ಬಾಲಕಿ ಅತ್ಯಾಚಾರ, ಕೊಲೆ ಮಾಡಿದ ಆರೋಪಿ ಕಾಲಿಗೆ ಗುಂಡು

ಮೈಸೂರು: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮೈಸೂರಿನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರ ಮಾಡಲು ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು.

ಆರೋಪಿಯು ರಾತ್ರಿ ಟೆಂಟ್‌ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ.

ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕೃತ್ಯ ಎಸಗಿ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ.

ಮೇಟಗಳ್ಳಿ ಬಳಿ ಪೊಲೀಸರು ಆತನನ್ನು ಹಿಡಿಯಲು ಮುಂದಾದಾಗ ಕಾನ್ಸ್‌ಟೇಬಲ್ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹೊಡೆದು ಹಿಡಿದಿದ್ದಾರೆ.

ಕಾರ್ತಿಕ್‌ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಕಾರ್ತಿಕ್,ಹಿಂದೆ ಮಂಡ್ಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ,ಆ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ.

ಮದ್ಯ ವ್ಯಸನಿ ಕಾರ್ತಿಕ್ ಕಣ್ಣಿಗೆ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಕಾರ್ತಿಕ್ ಈ ಕೃತ್ಯ ಎಸಗಿರುವುದು ಗೊತ್ತಾಗಿದ್ದು,ಅವನ ಕಾಲಿಗೆ ಗುಂಡು ಹೊಡೆದು ಹೆಡೆಮುರಿ ಕಟ್ಟಿದ್ದಾರೆ.

ಬಾಲಕಿ ಅತ್ಯಾಚಾರ, ಕೊಲೆ ಮಾಡಿದ ಆರೋಪಿ ಕಾಲಿಗೆ ಗುಂಡು Read More

ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದಆರೋಪಿಗೆ ಕಠಿಣ‌ ಶಿಕ್ಷೆ ನೀಡಿ-ತೇಜಸ್ವಿ

ಮೈಸೂರು: ಮೈಸೂರಿನ ವಸ್ತು ಪ್ರದರ್ಶನ ಮೈದಾನ ಬಳಿ ನಡೆದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ‌ ಪ್ರಕರಣ ತೀವ್ರ ಖಂಡನಿಯ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.

ಪೋಲಿಸ್ ಇಲಾಖೆ ನೈಟ್ ಬಿಟ್ ನಲ್ಲಿ ಕೆಲವು ಬದಲಾವಣೆ ತಂದರೆ ಇಂತಹ ಅಪರಾಧ ಕೃತ್ಯಗಳನ್ನು ನಿಯಂತ್ರಿಸ ಬಹುದು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಆರೋಪಿಗೆ ಕೂಡಲೇ ಕಠಿಣ ಶಿಕ್ಷೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಇಂತಹ ಅತ್ಯಾಚಾರ ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಬಿಕ್ಷಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಮೈಸೂರಿನ ಹೃದಯ ಭಾಗದಲ್ಲಿ ಇಂತಹ ಹೇಯಕೃತ್ಯ ನಡೆದಿದ್ದು ಅತ್ಯಂತ ಆತಂಕ ಉಂಟು ಮಾಡಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ‌.

ಎರಡು ದಿನಗಳ ಹಿಂದೆ ಇದೇ ಸ್ಥಳದಲ್ಲಿ ವ್ಯಕ್ತಿ ಯೊಬ್ಬನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು,ಅದಾದ ಎರಡೇ ದಿನದಲ್ಲಿ ಆದೆ ಸ್ಥಳದ ಆಸುಪಾಸಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿರುವುದು ಪೋಲಿಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆರೋಪಿಸಿದ್ದಾರೆ.

ಬಾಲಕಿಯ ಕುಟುಂಬಕ್ಕೆ ಪರಿಹಾರವನ್ನು ಘೋಷಿಸುವಂತೆ ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ.

ಈ ಪ್ರಕರಣವನ್ನು ಪೋಲಿಸ್ ಇಲಾಖೆ ಅತ್ಯಂತ ಸೂಕ್ಷ್ಮವಾಗಿ ಮತ್ತು ಗಂಭೀರವಾಗಿ ಪರಿಗಣಿಸಬೇಕು, ಇನ್ನು ಮುಂದೆ ರಾತ್ರಿ ಗಸ್ತು ತಿರುಗುವ ಪಾಳಯದಲ್ಲಿ ಬದಲಾವಣೆ ತರಬೇಕು ಬದಲಾವಣೆ ಆದಲ್ಲಿ ಮಾತ್ರ ( ಹೊಸತನ ) ಇಂತಹಾ ಅಪರಾಧ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರುವ ಮೂಲಕ ರಾಜ್ಯದಲ್ಲಿ ಇಂತಹ ಅತ್ಯಾಚಾರ ಪ್ರಕರಣಗಳು ತಡೆಗಟ್ಟಬೇಕೆಂದು ತೇಜಸ್ವಿ ನಾಗಲಿಂಗಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದಆರೋಪಿಗೆ ಕಠಿಣ‌ ಶಿಕ್ಷೆ ನೀಡಿ-ತೇಜಸ್ವಿ Read More