ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ

ಮೈಸೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಜೆಡಿಎಸ್, ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು ಅರಮನೆ ಮುಂಭಾಗ ಇರುವ ಕೋಟೆ ಆಂಜನೇಯ ಸ್ವಾಮಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ನರಸಿಂಹಸ್ವಾಮಿ, ನಗರ ಕಾರ್ಯಾಧ್ಯಕ್ಷ ಎಸ್. ಪ್ರಕಾಶ್ ಪ್ರಿಯಾದರ್ಶನ್, ನಗರ ಮಹಿಳಾ ಅಧ್ಯಕ್ಷೆ ಪ್ರೇಮಾ ಶಂಕರಗೌಡ, ಚಾಮರಾಜ ಕ್ಷೇತ್ರದ ಅಧ್ಯಕ್ಷ ಪಿ ಮಂಜುನಾಥ್, ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷ ಎಂ ಎನ್ ರಾಮು, ನಗರ ಪಾಲಿಕೆ‌ ಮಾಜಿ ಸದಸ್ಯ ಎಸ್ ಬಿ ಎಂ ಮಂಜು, ಚಾಮರಾಜ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಶಿವರಾಜ್, ಬಿಜೆಪಿ ಚಾಮರಾಜ ಕ್ಷೇತ್ರದ ಎಸ್ ಸಿ ಮೋರ್ಚಾ ಅಧ್ಯಕ್ಷ ಹರೀಶ್, ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ಪ್ರದೀಪ್ ಕೃಷ್ಣೆಗೌಡ, ಜೆಡಿಎಸ್, ಬಿಜೆಪಿ ಮುಖಂಡರುಗಳಾದ ಸಚಿನ್, ಬಿ ಎಂ ಕೃಷ್ಣಗೌಡ ಕೆ ಆರ್ ನಗರ, ಸೊಸೈಟಿ ಲೋಕೇಶ್, ಕೋದಂಡ, ಜೆ ಪ್ರಕಾಶ್, ಶಿವಪ್ರಸಾದ್, ಸೋಮೇಗೌಡ, ಸೊಸೈಟಿ ವಿಜಿ, ಜಯರಾಮಗೌಡ ಮುಂತಾದರು ಹಾಜರಿದ್ದರು.

ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ Read More

ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು: ಹೆಚ್.ಡಿ.ಡಿ ಆರೋಪ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದರು.

ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ ಎಂದು ಕಡಕ್ಕಾಗಿ ಹೇಳಿದರು.

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ… ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.

ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎಂಬುದು ಗೊತ್ತಾಗುತ್ತದೆ ಎಂದು ಟಾಂಗ್ ನೀಡಿದರು ‌

ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ; ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು‌ ಕಾರ್ಯಕರ್ತರಿಗೆ ಮನವಿ ಮಾಡಿದರು.

ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು: ಹೆಚ್.ಡಿ.ಡಿ ಆರೋಪ Read More

ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ದೇವೇಗೌಡರ ಆಕ್ರೋಶ

ನವದೆಹಲಿ: ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರ ವಿರುದ್ಧ ಕಾಂಗ್ರೆಸ್ ಮೈತ್ರಿಕೂಟದ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಲು ನೀಡಿರುವ ನೋಟಿಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹರಿಹಾಯ್ದರು.

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ದೇವೆಗೌಡರು, ಕಾಂಗ್ರೆಸ್ ಪಕ್ಷದ ಸದಸ್ಯರ ವರ್ತನೆಯನ್ನು ಉಗ್ರವಾಗಿ ಖಂಡಿಸಿ
ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭಾಪತಿಗಳು ಸದನವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿದ್ದಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಶೈಲಿ ಉತಗತಮವಾಗಿದೆ,
ಸಂಸತ್ತಿನ ಘನತೆಯನ್ನು ಎತ್ತಿಹಿಡಿಯಬೇಕು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷಗಳನ್ನು ಒತ್ತಾಯಿಸಿದರು.

ರಾಜ್ಯಸಭೆಯ ಸಭಾಪತಿಗಳ ವಿರುದ್ಧ ಇಂತಹ ನಿರ್ಣಯವನ್ನು ಮಂಡಿಸಲು ಹೊರಟಿರುವುದು ಇತಿಹಾಸದಲ್ಲಿ ಇದೇ ಮೊದಲು. ಇದು ಒಳ್ಳೆಯ ಸಂಪ್ರದಾಯ ಅಲ್ಲ. ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ದೇವೆಗೌಡರು ಎಚ್ಚರಿಕೆ ನೀಡಿದರು.

ಮೊದಲು ಕಾಂಗ್ರೆಸ್ ಸದಸ್ಯರು ಇಂತಹ ಕೆಟ್ಟ ಸಂಪ್ರದಾಯವನ್ನು ಆರಂಭ ಮಾಡಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲಿದೆ. ನಾವು ಇದನ್ನು ಸಹಿಸುವುದಿಲ್ಲ ಹಾಗೂ ಇದಕ್ಕೆ ಅವಕಾಶವನ್ನು ಕೊಡಬಾರದು ಎಂದು ಹೇಳಿದರು.

ನಿಮ್ಮ ಸದಸ್ಯರು ಸದನದ ಗೌರವ ಹಾಳು ಮಾಡುತ್ತಿದ್ದಾರೆ. ಅವರನ್ನು ತಡೆಯುವ ಜವಾಬ್ದಾರಿ ನಿಮ್ಮದು. ಸಂಸದೀಯ ಸೌಹಾರ್ದತೆಯನ್ನು ಎತ್ತಿಹಿಡಿಯುವುದು ನಿಮ್ಮ ಮತ್ತು ನಿಮ್ಮ ಪಕ್ಷದ ಹೊಣೆಗಾರಿಕೆ ಆಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇವೇಗೌಡರು ನೇರ ಮಾತುಗಳಲ್ಲಿ ತಿಳಿಸಿದರು.

ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ದೇವೇಗೌಡರ ಆಕ್ರೋಶ Read More

ಸರಕಾರ ದಿವಾಳಿ;ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ -ದೇವೇಗೌಡರು

ಚನ್ನಪಟ್ಟಣ: ರಾಜ್ಯ ಕಾಂಗ್ರೆಸ್ ಸರ್ಕಾರದ ಖಜಾನೆ ದಿವಾಳಿಯಾಗಿದೆ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟೀಕಿಸಿದರು.

ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಆರೋಪಿಸಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಗೌಡರು; ಕಾಂಗ್ರೆಸ್ ಸರಕಾರ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಟೀಕಿಸಿದರು.

ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ , ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ ಎಂದು ಪ್ರಶ್ನಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು 1600 ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ. ಪ್ರತಿಗ್ರಾಮಕ್ಕೆ ನೀರಾವರಿ ಸೌಲಭ್ಯ ಕೋಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು. ರಾಷ್ಟ್ರದ ಹಿತದೃಷ್ಟಿಯಿಂದ, ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಸಚಿವರಾಗಿದ್ದಾರೆ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡಿದರು. ಹಾಗಂತ ಎಲ್ಲರನ್ನೂ ನಂಬಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ತಮ್ಮ ತೀರ್ಮಾನ ಬದಲಾಯಿಸಿ ಮತ್ತೊಬ್ಬ ಸ್ನೇಹಿತರನ್ನು ನಿಲ್ಲಿಸಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ ಎಂದು ದೇವೇಗೌಡರು ಟೀಕಿಸಿದರು.

ಸರಕಾರ ದಿವಾಳಿ;ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ -ದೇವೇಗೌಡರು Read More

ಈ ಸರ್ಕಾರ ತೆಗೆಯುವ ತನಕ ವಿಶ್ರಮಿಸಲ್ಲ-ಗುಡುಗಿದ ದೇವೇಗೌಡರು

ಮಂಡ್ಯ: ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರನ್ನು ಮಾಜಿ ಪ್ರಧಾನಿ ದೇವೇಗೌಡರು ತೀವ್ರ ತರಾಡೆಗೆ ತೆಗೆದುಕೊಂಡರು.

ನಮ್ಮ ವಂಶ ಬಡತನದಿಂದ ಕಷ್ಟಸುಖ ಅರಿತು ಮೇಲೆ ಬಂದಿದೆ. ನಮ್ಮ ವಂಶಕ್ಕೆ ಈ ಕಣ್ಣೀರು ಬಳುವಳಿಯಾಗಿ ಬಂದಿದೆ ಎಂದು ತಿರುಗೇಟು ನೀಡಿದರು.

ಪಾಂಡವಪುರದ ಚಿನಕುರುಳಿ ಗ್ರಾಮದಲ್ಲಿ ಮಾತನಾಡಿದ‌ ಗೌಡರು,ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ಹೇಳಿದರು.

ನಾನು ನನ್ನ ಕಡೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ, ಮೊಮ್ಮಗನಿಗಾಗಿ ಈಗ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ಪ್ರಾದೇಶಿಕ ಪಕ್ಷ ಉಳಿಸಲು ನಾನು ಬಂದಿದ್ದೀನಿ. ಈ ಸರ್ಕಾರ ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ ಎಂದು ಕಡಕ್ಕಾಗಿ ಹೇಳಿದರು.

ಮೊಮ್ಮಗ ನಿಖಿಲ್ ಗೆದ್ದ ಮೇಲೂ ನಾನು ಮನೆಯಲ್ಲಿ ಮಲಗಲ್ಲ‌. ಆಮೇಲೆ ಕೂಡ ಹೋರಾಡಿ ಪಕ್ಷ ಕಟ್ಟುತ್ತೇನೆ ಎಂದು ತಿಳಿಸಿದರು ‌

ಡಿ.ಕೆ ಶಿವಕುಮಾರ್ ಅವರು ಕಣ್ಣೀರು ಹಾಕಿರೋದು ಯಾವತ್ತಾದರೂ ನೋಡಿದ್ದೀರಾ,ಕೊತ್ವಾಲ್ ರಾಮಚಂದ್ರ‌ನಿಂದ 100 ರೂಪಾಯಿಗೆ ಕೆಲಸ ಶುರು ಮಾಡಿದ್ದು ಈ ಡಿಕೆಶಿ ಅದನ್ನು ನೆನಪಿಸಿಕೊಳ್ಳಲಿ ಎಂದು ಹೇಳಿದರು.

ಜವಾಹರ ಲಾಲ್ ನೆಹರು, ಇಂದಿರಾ ಗಾಂಧಿ ಅಂತಹವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅಂತಹ ಪಕ್ಷದ ಅಧ್ಯಕ್ಷರಾಗಿರುವ ಡಿ.ಕೆ ಯಾವತ್ತಾದರೂ ಕಣ್ಣೀರು ಹಾಕಿದ್ದಾರಾ ಎಂದು ಪ್ರಶ್ನಿಸಿದರು.

ದೇವೇಗೌಡರು, ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿನೂ ಕಣ್ಣೀರು ಹಾಕಿದ್ದಾರೆ. ದೇಶಕ್ಕೆ ಅನ್ನ ಕೊಡುವ ರೈತನಿಗೆ ನೋವಾದಾಗ ಹೃದಯ ಮರುಗುತ್ತದೆ. ಅಂತವರಿಗೆ ಕಣ್ಣೀರು ಬರುತ್ತದೆ. ನನ್ನ ಮೊಮ್ಮಗ ಕಣ್ಣೀರು ಹಾಕಿದರ ಬಗ್ಗೆ ಮಾತಾಡುತ್ತಾರೆ. ನಮ್ಮ ವಂಶವೇ ಕಣ್ಣೀರು ಹಾಕುತ್ತದೆ. ನಮ್ಮ ಅಪ್ಪನಿಂದಲೇ ನಮಗೆ ಕಣ್ಣೀರು ಹಾಕೋದು ಬಂದಿದೆ. ಬಡತನವನ್ನು ನಾವು ಅನುಭವಿಸಿದ್ದೇವೆ. ಬಡವರ ಬಗ್ಗೆ ನಮಗೆ ಬೇಗೆ, ನೋವು ಇದೆ ಎಂದರು.

ಡಿಸಿಎಂ ಅವರು ಚನ್ನಪಟ್ಟಣದಲ್ಲಿ 6 ತಿಂಗಳು ಪ್ರವಾಸ ಮಾಡಿದರು. ಅವರೇ ಪಾರ್ಟಿ ಅಧ್ಯಕ್ಷರು, ಅವರೇ ಬಿ ಫಾರಂ ಕೊಡೋದು. ಕನಕಪುರದ ಎಂಎಲ್ಎ, ಮಂತ್ರಿಯಾದವರು ನಾನೇ ನಿಲ್ತೀನಿ ಎಂದಿದ್ದರು. ಅವರ ತಲೆಯಲ್ಲಿ ಏನೇನೂ ಇದ್ಯೋ. ಹೆಚ್ಡಿಕೆ ವರ್ಸಸ್ ಡಿಕೆ ಅಂತ ದಿನ ಚರ್ಚೆಯಾಗ್ತಿದೆ. ರಾಮನಗರವನ್ನು ಜಿಲ್ಲೆ ಮಾಡಿದ್ದು ಕುಮಾರಸ್ವಾಮಿ. ರಾಮನಗರವನ್ನು ಬೆಂಗಳೂರಿಗೆ ಸೇರಿಸ್ತೀನಿ, ಜನರಿಗೆ ಅನುಕೂಲ ಆಗುತ್ತೆ ಎನ್ನುತ್ತಿದ್ದಾರೆ. ಅವರು ರಾಮನಗರವನ್ನು ಉದ್ಧಾರ ಮಾಡುತ್ತಾರಂತೆ ಎಂದು ದೊಡ್ಡಗೌಡರು ಟೀಕಿಸಿದರು.

ವಾಲ್ಮೀಕಿ ಸಮಾಜದ 80 ಕೋಟಿ ತೆಗೆದುಕೊಂಡು ತೆಲಂಗಾಣ ಎಲೆಕ್ಷನ್ ಗೆ ಖರ್ಚು ಮಾಡಿದರು. ಬಡಬಗ್ಗರ ಹಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ನನಗೆ 92 ವರ್ಷ, ನಿಖಿಲ್ ಗೆದ್ದ ಬಳಿಕ ಮಲಗಲ್ಲ. ಈ ಸರ್ಕಾರವನ್ನು ತೆಗೆಯುವವರೆಗೂ ಮಲಗಲ್ಲ.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಶಾಸಕ ಮಂಜುನಾಥ್, ಚಿಕ್ಕ ಸೋಮಣ್ಣ ಮತ್ತಿತರರು ಹಾಜರಿದ್ದರು.

ಈ ಸರ್ಕಾರ ತೆಗೆಯುವ ತನಕ ವಿಶ್ರಮಿಸಲ್ಲ-ಗುಡುಗಿದ ದೇವೇಗೌಡರು Read More