ಕಾಂಗ್ರೆಸ್ ಸರ್ಕಾರದ ವಿರುದ್ಧ; ಜೆಡಿಎಸ್ ಬೃಹತ್ ಪ್ರತಿಭಟನೆ:ನಿಖಿಲ್ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ

ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷ ವಾಕ್ಯದೊಂದಿಗೆ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು.

ಅಲ್ಲದೆ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಸಂಸದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಅನೇಕ ನಾಯಕರು ಅಸಂಖ್ಯಾತ ಕಾರ್ಯಕರ್ತರು ಭಾಗಿಯಾಗಿದ್ದರು.

ಪ್ರತಿಭಟನೆ ವೇಳೆ ಸುರೇಶ್ ಬಾಬು, ಹೆಚ್.ಡಿ. ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್, ಹಿರಿಯ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಎ ತಿಪ್ಪೇಸ್ವಾಮಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಅನೇಕ ಮುಖಂಡರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಐದು ಗ್ಯಾರಂಟಿ ಕೊಟ್ಟಿದೆ ನಿಜ. ಆದರೆ, ಗ್ಯಾರಂಟಿ ಪಡೆದ ಪಾಪಕ್ಕೆ ಜನರು ದಿನನಿತ್ಯ ಬೆಲೆ ಏರಿಕೆ ಬರೆಗೆ ತುತ್ತಾಗುತ್ತಿದ್ದಾರೆ. ದಿನಕ್ಕೊಂದು ದರ ಏರಿಕೆ ಮಾಡುತ್ತಿದ್ದಾರೆ. ಕೊಟ್ಟಿದ್ದು ಅಲ್ಪವಾದರೂ ಜನರ ಮೇಲೆ ಬೆಟ್ಟದಷ್ಟು ಹೇರಿಕೆ ಮಾಡಿದ್ದಾರೆ. ಇದನ್ನು ಸಹಿಸುವ ಅಗತ್ಯ ಇಲ್ಲ. ಜನರು ಸರ್ಕಾರದ ವಿರುದ್ಧ ದಂಗೆ ಏಳದೇ ಬೇರೆ ದಾರಿ ಇಲ್ಲ ಎಂದು ನಾಯಕರು ಕರೆ ನೀಡಿದರು.

ಎಲ್ಲೆಡೆ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಫಲಕಗಳು ರಾರಾಜಿಸಿದವು.

ಪ್ರತಿಭಟನಾ ಸಭೆ ಮುಕ್ತಾಯವಾದ ನಂತರ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.ಆದರೆ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.

ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಶಾಸಕರಿಗೆ ಆಮಿಷ ಒಡ್ಡುತ್ತಿರುವ ಬಗ್ಗೆ ನೇರ ಆರೋಪ ಮಾಡಿದರು.

ನಾನು ನನ್ನ ಕ್ಷೇತ್ರಕ್ಕೆ ಪಾಲಿಟೆಕ್ನಿಕ್ ಕಾಲೇಜು ಕೊಡಿ ಎಂದು ಕೇಳಿದರೆ ಕಾಂಗ್ರೆಸ್ ಪಕ್ಷಕ್ಕೆ ಬಾ ಎಂದು ಕರೆಯುತ್ತಾರೆ ಸಿದ್ದರಾಮಯ್ಯ. ಒಬ್ಬ ಮುಖ್ಯಮಂತ್ರಿ ಹೀಗೆ ಮಾಡಬಹುದಾ ಎಂದು ಬೇಸರ ವ್ಯಕ್ತಪಡಿಸಿದರು.

ಯಾಕಪ್ಪ ಕಾಂಗ್ರೆಸ್ಸೂ,ಅದು ಮುಳುಗುತ್ತಿರುವ ಪಕ್ಷ. ನಾನು ಇನ್ನೂ ಇಪ್ಪತ್ತು ವರ್ಷಗಳಾದರೂ ಜೆಡಿಎಸ್ ನಲ್ಲಿಯೇ ಇರುತ್ತೇನೆ ಎಂದು ಕೃಷ್ಣಪ್ಪ ಕಡಕ್ಕಾಗೇ ಹೇಳಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ; ಜೆಡಿಎಸ್ ಬೃಹತ್ ಪ್ರತಿಭಟನೆ:ನಿಖಿಲ್ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ Read More

ಕೇಂದ್ರ, ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ಆಪ್ ತೀವ್ರ ಪ್ರತಿಭಟನೆ

ಬೆಂಗಳೂರು, ಏ.5: ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳ ಇತ್ತೀಚಿನ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ, ವಿದ್ಯುತ್ ,ನೀರಿನ ದರ ಹೆಚ್ಚಳ, ಮೆಟ್ರೋ, ಆಸ್ತಿ ತೆರಿಗೆ, ಟೋಲ್, ವೀಸಾ ಶುಲ್ಕಗಳು , ರೈತರ ಪಂಪ್ಸೆಟ್ ಇತ್ಯಾದಿ ಬೆಲೆ ಏರಿಸಿರುವುದನ್ನು ಖಂಡಿಸಿ ಆಪ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಹೀಗೆ ಬೆಲೆ ಏರಿಸಿ,ಜನಸಾಮಾನ್ಯರಿಗೆ ಬರೆ ಎಳೆದಂತಾಗಿದೆ ಹಾಗೂ ಜನಸಾಮಾನ್ಯನ ಹಗಲು ದರೋಡೆ ಎಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ
ಆಕ್ರೋಶವನ್ನು ವ್ಯಕ್ತಪಡಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿದ್ಧ ಪ್ರತಿಭಟನೆಯ ನೇತೃತ್ವವನ್ನು ವಹಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ಸರ್ಕಾರಿ ಖಜಾನೆಯನ್ನು ಭರ್ತಿ ಮಾಡಿಕೊಂಡು ಕಾಮಗಾರಿಗಳ ನೆಪದಲ್ಲಿ ಭ್ರಷ್ಟಾಚಾರ ಮಾಡುವ ಸಲುವಾಗಿ ತಮ್ಮದೇ ಪ್ರಜೆಗಳ ಮೇಲೆ ತುಘಲಕ್ ಮಾದರಿಯ ತೆರಿಗೆಗಳನ್ನು ಹೇರಿ ,ಎಲ್ಲ ದರಗಳನ್ನು ಹೆಚ್ಚಿಸುವ ಮೂಲಕ ದರೋಡೆ ಪ್ರವೃತ್ತಿಗೆ ಇಳಿದಿರುವುದು ದೇಶಕ್ಕೆ ಮಾರಕವಾಗಿದೆ ಎಂದು ಸೀತಾರಾಮ್ ಗುಂಡಪ್ಪ ಕಳವಳ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಂಗಳೂರಿನ ನಗರ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಪಕ್ಷವು ಸರ್ಕಾರದ ಈ ನಡೆಯ ವಿರುದ್ಧ ಜನಾಂದೋಲನವನ್ನು ಕೈಗೊಳ್ಳಲು ಮತದಾರರುಗಳ ಬಳಿ ಹೋಗಿ ಜನಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತೇವೆ. ಈ ಮೂಲಕ ಸರ್ಕಾರಗಳಿಗೆ ತಕ್ಕ ಪಾಠವನ್ನು ಕಲಿಸುವ ಕಾಲ ಸನಿಹದಲ್ಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆ ವೇಳೆ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರು, ಮುಖ್ಯ ಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳ ಮುಖವಾಡ ಧರಿಸಿ ಅಣಕು ಪ್ರದರ್ಶನ ಮಾಡಿದರು.

ತಮಟೆ‌ ಬಾರಿಸಿ ಘೋಷಣೆಗಳನ್ನು ಕೂಗಲಾಯಿತು.ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ, ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿ ಮಠ, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಅಶೋಕ್ ಮೃತ್ಯುಂಜಯ, ಶಶಿಧರ್ ಆರಾಧ್ಯ, ಅನಿಲ್ ನಾಚಪ್ಪ, ವೀಣಾ ಸರಾವ್, ಸತ್ಯ ವಾಣಿ, ಪುಷ್ಪಕೇಶವ, ಡಾ.ಎಲ್ಲಪ್ಪ ,ಜಗದೀಶ್ ಬಾಬು, ಶಮೀರ್ ಖಾನ್, ದೊಮ್ಮಲೂರು ಶಿವಕುಮಾರ್, ಗುರುಮೂರ್ತಿ ನೆರಳದ, ಸಿದ್ದು ಸೇರಿದಂತೆ ಅನೇಕ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಕೇಂದ್ರ, ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ಆಪ್ ತೀವ್ರ ಪ್ರತಿಭಟನೆ Read More

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ:ಬೆಲೆ ಏರಿಕೆ ಮೂಲಕ ಲೂಟಿ-ಅಶೋಕ್

ಬೆಂಗಳೂರು, ಏ.2: ಕಾಂಗ್ರೆಸ್ ಚುನಾವಣೆಗೆ ಮುನ್ನ ಬೆಲೆ ಏರಿಕೆ ಮಾಡಲ್ಲ, ಐದು ಗ್ಯಾರಂಟಿ ಕೊಡುತ್ತೇವೆ ಎಂದು ಹೇಳಿ ಎರಡು ವರ್ಷಗಳಲ್ಲಿ ಹಾಲಿನ ದರ ಮೂರು ಬಾರಿ ಏರಿಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಸರ್ಕಾರದಲ್ಲಿ 136 ಜನ ಕಳ್ಳರು ಇದ್ದಾರೆ, ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ, ಅದಕ್ಕಾಗಿ ಬೆಲೆ ಏರಿಕೆ ಮೂಲಕ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ನಗರದ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿ ವೇಳೆ ಮಾತನಾಡಿದ ಅಶೋಕ್, ಬಜೆಟ್ ನಲ್ಲಿ ಯಾವುದೇ ತೆರಿಗೆ ತೋರಿಸದೆ ಇದೀಗ ಬೆಲೆ ಏರಿಕೆ ಮಾಡಲಾಗಿದೆ,ಐದು ಗ್ಯಾರಂಟಿಗಾಗಿ ಕರ್ನಾಟಕದ ಮನೆ ಮನೆ ಲೂಟಿ ಆಗ್ತಿದೆ ಎಂದು ಗುಡುಗಿದರು.

ಸಚಿವರು ಅಂಗಡಿ ತೆರೆದಿದ್ದಾರೆ. ಶೇ.40 ಆರೋಪಕ್ಕೆ ಸಾಕ್ಷಿ ಇಲ್ಲ, ಆದರೆ ಕಾಂಗ್ರೆಸ್ ಸರ್ಕಾರ ಶೇ.60 ರಷ್ಟು ಕಮಿಷನ್ ಪಡೆದುಕೊಳ್ಳುತ್ತಿದೆ. ಸ್ಮಾರ್ಟ್ ಮೀಟರ್ ನಲ್ಲಿ 15,000 ಹಗರಣ ನಡೆದಿದೆ. ಸಿದ್ದರಾಮಯ್ಯ ಹೆಸರಿಗಷ್ಟೇ ಸಿಎಂ, ಸರ್ಕಾರ ಗಾಲಿ ಕುರ್ಚಿಯಲ್ಲಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷ ತನ್ನ ಓಲೈಕೆ ರಾಜಕಾರಣಕ್ಕಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಯಾವ ಜಮೀನನ್ನು ಬೇಕಾದರೂ ವಕ್ಫ್ ಬೋರ್ಡ್ ಆಸ್ತಿ ಎಂದು ಘೋಷಣೆ ಮಾಡಿಕೊಳ್ಳುವ ಅವಕಾಶ ಕೊಟ್ಟಿತ್ತು. ಇದರಿಂದ ರೈತರ ಜಮೀನು, ದೇವಸ್ಥಾನ, ಮಠ-ಮಂದಿರಗಳ ಆಸ್ತಿ ಎಲ್ಲ ಕಬಳಿಕೆ ಆಗುತ್ತಿತ್ತು. ಈಗ ಎನ್ ಡಿಎ ಸರ್ಕಾರ ತಂದಿರುವ ತಿದ್ದುಪಡಿಯಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ, ಮಠ ಮಾನ್ಯಗಳ ಜಮೀನು ಸುರಕ್ಷಿತವಾಗಿ ಉಳಿಯಲಿದೆ,ಅದಕ್ಕಾಗಿ ಪ್ರಧಾನಮಂತ್ರಿಗಳಿಗೆ, ಕೇಂದ್ರ ಗೃಹ ಸಚಿವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಶೋಕ್ ತಿಳಿಸಿದರು.

ಧರಣಿ ವೇಳೆ ತಮಟೆ ಬಾರಿಸಿ ಗೀತೆಗಳನ್ನು ಹಾಡಿ ಬಿಜೆಪಿಗರು ಸರ್ಕಾರ ಹಾಗೂ ಸಿಎಂ,ಡಿಸಿಎಂ ಮುಖವಾಡಗಳನ್ನು ಧರಿಸಿ ಅಣಕು ಪ್ರದರ್ಶನ ಕೂಡಾ ಮಾಡಿದ್ದು ವಿಶೇಷವಾಗಿತ್ತು.

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ:ಬೆಲೆ ಏರಿಕೆ ಮೂಲಕ ಲೂಟಿ-ಅಶೋಕ್ Read More

ಕೆ.ಎ.ಎಸ್ ಪರೀಕ್ಷಾರ್ಥಿಗಳ ಹೋರಾಟಕ್ಕೆಆಮ್ ಆದ್ಮಿ ಪಕ್ಷ ಸಾಥ್

ಬೆಂಗಳೂರು: ಕೆ.ಎ.ಎಸ್ ಪರೀಕ್ಷಾರ್ಥಿಗಳ ಪ್ರಶ್ನೆ ಪತ್ರಿಕೆಗಳಲ್ಲಿನ ನಿರಂತರ ಭಾಷಾಂತರ ಲೋಪ ಸೇರಿದಂತೆ ಇತರೆ ಬೇಡಿಕೆಗಳಿಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ಬೆಂಬಲ ಸೂಚಿಸಿತು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೆ.ಎ.ಎಸ್ ಪರೀಕ್ಷಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸೇರಿದಂತೆ ಪಕ್ಷದ ಅನೇಕ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.

ಈ‌ ವೇಳೆ ಕೆ.ಎ.ಎಸ್ ಪರೀಕ್ಷಾರ್ಥಿಗಳೊಂದಿಗೆ ಸೇರಿ ಆಪ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಬೇಕೇ ಬೇಕು ನ್ಯಾಯ ಬೇಕು ಎಲ್ಲಿಯವರೆಗೂ ಹೋರಾಟ ಗೆಲ್ಲುವವರೆಗೂ ಹೋರಾಟ,ದಿಕ್ಕಾರ,ದಿಕಾರ‌ ಕೆ ಪಿ‌ ಎಸ್ ಸಿ ಗೆ ದಿಕ್ಕಾರ ಹೀಗೆ ಅನೇಕ ಘೋಷಣೆಗಳನ್ನು ಮುಖ್ಯ ಮಂತ್ರಿ ಚಂದ್ರು ಸೇರಿದಂತೆ ಎಲ್ಲಾ ಪ್ರತಿಭಟನಾ ನಿರತರು ಕೂಗಿದರು.

ಇದೇ ವೇಳೆ ಮುಖ್ಯ ಮಂತ್ರಿ ಚಂದ್ರು ಅವರು ಪ್ರತಿಭಟನಾ ನಿರತ ಪರೀಕ್ಷಾರ್ಥಿಗಳಿಗೆ ಕನ್ನಡದ ಶಾಲು ಹೊದಿಸಿ ಪ್ರೋತ್ಸಾಹಿಸಿದ್ದು ಕಂಡುಬಂದಿತು.

ಕೆ.ಎ.ಎಸ್ ಪರೀಕ್ಷಾರ್ಥಿಗಳ ಹೋರಾಟಕ್ಕೆಆಮ್ ಆದ್ಮಿ ಪಕ್ಷ ಸಾಥ್ Read More

ಬಸ್ ದರ ಏರಿಕೆ ವಿರುದ್ಧ ವಿಶಿಷ್ಟ ಪ್ರತಿಭಟನೆ ಮಾಡಿದ ಆಮ್ ಆದ್ಮಿ ಪಕ್ಷ

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ಬಸ್ ದರ ಶೇ 15 ರಷ್ಟು ಏರಿಕೆ ಮಾಡಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ವಿಶಿಷ್ಯ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಪ್ ನೂರಾರು ಕಾರ್ಯಕರ್ತರು ಎತ್ತಿನ ಬಂಡಿ ಎಳೆಯುವ ಮೂಲಕ ತೀವ್ರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಸರ್ಕಾರದ ಎತ್ತಿನ ಬಂಡಿ ಗ್ಯಾರಂಟಿ , ಸರ್ಕಾರ ಜಾಲಿ ಜಾಲಿ, ಜನರ ಜೇಬು ಖಾಲಿ ಖಾಲಿ ಎಂದು ಚಪ್ಪಾಳೆ ತಟ್ಟುತ್ತಾ ಹಾಡುತ್ತಾ ಘೋಷಣೆ ಕೂಗಿ ವಿಶಿಷ್ಟ ವಾಗಿ ಹೋರಾಟ ನಡೆಸಿ ಸರ್ಕಾರದ ಕ್ರಮವನ್ನು ವಿರೋಧಿಸಿದರು.

ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಆಮ್ ಆದ್ಮಿ ಪಕ್ಷದ ಗ್ಯಾರೆಂಟಿಗಳನ್ನು ನಕಲು ಮಾಡಿ ಅಧಿಕಾರ ಹಿಡಿದಿದೆ ಎಂದು ಟೀಕಿಸಿದರು.

ಈ ಸರ್ಕಾರಕ್ಕೆ ಭ್ರಷ್ಟಾಚಾರ ನಿಲ್ಲಿಸದೆ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಲಾಗುತ್ತಿಲ್ಲ.ಅದಕ್ಕಾಗಿ ದರ ಏರಿಕೆ ಮಾಡುತ್ತಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಎರಡು ಬಜೆಟ್ ಗಳಲ್ಲಿ 2 ಲಕ್ಷ ಕೋಟಿ ಸಾಲ ಮಾಡಿದ್ದಾರೆ.ಈ ದುಡ್ಡು ಯಾರ ಜೇಬು ಸೇರುತ್ತಿದೆ ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಸ್ಟ್ಯಾಂಪ್ ಡ್ಯೂಟಿ, ಅಬಕಾರಿ ಸುಂಕ, ವಿದ್ಯುತ್ ದರ, ಹಾಲಿನ ದರ ಎಲ್ಲವನ್ನು ಗಗನಕ್ಕೆ ಮುಟ್ಟಿಸಿದ್ದಾರೆ. ಈಗ ಬಸ್ ದರ ಏರಿಸಿದ್ದಾರೆ, ಮುಂದಿನ ದಿನಗಳಲ್ಲಿ ನೀರಿನ ದರವನ್ನು ಏರಿಸಲಿದ್ದಾರೆ, ಜನ ಪರ ಕಾಳಜಿ ಇಲ್ಲದ ಕಾಂಗ್ರೆಸ್ ಸರ್ಕಾರವು ಆರ್ಥಿಕ ದಿವಾಳಿಯಾಗುವ ಹಂತಕ್ಕೆ ತಲುಪಿರುವ ಅನುಮಾನ ಜನತೆಯಲ್ಲಿ ಕಾಡುತ್ತಿದೆ ಎಂದು‌ ತಿಳಿಸಿದರು.

ಬಸ್ ದರ ಏರಿಕೆಯನ್ನು ಕೂಡಲೇ ಹಿಂಪಡೆಯದಿದ್ದಲ್ಲಿ ಪಕ್ಷವು ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತದೆ ಎಂದು ಚಂದ್ರಶೇಖರ್ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ಮುಖಂಡರುಗಳಾದ ನಂಜಪ್ಪ ಕಾಳೇಗೌಡ, ಲೋಹಿತ್, ಗೋಪಾಲ್ ,ಸುರೇಶ್ ,
ಡಾ. ಕೇಶವ್, ವೀಣಾ , ಭಾನುಪ್ರಿಯ, ಪುಷ್ಪ ಕೇಶವ್, ಶಶಿಧರ ಆರಾಧ್ಯ, ಅಶೋಕ್ ಮೃತ್ಯುಂಜಯ, ನವೀನ್,ಪುಟ್ಟಣ್ಣ, ಮುನೇಶ್ ಸರವಣ , ಶಾಶವಲಿ ಸೇರಿದಂತೆ ‌ಪಕ್ಷದ ಅನೇಕ ನಾಯಕರು ಭಾಗವಹಿಸಿದ್ದರು.

ಬಸ್ ದರ ಏರಿಕೆ ವಿರುದ್ಧ ವಿಶಿಷ್ಟ ಪ್ರತಿಭಟನೆ ಮಾಡಿದ ಆಮ್ ಆದ್ಮಿ ಪಕ್ಷ Read More

ಚಿತ್ರರಂಗದ ಸರ್ವತೋಮುಖ ಬೆಳವಣಿಗೆಗಾಗಿ ನಾಳೆ ಪ್ರತಿಭಟನೆ

ಬೆಂಗಳೂರು: ಚಿತ್ರರಂಗದ ಸರ್ವತೋಮುಖ ಬೆಳವಣಿಗೆಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆ ಡಿ.13 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಭಾರತೀಯ ಜನತಾ ಪಕ್ಷದ ರಾಜ್ಯ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ಸಂಚಾಲಕರೂ, ಚಲನಚಿತ್ರ ನಿರ್ಮಾಪಕರು ಮತ್ತು ನಿರ್ದೇಶಕರೂ ಆದ ರೂಪ ಅಯ್ಯರ್ ಮತ್ತಿತರರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆ ನಾಳೆ ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಗಲಿದ್ದು, ರಾಜ್ಯಾದ್ಯಂತ
ನಿರ್ಮಾಪಕರುಗಳು ಭಾಗವಹಿಸಲಿದ್ದಾರೆ.

ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಸಬ್ಸಿಡಿ ಮತ್ತು ಚಲನಚಿತ್ರ ರಾಜ್ಯ ಪ್ರಶಸ್ತಿ ಮುಂದುವರಿಯಬೇಕು, ನಿರ್ಮಾಪಕರ ನಿಲುವುಗಾಗಿ ನಮ್ಮ ಹೋರಾಟ ಅನಿವಾರ್ಯವಾಗಿದೆ ನಮ್ಮ ಸಬ್ಸಿಡಿ ನಮ್ಮ ಹಕ್ಕು ಎಂಬ ಘೋಷ ವಾಕ್ಯದಡಿ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ರೂಪ ಅಯ್ಯರ್ ತಿಳಿಸಿದ್ದಾರೆ.

ನಿರ್ಮಾಪಕರುಗಳಾದ ವೆಸ್ಲಿ ಬ್ರೌನ್, ವಿ. ಲವ, ಶಶಿಕಾಂತ್ ಗಟ್ಟಿ ಅವರು ಹೋರಾಟಕ್ಕೆ ಸಾಥ್ ನೀಡಲಿದ್ದಾರೆ,ಜತೆಗೆ ಚಿತ್ರರಂಗದ ಬಳಗದವರು‌, ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದವರು ಭಾಗವಹಿಸಲಿದ್ದಾರೆ.

ಎಷ್ಟೋ ಮಂದಿ ಸ್ವಾಭಿಮಾನಿ ನಿರ್ಮಾಪಕರು ಸಬ್ಸಿಡಿ ಸಿಗದೇ ಸಾವಿಗೆ ಶರಣಾಗಿರುವ ಉದಾಹರಣೆಗಳಿವೆ, ಐದು ವರ್ಷಗಳಿಂದ ಚಲನಚಿತ್ರ ರಾಜ್ಯ ಪ್ರಶಸ್ತಿ ನೀಡಿಲ್ಲ,ಹಾಗಾಗಿ ಪ್ರೋತ್ಸಾಹವೆ ಇಲ್ಲದಂತಾಗಿದೆ,ನಿರ್ಮಾಪಕರು ಉಳಿದರೆ ಚಿತ್ರರಂಗ ಉಳಿಯುತ್ತದೆ. ಪ್ರತಿಭಟನೆ ಅನಿವಾರ್ಯವಾಗಿದೆ‌.

ಆದ್ದರಿಂದ ರಾಜ್ಯಮಟ್ಟದ ಹೋರಾಟವನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದೇವೆ ಎಂದು ರೂಪಾ ಅಯ್ಯರ್ ತಿಳಿಸಿದ್ದಾರೆ.

ಚಿತ್ರರಂಗದ ಸರ್ವತೋಮುಖ ಬೆಳವಣಿಗೆಗಾಗಿ ನಾಳೆ ಪ್ರತಿಭಟನೆ Read More

ಭಗತ್ ಸಿಂಗ್ 117ನೇ ಜನ್ಮದಿನ ಆಚರಣೆ

ಮೈಸೂರು: ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಯುವ ಭಾರತ್ ಸಂಘಟನೆ ವತಿಯಿಂದ ಕ್ರಾಂತಿಕಾರಿ ಮಹಾನ್ ದೇಶಭಕ್ತ ಭಗತ್ ಸಿಂಗ್ ರವರ 117ನೇ ಜನ್ಮದಿನವನ್ನು ಆಚರಿಸಲಾಯಿತು.

ಈ ವೇಳೆ ಭಗತ್ ಸಿಂಗ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಸಿಹಿ ವಿತರಿಸಿ ಮಾತನಾಡಿದ ಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಭರತ್, ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಯುವಕರಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯದ ಕಿಚ್ಚು ಹಚ್ಚಲು ಕಾರಣಕರ್ತರಾದವರು ಭಗತ್ ಸಿಂಗ್ ಎಂದು ಹೇಳಿದರು.

ಯುವ ಭಾರತ್ ಸಂಘಟನೆ ಅಧ್ಯಕ್ಷ ಜೋಗಿ ಮಂಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸುರೇಶ್, ಅಜಯ್ ಶಾಸ್ತ್ರಿ, ವಿಘ್ನೇಶ್ವರ ಭಟ್, ಶ್ರೀನಿವಾಸ್, ಚರಣ್, ರಾಮು, ಸುಚೇಂದ್ರ, ವಿನೋದ್ ಅರಸ್, ಸುದರ್ಶನ್, ಅಂಜು, ರಕ್ಷಿತ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

ಭಗತ್ ಸಿಂಗ್ 117ನೇ ಜನ್ಮದಿನ ಆಚರಣೆ Read More