನಲ್ಲಿ ಅದ್ದೂರಿ 70 ನೇ ಕನ್ನಡ ರಾಜ್ಯೋತ್ಸವ ಆಚರಣೆ

ಮೈಸೂರು, ನವೆಂಬರ್ ೧: 70 ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಓವೆಲ್ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದರು.

ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಗೃಹ ರಕ್ಷಕ ದಳ, ಎನ್ ಸಿ ಸಿ, ಎನ್ ಎಸ್ ಎಸ್ ಹಾಗೂ ವಿವಿಧ ಶಾಲೆಗಳ ಮಕ್ಕಳು ಆಕರ್ಷಕ ಪಥ ಸಂಚಲನ ನಡೆಸಿ‌‌ ಗಮಬ ಸೆಳೆದರು.

ಸಚಿವರು ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿ, ತಾಯಿ ಭುವನೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಿ,ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ ಟಿ ದೇವೇಗೌಡ, ಕೆ ಹರೀಶ್ ಗೌಡ, ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ, ಕೆ. ಶಿವಕುಮಾರ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ರಾದ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ ಪಿ ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೈಸೂರಿನಲ್ಲಿ ಅದ್ದೂರಿ 70 ನೇ ಕನ್ನಡ ರಾಜ್ಯೋತ್ಸವ ಆಚರಣೆ Read More

ತಾಯಿ ಭುವನೇಶ್ವರಿಗೆ ಹೆಚ್.ಸಿ.ಮಹದೇವಪ್ಪ ಪುಷ್ಪ ನಮನ

ಮೈಸೂರು, ನವೆಂಬರ್. ೧: ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಪೂಜೆಯ ನಂತರ ಶ್ರೀ ಭುವನೇಶ್ವರಿ ತಾಯಿಯ ಮೆರವಣಿಗೆ ರಥಕ್ಕೆ ಸಚಿವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಡಿಸಿಪಿಗಳಾದ ಸುಂದರ್ ರಾಜು, ಬಿಂದುಮಣಿ ಸೇರಿದಂತೆ ಅನೇಕ ಅಭಿಮಾನಿಗಳು ಹಾಜರಿದ್ದರು.

ತಾಯಿ ಭುವನೇಶ್ವರಿಗೆ ಹೆಚ್.ಸಿ.ಮಹದೇವಪ್ಪ ಪುಷ್ಪ ನಮನ Read More

ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಜಿಲ್ಲಾಡಳಿತದಿಂದ ಆಹ್ವಾನ

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರನ್ನು ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸಲು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು.

ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಸಚಿವ ಮಹದೇವಪ್ಪ ಅವರಿಗೆ ದಸರಾ ಆಹ್ವಾನ ಪತ್ರಿಕೆ ಕೊಟ್ಟು ಆಹ್ವಾನಿಸಿದರು.

ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಜಿಲ್ಲಾಡಳಿತದಿಂದ ಆಹ್ವಾನ Read More

ಮೈಸೂರಿನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ; ಹೆಚ್ ಸಿ ಮಹದೇವಪ್ಪ ಧ್ವಜಾರೋಹಣ

ಮೈಸೂರು: ಮೈಸೂರಿನಲ್ಲಿ 79 ಸ್ವಾತಂತ್ರೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ನಗರದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ 79 ಸ್ವಾತಂತ್ರೋತ್ಸವ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ‌ ಡಾ.ಹೆಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿ ದ್ವಜ ವಂದನೆ ಸ್ವೀಕರಿಸಿದರು.

ವಿವಿಧ 24 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ನಂತರ ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಸಿಂಹ ರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ವಹಿಸಿದ್ದರು.

ಲಿಟ್ಲ್ ಜಮ್ಸ್ ಶಾಲೆಯ ಮಕ್ಕಳು ನಾವೆಲ್ಲರೂ ಒಂದೇ ಎಂಬ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು. 12 ಸರ್ಕಾರಿ ಪ್ರೌಢ ಶಾಲಾ ಮಕ್ಕಳು ಏರೋ ಬ್ರಿಕ್ಸ್ ನೃತ್ಯ ಪ್ರದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಮೈಸೂರಿನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ; ಹೆಚ್ ಸಿ ಮಹದೇವಪ್ಪ ಧ್ವಜಾರೋಹಣ Read More

ಡಾ.ಎಚ್. ಸಿ.ಎಂ ಆಪ್ತ ಸಹಾಯಕ ಶ್ರೀನಿವಾಸ್ ಅವರ ಜನುಮದಿನ

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ನವರ ಆಪ್ತ ಸಹಾಯಕರಾದ ಶ್ರೀನಿವಾಸ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ.

ಹಾಗಾಗಿ ಶ್ರೀನಿವಾಸ್ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ,ಹಾರ ಹಾಕಿ ಸನ್ಮಾನಿಸಿ ಹುಟ್ಟು ಹಬ್ಬದ ಶುಭ ಕೋರಲಾಯಿತು.

ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಮೈಸೂರು ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿ ಪ್ರಕಾಶ್ ಮತ್ತು ದೇವಯ್ಯ ಲಿಂಗಾಬುದ್ಧಿಪಾಳ್ಯ ಅವರುಗಳು ಶ್ರೀನಿವಾಸ್ ಅವರಿಗೆ ಜನುಮದಿನದ ಶುಭ ಹಾರಿಸಿದರು.

ಡಾ.ಎಚ್. ಸಿ.ಎಂ ಆಪ್ತ ಸಹಾಯಕ ಶ್ರೀನಿವಾಸ್ ಅವರ ಜನುಮದಿನ Read More

ಶ್ರೀ ದಲೈ ಲಾಮಾ ಅವರನ್ನು ಭೇಟಿಯಾದ ಸಚಿವ ಮಹದೇವಪ್ಪ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪನವರು ಜಿಲ್ಲೆಯ ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14ನೇ ಟಿಬೆಟಿಯನ್ ಧರ್ಮಗುರು ಶ್ರೀ ದಲೈ ಲಾಮಾ ಅವರನ್ನು ಭೇಟಿ ಮಾಡಿದರು.

ಮಹದೇವಪ್ಪ ಅವರು ದಲೈಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.

ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ ಮಾಡುತ್ತಿರುವ ಅವರ ಕಾರ್ಯಗಳು ಮತ್ತು ಅವರ ವಿಚಾರಗಳ ಬಗ್ಗೆ ಕೆಲಹೊತ್ತು ಮಾತುಕತೆ ನಡೆಸಿದ ಸಚಿವರು ಅವರ ಬೇಡಿಕೆಗಳನ್ನು ಆಲಿಸಿದರು.ನಂತರ ಅವರ ಪ್ರೀತಿಯ ಆತಿಥ್ಯ ಸ್ವೀಕರಿಸಿದರು.

ಇದೇ ವೇಳೆ ಬುದ್ಧನ ನೆಲವಾಗಿ ರೂಪುಗೊಂಡಿರುವ ಬೈಲುಕುಪ್ಪೆಯಲ್ಲಿ ನಿರ್ಮಿಸಲಾದ ಬೌದ್ಧ ಮಂದಿರವನ್ನು ವೀಕ್ಷಿಸಿದರು.

ಭಾರತದ ಮೂಲ ಧರ್ಮವಾದ ಬೌದ್ಧ ಧರ್ಮದ ಬಗ್ಗೆ ಅಲ್ಲಿನ ಜನರಿಗೆ ಇರುವ ಸ್ಪಷ್ಟತೆ ಮತ್ತು ಕಾಳಜಿಯನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಟಿಬೆಟಿಯನ್ನರು ವಾಸಿಸುವ ಪ್ರದೇಶಕ್ಕೆ ಸಂಬಂಧಿಸಿದ ಕೆಲವು ಬೇಡಿಕೆಗಳ ಬಗ್ಗೆಯೂ ಸಚಿವರು ಚರ್ಚಿಸಿದರು.

ಶ್ರೀ ದಲೈ ಲಾಮಾ ಅವರನ್ನು ಭೇಟಿಯಾದ ಸಚಿವ ಮಹದೇವಪ್ಪ Read More

ನಿರಾಂತಕವಾಗಿ ಆಡಳಿತ ನಡೆಸಲು ಸಂವಿಧಾನ ಅತ್ಯಗತ್ಯ:ಹೆಚ್. ಸಿ. ಮಹದೇವಪ್ಪ

ಮೈಸೂರು: ಸಂವಿಧಾನವೆಂದರೆ ಆಳುವ ಪ್ರಮುಖ ನಿಯಮಗಳ ಸಂಯೋಜನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ. ಮಹದೇವಪ್ಪ ತಿಳಿಸಿದರು.

ಮೈಸೂರಿನ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಭಾನುವಾರ ೭೬ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಂವಿಧಾನ ದೇಶದ ಅತ್ಯುನ್ನತ ಮೂಲಭೂತ ಶಾಸನದ ನಿರೂಪಣೆ ಹಾಗೂ ಸರ್ಕಾರದ ಕಾರ್ಯವೈಖರಿಯ ಮೂಲ ಸೆಲೆಯಾಗಿದೆ. ಒಂದು ರಾಜ್ಯ ಕ್ರಮಬದ್ದವಾಗಿ ಜನರಿಗೆ ಹಿತವೆನಿಸುವ ರೀತಿಯಲ್ಲಿ ನಿರಾಂತಕವಾಗಿ ಆಡಳಿತ ನಡೆಸಲು ಸಂವಿಧಾನ ಅತ್ಯವಶ್ಯಕ ಎಂದವರು ಹೇಳಿದರು.

ಜನರಿಂದ, ಜನರಿಗಾಗಿ, ಜನರೇ ನಡೆಸುವ ಆಡಳಿತ ಹೊಂದಿರುವ ವಿನೂತನ ಗಣತಂತ್ರ ವ್ಯವಸ್ಥೆಯಲ್ಲಿ ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೂ ಸಮಾನ ಗೌರವ, ಸಮಾನ ಮಾನ್ಯತೆ ಇದೆ ಎಂದು ತಿಳಿಸಿದರು.

ಹಲವಾರು ಭಾಷೆ, ಧರ್ಮಗಳನ್ನು ಹೊಂದಿದ್ದರೂ ವಿವಿಧತೆಯಲ್ಲಿ ಏಕತೆ ನಮ್ಮ ಸಂವಿಧಾನದ ವಿಶೇಷ. ಇಂತಹ ಅತ್ಯುತ್ತಮ ವ್ಯವಸ್ಥೆಯಲ್ಲಿ ನಾವು ಹಲವಾರು ಸುಧಾರಣೆಗಳನ್ನು ತಂದಿದ್ದೇವೆ ಎಂದು ಸಚಿವರು ತಿಳಿಸಿದರು.

ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಮಹತ್ವಕಾಂಕ್ಷಿ ಅನ್ನ ಭಾಗ್ಯ ಯೋಜನೆಯನ್ನು ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ಜಾರಿಗೆ ತರಲಾಗಿದ್ದು, ಜನಸಮಾನ್ಯರ ಆಹಾರ ಭದ್ರತಾ ವಿಷಯದಲ್ಲಿ ಒಂದು ಮೈಲಿಗಲ್ಲು ಎಂದು ಭಾವಿಸಲಾಗಿದೆ ಎಂದು ಹೇಳಿದರು.

ಭವ್ಯ ಸಂವಿಧಾನದ ಆಶಯಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ವಾಚನವನ್ನು ಕಡ್ಡಾಯಗೊಳಿಸಿದೆ ಎಂದು ಮಹದೇವಪ್ಪ ತಿಳಿಸಿದರು.

ಭಾರತದ ಜನ ಈ ದೇಶದ ಪ್ರಜೆಗಳಾಗಿ ತಮ್ಮನ್ನು ತಾವು ಕಂಡುಕೊಂಡ ದಿನ. ಅಧಿಕಾರಸ್ಥರನ್ನು ಪ್ರಶ್ನಿಸುವ ಸ್ವಾತಂತ್ರ್ಯ ದೇಶದ ಸಾಮಾನ್ಯ ಪ್ರಜೆಗಳಿಗೆ ವಿಧಿವತ್ತಾಗಿ ಲಭ್ಯವಾದ ದಿನ. ಇಲ್ಲಿ ಯಾರ ಅಧಿಕಾರವೂ ಅಂತಿಮವಲ್ಲ, ಯಾರೊಬ್ಬರು ಸಂವಿಧಾನ ಹಾಕಿಕೊಟ್ಟ ಗೆರೆ ಮೀರುವ ಹಾಗಿಲ್ಲ ಎಂಬ ವ್ಯವಸ್ಥೆ ಅಂದಿನಿಂದ ಜಾರಿಗೆ ಬಂತು. ಇದೊಂದು ಚಾರಿತ್ರಿಕ ತಿರುವು ಹೇಳಿದರು.

ಮೈಸೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಎರಡನೇ ಹಂತದ ಬಾಕಿ ಇರುವ ಕಾಮಗಾರಿಯನ್ನು ರೂ.27 ಕೋಟಿ ವೆಚ್ಚದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣಗೊಳಿಸಲಾಗುವುದು ಎಂದು ‌ತಿಳಿಸಿದರು.

ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ , ಡಾ.ಬಾಬುಜಗಜೀವನರಾಂ ಭವನಗಳ ನಿರ್ಮಾಣ, ಪ್ರಗತಿ ಕಾಲೋನಿ, ಸ್ಮಶಾನಗಳ ಅಭಿವೃದ್ದಿ ಹಾಗೂ ವಿವಿಧ ಕಾಮಗಾರಿಗಾಗಿ ರೂ.121.16 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸಂವಿಧಾನಕ್ಕೆ ಬದ್ಧವಾಗಿ ಬದುಕುವ ಮನೋಭೂಮಿಕೆ ಇಂದಿನ ತುರ್ತು ಅನಿವಾರ್ಯತೆಯಾಗಿದೆ. ಆಗ ಮಾತ್ರವೇ ಸಂವಿಧಾನದ ಅತೀ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಗಳಿಗೆ ನಿಜವಾದ ಅರ್ಥ ಬರುವುದು ಎಂದು ಅವರು ತಿಳಿಸಿದರು.

ಗಣರಾಜ್ಯೋತ್ಸವದ ಈ ಶುಭ ದಿನ ನಾವೆಲ್ಲರೂ ಇಂತಹ ಒಂದು ಆರೋಗ್ಯಕರ ಸಮಾಜದ ನಿರ್ಮಾಣಕ್ಕಾಗಿ ಕಂಕಣಬದ್ಧರಾಗಿ ಶ್ರಮಿಸುವ ಸಂಕಲ್ಪ ಮಾಡಬೇಕಿದೆ. ನಮ್ಮ ಸರ್ಕಾರ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಚಿವರು ಹೇಳಿದರು.

ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, ಗೃಹ ರಕ್ಷಕ ದಳ, ಅಬಕಾರಿ ಇಲಾಖೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಶಾಲಾ ಕಾಲೇಜುಗಳ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯರಾದ ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಐ ಜಿ ಪಿ ಬೋರಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ನಿರಾಂತಕವಾಗಿ ಆಡಳಿತ ನಡೆಸಲು ಸಂವಿಧಾನ ಅತ್ಯಗತ್ಯ:ಹೆಚ್. ಸಿ. ಮಹದೇವಪ್ಪ Read More

ನಾಡಹಬ್ಬ ಮೈಸೂರು ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ಧತೆ:ಮಹದೇವಪ್ಪ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ತಿಳಿಸಿದರು.

ಶುಕ್ರವಾರ ಜಿಲ್ಲಾ ಪಂಚಾಯಿತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ದಸರಾ ಸಿದ್ಧತೆ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ದಸರಾ ಹಬ್ಬವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲಾಗಿತ್ತು. ಆದರೆ, ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಆಗಿರುವುದರಿಂದ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಅಲ್ಲದೆ ಈ ಬಾರಿ ದಸರಾದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು ಹಾಗೂ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸ್ಥಬ್ಧ ಚಿತ್ರಗಳು ಪ್ರದರ್ಶನ ಗೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಮಾತನಾಡಿ, ಕಳೆದ ಬಾರಿ ಆಗಿರುವ ನ್ಯೂನತೆಗಳನ್ನು ಈ ಬಾರಿ ಸರಿಪಡಿಸಿಕೊಂಡು ಯಾವುದೇ ಅಡಚಣೆ ಹಾಗೂ ತೊಂದರೆ ಉಂಟಾಗದಂತೆ ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು ಎಂದು ತಿಳಿಸಿದರು.

ಈ ಬಾರಿಯ ವಿಶ್ವ ವಿಖ್ಯಾತ ದಸರಾ
ಸ್ಥಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕ ಸಂಭ್ರಮ:೫೦, ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳನ್ನು ರಚಿಸಬೇಕು,ದಸರಾದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದ ಬಗ್ಗೆ ಎಚ್ಚರಿಕೆ ವಹಿಸಿ, ದಸರಾ ವೀಕ್ಷಿಸಲು ಬಂದಂತಹ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ರೀತಿಯ ನಿರಾಸೆಯಾಗದಂತೆ
ನೋಡಿಕೊಳ್ಳಬೇಕು. ಉಪಸಮಿತಿಯಲ್ಲಿನ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸಿ ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ ಪುಷ್ಪ ಅಮರನಾಥ್,ಸಂಸದ ಸುನಿಲ್ ಬೋಸ್ , ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ.ಗಾಯತ್ರಿ, ಅಪರ ಜಿಲ್ಲಾಧಿಕಾರಿ ಪಿ ಶಿವರಾಜು,ಕಮಿಷನರ್ ಸೀಮಾ ಲಾಟ್ಕರ್, ಎಸ್ ಪಿ ವಿಷ್ಣುವರ್ಧನ್, ದಸರಾ 19 ಉಪ ಸಮಿತಿಯಕಾರ್ಯದರ್ಶಿಗಳು,
ಅಧಿಕಾರಿಗಳು ಹಾಜರಿದ್ದರು.

ನಾಡಹಬ್ಬ ಮೈಸೂರು ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ಧತೆ:ಮಹದೇವಪ್ಪ Read More