ಬೆಲೆ ಇಳಿಕೆ ಯಾವಾಗ:ಸರ್ಕಾರಕ್ಕೆ ಅಶೋಕ್ ಪ್ರಶ್ನೆ

ಬೆಂಗಳೂರು: ಜಿಎಸ್ಟಿ ಸುಧಾರಣೆ ನಂತರ ದಿನಬಳಕೆ ವಸ್ತುಗಳಿಂದ ಹಿಡಿದು ಬೈಕು-ಕಾರುಗಳವರೆಗೆ ದೇಶಾದ್ಯಂತ ವ್ಯಾಪಾರ ವಹಿವಾಟು ಜೋರಾಗಿದ್ದು, ಜನಸಾಮಾನ್ಯರು ಸಂತೋಷದಿಂದ ಜಿಎಸ್ಟಿ ಉಳಿತಾಯದ ಲಾಭ ಪಡುತ್ತಿದ್ದಾರೆ. ವ್ಯಾಪಾರಸ್ಥರು, ವರ್ತಕರು ಸಂತೋಷಗೊಂಡಿದ್ದಾರೆ.

ಆದರೆ ರಾಜ್ಯದಲ್ಲಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಿಂದ ಸತತವಾಗಿ ಏರಿಸಿರುವ ಹಾಲು, ಪೆಟ್ರೋಲ್, ಡಿಸೇಲ್, ನೀರು, ವಿದ್ಯುತ್ ಬೆಲೆಯನ್ನು ಇಳಿಸುವುದು ಯಾವಾಗ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಜಿ ಎಸ್ ಟಿ: ಗ್ಯರೆಂಟಿ ಸಿದ್ದರಾಮಯ್ಯ ಟ್ಯಾಕ್ಸ್
ನಿಂದ ಕನ್ನಡಿಗರಿಗೆ ಮುಕ್ತಿ ಯಾವಾಗ ಎಂದು ಟೀಕಿಸಿದ್ದಾರೆ.

ಬೆಲೆ ಇಳಿಕೆ ಯಾವಾಗ:ಸರ್ಕಾರಕ್ಕೆ ಅಶೋಕ್ ಪ್ರಶ್ನೆ Read More

ಪ್ರಧಾನಿ ಜಿಎಸ್‌ಟಿ ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ:ಸುಧಾಕರ್

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದು ಜಿಎಸ್‌ಟಿ ಸುಧಾರಣೆ ತಂದಿದೆ ಎಂದು
ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್, ವಿಜಯದಶಮಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್‌ಟಿಯನ್ನು ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ. ಶೇ.18 ರ ತೆರಿಗೆಯನ್ನು ಶೇ.5 ಕ್ಕೆ ತಂದಿದ್ದಾರೆ. ಕೆಲವು ಸರಕು, ಸೇವೆಗಳಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ. ನಾನು ಆರ್ಥಿಕ ಸ್ಥಾಯಿ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದಿರಲಿಲ್ಲ. ಮಧ್ಯಮವರ್ಗ ಹಾಗೂ ಬಡಜನರ ಪರವಾಗಿ ನಾನು ಪ್ರಧಾನಿಯವರಿಗೆ ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ರೈತರು ಬಳಕೆ ಮಾಡುವ ಟ್ರ್ಯಾಕ್ಟರ್‌, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳ ತೆರಿಗೆಯನ್ನು ಶೇ.5 ರ ವ್ಯಾಪ್ತಿಗೆ ತರಲಾಗಿದೆ. ಯುಪಿಎ ಅವಧಿಯಲ್ಲಿ ಎಲ್ಲ ಸರಕು, ಸೇವೆಗಳ ಮೇಲೆ ಶೇ.30 ರಷ್ಟು ತೆರಿಗೆ ಇತ್ತು. ಮೋದಿ ಸರ್ಕಾರ ಮೊದಲಿಗೆ ನಾಲ್ಕು ಹಂತಗಳಲ್ಲಿ ತೆರಿಗೆ ತಂದು ಈಗ ಎರಡು ಹಂತಗಳನ್ನು ಉಳಿಸಿಕೊಂಡಿದೆ. ಈ ಸುಧಾರಣೆಯಿಂದ ಎರಡೂವರೆ ಲಕ್ಷ ಕೋಟಿ ರೂ. ಜನರ ಕೈಗೆ ಸಿಗಲಿದೆ ಎಂದು ಅಂದಾಜಿಸಲಾಗಿದೆ,ಇದರಿಂದ ಖರೀದಿ ಸಾಮರ್ಥ್ಯ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯುಪಿಎಗೆ ಹೋಲಿಸಿದರೆ ಎನ್‌ಡಿಎ ಸರ್ಕಾರ ರಕ್ಷಣಾ ವಲಯಕ್ಕೆ 34 ಪಟ್ಟು ಅಧಿಕ ಅನುದಾನ ನೀಡಿದೆ. ಹೀಗೆ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಸದ್ಬಳಕೆ ಮಾಡುತ್ತಿದೆ ಎಂದು ಸುಧಾಕರ್ ತಿಳಿಸಿದರು.

ಕಾಂಗ್ರೆಸ್‌ ಸರ್ಕಾರಕ್ಕೆ ಜಿಎಸ್‌ಟಿ ಎಂದರೆ ಗ್ಯಾರಂಟಿ ಸುಲಿಗೆ ಟ್ಯಾಕ್ಸ್‌. 38 ರೂ. ಇದ್ದ ಹಾಲಿಗೆ 47 ರೂ. ಆಗಿದೆ. ಬಸ್‌ ದರ 100 ಕಿ.ಮೀ. 100 ಇದ್ದಿದ್ದು 115 ರೂ. ಆಗಿದೆ. ಪೆಟ್ರೋಲ್‌ಗೆ 99 ರೂ. ಇದ್ದಿದ್ದು, 103 ರೂ. ಆಗಿದೆ ಹೀಗೆ ಎಲ್ಲದರ ದರ ಏರಿಸಿ ಜನರ ಸುಲಿಗೆ ಮಾಡಿದೆ‌ ಎಂದು ‌ಸುಧಾಕರ್ ಆರೋಪಿಸಿದರು.

ದಲಿತರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಸಲಾಗಿದೆ. ಪ್ರಸಕ್ತ ಸಾಲಿನ 2025-26 ನೇ ಬಜೆಟ್ ನಲ್ಲಿ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಅಡಿ 42,017.51 ಕೋಟಿ ರೂ. ಅನುದಾನದಲ್ಲಿ 11,896.84 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡುವ ಕಾಂಗ್ರೆಸ್‌ ನಾಯಕರು, ದಲಿತರ ನಿಗಮಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅನುದಾನದಲ್ಲಿ 90 ಕೋಟಿ ರೂ. ಅನುದಾನ ಕಡಿತ, ವಿಶ್ವಕರ್ಮ ನಿಗಮಕ್ಕೆ 12 ಕೋಟಿ ರೂ. ಅನುದಾನ ಕಡಿತ, ಉಪ್ಪಾರ ನಿಗಮಕ್ಕೆ 7 ಕೋಟಿ ರೂ. ಅನುದಾನ ಕಡಿತ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ತೆರಿಗೆ ಇಳಿಕೆ ಮಾಡಿರುವುದರಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದು ಈಗ ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿರುವ 33 ಸದಸ್ಯರು ಕೂಡ ಇದಕ್ಕೆ ಒಪ್ಪಬೇಕಾಗುತ್ತದೆ. ರಾಜ್ಯ ಸರ್ಕಾರದ ಪರವಾಗಿ ಸಚಿವ ಕೃಷ್ಣ ಭೈರೇಗೌಡರು ಇದಕ್ಕೆ ಸಹಿ ಹಾಕಿದ್ದಾರೆ. ಸರಿ ಇಲ್ಲ ಎಂದಮೇಲೆ ಸಹಿ ಹಾಕಿದ್ದು ಏಕೆ? ಈ ಸುಧಾರಣೆ ಬಗ್ಗೆ ಒಂದು ವರ್ಷದಿಂದಲೇ ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರಕ್ಕೆ ಆದಾಯ ಕಡಿಮೆಯಾದರೂ ಜನರ ಹಿತದೃಷ್ಟಿಯಿಂದ ಈ ಕ್ರಮ ತರಲಾಗಿದೆ. ಈಗ ಹಣದುಬ್ಬರ 2.7% ಹಾಗೂ ಆರ್ಥಿಕ ಬೆಳವಣಿಗೆ ದರ 7.9% ಇದೆ. ಹೀಗೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಆರ್ಥಿಕ ಚೈತನ್ಯ ನೀಡಿದ್ದಾರೆ ಎಂದು ಸುಧಾಕರ್ ವಿವರಣೆ ನೀಡಿದರು.

ಪ್ರಧಾನಿ ಜಿಎಸ್‌ಟಿ ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ:ಸುಧಾಕರ್ Read More

ದಸರಾ ಉಡುಗೊರೆ ನೀಡಿದ ಮೋದಿ: ಮಾ ವಿ ರಾಮಪ್ರಸಾದ್

ಮೈಸೂರು: ಜಿ ಎಸ್ ಟಿ ಕಡಿತ ಸ್ವಾಗತಿಸಿ ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗದವರು ಸಿಹಿ ಅಂಚಿ ಖುಷಿ ಪಟ್ಟರು.

ಈ ವೇಳೆ ಮಾತನಾಡಿದ ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮಪ್ರಸಾದ್,
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಜಿ ಎಸ್‌ ಟಿ ಯಲ್ಲಿ ಸುಧಾರಣೆಗಳನ್ನು ತರುವ ಬಗ್ಗೆ ದೇಶಕ್ಕೆ ವಾಗ್ದಾನ ನೀಡಿದಂತೆ ಜಿಎಸ್‌ಟಿ ಕಡಿತ ಮಾಡುವ ಮೂಲಕ ದೇಶದ ಜನರಿಗೆ ದಸರಾ ಉಡುಗೊರೆ ನೀಡಿದ್ದಾರೆ ಎಂದು ಹೇಳಿದರು.

ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಜಿಎಸ್‌ಟಿ ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರ್ಕಾರದ ಮಹತ್ವದ ನಿರ್ಣಯವನ್ನು ಸ್ವಾಗತಿಸುತ್ತೇವೆ ಎಂದು ನುಡಿದರು.

ಹೇರ್ ಆಯಿಲ್ ನಿಂದ ಕಾರ್ನ್ ಪ್ಲೇಕ್ಸ್, ಟಿ.ವಿ ಸೆಟ್, ಆರೋಗ್ಯ ಮತ್ತು ಜೀವ ವಿಮೆ ಪಾಲಿಸಿ ವರೆಗೆ ಜನಸಾಮಾನ್ಯರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಕಡಿಮೆ ಆಗಲಿವೆ ಎಂದು ಪ್ರಧಾನಿ ತಿಳಿಸಿದ್ದಾರೆ. ದೇಶದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಜನಸಾಮಾನ್ಯರ ಸೇವಕ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ಮಾ ವಿ ರಾಮ್ ಪ್ರಸಾದ್ ಹೇಳಿದರು ನಂತರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ದೂರ ರಾಜಣ್ಣ, ಪುರುಷೋತ್ತಮ್, ಆನಂದ್,ನಿವೃತ್ತ ಶಿಕ್ಷಕ ಮಹದೇವಸ್ವಾಮಿ, ಜತ್ತಿ ಪ್ರಸಾದ್, ಸುಚೇಂದ್ರ, ಜೈರಾಮ್, ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.

ದಸರಾ ಉಡುಗೊರೆ ನೀಡಿದ ಮೋದಿ: ಮಾ ವಿ ರಾಮಪ್ರಸಾದ್ Read More

ಸಣ್ಣ‌ ವ್ಯಾಪಾರಿಗಳ ಹಳೆಯ ತೆರಿಗೆ ಬಾಕಿ ಮನ್ನಾ:ಸಿದ್ದರಾಮಯ್ಯ ಅಭಯ

ಬೆಂಗಳೂರು: ಈಗಾಗಲೇ ನೊಟೀಸ್ ನೀಡಲಾಗಿರುವ ಸಣ್ಣ‌ ವ್ಯಾಪಾರಿಗಳ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಮಾತನಾಡಿದರು.

ಹಳೆಯ ತೆರಿಗೆಯನ್ನು ಸರ್ಕಾರ ವಸೂಲು ಮಾಡುವುದಿಲ್ಲ, ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಹೇಳಿದರು.

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ,ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಲೇಬೇಕಿದೆ ಎಂದು ಸಿಎಂ ತಿಳಿಸಿದರು.

ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಮಾಡಿಕೊಳ್ಳಲು ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ ಎಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.

ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ.

ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿ ಯಾಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಣ್ಣ‌ ವ್ಯಾಪಾರಿಗಳ ಹಳೆಯ ತೆರಿಗೆ ಬಾಕಿ ಮನ್ನಾ:ಸಿದ್ದರಾಮಯ್ಯ ಅಭಯ Read More

1.50 ಕೋಟಿ ಹಣ ಪಡೆದನಾಲ್ವರು ಜಿ ಎಸ್ ಟಿ ಅಧಿಕಾರಿಗಳ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೇಸ್ ಒಂದನ್ನು ಮುಚ್ಚಿ ಹಾಕಲು 1.50 ಕೋಟಿ ಹಣ ಪಡೆದಿದ್ದ ಜಿಎಸ್ ಟಿ ಅಧಿಕಾರಿಗಳು ನಂತರ ನಾಪತ್ತೆ ಆಗಿದ್ದರು. ಉದ್ಯಮಿ ಕೇಶವ್ ತಕ್ ಈ ಬಗ್ಗೆ ಬೈಯ್ಯಪ್ಪನಹಳ್ಳಿ ಠಾಣೆಗೆ ದೂರು ನೀಡಿದ್ದರು.

ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೇರಿದಂತೆ, ಸೀನಿಯರ್ ಇಂಟಲಿಜನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್, ಸಿನೀಯರ್ ಇಂಟಲಿಜನ್ಸ್ ಆಫೀಸರ್ ನಾಗೇಶ್ ಬಂಧಿತ ಅಧಿಕಾರಿಗಳು.

ಸುಮಾರು ನಾಲ್ಕೈದು ಮಂದಿ ತನ್ನನ್ನು ಕರೆದುಕೊಂಡು ಹೋಗಿ ಅಪಾರ ಪ್ರಮಾಣದ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದ ಉದ್ಯಮಿ 1.5 ಕೋಟಿ ರೂ.ಗಳನ್ನು ಪಡೆದು ಬಿಟ್ಟುಕಳಿಸಿದರೆಂದು ಹೇಳಿದ್ದಾರೆ.

1.50 ಕೋಟಿ ಹಣ ಪಡೆದನಾಲ್ವರು ಜಿ ಎಸ್ ಟಿ ಅಧಿಕಾರಿಗಳ ಬಂಧನ Read More