ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ- ಗೀತಾಲಕ್ಷ್ಮೀ ರಾಮಚಂದ್ರನ್

ಮೈಸೂರು: ಯಾವುದೇ ವಿಷಯದಲ್ಲಿ ಪರಿಣಿತಿ ಹೊಂದಿದವರಿಗೆ ವಿದೇಶದಲ್ಲಿ ವಿಪುಲ ಅವಕಾಶ ಲಭ್ಯವಿದೆ ಎಂದು
ದುಬೈನ ಖಾಸಗಿ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ರಾಮಚಂದ್ರನ್ ತಿಳಿಸಿದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಭಾಷೆ ಬಳಕೆ ಹಾಗೂ ಸಮಕಾಲೀನ ಸಮಾಜದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯ ಒಳಿತು ಕೆಡುಕು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದಿನ ದಿನಮಾನದಲ್ಲಿ ಹೆಣ್ಣುಮಕ್ಕಳಿಗೆ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶಗಳ ಮಹಾಪೂರವೇ ಇದೆ. ಆದರೆ ಅದಕ್ಕೆ ಅಗತ್ಯವಾದ ಪರಿಣಿತಿ ಅಗತ್ಯವಿದೆ. ಇದ್ದವರಿಗೆ ಅವಕಾಶ ಸಿಗಲಿದೆ. ಹಾಗಾಗಿ ಆ ಪರಿಣಿತಿ ಪಡೆದುಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಸಂಸ್ಥೆಗಳಿಗಿಂತ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶ ಹೆಚ್ಚಾಗಿವೆ. ಅದರಲ್ಲೂ ಕಾನೂನು ವಿಭಾಗದಲ್ಲಿ ಹೇರಳವಾಗಿವೆ. ಆದ್ದರಿಂದ ಕಾನೂನು ಅಧ್ಯಯನ ಮಾಡುವ ಮೂಲಕ ಅದರ ಅರಿವು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಬದಲಾದ ಕಾಲಮಾನಕ್ಕೆ ತಕ್ಕಂತೆ ಅಂತರ್ಜಾಲ ತಾಣಗಳು ಕುರಿತು ಕಾನೂನು, ಕ್ಲೌಡ್ ಕಾನೂನು, ಡಾಟಾ ಸಂರಕ್ಷಣೆ ಕಾನೂನು ಮತ್ತು ಕೃತಕ ಬುದ್ಧಿಮತ್ತೆ ಕಾನೂನು ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದ ಗೀತಾಲಕ್ಷ್ಮಿ, ಇದನ್ನು ಮಾತೃ ಭಾಷೆ ಜತೆಗೆ ಇತರೆ ಅಂದರೆ ಇಂಗ್ಲಿಷ್ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ಜ್ಞಾನ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಂತ್ರಜ್ಞಾನದ ಹೊಸ ಆವಿಷ್ಕಾರಗಳ ಜತೆಜತೆಗೆ ಭಾಷೆ ಬದಲಾಗುತ್ತದೆ. ಅಲ್ಲದೇ ಅವುಗಳ ಜತೆಗೇ ತೊಂದರೆಗಳು ಕೂಡ ಅಧಿಕ. ಹಾಗಾಗಿ, ತಂತ್ರಜ್ಞಾನ ಬಳಸಿ ಉನ್ನತೀಕರಿಸಿಕೊಳ್ಳುವ ಜತೆಗೆ ಅಪಾಯದ ಬಗ್ಗೆ ಅರಿತು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು ಮಾತನಾಡಿ, ದುರ್ದಿನಗಳು ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಇಂದಿನ ದಿನಗಳಲ್ಲಿ
ಹೆಣ್ಣುಮಕ್ಕಳಿಗೆ ಕಾನೂನು ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಸಮಾಜವನ್ನು ಎದುರಿಸುವುದು ಕಷ್ಟವಾ ಗಲಿದೆ ಎಂದು ಎಚ್ಚರಿಸಿದರು.

ಇದೇ ವೇಳೆ ವಿಭಾಗದ ಪ್ರಾಧ್ಯಾಪಕ ಡಾ.ಪರಶಿವಮೂರ್ತಿ ಎಚ್.ಎಸ್ ಅವರನ್ನು ಸನ್ಮಾನಿಸಲಾಯಿತು.

ಸಹಪ್ರಾಧ್ಯಾಪಕಿ ಡಾ.ಶೋಭಲತ ಎನ್, ಅಧ್ಯಾಪಕ ರಂಗನಾಥ ಎಚ್.ಎಸ್, ಅಧ್ಯಾಪಕ ದಿನೇಶ್ ಎಚ್.ಆರ್,
ವಿಭಾಗದ ಮುಖ್ಯಸ್ಥ ಗೋವಿಂದರಾಜು, ಡಾ. ಆನಂದ್ ಎಚ್. ಸಿ ಮತ್ತು ಅಧ್ಯಾಪಕರು, ಅಧ್ಯಾಪಕೇತರರು,
ಬಿಸಿಎ ಮತ್ತು ಬಿಎಸ್ಸಿ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ- ಗೀತಾಲಕ್ಷ್ಮೀ ರಾಮಚಂದ್ರನ್ Read More

ತಾಯ್ನಾಡಿಗೆ ಅನಿವಾಸಿ ಕನ್ನಡಿಗರ ಕೊಡುಗೆ ಅನನ್ಯ-ಹೆಚ್ ಡಿ ಕೆ

ದುಬೈ: ಹೊರ ದೇಶದಲ್ಲಿ ನೆಲೆಸಿ ತಾಯ್ನಾಡಿಗೆ ಅನನ್ಯ ಕೊಡುಗೆ ನೀಡುತ್ತಿರುವ ಚೈತನ್ಯಶೀಲ ಕನ್ನಡಿಗರ ಸಾಧನೆ ಅತ್ಯಂತ ಶ್ಲಾಘನೀಯ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ಉಕ್ಕು ಸಚಿವಾಲಯದ ಕಾರ್ಯಕ್ರಮದ ನಿಮಿತ್ತ ದುಬೈ ಪ್ರವಾಸದಲ್ಲಿರುವ ಅವರು ಅಲ್ಲಿನ ಅನಿವಾಸಿ ಕನ್ನಡಿಗರನ್ನು ಭೇಟಿ ಮಾಡಿ‌ ಸೌಹಾರ್ದ ಯುತ ಮಾತುಕತೆ ನಡೆಸಿದರು ಮತ್ತು ಅವರ ಕಾರ್ಯಗಳನ್ನು ಶ್ಲಾಘಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಜಗತ್ತಿನ 4ನೇ ದೈತ್ಯ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ,ಈಗ 3ನೇ ಸ್ಥಾನದತ್ತ ನಮ್ಮ ದೇಶ ನಾಗಾಲೋಟದಲ್ಲಿದೆ. ಈ ಹಿನ್ನೆಲೆಯಲ್ಲಿ ಬಲಿಷ್ಠ, ಸಮೃದ್ಧ ಭಾರತ ನಿರ್ಮಾಣಕ್ಕೆ ಕನ್ನಡಿಗರ ಕೊಡುಗೆ ನನಗೆ ಸಂತಸ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ಹೇಳಿದರು.

ತಾಯ್ನಾಡಿಗೆ ಅನಿವಾಸಿ ಕನ್ನಡಿಗರ ಕೊಡುಗೆ ಅನನ್ಯ-ಹೆಚ್ ಡಿ ಕೆ Read More

ದುಬೈನಲ್ಲಿ ಪಾಕಿಸ್ತಾನಿ ಪ್ರಜೆಯಿಂದ ದಾಳಿ: ಇಬ್ಬರು ತೆಲಂಗಾಣ ಯುವಕರು ಸಾವು

ದುಬೈ: ದುಬೈನ ಬೇಕರಿಯೊಂದರಲ್ಲಿ ಪಾಕಿಸ್ತಾನಿ ಪ್ರಜೆ ಧಾರ್ಮಿಕ ಘೋಷಣೆಗಳನ್ನು ಕೂಗಿ ದಾಳಿ ಮಾಡಿದ ಪರಿಣಾಮ ತೆಲಂಗಾಣದ ಇಬ್ಬರು ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದವರನ್ನು ನಿರ್ಮಲ್​ ಜಿಲ್ಲೆಯ ಸೋನ ಗ್ರಾಮದ ಅಷ್ಟಪು ಪ್ರೇಮ್​ಸಾಗರ್​ (35), ಹಾಗೂ ನಿಜಾಮಾಬಾದ್​ನ ಶ್ರೀನಿವಾಸ್​ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ‌ ಸಾಗರ್​ ಎಂಬಾತ‌ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರೇಮಸಾಗರ್​ ಕಳೆದ ಐದಾರು ವರ್ಷಗಳಿಂದ ಘಟನೆ‌ ನಡೆದ ಬೇಕರಿಯಲ್ಲಿ ಉದ್ಯೋಗಿಯಾಗಿದ್ದರು. ಎರಡು ವರ್ಷಗಳ ಹಿಂದೆ ಊರಿಗೆ ಬಂದು ಹೋಗಿದ್ದರಂತೆ.

ಪ್ರೇಮಸಾಗರನ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲು ಸರ್ಕಾರ ಸಹಾಯ ಮಾಡಬೇಕು. ಹಾಗೂ ಪ್ರೇಮಸಾಗರ್​ ಅವರ ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅವರಿಗೆ ನೆರವು ನೀಡಬೇಕು ಎಂದು ಅವರ ಚಿಕ್ಕಪ್ಪ
ಮನವಿ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ಕಿಶನ್​ ರೆಡ್ಡಿ ಅವರು
ದುಃಖ ವ್ಯಕ್ತಪಡಿಸಿದ್ದು, ಪಾರ್ಥೀವ ಶರೀರಗಳನ್ನು ಭಾರತಕ್ಕೆ ತರಲು ಸಹಾಯಕ್ಕಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್​. ಜೈಶಂಕರ್​ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಕಿಶನ್​ ರೆಡ್ಡಿ,ದುಬೈನಲ್ಲಿ ತೆಲಂಗಾಣದ ಇಬ್ಬರು ಯುವಕರು ಹತ್ಯೆಯಾಗಿರುವುದು ತೀವ್ರ ಆಘಾತ ತಂದಿದೆ. ಈ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್​ ಅವರ ಜೊತೆಗೆ ಮಾತನಾಡಿದ್ದೇನೆ. ಅವರು ದುಃಖಿತ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ನೀಡುವ ಹಾಗೂ ಪಾರ್ಥೀವ ಶರೀರಗಳನ್ನು ತುರ್ತು ಭಾರತಕ್ಕೆ ತರಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ದುಬೈನಲ್ಲಿ ಪಾಕಿಸ್ತಾನಿ ಪ್ರಜೆಯಿಂದ ದಾಳಿ: ಇಬ್ಬರು ತೆಲಂಗಾಣ ಯುವಕರು ಸಾವು Read More

ಚಾಂಪಿಯನ್ ಟ್ರೋಪಿಗೆ ಮುತ್ತಿಟ್ಟ ಭಾರತ

ದುಬೈ,ಮಾ.9: ಅಜೇಯ ದಾಖಲೆಯೊಂದಿಗೆ ಫೈನಲ್ ಪ್ರವೇಶಿಸಿದ ಭಾರತ ಕ್ರಿಕೆಟ್ ತಂಡ‌ ಬಲಿಷ್ಟ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಭರ್ಜರಿ ಜಯ ಸಾದಿಸುವ ಮೂಲಕ ಚಾಂಪಿಯನ್ ಟ್ರೋಪಿಗೆ ಮುತ್ತಿಟ್ಟು ಕೋಟ್ಯಂತರ ಅಭಿಮಾನಿಗಳ ಮನತಣಿಸಿದೆ.

ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ‌ 253ರನ್ ಗಳಿಸಿತು.

ನ್ಯೂಜಿಲೆಂಡ್ ತಂಡವನ್ನು ಬೆನ್ನಟ್ಟಿದ ಭಾರತ‌ ತಂಡ 6 ವಿಕೆಟ್ ಕಳೆದುಕೊಂಡು ವಿಜಯ ಪತಾಕೆ ಹಾರಿಸಿತು.

ಇನ್ನೂ ಐದು ಬಾಲ್ ಗಳು ಇರುವಂತೆಯೇ ನಾಲ್ಕು ವಿಕೆಟ್ ಗಳ ಅಂತರದಿಂದ ಭಾರತ ಗೆಲುವಿನ ನಗೆ ಬೀರಿತು.

ದೇಶಾದ್ಯಂತ ಭಾರತದ ಗೆಲುವಿಗೆ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ,ಹೋಮ, ಹವನ ತೆಂಗಿನಕಾಯಿ ಈಡುಗಾಯಿ ಎಲ್ಲಾ ಮಾಡಿಸಿ ಪ್ರಾರ್ಥಿಸಿದ್ದರು

ಅಭಿಮಾನಿಗಳ ಪ್ರಾರ್ಥನೆ ಈಡೇರಿದೆ ನಾಯಕ ರೋಹಿತ್ ಶರ್ಮಾ ಪಡೆ ಭಾರತೀಯರ ಅಭಿಮಾನವನ್ನು ದುಪ್ಪಟ್ಟು ಮಾಡಿದೆ.

ಭಾರತ ಗೆಲುವು ಸಾಧಿಸುತ್ತಿದ್ದಂತೆ‌ ಅಭಿಮಾನಿಗಳು ಪಟಾಕಿ ಸಿಡಿಸಿ‌ ಸಂಭ್ರಮಾಚರಣೆ ಮಾಡಿ ಕುಣಿದು ಕುಪ್ಪಳಿಸಿದರು.

ಚಾಂಪಿಯನ್ ಟ್ರೋಪಿಗೆ ಮುತ್ತಿಟ್ಟ ಭಾರತ Read More