ಶ್ರೀ ಚಾಮುಂಡೇಶ್ವರಿ ಕೃಪಾ ಪೋಷಿತ ನಾಟಕ ಮಂಡಳಿಯಿಂದ ಸತ್ಯ ಹರಿಶ್ಚಂದ್ರ ನಾಟಕ

ಮೈಸೂರು: ಚಾಮುಂಡೇಶ್ವರಿ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಜುಲೈ 7 ರಂದು ಸತ್ಯ ಹರಿಶ್ಚಂದ್ರ ನಾಟಕ ಆಯೋಜಿಸಲಾಗಿದೆ.

ಚಾಮುಂಡೇಶ್ವರಿ ಹಬ್ಬದ ಪ್ರಯುಕ್ತ ಹಾಗೂ ದಿವಂಗತ ರಾಕೇಶ್ ಸಿದ್ದರಾಮಯ್ಯ ಹಾಗೂ ಮಾಜಿ ಶಾಸಕ ಎಂ ಸತ್ಯನಾರಾಯಣ ಅವರ ಜ್ಞಾಪಕಾರ್ಥವಾಗಿ 9ನೇ ವರ್ಷದ ಸತ್ಯ ಹರಿಶ್ಚಂದ್ರ ನಾಟಕ ಆಯೋಜನೆಯಾಗಿದ್ದು ಇದರ ಪೋಸ್ಟರ್ ಅನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿದರು.

ಜುಲೈ 7 ರಂದು ಮೈಸೂರಿನ ಇಲವಾಲದ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗ ಸತ್ಯ ಹರಿಶ್ಚಂದ್ರ ನಾಟಕ ಆಯೋಜಿಸಲಾಗಿದೆ ಎಂದು ನಾಟಕ ಮಂಡಳಿಯ ವ್ಯವಸ್ಥಾಪಕರು ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ಸಿನಿರಸಿಕರು ನಾಟಕ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಇಲವಾಲ ಕಾಂಗ್ರೆಸ್ ಮುಖಂಡ ಸುರೇಶ್,ನಾಗವಾಲ ಮಹೇಶ ಮತ್ತು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಶ್ರೀ ಚಾಮುಂಡೇಶ್ವರಿ ಕೃಪಾ ಪೋಷಿತ ನಾಟಕ ಮಂಡಳಿಯಿಂದ ಸತ್ಯ ಹರಿಶ್ಚಂದ್ರ ನಾಟಕ Read More

ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; ಹೆಚ್.ಡಿ.ಕೆ ಆರೋಪ

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿ ದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಸೆಳೆಯಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದಲ್ಲೂ ಇದೇ ಕಥೆ ಎಂದು ಟೀಕಿಸಿದರು

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ,ಈಗ ಅ ವರದಿಗೆ 10 ವರ್ಷ ಆಗಿದೆ,ಇಷ್ಟರಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ, ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ,ಆದರೂ ಇಷ್ಟು ದಿನ ಅದರ ಬಗ್ಗೆ ಸದ್ದೇ ಇರಲಿಲ್ಲ ಎಂದು ವ್ಯಂಗ್ಯವಾಡಿದರು.

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಸವಾಲು ಹಾಕಿದರು.

ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ. ಹರಿಪ್ರಸಾದ್‌ ಅವರು ಈ ರೀತಿ ಹೇಳುವುದು ಏನಿದೆ? ಅದರ ಬದಲು ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; ಹೆಚ್.ಡಿ.ಕೆ ಆರೋಪ Read More