ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ವಾಪಸ್

ಕೇಪ್ ಕೆನವೆರಲ್: ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3.27ಕ್ಕೆ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು.

ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ್ದರು.ಆದರೆ, ಅವರಿದ್ದ ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿದ್ದರಿಂದ ಅವರು ಅಲ್ಲೇ ಉಳಿಯಬೇಕಾಯಿತು.

ಇದಲ್ಲದೆ, ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮರಳಿದ್ದಾರೆ.

ಐಎಸ್‌ಎಸ್‌ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.

ಕ್ರೂ-9 ಮಾರ್ಚ್ 18, 2025ರಂದು ಬೆಳಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಹ್ಯಾಚ್ ಅನ್ನು ಮುಚ್ಚಿ ಅನ್‌ಡಾಕ್ ಮಾಡುವ ಮೂಲಕ ಭೂಮಿಯ ಕಡೆಗೆ ಪ್ರಯಾಣ ಪ್ರಾರಂಭಿಸಿತು. ಅದಾದ ನಂತರ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭೂಮಿಗೆ ಮರಳಲು ವಿಶೇಷ ವಿಧಾನ ಅಳವಡಿಸಿಕೊಂಡಿತು. ಇದರಿಂದಾಗಿ ನೌಕೆ ಭೂಮಿಯ ವಾತಾವರಣವನ್ನು ಸುರಕ್ಷಿತವಾಗಿ ಪ್ರವೇಶಿಸಿ, ಗೊತ್ತುಪಡಿಸಿದ ಸ್ಥಳದಲ್ಲಿಳಿಯಲು ಸಾಧ್ಯವಾಯಿತು.

ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ವಾಪಸ್ Read More

ಭೂಮಿಗೆ ಮರಳಿದ ಬಾಹ್ಯಾಕಾಶ ನೌಕೆ:ಮುಂದಿನ ವರ್ಷ ಸುನಿತಾ ಆಗಮನ

ನವದೆಹಲಿ: ಬೋಯಿಂಗ್‌ನಲ್ಲಿ ಹಾನಿಗೊಳಗಾದ ಸ್ಟಾರ್‌ಲೈನ‌ರ್ ಕ್ಯಾನ್ಸುಲ್ ನ್ಯೂ ಮೆಕ್ಸಿಕೋದ ವೈಟ್ ಸ್ಯಾಂಡ್ಸ್ ಸ್ಪೇಸ್ ಹಾರ್ಬ‌್ರರ್ ನಲ್ಲಿ ಯಶಸ್ವಿಯಾಗಿ ಇಳಿದಿದೆ ಆದರೆ‌ ಸುನಿತಾ‌ ವಿಲಿಯಮ್ಸ್ ವಾಪಸಾಗಲು ಸಾಧ್ಯವಾಗಿಲ್ಲ ಎಂದು ನಾಸಾ ತಿಳಿಸಿದೆ.

ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ನೋರ್ ಅವರನ್ನು ಬಿಟ್ಟು ಗಗನಯಾನಿ ನೌಕೆ ಬಂದಿದ್ದು, ಮುಂದಿನ ಫೆಬ್ರವರಿಯಲ್ಲಿ ಈ ಗಗನಯಾತ್ರಿಗಳು ಭೂಮಿಗೆ ಮರಳಲಿದ್ದಾರೆ ಎಂದು ನಾಸಾ‌ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ಯಾಪ್ಸುಲ್ ತನ್ನ ಪ್ರಯಾಣವನ್ನು ಪೂರ್ಣಗೊಳಿಸಲು ಆರು ಗಂಟೆಗಳನ್ನು ತೆಗೆದುಕೊಂಡಿತು. ಹೀಲಿಯಂ ಸೋರಿಕೆ ಸೇರಿದಂತೆ ತಾಂತ್ರಿಕ ದೋಷಗಳನ್ನು ಅನುಭವಿಸಿದ ನಂತರ ಬಾಹ್ಯಾಕಾಶ ನೌಕೆಯು ಗಗನಯಾತ್ರಿಗಳಿಲ್ಲದೆಯೇ ಮರಳಿದೆ.

ವಿಕ್ಟೋರ್ ಮತ್ತು ಸುನೀತಾ ವಿಲಿಯಮ್ಸ್ ಐಎಸ್‌ಎಸ್‌ನಲ್ಲಿ ಹೆಚ್ಚುವರಿ ಆಹಾರ ಮತ್ತು ಸರಬರಾಜುಗಳನ್ನು ಹೊಂದಿದ್ದು ಫೆಬ್ರವರಿ 2025 ರಲ್ಲಿ ಸ್ಪೇಸ್‌ಎಕ್ಸ್ ವಾಹನದಲ್ಲಿ ಭೂಮಿಗೆ ಹಿಂತಿರುಗುತ್ತಾರೆ ಎಂದು ನಾಸಾ ಸ್ಪಷ್ಟಪಡಿಸಿದೆ.

ಭೂಮಿಗೆ ಮರಳಿದ ಬಾಹ್ಯಾಕಾಶ ನೌಕೆ:ಮುಂದಿನ ವರ್ಷ ಸುನಿತಾ ಆಗಮನ Read More