ನಾಡಹಬ್ಬ ದಸರಾ-2025 ಪೋಸ್ಟರ್ ಬಿಡುಗಡೆ

ಮೈಸೂರು: ದಸರಾ ಆಚರಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ಕೆಲವು ಸಲಹೆ, ಸೂಚನೆ ನೀಡಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಮನೆ ಮಂಡಳಿಯಲ್ಲಿ ನಡೆದ ಕಾರ್ಯಕಾರಿ ಸಭೆಯ ಅಧ್ಯಕ್ಷತೆ ವಹಿಸಿ ದಸರಾ ಆಚರಣೆ ಕುರಿತು ಕೆಲವು ಸೂಚನೆ ನೀಡಿದ ಸಚಿವರು, “ನಾಡಹಬ್ಬ ದಸರಾ-2025” ಪೋಸ್ಟರ್ ಬಿಡುಗಡೆ ಮಾಡಿದರು.

ಸಭೆಯಲ್ಲಿ ಪಶುಸಂಗೋಪನೆ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಶ್ರೀವತ್ಸ, ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು, ಡಿಸಿಪಿ ಸುಂದರ್ ರಾಜ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಾಡಹಬ್ಬ ದಸರಾ-2025 ಪೋಸ್ಟರ್ ಬಿಡುಗಡೆ Read More

ಯಶಸ್ವಿಯಾಗಿ ಸಂಪನ್ನಗೊಂಡ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಯನ್ನು ಪ್ರತ್ಯಕ್ಷ,ಪರೋಕ್ಷವಾಗಿ ಕೋಟ್ಯಂತರ ಮಂದಿ ಕಣ್ ತುಂಬಿಕೊಂಡರು.

750 ಕೆ ಜಿ ತೂಕದ ಚಿನ್ನದ ಅಂಬಾರಿ ಒಳಗೆ ವಿರಾಜಮಾನಳಾಗಿದ್ದ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ಆನೆ ರಾಜ ಗಾಂಭಿರ್ಯದಿಂದ ಹೆಜ್ಜೆ ಹಾಕಿದನು.

ಸಂಜೆ ಶುಭ ಕುಂಭ ಲಗ್ನ 5 ಗಂಟೆಗೆ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಉಪ‌ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ,ಸಚಿವ ಶಿವರಾಜ ತಂಗಡಗಿ,ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ,ಮೈಸೂರು ನಗರ ಕಮಿಷನರ್ ಸೀಮಾ ಲಾಟ್ಕರ್ ಅವರು ಕೂಡಾ ತಾಯಿಗೆ ಪುಷ್ಪ ನಮನ ಸಲ್ಲಿಸಿದರು.

ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕ ಬಳಿಕ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಿದರೆ, ಲಕ್ಷ್ಮೀ‌ ಮತ್ತು ಹಿರಣ್ಯ ಕುಮ್ಕಿ ಆನೆಗಳು ಸಾಥ್ ನೀಡಿದವು.ಅಂಬಾರಿ ಹೊತ್ತ ಅಭಿಮನ್ಯುವಿನ ಮುಂದೆ ಉಳಿದ ಗಜಪಡೆ ಸಾಗಿತು.

ರಸ್ತೆಯುದ್ದಕ್ಕೂ ಕಿಕ್ಕಿರಿದು ತುಂಬಿದ್ದ ಜನತೆ ಮಳೆಯನ್ನೂ ಲೆಕ್ಕಿಸದೆ ತಾಯಿ‌ ಚಾಮುಂಡೇಶ್ವರಿ ದೇವಿಗೆ ಜಯಕಾರ ಹಾಕುತ್ತಿದ್ದರು.

ಮರಗಳ ಮೇಲೆ,ಕಟ್ಟಡಗಳ ಮೆಲೆ ಕೂಡಾ ಯುವಕರು ಕುಳಿತು ಶಿಳ್ಳೆ,ಚಪ್ಪಾಳೆ ಹೊಡೆಯುತ್ತಾ ಜಂಬೂಸವಾರಿ ವೀಕ್ಷಿಸಿದರು.

ಸುಮಾರು 5 ಕಿಲೋ ಮೀಟರ್‌‌‌ ವರೆಗೆ ನಾಡಿನ‌ ಶಕ್ತಿ ದೇವತೆ ಚಾಮುಂಡೇಶ್ವರಿ ತಾಯಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಕ್ರಮಿಸಿದ‌ ಅಭಿಮನ್ಯು‌ ರಾತ್ರಿ ವೇಳೆಗೆ ಬನ್ನಿಮಂಟಪ ತಲುಪುವ ಮೂಲಕ ಇತಿಹಾಸ ಪ್ರಸಿದ್ಧ ‌ಜಂಬೂಸವಾರಿ ಮೆರವಣಿಗೆ ಸಂಪನ್ನಗೊಂಡಿತು.

ಯಶಸ್ವಿಯಾಗಿ ಸಂಪನ್ನಗೊಂಡ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ Read More

ಶ್ರೀರಂಗಪಟ್ಟಣ ದಸರಾಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಅದ್ದೂರಿ ದಸರಾಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಾಡದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ನಾಡ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರು ಸರ್ವಾಲಾಲಂಕೃತಗೊಂಡ ಮಹೇಂದ್ರ ಆನೆಯ ಮೇಲೆ ಸಿಂಹಾಸನದೀಶ್ವರಿಯಾಗಿ ಗಜ ಗಾಂಭೀರ್ಯದಿಂದ ರಾಜಮಾರ್ಗದಲ್ಲಿ ಹೆಜ್ಜೆ ಹಾಕಿದಾಗ ಜಾನಪದ ಕಲಾ ತಂಡಗಳು,
ಡೊಳ್ಳು ಕುಣಿತ ಹಾಗೂ ಪೊಲೀಸ್ ವಾದ್ಯ ವೃಂದ ಸಾಥ್ ನೀಡಿದವು.ರಸ್ತೆಗಳ ಎರಡೂ ಬದಿ ಜನತೆ ನಿಂತು ಕಣ್ತುಂಬಿಕೊಂಡರು‌

ಇನ್ನು ಶ್ರೀರಂಗಪಟ್ಟಣದ ಇತಿಹಾಸವನ್ನು ಮೆಲುಕು ಹಾಕಿದ್ದೇ ಆದರೆ ಇವತ್ತಿನ ಶ್ರೀರಂಗಪಟ್ಟಣ ಪೌರಾಣಿಕ ಯುಗದಲ್ಲಿ ಆದಿರಂಗ ವಾಗಿ ಚಾರಿತ್ರಿಕವಾಗಿ ಅಷ್ಟಗ್ರಾಮ ಎಂದು ಕರೆಯಲ್ಪಡುತ್ತಿತ್ತು.

ಕಾವೇರಿ ನದಿ ಸುತ್ತುವರೆದು ಸೃಷ್ಠಿಯಾದ ಈ ಪಟ್ಟಣವು ಪಶ್ಚಿಮದಿಂದ ಪೂರ್ವಕ್ಕೆ ಸುಮಾರು 3 ಮೈಲಿಗಳಷ್ಟು ಉದ್ದ ಮತ್ತು ಉತ್ತರ-ದಕ್ಷಿಣವಾಗಿ ಒಂದು ಮೈಲಿಯಷ್ಟು ಅಗಲವನ್ನು ಹೊಂದಿರುವುದು ವಿಶೇಷವಾಗಿದೆ.

ಶ್ರೀರಂಗಪಟ್ಟಣವನ್ನು ಹೊಯ್ಸಳ ಚಕ್ರವರ್ತಿ ವಿಷ್ಣುವರ್ಧನನ ಸಹೋದರ ಉದಯಾದಿತ್ಯ ಕ್ರಿ.ಶ. 1120ರಲ್ಲಿ ನಿರ್ಮಿಸಿದ್ದರೆ, ಕ್ರಿ.ಶ. 1454ರಲ್ಲಿ ನಾಗಮಂಗಲದ ದೊರೆ ತಿಮ್ಮಣ್ಣ‌ ಶ್ರೀರಂಗಪಟ್ಟಣಕ್ಕೆ ಸುತ್ತಲೂ ಕೋಟೆ ಕಟ್ಟಿಸಿದ. ನಾಲ್ಕು ದ್ವಾರಗಳಿಂದ ಪಟ್ಟಣವನ್ನು ಸುತ್ತುವರೆದಿರುವ ಈ ಬಲವಾದ ಕೋಟೆ ಭಾರತದ ಎರಡನೇ ಅತ್ಯಂತ ಬಲಿಷ್ಟ ಕೋಟೆಯೆಂದು ಪರಿಗಣಿತವಾಗಿದೆ.

ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹಾಗೂ ಖ್ಯಾತ ಜ್ಯೋತಿಷಿ ವೇದ ಬ್ರಹ್ಮ ಶ್ರೀ ಭಾನುಪ್ರಕಾಶ್ ಶರ್ಮ ಗುರುಜಿಯವರ ಅವರ ನೇತೃತ್ವದಲ್ಲಿ ರಾಜ್ಯ, ರಾಷ್ಟ್ರಕ್ಕೆ ಅಭಿವೃದ್ಧಿ ಆಗಲಿ, ಸಕಾಲಕ್ಕೆ ಮಳೆ ಬೆಳೆಯಾಗಲಿ ರೈತರ ಮುಖದಲ್ಲಿ ಮಂದಹಾಸ ಮೂಡಲಿ ಎಂದು ಸಂಕಲ್ಪ ಮಾಡಿ ಅಮ್ಮನವರಿಗೆ ಪುಷ್ಪಾರ್ಚನೆಯನ್ನು ನೆರವೇರಿಸಿದರು.

ನಂತರ ಕಿರಂಗೂರಿನ ಬನ್ನಿ ಮಂಟಪದಿಂದ ಮೈಸೂರು ರಸ್ತೆ ಮಾರ್ಗವಾಗಿ ಶ್ರೀರಂಗಪಟ್ಟಣದ ಕೋಟೆ ಬಾಗಿಲಿನ ಒಳಗಿನಿಂದ ಪೇಟೆ ಬೀದಿಯಲ್ಲಿ ಬಂದು ರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಮಹಾ ಮಂಗಳಾರತಿ ಮಾಡಿ ಅಧಿದೇವತೆಯನ್ನು ಲಾರಿಯ ಮೂಲಕ ದೇವಾಲಯಕ್ಕೆ ಸ್ಥಳಾಂತರಿಸಲಾಯಿತು.

ಮೆರವಣಿಗೆ ವೇಳೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಶ್ರೀರಂಗಪಟ್ಟಣ ದಸರಾಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ Read More

ಅ. 3ರಂದು ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆ-ಮಹದೇವಪ್ಪ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅ.3ಕ್ಕೆ‌ ವಿದ್ಯಕ್ತ ಚಾಲನೆ ದೊರೆಯಲಿದ್ದು, ಸಿದ್ದತಾ ಕಾರ್ಯಗಳು ಅಂತಿಮ ಹಂತಕ್ಕೆ ಬಂದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ಅವರೊಂದಿಗೆ ಮಹದೇವಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಕ್ಟೋಬರ್ 3ರಂದು 9.15ರಿಂದ 9.40 ರ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಕೂಡಾ ಉದ್ಘಾಟನೆಗೊಳ್ಳಲಿವೆ ಎಂದು ತಿಳಿಸಿದರು.

ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನ ಸಿಎಂ ನೀಡಲಿದ್ದಾರೆ. 11ವೇದಿಕೆಗಳಲ್ಲಿ 508 ಕಲಾ ತಂಡಗಳು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ಮಾಡಲಿದ್ದಾರೆ. ಅ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದರು.

ಈ ಬಾರಿ ಏರ್ ಶೋ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ,ಆದರೆ ಇತರೆ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ತಿಳಿಸಿದರು.

ಯುವದಸರಾಕ್ಕೆ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ, ಖ್ಯಾತ ಸಂಗೀತ ನಿರ್ದೇಶಕರು ಭಾಗಿಯಾಗುತ್ತಿದ್ದಾರೆ, ಮಹರಾಜ ಕಾಲೇಜು ಮೈದಾನದಲ್ಲಿ ಟ್ರಾಫಿಕ್ ಸಮಸ್ಯೆ, ಲಾ ಅಂಡ್ ಆರ್ಡರ್ ಗೆ ತೊಂದರೆಯಾಗಬಹುದು ಎಂಬ ಕಾರಣಕ್ಕಾಗಿ ನಗರದ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಯುವ ದಸರಾಕ್ಕೆ ಆಗಮಿಸುವ ಜನರಿಗೆ ಬಸ್ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಮಾಡಲಾಗಿದೆ, ಕಾರ್ಯಕ್ರಮ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನ ನೇಮಕ ಮಾಡುತ್ತೇವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ,
ಸೆ. 26ರಿಂದ ದಸರಾ ಗೋಲ್ಡ್ ಪಾಸ್ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರ ಸ್ಪಂದನೆ ಉತ್ತಮವಾಗಿದೆ. ಈಗಲೂ ಕೂಡ ಆನ್ ಲೈನ್ ನಲ್ಲಿ ಗೋಲ್ಡ್ ಪಾಸ್ ಮಾರಾಟಕ್ಕೆ ಇದೆ. ಪರಿಸ್ಥಿತಿ ನೋಡಿ ದಸರಾ ಗೋಲ್ಡ್ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು ‌ಹೇಳಿದರು.

ಅ. 3ರಂದು ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆ-ಮಹದೇವಪ್ಪ Read More