ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ: ಪರಮೇಶ್ವರ್

ಮೈಸೂರು: ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.

ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದರು.

ನಂತರ ಆರಕ್ಷಕ ಅಶ್ವದಳದ ವಸ್ತು ಸಂಗ್ರಹಾಲಯವನ್ನು ವೀಕ್ಷಿಸಿದರು.ಇದೇ ವೇಳೆ ನಜರ್‌ಬಾದ್ ಪೊಲೀಸ್ ಠಾಣೆಗೆ ದೀಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಆರಂಭದಿಂದ ಇಲ್ಲಿಯವರೆಗೆ ಬೆಳೆದುಬಂದ ರೀತಿ ಹಾಗೂ ಇಲಾಖೆಗೆ ಸಂಬಂಧಿಸಿದ ನೆನಪಿನಲ್ಲಿ ಉಳಿಯುವಂತಹ ವಸ್ತುಗಳನ್ನು ಕಾಪಾಡಬೇಕಿದೆ,ಹಾಗಾಗಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಮಾಡಲಾಗುವುದು ಎಂದು ತಿಳಿಸಿದರು.

ನಜರ್‌ಬಾದ್ ಪೊಲೀಸ್ ಠಾಣೆ ಮೈಸೂರಿನಲ್ಲಿ ಅತ್ಯಂತ ಹಳೆಯ ಪೊಲೀಸ್ ಠಾಣೆ. ಬಹಳ ದಿನದಿಂದ ಭೇಟಿ ನೀಡಬೇಕು ಎಂದುಕೊಂಡಿದೆ. ಪೊಲೀಸ್ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಲು ದಿಢೀರ್ ಭೇಟಿ ನೀಡಿದ್ದೇನೆ ಎಂದು ಹೇಳಿದರು.

ರೆಕಾರ್ಡ್‌, ಸಶಸ್ತ್ರಗಳನ್ನು ಇಟ್ಟುಕೊಳ್ಳುವುದು ಸೇರಿದಂತೆ ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇನೆ. ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದೇನೆ. ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದ ನಾಲ್ಕೈದು ಜನರಿಗೆ ಖುದ್ದು ಕರೆ ಮಾಡಿ ವಿಚಾರಿಸಿದ್ದೇನೆ ಎಂದು ಹೇಳಿದರು.

ನಜರ್‌ಬಾದ್ ಪೊಲೀಸ್ ಠಾಣೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ‌ಪರಮೇಶ್ವರ್ ತಿಳಿಸಿದರು.

ಪೊಲೀಸ್ ಕಮಿಷನರ್ ಕಚೇರಿಯಲ್ಲೂ ಪರಿಶೀಲನೆ ನಡೆಸಿದ್ದೇನೆ. ಹೆಚ್ಚಿನಂಶ ಸೈಬರ್ ವಂಚನೆಗೊಳಗಾಗುತ್ತಿದ್ದಾರೆ. ಮೈಸೂರಿನಲ್ಲಿ‌ ಡಿಜಿಟಲ್ ಅರೆಸ್ಟ್, ಹೂಡಿಕೆ ಸೇರಿದಂತೆ ವಿವಿಧ ರೀತಿಯಲ್ಲಿ ಸುಮಾರು 30 ಕೋಟಿ ರೂ. ಸೈಬರ್ ವಂಚನೆಯಾಗಿದೆ. ಕಳೆದ ವರ್ಷ 40 ಕೋಟಿ ರೂ.ಯಷ್ಟು ವಂಚನೆಯಾಗಿತ್ತು. ಈ ವರ್ಷ ಕಡಿಮೆಯಾಗಿದೆ. 30 ಕೋಟಿ ರೂಪಾಯಿ ವಂಚನೆಯಲ್ಲಿ 5 ಕೋಟಿ ರೂ. ಪತ್ತೆಹಚ್ಚಲಾಗಿದೆ. ಇದನ್ನು ಯಾವ ರೀತಿ ನಿಯಂತ್ರಣಕ್ಕೆ ತರಬೇಕು ಎಂಬ ನಿಟ್ಟಿನಲ್ಲಿ ಚರ್ಚಿಸಲಾಗಿದೆ,ಬೆಂಗಳೂರಿನಲ್ಲಿ ಕುಳಿತು ಅಮೆರಿಕಾದವರಿಗೆ ಡಿಜಿಟಲ್ ಅರೆಸ್ಟ್ ವಂಚನೆ ಮಾಡುತ್ತಿದ್ದವರ ಬಗ್ಗೆ ಪತ್ತೆಹಚ್ಚಿ ಬಂಧಿಸಿದ್ದೇವೆ ಎಂದು ಹೇಳಿದರು.

ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೈಬರ್ ಲ್ಯಾಬ್ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಸೈಬರ್ ಲ್ಯಾಬ್ ಮಾಡಲಾಗಿದೆ. ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಹಿರಿಯ ಪೊಲೀಸ್ ಅಧಿಕಾರಿವರೆಗೂ ಸೈಬರ್ ಅಪರಾಧದ ಕುರಿತು ತಾಂತ್ರಿಕ ಜ್ಞಾನ ಹಾಗೂ ತರಬೇತಿ ಇರಬೇಕು. ಈ ಎರಡು ವರ್ಷದೊಳಗೆ ಇಲಾಖೆಯ ಎಲ್ಲ ಸಿಬ್ಬಂದಿಗಳಿಗೂ ಹಂತಹಂತವಾಗಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಐಜಿಪಿ ಡಾ.‌ ಎಂ.ಬಿ.ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಬಿಂದುಮಣಿ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್ ಮತ್ತಿತರರು ಹಾಜರಿದ್ದರು.

ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ: ಪರಮೇಶ್ವರ್ Read More

ಮೈಕ್ರೋ ಫೈನಾನ್ಸ್ ಕಿರುಕುಳ: ಕಠಿಣ ಕಾನೂನ-ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಡೆಗೆ ಕಠಿಣ ಕಾನೂನು ತರ ಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ನಿಂದ ತೊಂದರೆ ಆಗುತ್ತಿದೆ ಎಂದು ರಾಜ್ಯಾದ್ಯಂತ ದೂರು ದಾಖಲಾಗಿವೆ, ಮೈಕ್ರೋ ಫೈನಾನ್ಸ್ ಸಂಬಂಧ ಈಗ ಇರುವ ನಿಯಮಗಳು ಅಷ್ಟು ಕಠಿಣವಾಗಿಲ್ಲ ಎಂಬಯದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

ಬ್ಯಾಂಕ್ ನಿಯಮಗಳ ಪ್ರಕಾರ ಹಣ ರಿಕವರಿ ಮಾಡಲು ಕಾನೂನು ಇದೆ. ಅದೇ ರೀತಿ ಅವರ ರಕ್ಷಣೆ ಮಾಡಲೂ ಕಾನೂನು ಇದೆ. ಈಗ ಇರುವ ಕಾನೂನು ಸಾಕಾಗುತ್ತಿಲ್ಲ. ಕಠಿಣವಾಗಿಲ್ಲ ಅಂತ ನಮ್ಮ ಇಲಾಖೆಯಿಂದ ಅನೇಕ ವರದಿಗಳು ಬಂದಿವೆ ಹಾಗಾಗಿ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ತರುವ ಅಗತ್ಯವಿದೆ.ನಮ್ಮ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣಕ್ಕೆ ಕಠಿಣ ಕಾನೂನು ತರಲಿದೆ ಎಂದು ಭರವಸೆ ನೀಡಿದರು.

ಸಾಲ ತಗೊಂಡು ಸಾಲ ವಾಪಸ್ ಕಟ್ಟದೇ ಹೋದ್ರೆ ಸಾಲಗಾರರ ಬಳಿಯೇ ಕ್ರಮ ತೆಗೆದುಕೊಳ್ಳಬಹುದು ಅಂತ ಫೈನಾನ್ಸ್ ಅವರು ಸಹಿ ಹಾಕಿಸಿಕೊಂಡಿರುತ್ತಾರೆ. ಸಾಲ ತಗೋಳೋವಾಗ ಹತ್ತಾರು ಕಡೆ ಸಹಿ ತೆಗೆದುಕೊಂಡಿರುತ್ತಾರೆ. ಆ ಸಹಿ ಯಾಕೆ‌ ಮಾಡಿರುತ್ತೇವೆ ಅಂತಾನೂ ಗ್ರಾಹಕರಿಗೆ ಗೊತ್ತಿರೋದಿಲ್ಲ .ಅದು ಕಮಿಟ್ ಮೆಂಟ್ ಆಗಿರುತ್ತದೆ. ಆ ಆಧಾರದಲ್ಲಿ ಮನೆ ರೇಡ್ ಮಾಡೋದು, ಮನೆ ಸೀಜ್ ಮಾಡೋದು‌ ಎಲ್ಲಾ ಮಾಡ್ತಿದ್ದಾರೆ.ಇದಕ್ಕೆ ‌ಕಾನೂನಿನಲ್ಲೆ ಪರಿಹಾರ ಕಂಡುಹಿಡಿಯಬೇಕಿದೆ ಎಂದು ಪರಮೇಶ್ವರ್ ತಿಳಿಸಿದರು.

ಈಗಾಗಲೇ ಕಾನೂನು ಸಚಿವರು ಅದರ ಬಗ್ಗೆ ಗಮನಹರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಕಾನೂನು ಬದಲಾವಣೆ ಮಾಡಿ ಕಠಿಣ ನಿಯಮ ಜಾರಿ ಮಾಡುವುದಾಗಿ ಹೇಳಿದ್ದಾರೆ. ನಾಳೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.

ಮೈಕ್ರೋ ಫೈನಾನ್ಸ್ ಕಿರುಕುಳ: ಕಠಿಣ ಕಾನೂನ-ಪರಮೇಶ್ವರ್ Read More

ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರ ಕಳೆದುಕೊಂಡೆವು:ಪರಮೇಶ್ವರ್

ಬೆಂಗಳೂರು: ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನಿಸುತ್ತಿದೆ ಎಂದು
ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾವುಸ್ಟ್ರಾಟಜಿ ಮಾಡುವುದರಲ್ಲೂ ಸೋತಿದ್ದೇವೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ನಾವು ಅಗಾಡಿ ಬರುತ್ತದೆ ಎಂದುಕೊಂಡಿದ್ದೆವು. ಆದರೆ ಎಲ್ಲವೂ ಉಲ್ಟಾ ಆಗಿದೆ. ಅಶೋಕ್ ಗೆಹ್ಲೋಟ್, ಭಗೇಲ್ ಸೇರಿ ಅನುಭವಿ ಸಿಎಂಗಳ ಜತೆ ಚರ್ಚೆ ಮಾಡಿದ್ದೇವೆ. ಬಹಳಷ್ಟು ಕಡೆ ಇವಿಎಂ ಮ್ಯಾನಿಪ್ಯುಲೆಟ್ ಮಾಡಿದ್ದಾರೆ ಎಂದು ಚರ್ಚೆ ಆಗಿದೆ, ಆದರೆ ಜಾರ್ಖಂಡ್‌ನಲ್ಲಿ ಯಾಕೆ ಹಾಗಾಗಲಿಲ್ಲ ಬಿಜೆಪಿಯವರು ಪ್ಲ್ಯಾನ್ ಆಫ್ ಆಕ್ಷನ್ ತರಹ ಇದನ್ನು ಮಾಡ್ತಾರೆ ಎಂದು ದೂರಿದರು.

ನಂಬಿಕೆ ಬರಬೇಕು ಅಂತ ಕೆಲವು ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ ಇವಿಎಂ ಇರುವ ತನಕ ಅವರೇ ಗೆಲ್ಲುತ್ತಾರೆ ಅನ್ನಿಸುತ್ತದೆ. ಬ್ಯಾಲೆಟ್ ಪೇಪರ್ ಬರಬೇಕು ಅಂತ ನಾವು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಕೆಲವು ಗೆದ್ದೆ ಗೆಲ್ತಿವಿ ಅನ್ನೋ ಕಡೆ ಬಿಡ್ತಾರೆ. ಇದರೊಂದಿಗೆ ಲಾಡ್ಲಿ ಬೆಹಿನ್ ಯೋಜನೆ ಸಾಕಷ್ಟು ಇಂಪ್ಯಾಕ್ಟ್ ಅಗಿದೆ. ಅವರು 6 ತಿಂಗಳು ಮೊದಲು ಕೊಟ್ಟರು, ಇದೆಲ್ಲವೂ ಅವರ ಕೈ ಹಿಡಿದಿದೆ. ನಾವು ಕೊನೆಗೆ ಟಿಕೆಟ್ ಘೋಷಣೆ ಮಾಡಿದ್ವು, ಪಕ್ಷದಲ್ಲೂ ಗೊಂದಲ ಆಯ್ತು. ಶರದ್‌ ಪವಾರ್ ಗುಂಪು, ಉದ್ದವ್ ಠಾಕ್ರೆ ಗುಂಪಿನ ನಡುವೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ವಿದರ್ಭದಲ್ಲಿ ಹೆಚ್ಚು ಸೀಟು ಬರಲಿಲ್ಲ. ಎಲ್ಲಿಯವರೆಗೆ ಇವಿಎಂ ಇರುತ್ತೆ ಅಲ್ಲಿಯವರೆಗೆ ಕಾಂಗ್ರೆಸ್ ಬರೋದು ಕಷ್ಟ ಆಗುತ್ತೆ ಎಂದು ಪರಮೇಶ್ವರ್ ತಿಳಿಸಿದರು.

ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರ ಕಳೆದುಕೊಂಡೆವು:ಪರಮೇಶ್ವರ್ Read More

ದಾಖಲೆ ಪರಿಶೀಲಿಸಿ ಅನುಕೂಲಸ್ತರ ಬಿಪಿಎಲ್ ಕಾರ್ಡ್ ರದ್ಧತಿಗೆ ಕ್ರಮ-ಪರಂ

ಬೆಂಗಳೂರು: ತೆರಿಗೆದಾರರು, ಸರ್ಕಾರಿ ನೌಕರರು, ಕಾರು ಹೊಂದಿರುವವರು,
3 ಎಕರೆ ಜಮೀನು ಇರುವವರೂ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಹಾಗಾಗಿ ದಾಖಲಾತಿ ಪರಿಶೀಲಿಸಿ ರದ್ಧತಿ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಅರ್ಹರ ಪಡಿತರ ಚೀಟಿ‌ಯನ್ನು ಸರ್ಕಾರ ರದ್ದುಪಡಿಸುತ್ತಿಲ್ಲ,ಈ ವಿಷಯವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ನವರೆ ಸ್ಪಷ್ಟಪಡಿಸಿದ್ದಾರೆ.ಆದರೂ ಸುಮ್ಮನೆ ಪುಕಾರು ಹಬ್ಬಿಸುತ್ತಾರೆ ಎಂದು ಬೇಸರ‌ ವ್ಯಕ್ತಪಡಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ಆಗುವುದಿಲ್ಲ ಹಾಗಾಗಿ ಅವರನ್ನು ಅಧಿಕಾರದಿಂದ ಇಳಿಸಲು ಡೇಟ್ ಫಿಕ್ಸ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿ ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ ಎಂದು ಟೀಕಿಸಿದ ಪರಂ,ಆ ಬಗ್ಗೆ ದಾಖಲೆ ಸಿಕ್ಕರೆ ಖಂಡಿತಾ ತನಿಖೆ ಮಾಡುತ್ತೇವೆ ಎಂದು ತಿಳಿಸಿದರು.

ಆಪರೇಷನ್ ಕಮಲಾ ಬಗ್ಗೆ ಮುಖ್ಯ ಮಂತ್ರಿಗಳೇ ಹೇಳಿದ್ದಾರಲ್ಲ ಎಂಬ ವರದಿಗಾರರ ಪ್ರಶ್ನೆಗೆ ಸಿಎಂ ಸುಮ್ಮನೆ ಹೇಳುವುದಿಲ್ಲ ಸರಿಯಾಗೆ ಇರುತ್ತದೆ ಎಂದು ಪರಮೇಶ್ವರ್ ಉತ್ತರಿಸಿದರು.

ದಾಖಲೆ ಪರಿಶೀಲಿಸಿ ಅನುಕೂಲಸ್ತರ ಬಿಪಿಎಲ್ ಕಾರ್ಡ್ ರದ್ಧತಿಗೆ ಕ್ರಮ-ಪರಂ Read More

ಹುಬ್ಬಳ್ಳಿ ಗಲಭೆ:ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ- ಪರಮೇಶ್ವರ್‌

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ. ನಿಯಮಾನುಸಾರವೆ ವಾಪಸ್ ಪಡೆಯುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಕೇಸು ಗಳನ್ನು ಹಾಕಿದ್ದರೆ ಪರಿಶೀಲಿಸಿ ವಾಪಸ್ ಪಡೆಯಲು ಸರ್ಕಾರಕ್ಕೆ ಅವಕಾಶ ಇದೆ. ಯಾರೋ ಹೇಳಿದ್ದಾರೆ ಅಂತ ಕೇಸ್ ವಾಪಸ್ ಪಡೆಯಲ್ಲ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಮಾಡುತ್ತೇವೆ. ಇದರಲ್ಲಿ ಕೇವಲ ಅಲ್ಪಸಂಖ್ಯಾತರಷ್ಟೇ ಇಲ್ಲ, ವಿದ್ಯಾರ್ಥಿಗಳು, ರೈತರು ಇದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ಗಳನ್ನೂ ಪರಿಶೀಲನೆ ಮಾಡುತ್ತೇವೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯುವುದಿಲ್ಲ ನಿಯಮಾನುಸಾರ ವಾಪಸ್ ಪದೆಯುತ್ತೇವೆ ಎಂದು ಹೇಳಿದರು.

ಹುಬ್ಬಳ್ಳಿ ಗಲಭೆ ಕೇಸ್‌ಗಳು ವಾಪಸ್ ಪಡೆಯುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಕೇಸ್‌ಗಳನ್ನು ವಾಪಸ್ ಪಡೆಯಲು ಯಾರಾದರೂ ಮನವಿ ಮಾಡ್ತಾರೆ. ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ಮಾಡುತ್ತೇವೆ. ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೇಳುತ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ವಾಪಸ್ ತಗೋಬೇಕಾ ಬೇಡವಾ ಎಂದು ಉಪಸಮಿತಿ ನಿರ್ಧರಿಸುತ್ತದೆ. ಹುಬ್ಬಳ್ಳಿ ಕೇಸ್‌ಗಳೂ ಅಷ್ಟೊಂದು ಜನರ ಮೇಲೆ ಹಾಕುವ ಅಗತ್ಯವಿಲ್ಲ ಅಂತ ಸಂಪುಟ ಉಪಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ನಂತರ ಸಂಪುಟ ಸಭೆಯಲ್ಲಿ ಕೇಸ್‌ಗಳನ್ನು ವಾಪಸ್ ಪಡೆಯುವ ನಿರ್ಧಾರ ಆಗಿದೆ. ಇದನ್ನು ಕೋರ್ಟಿಗೆ ಕಳಿಸುತ್ತೇವೆ. ಕೋರ್ಟ್ ಒಪ್ಪಿಕೊಂಡರೆ ಆ ಕೇಸ್‌ಗಳು ವಾಪಸ್ ಆಗುತ್ತವೆ. ಇದನ್ನೆ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ಟೀಕಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಹಲವು ಕೇಸ್‌ಗಳನ್ನು ವಾಪಸ್ ಪಡೆಯಲಾಗಿತ್ತು,
ಯುಪಿಯಲ್ಲಿ ಅಲ್ಲಿನ ಸಿಎಂ ವಿರುದ್ಧವೇ ಹಲವು ಕೇಸ್‌ಗಳಿದ್ದವು. ಅದನ್ನೆಲ್ಲ ಅವರು ವಾಪಸ್ ಪಡೆದುಕೊಂಡಿದ್ದರು.

ಈಗ ಹುಬ್ಬಳ್ಳಿ ಕೇಸ್‌ಗಳನ್ನು ವಾಪಸ್ ಪಡೆಯಲು ಕೋರ್ಟ್ ಒಪ್ಪುತ್ತೋ ಇಲ್ವೋ ಗೊತ್ತಿಲ್ಲ,ನೋಡೋಣ ಎಂದು ಪರಮೇಶ್ವರ್ ಹೇಳಿದರು.

ಹುಬ್ಬಳ್ಳಿ ಗಲಭೆ:ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ- ಪರಮೇಶ್ವರ್‌ Read More

ಮುಮ್ತಾಜ್ ಅಲಿ ನಾಪತ್ತೆ:ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ-ಪರಮೇಶ್ವರ್

ಬೆಂಗಳೂರು: ಮಾಜಿ ಶಾಸಕ ಮೊಯುದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಬಿಎಂಡಬ್ಲೂ ಕಾರು ಮಂಗಳೂರಿನ ಕುಳೂರು ಸೇತುವೆ ಮೇಲೆ ಪತ್ತೆ ಆಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೆರಶ್ವರ್ ತಿಳಿಸಿದ್ದರೆ.

ಮುಮ್ತಾಜ್ ಅಲಿ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್,ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎಂದು ಹೇಳಿದರು.

ಕಾರು ಅಪಘಾತವಾಗಿದೆಯಾ ಅಥವಾ ಬೇರೆ ದುರ್ಘಟನೆ ಆಗಿದೆಯಾ ಎಂಬ ಬಗ್ಗೆ ಪೊಲೀಸರು ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಹೇಳಿದರು.

ಈಗಾಗಲೇ ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಕುಟುಂಬದವರು ಭೇಟಿ ನೀಡಿದ್ದಾರೆ, ಮಂಗಳೂರು ಕಮಿಷನರ್ ಅನುಪಮ್ ಅಗರ್ ವಾಲ್ ಪ್ರಕರಣದ ತನಿಖೆ ಬಗ್ಗೆ ವಿವರಣೆ ನೀಡಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.

ಮುಮ್ತಾಜ್ ಅಲಿ ನಾಪತ್ತೆ:ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ-ಪರಮೇಶ್ವರ್ Read More