ಬೆಂಗಳೂರಿಗೆ ವಕ್ಕರಿಸಿದ ಘಜ್ನಿ, ಘೋರಿ:ಕುಮಾರಸ್ವಾಮಿ ಕಟು ಟೀಕೆ

ಬೆಂಗಳೂರು: ಬಿಬಿಎಂಪಿಯನ್ನು ಏಳು ಭಾಗ ಮಾಡುವುದಕ್ಕೆ ಹೊರೆಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಕಿಡಿಕಾರಿದ್ದಾರೆ.

ಸಂಪದ್ಭರಿತ ಬೆಂಗಳೂರು ನಗರವನ್ನು ಲೂಟಿ ಮಾಡಲು ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅವನು ನಗರದ ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಮಾರ್ಮಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ,
ಹೋಳು ಮಾಡವುದು, ಒಡೆದು ಆಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ 75 ವರ್ಷದಿಂದ ಇದನ್ನೇ ಮಾಡಿದೆ ಎಂದು ಛೇಡಿಸಿದ್ದಾರೆ.

ಕಾಂಗ್ರೆಸ್ ನೀತಿಯೇ ಒಡೆದು ಅಳುವುದು. ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು ಹೋಳು ಮಾಡಲು ಹೊರಟಿದೆ ಎಂದು ಅವರು ಕಿಡಿಕಾರಿದ್ದಾರೆ.

ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದೇ ಕಾಂಗ್ರೆಸ್ ಸರಕಾರದ ದುರುದ್ದೇಶವಾಗಿದೆ. ಇವರಿಗೆ ಗ್ರೇಟರ್‌ ಬೆಂಗಳೂರು ಎನ್ನುವುದು ಹೆಸರಿಗಷ್ಟೇ ಕೊಳ್ಳೆ ಹೊಡೆಯುವುದಷ್ಟೇ ಉದ್ದೇಶ ಎಂದು ವ್ಯಂಗ್ಯ ವಾಡಿದ್ದಾರೆ.

ಬಿಬಿಎಂಪಿ ವಿಭಜನೆ ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ, ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್‌ ಘೋರಿ ಸಂಪದ್ಭರಿತ ಭಾರತವನ್ನು ಲೂಟಿ ಮಾಡಿದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಯಾರ ಹೆಸರು ಹೇಳದೆ‌ ಕಠಿಣ ಶಬ್ದಗಳಲ್ಲಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಂಗಳೂರಿಗೆ ವಕ್ಕರಿಸಿದ ಘಜ್ನಿ, ಘೋರಿ:ಕುಮಾರಸ್ವಾಮಿ ಕಟು ಟೀಕೆ Read More

ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಹೆಚ್.ಡಿ.ಕೆ ಆರೋಪ

ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ರಾಜಕೀಯದ ಸೇಡಿನ ಭಾಗ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು ಸಚಿವರು; ಆ ಭೂಮಿಯನ್ನು ನಾನು ಖರೀದಿಸಿ 40 ವರ್ಷವಾಗಿದೆ. ಅಷ್ಟೂ ವರ್ಷಗಳಿಂದ ಈ ವಿಷಯವನ್ನು ಜೀವಂತವಾಗಿಟ್ಟು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿದರು.

1984ರಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದು. ಸಿನಿಮಾ ಹಂಚಿಕೆದಾರನಾಗಿ ದುಡಿದ ಹಣದಲ್ಲಿ ನಾನು ಈ ಭೂಮಿಯನ್ನು ಖರೀದಿ ಮಾಡಿದ್ದೇನೆ. ಅಂದಿನಿಂದಲೂ ಈ ಭೂಮಿಯ ಮೇಲೆ ಕೆಲವರ ಕಣ್ಣು ಬಿದ್ದಿದೆ. ನನ್ನನ್ನು ರಾಜಕೀಯವಾಗಿ ಎದುರಿಸಲಾಗದ ಅಸಹಾಯಕತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವೇ ಮೂಲಕ ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಹೆಚ್ ಡಿ ಕೆ ಆರೋಪಿಸಿದರು.

2012ರಿಂದಲೂ ನನ್ನ ವಿರುದ್ದ ತನಿಖೆ ಮಾಡುತ್ತಿದ್ದಾರೆ, ಏನು ಸಿಗಲಿಲ್ಲ, ನಾನು ಸಿದ್ದರಾಮಯ್ಯನವರ ರೀತಿ ಸರಕಾರಿ ಜಮೀನು ಲೂಟಿ ಮಾಡಿಲ್ಲ. ಈಗ ಆಗಿರುವ ಎಲ್ಲಾ ತನಿಖೆಗಳು ಸಾಕಾಗುವುದಿಲ್ಲ ಎಂದು ಈಗ IAS ಅಧಿಕಾರಿಗಳ ನೇತೃತ್ವದಲ್ಲಿ SIT ತನಿಖೆ ಮಾಡಿಸುತ್ತಿದ್ದಾರೆ. ಯಾವುದೇ ತನಿಖೆ ಮಾಡಲಿ, ನಾನು ಮುಕ್ತವಾಗಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

1986ರಲ್ಲಿ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ರಾಮಚಂದ್ರ ಅವರುಗಳು ಇದೇ ಜಮೀನು ವಿಷಯದಲ್ಲಿ ಆಗಿನ ಪ್ರಧಾನಮಂತ್ರಿ, ಗೃಹ ಮಂತ್ರಿಯವರಿಗೆ ಪತ್ರ ಬರೆದಿದ್ದರು. ತಮ್ಮ ದೂರಿನಲ್ಲಿ ಅವರು ಕುಮಾರಸ್ವಾಮಿ ಅವರು ಜಮೀನು ಖರೀದಿಸಿದ್ದಾರೆ ಎಂದು ಹೇಳಿದ್ದರೇ ಹೊರತು ಕಬಳಿಸಿದ್ದಾರೆ ಎಂದು ಆರೋಪ ಮಾಡಿರಲಿಲ್ಲ. ನಾನು ಖರೀದಿ ಮಾಡಿರುವ ಆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದೇನೆಯೇ ಹೊರತು ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಸಿಲ್ಲ,ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದು ತಿಳಿಸಿದರು.

ರಾಜ್ಯದ ಸಂಪತ್ತನ್ನು ರಕ್ಷಿಸುವವನ ರೀತಿ ವರ್ತಿಸುವ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಎನ್ನುವ ವ್ಯಕ್ತಿ ನನ್ನ ಜಮೀನು ವಿಷಯದ ಬಗ್ಗೆ ಆರೋಪ ಮಾಡಿದ್ದಾರೆ. ಆದರೆ, ರಾಜ್ಯ ಹೈಕೋರ್ಟ್ ನಿಂದ ನನಗೆ ಯಾವುದೇ ನೋಟೀಲ್ ಬಂದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ದೇವೇಗೌಡರನ್ನು ಮೋದಿ ಅವರ ಚಿಯರ್ ಲೀಡರ್ ಎಂದು ಆಗೌರವದ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ದೇವೆಗೌಡರ ಬಗ್ಗೆ ಮಾತನಾಡುವ ಮುನ್ನ ತಮ್ಮ ಯೋಗ್ಯತೆ ಅರಿತುಕೊಂಡರೆ ಉತ್ತಮ ಎಂದು ತಿಳಿಸಿದರು.

ರಾಜ್ಯದ ನೀರಾವರಿಗೆ ದೇವೇಗೌಡರು ಏನು ಮಾಡಿದ್ದಾರೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂಬುದೂ ಜನರಿಗೆ ಗೊತ್ತಿದೆ. ದೇವೇಗೌಡರು ನೀರಾವರಿ ಬಗ್ಗೆ, ರಾಜ್ಯದ ಜನತೆಯ ರಕ್ಷಣೆ ಮಾಡುವುದಕ್ಕೆ ಇವರಿಂದ ಹೇಳಿಸಿಕೊಳ್ಳಬೇಕಿಲ್ಲ. ಸಿದ್ದರಾಮಯ್ಯ ಅವರೇ.. ಈ ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ನಿಮ್ಮ ಕೊಡುಗೆ ಏನು? ನೀರಾವರಿಗೆ ನಿಮ್ಮ ಕೊಡುಗೆ ಏನು? ಎಂದು ಕುಮಾರಸ್ವಾಮಿ ಕಾರವಾಗಿ ಪ್ರಶ್ನಿಸಿದರು.

ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಹೆಚ್.ಡಿ.ಕೆ ಆರೋಪ Read More

ಮೋದಿಯವರ ದೂರದೃಷ್ಟಿ; ರೈತಪರ ಆಲೋಚನೆಗೆ ಬಜೆಟ್ ಕೈಗನ್ನಡಿ:ಹೆಚ್ ಡಿ ಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಕೇಂದ್ರ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು,ಸಾವಯವ ಕೃಷಿಗೆ ಉತ್ತೇಜನ, ಕೃಷಿಯಲ್ಲಿ ಸುಸ್ಥಿರತೆಗೆ ಒತ್ತು, ಬೆಳೆ ತೆಗೆಯಲು ರೈತ ಮಾಡುತ್ತಿರುವ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರೈತರು ಸಶಕ್ತಗೊಂಡು ಉತ್ತಮ ಆದಾಯ ಗಳಿಸುವ, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಭವಿಷ್ಯದ ಸವಾಲುಗಳಿಗೆ ಭಾರತೀಯ ಕೃಷಿಯನ್ನು ಸಜ್ಜುಗೊಳಿಸುವ ಆಯವ್ಯಯ ಇದಾಗಿದೆ ಎಂದಿದ್ದಾರೆ.

ಪಿಎಂ ಧನ್ ಧಾನ್ಯ ಯೋಜನೆ ಭಾರತೀಯ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆ. ದೇಶೀಯ ಕೃಷಿಗೆ ವಿಶ್ವದರ್ಜೆಯ ಮೂಲಸೌಕರ್ಯ, ಕೃಷಿ ಉತ್ಪನ್ನಗಳ ದಾಸ್ತಾನಿಗೆ ಅತ್ಯುತ್ತಮ ವ್ಯವಸ್ಥೆ, ರಫ್ತಿಗೆ ಉತ್ತೇಜನ, ರೈತರಿಗೆ ಹೆಚ್ಚು ಆದಾಯ ಮತ್ತು ಗ್ರಾಮ ಭಾರತಕ್ಕೆ ಬಲ ತಂದಿದೆ,ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ ಹೈನುಗಾರರು, ಮೀನುಗಾರರು ಸೇರಿ ಎಲ್ಲಾ ಕೃಷಿಕರಿಗೆ ಸುಲಭ ಸಾಲ,
ಕೃಷಿ ತಂತ್ರಜ್ಞಾನ ಹಾಗೂ ಕೃಷಿ ಆಧಾರಿತ ಸ್ಟಾರ್ಟಪ್ಪ್ ಗಳ ಉತ್ತೇಜನಕ್ಕೆ 1 ಲಕ್ಷ ಕೋಟಿ ಮೀಸಲು,ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಅತ್ಯಾಧುನಿಕ ನೀರಾವರಿ ಸೌಲಭ್ಯಕ್ಕೆ ಆದ್ಯತೆ ನೀಡಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮೂಲಸೌಕರ್ಯ ಉತ್ತಮಪಡಿಸಲು ಕ್ರಮ, ಅತ್ಯುತ್ತಮ ಶೀತಲೀಕರಣ ಕೇಂದ್ರಗಳ ಸ್ಥಾಪನೆ, ಸುಲಭ-ಪರಿಣಾಮಕಾರಿ ಸಂಪರ್ಕ ವ್ಯವಸ್ಥೆ, ಅತ್ಯುತ್ತಮ ಪೂರೈಕೆ ಸರಪಳಿ,
ಪಿಎಂ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ಇನ್ನೂ ಹೆಚ್ಚಿನ ರೈತರು. ಶೀಘ್ರಗತಿಯಲ್ಲಿ ವಿಮಾ ಸೌಲಭ್ಯ ಸಿಗುವಂತೆ ಮಾಡುವುದು ಹಾಗೂ ಅನ್ನದಾತನ ಸುರಕ್ಷತೆಗೆ ಅತಿಹೆಚ್ಚು ಒತ್ತು,ಸಹಜ ಹಾಗೂ ನಿಸರ್ಗಕ್ಕೆ ಪೂರಕವಾದ ಕೃಷಿಗೆ ಮನ್ನಣೆ ನೀಡಿ ರೈತರಿಗೆ ಎಲ್ಲಾ ರೀತಿಯ ಉತ್ತೇಜನ ನೀಡಲಾಗಿದೆ.

ಪ್ರಧಾನಿಗಳ ಕನಸು ವಿಕಸಿತಭಾರತ 2047 ಸಾಕಾರಕ್ಕೆ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಆಯವ್ಯಯ ಮಹತ್ವದ ಕೊಡುಗೆ ನೀಡಲಿದೆ. ಭವಿಷ್ಯದಲ್ಲಿ ಭಾರತೀಯ ಕೃಷಿ ಕ್ಷೇತ್ರ ಮತ್ತಷ್ಟು ಸಮೃದ್ಧಿಯಾಗಲಿದೆ ಎಂದು ಹೆಚ್ ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಮೋದಿಯವರ ದೂರದೃಷ್ಟಿ; ರೈತಪರ ಆಲೋಚನೆಗೆ ಬಜೆಟ್ ಕೈಗನ್ನಡಿ:ಹೆಚ್ ಡಿ ಕೆ Read More

ಸರಕಾರದ ಯೋಜನೆಗಳ ವೈಫಲ್ಯಕ್ಕೆ ಮೈಕ್ರೋ ಫೈನಾನ್ಸ್ ಪ್ರಕರಣಗಳೇ ಸಾಕ್ಷಿ- ಹೆಚ್.ಡಿ.ಕೆ

ಮೈಸೂರು: ಮೈಕ್ರೋ ಫೈನಾನ್ಸ್ ಪ್ರಕರಣಗಳು ಹಾಗು ಸಂಭವಿಸುತ್ತಿರುವ ಸಾವುಗಳು ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಪ್ರಕರಣಗಳು ಸೃಷ್ಟಿಸುತ್ತಿರುವ ತಲ್ಲಣಗಳು ಒಂದೆರಡಲ್ಲ, ಅನೇಕ ಸಾವು ನೋವುಗಳು ಆಗುತ್ತಿವೆ. ಸರ್ಕಾರಗಳಿಂದ ಅನುಷ್ಟಾನ ಆಗುತ್ತಿರುವ ಕಾರ್ಯಕ್ರಮಗಳ ವೈಫಲ್ಯಕ್ಕೆ ಇವೆಲ್ಲಾ ಸಾಕ್ಷಿ, ಕಾರ್ಯಕ್ರಮಗಳು ಜನರಿಗೆ ತಲುಪುತ್ತಿಲ್ಲ ಎಂದು ತಿಳಿಸಿದರು.

ಸರಕಾರಗಳ ಕಾರ್ಯಕ್ರಮಗಳು ಜನರಿಗೆ ಯಾಕೆ ತಲುಪುತ್ತಿಲ್ಲ ಎಂಬ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಭಿವೃದ್ಧಿಶೀಲ ರಾಜ್ಯ ಕರ್ನಾಟಕದಲ್ಲಿ ಘಟಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಬಂಧೀ ಪ್ರಕರಣಗಳು ಯಾರಿಗೂ ಶೋಭೆ ತರುವಂತದ್ದಲ್ಲ, ಇದಕ್ಕೆ ಪರಿಹಾರ ಏನು ಎಂಬ ಬಗ್ಗೆ ಆಲೋಚನೆ ಮಾಡಬೇಕಿದೆ ಎಂದು ಸಲಹೆ ನೀಡಿದರು.

ದೇಶದಲ್ಲಿ ಹಣವಿದೆ. ಅದನ್ನು ಹೇಗೆ ಬಳಕೆ ಮಾಡುತ್ತಿದ್ದೇವೆ ಎನ್ನುವುದು ಮುಖ್ಯ. ನಮ್ಮ ಕಾರ್ಯಕ್ರಮಗಳು ಎಲ್ಲಿ ವಿಫಲವಾಗುತ್ತಿವೆ. ಜನಪ್ರತಿನಿಧಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂಬ ಬಗ್ಗೆ ಓರೆಗೆ ಹಚ್ಚಬೇಕಿದೆ. ಆನ್ಲೈನ್ ಲಾಟರಿ, ಗೇಮ್ ಗಳು ಯುವಕರನ್ನು ದಾರಿ ತಪ್ಪಿಸುತ್ತಿವೆ. ಕುಟುಂಬಗಳು ನಾಶವಾಗುತ್ತಿವೆ. ಇಂಥ ಪಿಡುಗುಗಳಿಗೆ ಕಡಿವಾಣ ಹಾಕದೇ ಇದ್ದರೆ ಇದೇ ಅತಿದೊಡ್ಡ ಸಮಸ್ಯೆಯಾಗಿ ಮುಂದೆ ಸಮಾಜವನ್ನು ಕಾಡಲಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಕೃಷಿ ವೃತ್ತಿ ಮೂರನೇ ದರ್ಜೆ ವೃತ್ತಿ ಎನ್ನುವ ಮನಸ್ಸು ಕೆಲವರಲ್ಲಿದೆ, ಅಂತಹ ಮನೋಭಾವ ಹೋಗಬೇಕು,ದೇಶಕ್ಕೆ ಅನ್ನ ನೀಡುವ ರೈತನ ಬಗ್ಗೆ ತಾತ್ಸಾರ ಇದೆ. ನಿರ್ಲಕ್ಷ್ಯ ಮಾಡುತ್ತಿದ್ದೇವೆ. ನನ್ನ ಪ್ರಕಾರ ರೈತನ ಪ್ರಗತಿಯೇ ದೇಶದ ಪ್ರಗತಿ ಎಂದು ಸಚಿವರು ಹೇಳಿದರು.

ರೈತನ ಬದುಕು ಸರಿ ಮಾಡದೆ ಇದ್ದರೆ ನಾವು ಯಾವುದೇ ಕ್ಷೇತ್ರದಲ್ಲಿ ಎಷ್ಟೇ ಬೆಳೆದು ಎಷ್ಟೇ ಪೈಪೋಟಿ ಕೊಟ್ಟರೂ ಉಪಯೋಗವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಆಧುನಿಕ ಕೃಷಿಯಲ್ಲಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಇಲ್ಲಿ ನಡೆಯುತ್ತಿರುವ ಕೃಷಿ ವಿಚಾರ ಸಂಕಿರಣ ಅರ್ಥಪೂರ್ಣ. ಸುತ್ತೂರು ಜಾತ್ರಾ ಮಹೋತ್ಸವ ಕಂಡು ನನಗೆ ಬಹಳ ಸಂತೋಷವಾಗಿದೆ ಎಂದು ಹೇಳಿದರು.

೧೦೬೬ನೇ ಶ್ರೀ ಶಿವರಾತ್ರೀಶ್ವರ ಜಯಂತಿಯನ್ನು ಮಳವಳ್ಳಿಯಲ್ಲಿ ಆಚರಿಸಬೇಕು ಎನ್ನುವುದು ನಮ್ಮ ಅಭಿಲಾಷೆ. ಅದಕ್ಕೆ ಪರಮಪೂಜ್ಯರು ಅನುಮತಿ ಕೊಡಬೇಕು ಎಂದು ಇದೇ ವೇಳೆ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಮಹಾ ಸ್ವಾಮೀಜಿ ಅವರ ಅನುಮತಿಯನ್ನು ಕುಮಾರಸ್ವಾಮಿ ಸಚಿವರು ಕೇಳಿದರು.

ಇದಕ್ಕೆ ತಕ್ಷಣವೇ ಸ್ಪಂದಿಸಿದ ಶ್ರೀಗಳು ತಮ್ಮ ಒಪ್ಪಿಗೆ ಸೂಚಿಸಿ, ಜಯಂತಿ ಅರ್ಥಪೂರ್ಣವಾಗಿ ನಡೆಯಲಿ ಎಂದು ಹಾರೈಸಿದರು.

ಪ್ರಯಾಗ್ ರಾಜ್ ನಲ್ಲಿ
ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತ‌ದಲ್ಲಿ ಬೆಳಗಾವಿ ಮೂಲದ ನಾಲ್ವರು ಮೃತಪಟ್ಟಿರುವ ಸುದ್ದಿ ಆಘಾತ ಮೂಡಿಸಿದೆ, ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನನ್ನ ಸಂತಾಪಗಳು ಎಂದು ಕಾರ್ಯಕ್ರಮದ ನಂತರ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ತಿಳಿಸಿದರು.

ಅಲ್ಲಿನ ಸ್ಥಳೀಯ ಆಡಳಿತದೊಂದಿಗೆ ಸಂಪರ್ಕ ಸಾಧಿಸಿ ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.

ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಸಮ್ಮೇಳನ ಬೃಹತ್ ಕುಂಭಮೇಳದಲ್ಲಿ ಭಾಗಿಯಾಗಲು ತೆರಳುತ್ತಿರುವ ಕನ್ನಡಿಗರು ಅಲ್ಲಿನ ಸ್ಥಳೀಯ ಆಡಳಿತ, ಪೊಲೀಸ್ ಸಿಬ್ಬಂದಿ ಮತ್ತು ಆಯೋಜಕರು ಕಾಲಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲಿಸಿ ಅವರಿಗೆ ಸಹಕರಿಸಿ. ಯಾವುದೇ ಗಾಳಿ ಸುದ್ದಿಗಳಿಗೆ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಸರಕಾರದ ಯೋಜನೆಗಳ ವೈಫಲ್ಯಕ್ಕೆ ಮೈಕ್ರೋ ಫೈನಾನ್ಸ್ ಪ್ರಕರಣಗಳೇ ಸಾಕ್ಷಿ- ಹೆಚ್.ಡಿ.ಕೆ Read More

ಜನರ ರಕ್ತ ಹೀರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕಿ: ಹೆಚ್.ಡಿಕೆ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು; ಈ ಕೆಲಸಾನ ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ, ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ರಾಜ್ಯದಲ್ಲಿ ನಾಗರಿಕ ಸರಕಾರ, ಗೃಹ ಸಚಿವರು ಇದ್ದಾರೆಯೇ ಎಂದು ಹೆಚ್ ಡಿ ಕೆ ಕಾರವಾಗಿ ಪ್ರಶ್ನಿಸಿದರು.

2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂಥ ಕಿಡಿಗೇಡಿ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ,ಅಷ್ಟೇ ಅಲ್ಲ, ಜನರು ಪಡೆದ ಸಾಲವನ್ನು ತೀರಿಸಲಾಗದ ಪರಿಸ್ಥಿತಿ ಸೃಷ್ಟಿಯಾದರೆ ಅದಕ್ಕೆ ಪರಿಹಾರ ಏನೆಂಬ ಬಗ್ಗೆ ನಾನು ಆಲೋಚನೆ ಮಾಡಿದ್ದೆ, ಆ ಸಂದರ್ಭದಲ್ಲಿ ಕೇರಳ ಸರ್ಕಾರ ಈ ಸಮಸ್ಯೆ ಬಗೆಹರಿಸಲು ಒಂದು ಆಯೋಗವನ್ನು ರಚನೆ ಮಾಡಿತ್ತು. ಆ ಮಾಹಿತಿ ನನಗಿತ್ತು. ಕೇರಳಕ್ಕೆ ತೆರಳಿ ಖುದ್ದು ಅಧ್ಯಯನ ಮಾಡುವ ಉದ್ದೇಶದಿಂದ ನಾನು ಅಂದಿನ ನನ್ನ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಬಂಡೆಪ್ಪ ಕಾಶೆಂಪೂರ್ ನೇತೃತ್ವದ ನಿಯೋಗವನ್ನು ಕೇರಳಕ್ಕೆ ಕಳಿಸಿದ್ದೆ. ಅದನ್ನು ಆಧಾರವಾಗಿ ಇಟ್ಟುಕೊಂಡು ನಾನು ಇಲ್ಲಿ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದಿದ್ದೆ ಆಮೇಲೆ ನನ್ನ ಸರ್ಕಾರ ಹೋಯಿತು,ಅದು ಕಸದ ಬುಟ್ಟಿಗೆ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಈಗ ಅದರ ಪರಿಣಾಮವೇ ಮೈಕ್ರೋ ಫೈನಾನ್ಸ್ ಗಳ ಉಪಟಳ ಜಾಸ್ತಿ ಆಗಿರುವುದು. ಖಾಸಗಿ ಹಣಕಾಸು ಸಂಸ್ಥೆಗಳು ಯಾವುದೇ ಪರವಾನಗಿ ಪಡೆಯದೇ ಕಾನೂನುಬಾಹಿರವಾಗಿ ಈ ರೀತಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಾಳಲಾರದೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ, ಊರನ್ನೇ ಖಾಲಿ ಮಾಡುವ ದುಸ್ಥಿತಿ ಸೃಷ್ಟಿಯಾಗಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ನಾನು ಎಷ್ಟೋ‌ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದೇನೆ. ನನ್ನ ಅಧಿಕಾರ ಹೋಗಿಲ್ಲ, ಗಟ್ಟಿಯಾಗಿದ್ದೇನೆ ಎಂದು ಸಿಎಂ ಹೇಳುತ್ತಾರೆ. ಅವರೇನೋ ಗಟ್ಟಿಯಾಗಿದ್ದಾರೆ. ಆದರೆ, ನಿಮ್ಮನ್ನು ಮುಖ್ಯಮಂತ್ರಿ ಜಾಗದಲ್ಲಿ ಕೂರಿಸಿರುವ ಆ ಜನ ಏನಾಗಿದ್ದಾರೆ, ಅವರನ್ನು ಗಟ್ಟಿ ಮಾಡೋಕೆ ಏನು ಮಾಡಿದ್ದೀರಿ ಎಂದು ಹೆಚ್ ಡಿ ಕೆ ಕಿಡಿಕಾರಿದರು.

ಕಾನೂನುಬಾಹಿರವಾಗಿ ಮೈಕ್ರೋ ಫೈನಾನ್ಸ್ ಮಾಡಲು ಖಾಸಗಿ ಕಂಪನಿಗಳಿಗೆ ಅನುಮತಿ ಕೊಟ್ಟವರು ಯಾರು, ಸರಕಾರ ಅನುಮತಿ ಕೊಟ್ಟಿತ್ತಾ, ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಸರಿಯಾದ ರೀತಿಯಲ್ಲಿ ಸಾಲ ಸೌಲಭ್ಯ ನೀಡಿದರೆ ಮೈಕ್ರೋ ಫೈನಾನ್ಸ್ ಗಳ ಬಳಿಗೆ ಸಾಲಕ್ಕೆ ಯಾಕೆ ಹೋಗುತ್ತಾರೆ‌ ಎಂದು ಕುಮಾರಸ್ವಾಮಿ ಸರಕಾರವನ್ನು ಪ್ರಶ್ನಿಸಿದರು.

ಜನರ ರಕ್ತ ಹೀರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕಿ: ಹೆಚ್.ಡಿಕೆ Read More

ಖೋಖೋ ವಿಶ್ವಕಪ್: ಎಂ.ಕೆ.ಗೌತಮ್, ಚೈತ್ರಾ ಅವರನ್ನು ಗೌರವಿಸಿದ ಹೆಚ್.ಡಿ.ಕೆ

ನವದೆಹಲಿ: ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸನ್ಮಾನಿಸಿ ಗೌರವಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಟಗಾರರಾದ ಎಂ.ಕೆ.ಗೌತಮ್ ಹಾಗೂ ಚೈತ್ರಾ, ಮತ್ತವರ ಕೋಚ್’ಗಳಾದ ಸುಮಿತ್ ಭಾಟಿಯಾ ಮತ್ತು ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಸಚಿವರು ಬರಮಾಡಿಕೊಂಡು ಗೌರವಪೂರ್ವಕವಾಗಿ ಸನ್ಮಾನಿಸಿದರು.

ಗೌತಮ್, ಚಿತ್ರಾ ಇಬ್ಬರಿಗೂ ಶುಭ ಕೋರಿದ ಸಚಿವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು. ಕರ್ನಾಟಕದ ಗರಿಮೆಯನ್ನು ನೀವು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದು ಶುಭ ಹಾರೈಸಿದರು.

ದೇಶೀಯ ಕ್ರೀಡೆ ಖೋಖೋದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಿರುವುದಕ್ಕೆ ನಿಮ್ಮ ಜೊತೆ ಸ್ಫೂರ್ತಿಯಿಂದ ಆಟವಾಡಿದ ತಂಡದ ಇತರ ಎಲ್ಲಾ ಆಟಗಾರರಿಗೆ, ನಿಮ್ಮ ತರಬೇತುದಾರರಿಗೆ ನನ್ನ ಅಭಿನಂದನೆಗಳು ಎಂದು ಕುಮಾರಸ್ವಾಮಿ ಹೇಳಿದರು.

ಕನ್ನಡ ನೆಲದ ಗ್ರಾಮೀಣ ಮಕ್ಕಳಿಬ್ಬರೂ ಇಂದು ಭಾರತಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಮಾತ್ರವಲ್ಲದೆ, ಕನ್ನಡಮ್ಮನ ಕೀರ್ತಿ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಪೇರಿಸಿ ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ. ಇಬ್ಬರಿಗೂ ಶುಭವಾಗಲಿ, ಭವಿಷ್ಯದಲ್ಲಿ ಇಂತಹ ಅನೇಕ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರಿಸಿದರು.

ಎಂ.ಕೆ.ಗೌತಮ್ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲೀಗೆರೆ ಗ್ರಾಮದವರು ಹಾಗೂ ಚೈತ್ರಾ ಅವರು ಚಾಮರಾಜ ನಗರ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದವರು.

ಗ್ರಾಮೀಣ ಮಕ್ಕಳು ಹೆಚ್ಚು ಪ್ರಮಾಣದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಬರಬೇಕು. ನಮ್ಮಿಂದ ಸಾಧ್ಯವಾಗುವ ಎಲ್ಲಾ ಪ್ರೋತ್ಸಾಹ ನೀಡುತ್ತೇವೆ. ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡೆಗೆ ಬಹಳಷ್ಟು ಪ್ರೋತ್ಸಾಹ ನೀಡುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಈ ವೇಳೆ ಮಾತನಾಡಿದ ಗೌತಮ್, ಚೈತ್ರಾ ಕರ್ನಾಟಕದವರೇ ಆಗಿರುವ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಗೆ ಬರಮಾಡಿಕೊಂಡು ನಮ್ಮಿಬ್ಬರನ್ನು ಗೌರವಿಸಿದ್ದು ಬಹಳ ಸಂತೋಷ ಉಂಟು ಮಾಡಿದೆ. ನಮ್ಮ ಬದುಕಿನಲ್ಲಿ ಇದು ಅವಿಸ್ಮರಣೀಯವಾದುದು ಎಂದು ಸಂತೋಷ ವ್ಯಕ್ತಪಡಿಸಿದರು.

ಖೋಖೋ ವಿಶ್ವಕಪ್: ಎಂ.ಕೆ.ಗೌತಮ್, ಚೈತ್ರಾ ಅವರನ್ನು ಗೌರವಿಸಿದ ಹೆಚ್.ಡಿ.ಕೆ Read More

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಜತೆ ಹೆಚ್.ಡಿ.ಕೆ ಸಭೆ

ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.

ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕುಮಾರಸ್ವಾಮಿ ಅವರು ಅರ್ಜುನ್ ರಾಮ್ ಮೇಘವಾಲ್ ಅವರೊಂದಿಗೆ ಚರ್ಚಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ನಡೆದ ಈ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ ಬಾಧಕಗಳ ಬಗ್ಗೆ ಸಚಿವ ಮೇಘವಾಲ್ ಅವರೊಂದಿಗೆ ಮಾಹಿತಿ ಹಂಚಿಕೊಳ್ಳಲಾಯಿತು.

2030ನೇ ವರ್ಷದ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂಥ ಮಹತ್ವಾಕಾಂಕ್ಷೆ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಸಚಿವರು ಹೇಳಿದರು.

ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್ ಅವರು; ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದು ಸಲಹೆ ನೀಡಿದರು.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಜತೆ ಹೆಚ್.ಡಿ.ಕೆ ಸಭೆ Read More

ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ: ಹೆಚ್.ಡಿ ಕೆಗೆ ಗಡ್ಕರಿ ಭರವಸೆ

ನವದೆಹಲಿ: ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದು ಅವರು‌ ಸಕಾರಾತ್ಮಕವಾಗಿ‌ ಸ್ಪಂದಿಸಿದ್ದಾರೆ.

ನವದೆಹಲಿಯಲ್ಲಿನ ಸಚಿವ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಕುಮಾರಸ್ವಾಮಿ ಅವರು ನೆನೆಗುದಿಗೆ ಬಿದ್ದಿದ್ದ ಈ ಯೋಜನೆ ಕುರಿತು ಸಚಿವರಲ್ಲಿ ಮನವಿ ಮಾಡಿದರು.

ಕುಮಾರಸ್ವಾಮಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಗಡ್ಕರಿ ಅವರು ಆದಷ್ಟು ಬೇಗ ಯೋಜನೆಯ ಪ್ರಸ್ತಾವನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ‌ ಮುಂದೆ ಮಂಡಿಸಿ ತ್ವರಿತವಾಗಿ ಅನುಷ್ಠಾನಗೊಳಿಸಲು ಸಹಕರಿಸುವುದಾಗಿ ಭರವಸೆ ನೀಡಿದರು.

ನಾಲ್ಕರಿಂದ ಆರು ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ.

ಎಂಟು ವರ್ಷಗಳಿಂದ ಬಾಕಿ ಇದ್ದ ಭೂಸ್ವಾಧೀನ ಪರಿಹಾರದ ಹಣವನ್ನು ಕೂಡಲೇ ರೈತರಿಗೆ ಪಾವತಿ ಮಾಡಲು ಸಚಿವ ಗಡ್ಕರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಮನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಈ‌ ವೇಳೆ ಕುಮಾರಸ್ವಾಮಿ ತಿಳಿಸಿದರು.

ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದೆ, ಯೋಜನೆಯ ಸುಮಾರು 4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ ಎಂದು ಹೆಚ್ ಡಿ ಕೆ ತಿಳಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹವಾದುದು ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ: ಹೆಚ್.ಡಿ ಕೆಗೆ ಗಡ್ಕರಿ ಭರವಸೆ Read More

ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬರುತ್ತೆ:40% ಕಮಿಶನ್ ಬಗ್ಗೆ ಸಿಎಂಗೆ ಹೆಚ್ ಡಿ ಕೆ ಪ್ರಶ್ನೆ

ಬೆಂಗಳೂರು: ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿರುವ ಕೇಂದ್ರ ಸಚಿವ ಹೆಚ್ ಡಿ.ಕುಮಾರಸ್ವಾಮಿ,ನಿಮ್ಮ ಪಕ್ಷದಲ್ಲೂ ಶೇ. 40 ಕಮೀಶನ್ ಸುಲಿಗೆ ನಡೆದಿದೆ ಎಂದು ಗುತ್ತಿಗೆದಾರರೇ ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ಈ‌ ಬಗ್ಗೆ ಟ್ವೀಟ್ ಮಾಡಿರುವ ಅವರು,
ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ
ಸರಕಾರವೇ ವಾಸಿ ಇತ್ತು ಎಂದು ನಿಮ್ಮ ಪಕ್ಷದ ಗುತ್ತಿಗೆದಾರರೇ ಹೇಳಿಕೊಂಡಿದ್ದರು.
ಕಾಂಗ್ರೆಸ್ ಸರಕಾರದಲ್ಲೂ ಶೇ. 40 ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂದು ಅವರು ನೇರವಾಗಿ ಆರೋಪಿದ್ದಾರೆ ಇದಕ್ಕೆ ಏನು ಹೇಳುತ್ತೀರಿ ಎಂದು ಟಾಂಗ್ ನೀಡಿದ್ದಾರೆ.

ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, ಯಾಕಪ್ಪಾ ಹಾಗೆ ಹೇಳಿದಿರಿ ಎಂದು ಅವರನ್ನೇ ಕರೆದು ಕೇಳಬೇಕಿತ್ತು,ಆದರೂ ಏಕೆ ಕೇಳಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ ಶೇ.40 ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ ಆಗ ಎಷ್ಟು ದಾಖಲೆ ನೀಡಿದ್ದೀರಿ ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ ಹೇಳಿ,
ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ ಎಂದು ಕುಮಾರಸ್ವಾಮಿ ನೇರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದಾರೆ.

ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬರುತ್ತೆ:40% ಕಮಿಶನ್ ಬಗ್ಗೆ ಸಿಎಂಗೆ ಹೆಚ್ ಡಿ ಕೆ ಪ್ರಶ್ನೆ Read More

ಎಲ್ಲಾ ಕಡೆಗೂ ಸಿದ್ದರಾಮಯ್ಯ ಹೆಸರಿಡಿ:ಹೆಚ್.ಡಿ.ಕೆ ಲೇವಡಿ

ಮೈಸೂರು: ದೇವನೂರು ಬಡಾವಣೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡಲಿ,ಅಷ್ಟೇ ಏಕೆ ಕೆಸರೆ ಗ್ರಾಮಕ್ಕೂ ಸಿದ್ದರಾಮಯ್ಯ ಹೆಸರಿಡಿ ಎಲ್ಲಾ ಕಡೆಗೂ ಇಡಿ ಎಂದು
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಮೈಸೂರಿನಲ್ಲಿ ‌ಮಾಧ್ಯಮದವರೊಂದಿಗೆ
ಕೆಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಇಡೀ ರಾಜ್ಯಕ್ಕೆ ಸಿದ್ದರಾಮಯ್ಯ ಹೆಸರಿಟ್ಟುಬಿಡಿ ಟೀಕಾಪ್ರಹಾರ ನಡೆಸಿದರು.

ಪ್ರಿನ್ಸೆಸ್ ರಸ್ತೆ ಬದಲಾವಣೆ ಮುನ್ನಲೆಗೆ ಬಂದಾಗಲೂ ಸಿಎಂ ಮೌನವಾಗಿದ್ದಾರೆ ಎಂದು ಟಾಂಗ್ ನೀಡಿದರು.

ಕೆ ಎಸ್ ಆರ್‌ಟಿಸಿ‌ ಬಸ್ ಪ್ರಯಾಣ ದರ ಹೆಚ್ಚಳ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕೆ, ದರ ಹೆಚ್ಚಳ ಜನಕ್ಕೆ ತಾನೇ. ಮಂತ್ರಿಗಳಿಗೆ ಅಲ್ವಾಲ್ಲ,ಅವರಿಗೇನು ಜನರ ಜೇಬಿಗೆ ಕೈ ಹಾಕಿ ಲೂಟಿ ಮಾಡುತ್ತಿದ್ದಾರೆ. ಜನರಿಗೆ ಕಷ್ಟ ಕೊಟ್ಟು ಖುಷಿ ಪಡುವ ಸರ್ಕಾರ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿಗಳಿಗೆ ಇಬ್ಬರು ಮಹನೀಯರು ಸಹಿ ಹಾಕಿದರು. ಸಿದ್ದರಾಮಯ್ಯ ಸಹಿ ಹಾಕಿದರು ಇನ್ನೊಬ್ಬ ಮಹಾನ್ ವ್ಯಕ್ತಿ ಬಗ್ಗೆ ನಾನು ಹೇಳಲ್ಲ, ದೇಶದಲ್ಲಿ ಮನಮೋಹನ್ ಸಿಂಗ್ ಬಳಿಕ ಸಿದ್ದರಾಮಯ್ಯ ದೊಡ್ಡ ಆರ್ಥಿಕ ತಜ್ಞರು ಅವರೇ ಅಲ್ಲವೇ ಸಹಿ ಹಾಕಿರೋದು ಎಂದು ಟಾಂಗ್ ನೀಡಿದರು.

ಅಪರೇಷನ್ ಹಸ್ತದ ವಿಚಾರ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅದು ನಡೀತಾನೆ ಇದೆ. ನಮ್ಮಲ್ಲಿ 18 ಜನ ಶಾಸಕರಿದ್ದಾರೆ. ಒಟ್ಟಾಗಿದ್ದಾರೆ ಅದನ್ನೇ ಹರೀಶ್ ಗೌಡ ಹೇಳಿರೋದು. ಒತ್ತಡ ಅಂತೂ ಇರತ್ತೆ ಅದನ್ನೇ ಬೆಳಗಾವಿಯಲ್ಲಿ ಶಾಸಕರು ಕೂತು ಮಾತನಾಡಿದ್ದಾರೆ ಅಷ್ಟೇ. ನಮ್ಮ ಶಾಸಕರು ನಮ್ಮ ಜೊತೆ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಶಾಸಕ ಜಿ.ಟಿ.ದೇವೇಗೌಡರ ನಡುವಿನ ಮುನಿಸು ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಮನೆ ಎಂದ‌ ಮೇಲೆ ಮುನಿಸು ಇರುತ್ತೆ,ಜೆಡಿಎಸ್ ಮತ್ತು ಜಿಟಿಡಿದು ಗಂಡ- ಹೆಂಡತಿ ಜಗಳದ ತರ ಎಂದು ಹೇಳಿದರು.

ಎಲ್ಲಾ ಕಡೆಗೂ ಸಿದ್ದರಾಮಯ್ಯ ಹೆಸರಿಡಿ:ಹೆಚ್.ಡಿ.ಕೆ ಲೇವಡಿ Read More