ಮಾಜಿ ಸಚಿವ ಎಚ್.ವೈ. ಮೇಟಿ‌ ವಿಧಿವಶ

ಬೆಂಗಳೂರು: ಕಾಂಗ್ರಸ್ ಮುಖಂಡ, ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.

ಅವರಿಗೆ 79 ವರ್ಷ ವಯಸ್ಸಾಗಿತ್ತು, ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಹಾಗೂ ಇತರ ವಯೋಸಹಜ ಕಾಯಿಲೆಯಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಎಂ.ವೈ.ಮೇಟಿ ಅವರು ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 1989ರಲ್ಲಿ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು.

1994ರಲ್ಲಿಯೂ ಆಯ್ಕೆಯಾಗಿದ್ದ ಅವರು, ಅರಣ್ಯ ಇಲಾಖೆ ಸಚಿವರಾಗಿದ್ದರು. 1996 ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ಕ್ಷೇತ್ರ ವಿಂಗಡಣೆ ಸಂದರ್ಭದಲ್ಲಿ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರ ರದ್ದಾಗಿದ್ದರಿಂದ 2008ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಬಾಗಲಕೋಟೆ ವಿಧಸನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತರು.

2013ರಲ್ಲಿ ಗೆಲುವು ಸಾಧಿಸಿ, ಅಬಕಾರಿ ಸಚಿವರಾಗಿದ್ದರು. 2018ರಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

2023ರ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆದ್ದು ಶಾಸಕರಾದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದರು. ಮೇಟಿ ಅವರು ಇಬ್ಬರು ಪುತ್ರತು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗ ಮತ್ತು ‌ಅಭಿಮಾನಿಗಳನ್ನು ಅಗಲಿದ್ದಾರೆ.

ಅನಾರೋಗ್ಯದ ವಿಷಯ ತಿಳಿಯುತ್ತಿದ್ದಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತಿತರರು‌ ಆಸ್ಪತ್ರೆಗೆ ‌ಭೇಟಿ ನೀಡಿ ಆರೋಗ್ಯ‌‌‌ ವಿಚಾರಿಸಿದ್ದರು.

ಚಿಕಿತ್ಸೆ ‌ಫಲಕಾರಿಯಾಗದೆ ಇಂದು ಮೇಟಿ ಇಹಲೋಕ ತೆಜಿಸಿದ್ದಾರೆ.

ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಎಚ್.ವೈ. ಮೇಟಿ‌ ವಿಧಿವಶ Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕಕ್ಕೆ ಭೇಟಿ ನೀಡಿದ ಮಾಜಿ ಸಚಿವ ನಿರಾಣಿ

ಮೈಸೂರು: ಮೈಸೂರಿನ ಊಟಿ ರಸ್ತೆಯಲ್ಲಿರುವ ಮೈಸೂರು ಅರಸರ ಸಮಾಧಿಗಳಿರುವ ಚಾರಿತ್ರಿಕ ಮಹತ್ವದ ಮನುವನ ದಲ್ಲಿರುವ ಸ್ಮಾರಕಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಭೇಟಿ ನೀಡಿದರು.

ಮೈಸೂರಿನಲ್ಲಿ ನಡೆದ ಜನಾಕ್ರೋಶ ಸಮಾವೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅರಸರ ಸಮಾಧಿಗಳಿರುವ ಚಾರಿತ್ರಿಕ ಮಹತ್ವದ ಮನುವನ ದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕಕ್ಕೆ ಉದ್ಯಮಿಗಳೂ ಆದ ಮುರುಗೇಶ್ ನಿರಾಣಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು
ಮರೆಯೋದುಂಟೆ ಮೈಸೂರು ದೊರೆಯ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಎಂದು ಸ್ಮರಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ
ಕರ್ನಾಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದ ಮೈಸೂರು ಸಂಸ್ಥಾನದ ಮಹಾರಾಜ ಅವರ ಹೆಸರಿನಲ್ಲಿ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದೆ
ಹಾಗೂ ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲು ಮನವಿ ಕೋರಿದ್ದೆ ಎಂದು ಮುರುಗೇಶ್ ನಿರಾಣಿ ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕಕ್ಕೆ ಭೇಟಿ ನೀಡಿದ ಮಾಜಿ ಸಚಿವ ನಿರಾಣಿ Read More

ವಿಪಕ್ಷ ಅಷ್ಟೇ ಅಲ್ಲ; ಆಡಳಿತ ಪಕ್ಷದವರ ಫೋನ್ ಕೂಡ ಟ್ಯಾಪ್ ಮಾಡಲಾಗುತ್ತಿದೆ-ಶ್ರೀರಾಮುಲು

ಬೆಂಗಳೂರು: ವಿಪಕ್ಷನಾಯಕರ ಫೋನ್ ಅಷ್ಟೆ ಅಲ್ಲ, ಆಡಳಿತ ಪಕ್ಷದವರ ಫೋನನ್ನು ಕೂಡ ಟ್ಯಾಪ್ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ದೂರಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಕೇವಲ ವಿಪಕ್ಷ ನಾಯಕರ ಫೋನ್ ಅಷ್ಟೆ ಕದ್ದಾಲಿಕೆ ಮಾಡುತ್ತಿಲ್ಲ. ಆಡಳಿತ ಪಕ್ಷದವರ ಫೋನ್ ಕೂಡ ಕದ್ದಾಲಿಕೆ ಆಗುತ್ತಿದೆ ಕುರ್ಚಿ ಉಳಿಸಿಕೊಳ್ಳಲು ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂದು ಕಿಡಿಕಾರಿದರು.

ಸಿಟಿ ಫ್ಯಾಕ್ಟರಿ ಕುರಿತು ಸಮಗ್ರ ತನಿಖೆಯಾಗಕು,ಹನಿಟ್ರ್ಯಾಪ್ ಕೇಸ್ ಅನ್ನ ಸಿಬಿಐ ತನಿಖೆ ಆಗಬೇಕು ಹನಿಟ್ರ್ಯಾಪ್ ಮಾಡಿದ ಆರೋಪಿಗಳನ್ನ ಪತ್ತೆ ಹಚ್ಚಬೇಕು ಎಂದು ಶ್ರೀರಾಮುಲು ಒತ್ತಾಯಿಸಿದರು.

ವಿಪಕ್ಷ ಅಷ್ಟೇ ಅಲ್ಲ; ಆಡಳಿತ ಪಕ್ಷದವರ ಫೋನ್ ಕೂಡ ಟ್ಯಾಪ್ ಮಾಡಲಾಗುತ್ತಿದೆ-ಶ್ರೀರಾಮುಲು Read More

ಹನಿಟ್ರ‍್ಯಾಪ್‌ ಡೈರೆಕ್ಟರ್, ಪ್ರೊಡ್ಯುಸರ್ ಯಾರಂತ ಗೊತ್ತಾಗಲು ಸಿಬಿಐ ತನಿಖೆ ಅಗತ್ಯ: ಶ್ರೀರಾಮುಲು

ಯಾದಗಿರಿ: ಹನಿಟ್ರ‍್ಯಾಪ್‌ನ ಡೈರೆಕ್ಟರ್ ಮತ್ತು ಪ್ರೊಡ್ಯುಸರ್ ಯಾರು ಅಂತ ಗೊತ್ತಾಗಬೇಕಾದರೆ ಸಿಬಿಐ ತನಿಖೆ ಆಗಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಒತ್ತಾಯಿಸಿದ್ದಾರೆ.

ಜಿಲ್ಲೆಯ ಮಹಲ್ ರೋಜಾದಲ್ಲಿ ಹನಿಟ್ರ‍್ಯಾಪ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ‍್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ರಾಜ್ಯದಲ್ಲಿ ಇದೊಂದು ಫ್ಯಾಷನ್, ಒಂದು ಟ್ರೆಂಡ್ ಆಗಿದೆ. ಹನಿಟ್ರ‍್ಯಾಪ್ ಪ್ರಕರಣದಿಂದ ಇಡೀ ರಾಜ್ಯದ ಜನ ಅಸಹ್ಯಪಡುವ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಯಾವುದೇ ಪಕ್ಷದವರಿದ್ದರೂ ಈ ರೀತಿ ಹನಿಟ್ರ‍್ಯಾಪ್‌ನಿಂದ ಮುಜುಗರ ಆಗುತ್ತದೆ. ರಾಜಕೀಯದಲ್ಲಿ ಹಲವು ವರ್ಷಗಳಿಂದ ಜನರ ಪ್ರೀತಿಗಳಿಸಿ, ದೊಡ್ಡ ಮಟ್ಟಕ್ಕೆ ಬೆಳೆದಿದ್ದೀವಿ.ಹಾಗಿರುವಾಗ ಹನಿಟ್ರ‍್ಯಾಪ್‌ ವಿಷಯಗಳನ್ನು ತಂದು ಮನಸ್ಸಿಗೆ ನೋವು ಮಾಡುವ ಕೆಲಸವನ್ನು ಕೆಲವು ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದು ಬೇಸರ ಪಟ್ಟರು.

ಯಾವುದೇ ಪಕ್ಷದವರು ಇರಲಿ ಸಿಬಿಐ ತನಿಖೆ ಮಾಡಬೇಕು. ಜನಪ್ರತಿನಿಧಿಗಳಿಗೆ ರಕ್ಷಣೆ ಕೊಡಬೇಕು, ಅವರ ಮೇಲಿನ ವಿಶ್ವಾಸ ಉಳಿಸಬೇಕು. ಅದಕ್ಕಾಗಿ ಈ ಹನಿಟ್ರ‍್ಯಾಪ್‌ಗೆ ಕಡಿವಾಣ ಹಾಕಬೇಕು. ಸಿಬಿಐ ತನಿಖೆಯಾದರೆ ಇದರ ಹಿಂದೆ ಯಾರಿದ್ದಾರೆಂದು ಹೊರಗಡೆ ಬರುತ್ತದೆ ಎಂದು ಶ್ರೀರಾಮುಲು ಹೇಳಿದರು.

ಇದಕ್ಕಿಂತ ಮುಂಚೆ ಅನೇಕರಿಗೆ ಹನಿಟ್ರ‍್ಯಾಪ್ ಆಗಿದೆ. ಹಿಂದುಳಿದ ಜಾತಿಯ ವ್ಯಕ್ತಿಗಳಾದ ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ, ಇದೀಗ ಸಚಿವ ರಾಜಣ್ಣ ಅವರ ಮೇಲೆ ಹನಿಟ್ರ‍್ಯಾಪ್‌ ಯತ್ನ ನಡೆದಿದೆ. ಪಕ್ಷಾತೀತಿವಾಗಿ ರಾಜಕಾರಣಿಗಳಿಗೆ ಈ ರೀತಿ ಆದರೆ ನೋವು ಉಂಟಾಗುತ್ತದೆ. ಇದಕ್ಕೆ ಯಾರು ಡೈರೆಕ್ಟರ್, ಯಾರು ಪ್ರೊಡ್ಯುಸರ್, ಈ ಹನಿಟ್ರ‍್ಯಾಪ್ ಫ್ಯಾಕ್ಟರಿಯನ್ನು ಯಾರು ಇಟ್ಟುಕೊಂಡಿದ್ದಾರೆ ಎನ್ನೋದು ಹೊರಬರಬೇಕಾದರೆ ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಕುರಿತು ಮಾತನಾಡಿ, ಸಭಾಪತಿಗಳಿಗೂ ಹನಿಟ್ರ‍್ಯಾಪ್‌ನಿಂದ ಮುಜುಗರ ಆಗಿದೆ. ಇದರಿಂದ ಅವರಿಗೂ ತೊಂದರೆ ಆಗುತ್ತದೆ. 30-40 ವರ್ಷ ರಾಜಕಾರಣದಲ್ಲಿದ್ದು, ಸಭಾಪತಿಗಳಾಗಿರುತ್ತಾರೆ. ಹನಿಟ್ರ‍್ಯಾಪ್ ಬೇರೆ ಬೇರೆ ವಿಚಾರ ಬಂದಾಗ ಮುಜುಗರ ಆಗುತ್ತದೆ. ಹೊರಟ್ಟಿಯವರು ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಯಾರಿಗೂ ನೋವು ಆಗಬಾರದು ಅಂದರೆ ಸಿಬಿಐ ತನಿಖೆಗೆ ಕೊಡಬೇಕು ಎಂದು ಹೇಳಿದರು.

ಹನಿಟ್ರ‍್ಯಾಪ್‌ ಡೈರೆಕ್ಟರ್, ಪ್ರೊಡ್ಯುಸರ್ ಯಾರಂತ ಗೊತ್ತಾಗಲು ಸಿಬಿಐ ತನಿಖೆ ಅಗತ್ಯ: ಶ್ರೀರಾಮುಲು Read More

ಹನಿಟ್ರ್ಯಾಪ್ ಆರೋಪ ಕಲಬುರಗಿ ಕಾಂಗ್ರೆಸ್ ನಾಯಕಿ,ಪತಿ ಬಂಧನ

ಕಲಬುರಗಿ: ಮಾಜಿ ಸಚಿವರೊಬ್ಬರಿಗೆ ಹನಿಟ್ರಾಪ್ ಮಾಡಿದ ಆರೋಪದಲ್ಲಿ ಕಲಬುರಗಿ ಕಾಂಗ್ರೆಸ್ ‌ನಾಯಕಿ ಮತ್ತು ‌ಆಕೆಯ ಪತಿಯಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಸಿಸಿಬಿ ಪೊಲೀಸರು ಕಲಬುರಗಿ ನಲಪಾಡ್‌ ಬ್ರಿಗೇಡ್‌ ಅಧ್ಯಕ್ಷೆ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ ಶುವರಾಜ್ ಪಾಟೀಲ್ ನನ್ನು ಹನಿಟ್ರ್ಯಾಪ್ ಆರೋಪದ ಮೇಲೆ ಬಂಧಿಸಿದ್ದಾರೆ.

ಈಕೆ ಮೊದಲಿಗೆ ವಾಟ್ಸ್ ಆಪ್ ನಲ್ಲಿ ಮಾಜಿ ಸಚಿವರೊಂದಿಗೆ ಚಾಟ್ ಆರಂಭ ಮಾಡಿ ಸಲುಗೆ ಬೆಳೆಸಿಕೊಂಡು ನಂತರ ವಿಡಿಯೋ ಕಾಲ್ ಮಾಡಲು ಆರಂಭಿಸಿದ್ದಾಳೆ.

ನಂತರ ಖಾಸಗಿ ಕ್ಷಣಗಳನ್ನ ವಿಡಿಯೋ ಚಿತ್ರಿಕರಿಸಿಕೊಂಡು ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದಾಳೆ, ನನ್ನ ಬಳಿ ನಿಮ್ಮ ವಿಡಿಯೋ ಇದೆ. 20 ಲಕ್ಷ ಕೊಡಬೇಕು ಇಲ್ಲದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾಳೆ.

ಈ ಬಗ್ಗೆ ಮಾಜಿ ಸಚಿವರ ಪುತ್ರ ಸಿಸಿಬಿಗೆ ದೂರು ನೀಡಿದ್ದಾರೆ. ನಂತರ 20 ಲಕ್ಷ ನೀಡುವುದಾಗಿ ಈಕೆಯನ್ನು ಬೆಂಗಳೂರಿಗೆ ಕರೆಸಿ, ಹಣ ಪಡೆಯಲು ಬೆಂಗಳೂರಿಗೆ ಬಂದ ಮಂಜುಳಾ ಮತ್ತು ಆಕೆಯ ಪತಿ ಶಿವರಾಜ್ ಪಾಟೀಲ್ ನನ್ನು ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಹನಿಟ್ರ್ಯಾಪ್ ಆರೋಪ ಕಲಬುರಗಿ ಕಾಂಗ್ರೆಸ್ ನಾಯಕಿ,ಪತಿ ಬಂಧನ Read More