ಸೆಕ್ಸ್ ಗೆ ಸಹಕರಿಸು ಎಂದ ಕಾರ್ಖಾನೆ ಮಾಲೀಕನ ವಿರುದ್ದ ಮಹಿಳೆ ದೂರು

ಮೈಸೂರು: ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಿಸೈಸ್ ಗೇರ್ಸ್ ಅಂಡ್ ಸಲ್ಯೂಷನ್ಸ್ ಮ್ಯಾನುಫ್ಯಾಕ್ಚರ್ ಕಂಪನಿ ಮಾಲೀಕ ಮುರಳಿಧರ್ ಎಂಬುವರ ಮೇಲೆ ನೊಂದ ಮಹಿಳಾ ಉದ್ಯೋಗಿ ಪ್ರಕರಣ ದಾಖಲಿಸಿದ್ದಾರೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಗೆ ಮಾಲೀಕ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ.ಸೆಕ್ಸ್ ನಲ್ಲಿ ಸಹಾಯ ಮಾಡಿದ್ರೆ ಚೆನ್ನಾಗಿ ನೋಡಿಕೊಳ್ತೀನಿ ಎಂದು ಒತ್ತಾಯಿಸಿದ್ದಾರೆ.

ಮೊಬೈಲ್ ಗಳಿಂದ ಮೆಸೇಜ್ ಮಾಡಿದ್ದಾರೆ.ಇದರಿಂದ ನೊಂದ ಉದ್ಯೋಗಿ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಾರೆ.ಹೀಗಿದ್ದೂ ಬಿಡದ ಮಾಲೀಕ ಮುರಳಿಧರ್ ಮಹಿಳೆ ಹಿಂದೆ ಬಿದ್ದಿದ್ದಾನೆ.
ಮನೆಗೆ ಬಂದು ಕೆಲಸಕ್ಕೆ ಹಿಂದಿರುಗು ಇಲ್ಲದಿದ್ದರೆ ನಿನ್ನ ಬಗ್ಗೆ ಅಪಪ್ರಚಾರ ಮಾಡುವುದಾಗಿ ಹೆದರಿಸಿದ್ದಾನೆ.

ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಿರುವ ನೊಂದ ಮಹಿಳಾ ಉದ್ಯೋಗಿ ಮಾಲೀಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹೆಬ್ಬಾಳ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಸೆಕ್ಸ್ ಗೆ ಸಹಕರಿಸು ಎಂದ ಕಾರ್ಖಾನೆ ಮಾಲೀಕನ ವಿರುದ್ದ ಮಹಿಳೆ ದೂರು Read More

ಗುಜರಾತ್​: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ-15ಕ್ಕೂ ಹೆಚ್ಚು ಮಂದಿ ಸಾವು

ಪಲನ್ಪುರ್​​ (ಗುಜರಾತ್​): ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಬನಸ್ಕಾಂತದ ದೀಸಾ ನಗರದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟವಾಗಿ ಸುಮಾರು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ದೀಸಾ ನಗರದಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಸ್ಪೋಟ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಚಾವಣಿ ಕುಸಿದಿದೆ. ಹಾಗಾಗಿ ಅನೇಕ ಮಂದಿ ಇದರ ಅಡಿ ಸಿಲುಕಿದ್ದಾರೆ ಎಂದು ದೀಸಾ ಉಪವಿಭಾಗೀಯ ಮ್ಯಾಜಿಸ್ಟ್ರೇಟರ್​ ನೆಹಾ ಪಂಚಲ್​ ತಿಳಿಸಿದ್ದಾರೆ.

ಮಾಹಿತಿ ತಿಳಿದು, ಬನಸ್ಕಾಂತ ಜಿಲ್ಲಾಧಿಕಾರಿ, ಜಿಲ್ಲಾ ಅಭಿವೃದ್ಧಿ ಅಧಿಕಾರಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸ್ಥಳದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ತಂಡ ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಅನೇಕ ಕಾರ್ಮಿಕರ ದೇಹದ ಭಾಗಗಳು ಚದುರಿಹೋಗಿವೆ. ಅಲ್ಲದೆ, ಗೋದಾಮಿನ ಅವಶೇಷಗಳು 200 ಮೀಟರ್ ದೂರದವರೆಗೆ ಹೋಗಿಬಿದ್ದಿವೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸ್ಫೋಟಕ್ಕೆ ಕಾರಣವೇನೆಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವನ್ನಪ್ಪಿದ ಬಡ ಕಾರ್ಮಿಕರ ಕುಟುಂಬಗಳು ಶೋಕಸಾಗರದಲ್ಲಿ ಮುಳುಗಿವೆ.

ಗುಜರಾತ್​: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ-15ಕ್ಕೂ ಹೆಚ್ಚು ಮಂದಿ ಸಾವು Read More