ಕೆಲ ವಿವಿ ಮುಚ್ಚುವ ಸರ್ಕಾರದ ನಿಲುವಿಗೆ ಹೆಚ್.ವಿಶ್ವನಾಥ್ ಬೆಂಬಲ

ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರ ನಿಲುವನ್ನು
ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೆಂಬಲಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಒಳ್ಳೆಯ ನಿರ್ಧಾರ, ಜಿಲ್ಲೆಗೊಂದು ವಿ.ವಿ ಕೊಟ್ಟರೇ ಏನಾಗಬೇಕು, ಗ್ರ್ಯಾಂಟೇ ಕೊಟ್ಟಿಲ್ಲ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ಫಿಕ್ಸ್ ಮಾಡಿದ್ದೇ ಈ ಹಿಂದಿನ ಬಿಜೆಪಿ ಸರ್ಕಾರ ಎಂದು ತಮ್ಮದೇ ಪಕ್ಷವನ್ನು ಕುಟುಕಿದರು.

ರಾಜ್ಯದಲ್ಲಿ ಶಾಂತಿಗೆ ಅವಕಾಶ ಇಲ್ಲದಂತಾಗಿದೆ ಎಲ್ಲಾ ಕಡೆ ಪ್ರಕ್ಷುಬ್ಧತೆ, ಗಲಾಟೆ ಗಲಭೆ,ಕೊಲೆ, ಆತ್ಮಹತ್ಯೆಗಳು ನಡೆಯುತ್ತಿವೆ. ಇದಕ್ಕೆಲ್ಲಾ ಯಾರು ಕಾರಣ, ಜನ ಕಾರಣ ಅಲ್ಲ. ನಾವು ಆಯ್ಕೆ ಮಾಡಿದ ಸರ್ಕಾರ ಕಾರಣ,ಸರ್ಕಾರದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ವಿಶ್ವನಾಥ್ ಹೇಳಿದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ. ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಉತ್ತರಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣಪುಟ್ಟ ಘಟನೆ ಹೊರತುಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚೆನ್ನಾಗಿದೆ ಶ್ಲಾಘಿಸಿದರು.

ಕೆಲ ವಿವಿ ಮುಚ್ಚುವ ಸರ್ಕಾರದ ನಿಲುವಿಗೆ ಹೆಚ್.ವಿಶ್ವನಾಥ್ ಬೆಂಬಲ Read More

ಸಾಹಿತ್ಯ ಸಮ್ಮೇಳನವನ್ನ ರಾಜಕೀಯ ವೇದಿಕೆ ಮಾಡಿದ ಸರ್ಕಾರ: ಅಶೋಕ್ ಟೀಕೆ

ಬೆಂಗಳೂರು: ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿಯನ್ನ ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನ ಸರ್ಕಾರ ರಾಜಕೀಯ ವೇದಿಕೆ ಮಾಡಿದೆ ಎಂದು ಪ್ರತಿಪಕ್ಷ‌ ನಾಯಕ ಆರ್.ಅಶೋಕ್ ‌ಟೀಕಿಸಿದ್ದಾರೆ.

ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದೆ ಎಂದು ಅಶೋಕ್ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳ ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ – ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ ಎಂದು ಪ್ರಶ್ನಿಸಿದ್ದಾರೆ.

ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನ ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅಶೋಕ್
ಆಗ್ರಹಿಸಿದ್ದಾರೆ.

ಸಾಹಿತ್ಯ ಸಮ್ಮೇಳನವನ್ನ ರಾಜಕೀಯ ವೇದಿಕೆ ಮಾಡಿದ ಸರ್ಕಾರ: ಅಶೋಕ್ ಟೀಕೆ Read More

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುವ ನಂಬಿಕೆ ಇಲ್ಲ:ಬಿವೈವಿ

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಎಂಬ ನಂಬಿಕೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಕೇವಲ ಬೂಟಾಟಿಕೆ,ಇದರ ಬಗ್ಗೆ ಗಂಭೀರ ಚರ್ಚೆ ಆಗುವುದಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ. ಶಿಶುಗಳ ಮರಣ, ಬಾಣಂತಿಯರ ಸಾವು, ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಕ್ಫ್ ಆಸ್ತಿ ವಿವಾದದ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಪಂಚಮಸಾಲಿ ಹೋರಾಟಗಾರರ ಅಹವಾಲನ್ನು ಸರ್ಕಾರ ಸ್ವೀಕರಿಬೇಕು ಎಂದು ಅವರು ಇದೇ ವೇಳೆ ವಿಜಯೇಂದ್ರ ಒತ್ತಾಯಿಸಿದರು.

ಗ್ಯಾರಂಟಿಗಳಿಂದ ರಾಜ್ಯದ ಜನ ಆನಂದಲ್ಲಿದ್ದಾರೆ ಎಂಬ ಭ್ರಮೆಯಲ್ಲಿದ್ದಾರೆ, ದುರ್ಘಟನೆಗಳು ನಡೆದಾಗ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು,ಆದರೆ ಈ ಸರ್ಕಾರ ಹಾಗೂ ಸಚಿವರದ್ದು ಉದ್ಧಟನದ ವರ್ತನೆ ಆಗಿಬಿಟ್ಟಿದೆ ಎಂದು ದೂರಿದರು.

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುವ ನಂಬಿಕೆ ಇಲ್ಲ:ಬಿವೈವಿ Read More

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ:ಅಶೋಕ್ ಕಿಡಿ

ಬೆಂಗಳೂರು: ಚಿಕ್ಕಬಳ್ಳಾಪುರ, ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ಜಮೀನಿನಲ್ಲಿ ಉಳುಮೆ ಮಾಡಲು ಮುಂದಾ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಈ ಸರ್ಕಾರ ತನ್ನ ಓಲೈಕೆ ರಾಜಕಾರಣಕ್ಕೆ ರೈತರನ್ನು ಬಲಿಕೊಡಲು ಮುಂದಾಗಿದೆ ಇದು ಕಟುಕ ಸರ್ಕಾರ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರೇ, ರೈತರ ಜಮೀನಿನ ಮೇಲೆ ಕಬ್ಜಾ ಮಾಡುವುದೇ ಅಲ್ಲದೆ, ಅವರ ಮೇಲೆ ಲಾಠಿ ಚಾರ್ಜ್ ಮಾಡಿ, ಟ್ರ್ಯಾಕ್ಟರ್ ವಶಕ್ಕೆ ಪಡೆದು ರೈತರ ವಿರುದ್ಧ ದೂರು ದಾಖಲಿಸಿಕೊಂಡಿದ್ದೀರಲ್ಲ, ನಿಮಗೆ ನಾಡಿನ ರೈತರಿಗಿಂತ ಓಲೈಕೆ ರಾಜಕಾರಣವೇ ಹೆಚ್ಚಾಯ್ತ ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.

ಅನ್ನ ಹಾಕುವ ಕೈಗಳಿಗೆ ಕೋಳ ತೊಡಿಸುವ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಅನ್ನದಾತರ ಶಾಪ ಈ ಸರ್ಕಾರವನ್ನು ಸುಡುವ ದಿನ ದೂರವಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ:ಅಶೋಕ್ ಕಿಡಿ Read More