ಜಮೀರ್ ವಿರುದ್ಧ ರಾಜ್ಯ,ಜಿಲ್ಲಾ ಒಕ್ಕಲಿಗರ ಸಂಘ ಆಕ್ರೋಶ

ಮೈಸೂರು: ಚನ್ನಪಟ್ಟಣದ ಉಪಚುನಾವಣ ಪ್ರಚಾರದ ಸಭೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್,ಕೇಂದ್ರ ಸಚಿವ ಹೆಚ್ ಡಿ ಕುಮಾರ ಸ್ವಾಮಿ ಯವರಿಗೆ ಅತ್ಯಂತ ಕೀಳಾಗಿ ನಿಂದಿಸಿರುವುದು ಖಂಡನೀಯ ಎಂದು ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ ಮತ್ತು ರಾಜ್ಯ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿವೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿ ಜಿ ಗಂಗಾಧರ್ ಮಾತನಾಡಿ,ಜಮೀರ್ ಹೇಳಿಕೆ
ಕೇವಲ ವ್ಯಕ್ತಿಗತವಲ್ಲದೆ ಜಾತಿನಿಂದನೆ ಯಾಗಿದೆ ಎಂದು ಕಿಡಿಕಾರಿದರು.

ಮುಸ್ಲಿಂ ಸಮುದಾಯದಲ್ಲಿ ಕರಿಯರಿಲ್ಲವೇ ಅವರನ್ನೂ ನೀವು ನಿಂದಿಸಿದಂತೆ ಆಗುವುದಿಲ್ಲವೇ ಮತ್ತು ನಮ್ಮ ಭಾರತ ದೇಶದಲ್ಲಿ ಯಾವ ಜನಾಂಗದಲ್ಲಿ ಕಪ್ಪು ಬಣ್ಣದ ಚರ್ಮವುಳ್ಳ ಜನರಿಲ್ಲ ಹೇಳಿ ಈ ರೀತಿಯ ಹೇಳಿಕೆಗಳಿಂದ ಒಂದು ಸಮುದಾಯದಿಂದ ಮತ್ತೊಂದು ಸಮುದಾಯದ ಮೇಲೆ ಜನಾಂಗೀಯ ದ್ವೇಷವನ್ನು ಉಂಟುಮಾಡುವ ಹಾಗೆ ಆಗುವುದಿಲ್ಲವೇ ಎಂದು ಕಾರವಾಗಿ ಪ್ರಶ್ನಿಸಿದರು.

ಜಮೀರ್ ಅವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಎಲ್ಲರನ್ನು ಸಮಾನ ವಾಗಿ ಕಾಣುತ್ತೇನೆಂದು ಈಗ ಜನಾಂಗೀಯ ಎಂದು ಸಂಭೋಧಿಸಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಇದು ಮನುಷ್ಯ ಕುಲವನ್ನೇ ಕೀಳಾಗಿ ಕಾಣುವುದು ಇದು ಸಂವಿಧಾನ ಬಾಹಿರ ಮತ್ತು ಇಲ್ಲಿ ಜಾತಿ ನಿಂದನೆ ಯಾಗಿದ್ದು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಗಂಗಾಧರ್ ಆಗ್ರಹಿಸಿದರು.

ಮೈಸೂರು ಜಿಲ್ಲಾ ಅಧ್ಯಕ್ಷ ಮರಿಸ್ವಾಮಿ ಮಾತನಾಡಿ ಸಚಿವ ಜಮೀರ್ ಅಹಮದ್ ಖಾನ್ ಅತ್ಯಂತ ಲಘವಾಗಿ ಮತ್ತು ಪ್ರಚೋದನಕಾರಿಯಾಗಿ ಮಾತನಾಡುವುದು, ಸಭೆಗಳಲ್ಲಿ ಇದು ಮೊದಲೇನಲ್ಲ ಇದು ಪುನಾರವರ್ತನೆ ಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಬ್ಬ ಪುಡಿ ರೌಡಿಯ ರೀತಿ ವರ್ತಿಸುತ್ತಿರುವ ಜಮೀರ್ ಖಾನ್ ವಿರುದ್ದ ಜನಾಂಗೀಯ ನಿಂದನೆ ಜಾತಿ ನಿಂದನೆ ಮತ್ತು ಪ್ರಚೋದನಕಾರಿ ಭಾಷಣ ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಗೇಡುವುತ್ತಿರುವುದನ್ನು ಪರಿಗಣಿಸಿ ಸಂಭಂದಿಸಿದ ಸೆಕ್ಷನ್ ನ ಅಡಿ ದೂರು ದಾಖಲಿಸ ಬೇಕೆಂದು ಒತ್ತಾಯಿಸಿದರು.

ತೇಜೇಶ್ ಲೋಕೇಶ್ ಗೌಡ ಮಾತನಾಡಿ ಒಕ್ಕಲಿಗರು ಜಗತ್ತಿಗೆ ಅನ್ನ ನೀಡುವವರು. ಎಚ್ ಡಿ ದೇವೇಗೌಡರು ನಮ್ಮ ಸಮುದಾಯದ ಅಸ್ಮಿತೆ, ಹಿರಿಯ ಮುತ್ಸದಿಗಳು, ಅವರ ಗರಡಿಯಲ್ಲೇ ಪಳಗಿ, ಅವರ ಮನೆ ಬಾಗಿಲನ್ನು ಕಾದು ಈಗ ಶಾಸಕನಾಗಿ, ಸಚಿವನಾಗಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಈ ರೀತಿ ರಾಜಕೀಯ ಲಾಭಕ್ಕಾಗಿ ಪ್ರತಿ ಬಾರಿ ನಮ್ಮ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಮಾತುಗಳ ನಾಡುತ್ತಿರುವ ಜಮೀರ್ ಅಹ್ಮದ್ ನ ಮೇಲೆ ವರ್ಣಭೇದದ ಆಧಾರದ ಮೇಲೆ ಸರ್ಕಾರ ಜುಮೋಟೋ ಕೇಸನ್ನು ದಾಖಲಿಸಬೇಕು ಹಾಗೂ ಸಚಿವ ಸ್ಥಾನದಿಂದ ವಜಾ ಮಾಡಬೇಕು ಒಳ್ಳೆಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರವಿ, ನಗರ ಪಾಲಿಕೆ ಸದಸ್ಯೆ ಪ್ರೇಮ ಶಂಕರೇಗೌಡ ಹಾಗೂ ಪ್ರತಾಪ್ ಉಪಸ್ಥಿತರಿದ್ದರು.

ಜಮೀರ್ ವಿರುದ್ಧ ರಾಜ್ಯ,ಜಿಲ್ಲಾ ಒಕ್ಕಲಿಗರ ಸಂಘ ಆಕ್ರೋಶ Read More

ಮೈಸೂರಿನಲ್ಲಿ ಸಚಿವರಿಗೆ ಕಪಾಳಮೋಕ್ಷ?;ಹೆಚ್ ಡಿ ಕೆ ಟೀಕೆ

ಚನ್ನಪಟ್ಟಣ: ಮೈಸೂರಿನಲ್ಲಿ ಸಚಿವರು ಇನ್ನಿತರರು ಹೊಡೆದಾಡಿಕೊಂಡಿರುವುದು ವರ್ಗಾವಣೆ ದಂಧೆ ವಿಚಾರಕ್ಕೆ ಎಂಬ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು; ವರ್ಗಾವಣೆ ವ್ಯವಹಾರಕ್ಕೆ ಅವರು ಕಿತ್ತಾಡಿಕೊಂಡಿದ್ದಾರೆ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಹಂಚಿಕೆ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ಒಬ್ಬ ಮಂತ್ರಿಯನ್ನು ಬಹಿರಂಗವಾಗಿ ಹೊಡೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿದೆ,ಏನು ಕತೆ ಇದು ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಏನಾಗ್ತಿದೆ ಇದನ್ನೆಲ್ಲ ಜನತೆ ಗಮನಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಮೈಸೂರಿನಲ್ಲಿ ಸಚಿವರಿಗೆ ಕಪಾಳಮೋಕ್ಷ?;ಹೆಚ್ ಡಿ ಕೆ ಟೀಕೆ Read More

ಶಕ್ತಿ ಯೋಜನೆ ಬಗ್ಗೆ ಮಹಿಳೆಯರು ಡಿಕೆಶಿಕನಸಲ್ಲಿ ಬಂದು ಹೇಳಿದ್ದಾರಾ: ಹೆಚ್ ಡಿ ಕೆ

ಬೆಂಗಳೂರು: ಶಕ್ತಿ ಯೋಜನೆ ಅವಶ್ಯವಿಲ್ಲವೆಂದು ಮಹಿಳೆಯರು ತಮಗೆ ತಿಳಿಸಿದ್ದಾರೆಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ, ಅವರೆಲ್ಲ ಡಿಕೆಶಿಯವರ ಕನಸಿನಲ್ಲಿ ಬಂದು ಹೇಳಿದ್ದಾರಾ ಎಂದು ಕೇಂದ್ರ ಸಚಿವ
ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಶಕ್ತಿ ಯೋಜನೆ ಮೂಲಕ ಅವರನ್ನು ಬಲಾಢ್ಯರನ್ನಾಗಿ ಮಾಡಿದ್ದೀರಾ, ಸರ್ಕಾರಕ್ಕೆ ಈ ಯೋಜನೆಯನ್ನು ದೀರ್ಘಾವಧಿಗೆ ಮಾಡಲು ಸಾಧ್ಯ ಆಗುತ್ತಿಲ್ಲ. ಒಂದೊಂದಾಗಿ ಗ್ಯಾರಂಟಿಗಳನ್ನು ರದ್ದುಗೊಳಿಸಲು ಮೊದಲ ಹಂತದ ಪ್ರಕ್ರಿಯೆ ಇದು‌ ಎಂದು ಟಾಂಗ್ ನೀಡಿದರು.

ಈವರೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸ ನಿಲ್ಲಿಸಿದ್ದರು. ತೆರಿಗೆಯವರಿಗೆ 10 ಸಾವಿರ ಕೋಟಿ ಹೆಚ್ಚಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಹೆಸರು ಹೇಳಿಕೊಂಡು ಜನರಿಗೆ ಹೊರೆ ಮಾಡಿ, ಜನರ ಹಣ ಕಿತ್ತು ಕಾರ್ಯಕ್ರಮ ಮುಂದುವರಿಸುವುದರಲ್ಲಿ ಅರ್ಥ ಇಲ್ಲ ಎಂದು ಹೇಳಿದರು.

ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆ ಭವಿಷ್ಯ ಹಾಳು ಮಾಡಬೇಡಿ ಎಂದು ಸಲಹೆ ನೀಡಿದರು.

ಅನ್ನ ಭಾಗ್ಯ ಯೋಜನೆಗೂ ಷರತ್ತು, ಮಾರ್ಗಸೂಚಿ ಅಳವಡಿಸಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಕುಮಾರಸ್ವಾಮಿ ಎಚ್ಚರಿಸಿದರು.

ಶಕ್ತಿ ಯೋಜನೆ ಬಗ್ಗೆ ಮಹಿಳೆಯರು ಡಿಕೆಶಿಕನಸಲ್ಲಿ ಬಂದು ಹೇಳಿದ್ದಾರಾ: ಹೆಚ್ ಡಿ ಕೆ Read More

ನಿಖಿಲ್ ಗೆ ಟಿಕೆಟ್ ಸಿಗುವಂತೆ ಮಾಡಲುಹೆಚ್ ಡಿ ಕೆ ಚದುರಂಗದಾಟ:ಡಿಕೆಸು

ಬೆಂಗಳೂರು: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 ವರ್ಷಗಳಿಂದ ತಮ್ಮದೆ ದೃಷ್ಟಿಕೋನದಲ್ಲಿ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಇದರ ಮುಂದುವರೆದ ಭಾಗವಿದು. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುತ್ತಾರೆ ಎನ್ನುವುದು ಚನ್ನಪಟ್ಟಣದ ಎಲ್ಲರಿಗೂ ತಿಳಿದಿತ್ತು ಎಂದು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ ಎಂದು ತಿಳಿಸಿದರು.

ನಾಟಕ ಮಾಡಿ ನಿಖಿಲ್ ಗೆ ಟಿಕೆಟ್ ಗಳಿಸಿಕೊಂಡರೇ ಎಂಬ ಪ್ರಶ್ನೆಗೆ ಅದನ್ನು ಮಾಧ್ಯಮದವರು ಹೇಳಬೇಕು. ನಾಮಪತ್ರ ಸಲ್ಲಿಸಿದ ನಂತರ ನಾಟಕ ಪ್ರಾರಂಭವಾಗುತ್ತದೆ ಎಂದರು. ಕಣ್ಣೀರು ಬರುತ್ತದೆಯೇ ಎಂದು ಮರುಪ್ರಶ್ನಿಸಿದಾಗ ಬರಬಹುದೇನೋ, ಮಾಧ್ಯಮದವರು ಕಣ್ಣೀರು ಹಾಕಿ ಎಂದರೆ ಹಾಕುತ್ತಾರೆ ಎಂದು ವ್ಯಂಗ್ಯವಾಡಿದರು.

ನಿಖಿಲ್ ಪ್ರಬಲ ಅಭ್ಯರ್ಥಿಯಾಗಬಲ್ಲರೇ ಎಂಬ ಪ್ರಶ್ನೆಗೆ, ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದರಿಂದ ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ತಿಳಿಯುತ್ತದೆ. ಚುನಾವಣೆಯಲ್ಲಿ ಒಂದೊಂದು ಮತವೂ ಮುಖ್ಯ ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಯಾರು ಪ್ರಭಾವಿಗಳು ಎನ್ನುವುದಕ್ಕಿಂತ, ನಾವು ಪಕ್ಷವನ್ನು ಗೆಲ್ಲಿಸಲು ಹೋರಾಟ ಮಾಡುತ್ತೇವೆ ಎಂದು ಡಿ.ಕೆ.ಸುರೇಶ್‌ ಉತ್ತರಿಸಿದರು.

ಒಂದು ವಾರಗಳ ಕಾಲ ದೇವೇಗೌಡರು ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವುದರಿಂದ ಕಾಂಗ್ರೆಸ್ ಗೆಲುವಿಗೆ ತೊಡಕಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡರು ಇರುವುದೇ ಪ್ರಚಾರ ಮಾಡುವುದಕ್ಕೆ. ಅವರ ಮೊಮ್ಮಗನ ಪರವಾಗಿ ಪ್ರಚಾರ ಮಾಡಬೇಡಿ ಎಂದು ಹೇಳಲು ಆಗುತ್ತದೆಯೇ, ನಾವು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು.

ನಿಖಿಲ್ ಗೆ ಟಿಕೆಟ್ ಸಿಗುವಂತೆ ಮಾಡಲುಹೆಚ್ ಡಿ ಕೆ ಚದುರಂಗದಾಟ:ಡಿಕೆಸು Read More

ಕುಮಾರಸ್ವಾಮಿ ಹೆದರುವುದು ದೇವರಿಗೆ, ಜನರಿಗೆ ಮಾತ್ರ: ಸಿದ್ದುಗೆ ಹೆಚ್ ಡಿ ಕೆ ಟಾಂಗ್

ಬೆಂಗಳೂರು: ಈ‌ ಕುಮಾರಸ್ವಾಮಿ ಹೆದರುವುದು ದೇವರಿಗೆ ಮತ್ತು ನಾಡಿನ ಜನರಿಗೆ ಮಾತ್ರ,ಸಿದ್ದರಾಮಯ್ಯ ನವರಿಗಲ್ಲ ತಿಳಿದುಕೊಳ್ಳಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಹೆಚ್ ಡಿಕೆ,ಯಾರನ್ನು ಕಂಡರೆ ಯಾರಿಗೆ ಭಯ, ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ.ಅಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದು ಟಾಂಗ್ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ‌ಹೆದರಿಸೋಕೆ ಯಾರಿಂದಲೂ ಆಗಲ್ಲ, ಸಿದ್ದರಾಮಯ್ಯನಂಥವರು ಲಕ್ಷ ಜನ ಬರಲಿ, ನಾನು ಹೆದರಲ್ಲ. ಹೆದರೋದು ನನ್ನ‌ ಬೆಳೆಸಿರುವ ನಾಡಿನ‌ ಜನಕ್ಕೆ ಎಂದು ಹೇಳಿದರು.

ನಾನೇನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ, ಸ್ವತಃ ದುಡಿಮೆ ಮೇಲೆ‌, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ, ಹಾಗೆ ನೋಡಿದರೆ ಸಿಎಂ ಸಿದ್ದರಾಮಯ್ಯನವರು ನನ್ನ ಪಕ್ಷದ ಕಾರ್ಯಕರ್ತರು ಮತ್ತು ದೇವೇಗೌಡರ ನೆರಳಿನಲ್ಲಿ ಬಂದವರು‌ ಅದನ್ನು ತಿಳಿದುಕೊಳ್ಳಲಿ ಎಂದು ಕಿಡಿಕಾರಿದರು

ಅದು ಯಾವುದೋ ಕೇಸ್ ಹಾಕಿಕೊಂಡು ನನ್ನ ಹೆದರಿಸೋಕೆ ಆಗುತ್ತಾ, ಕುಮಾರಸ್ವಾಮಿಗೆ ಬಂಧನದ ಭೀತಿ ಅಂತ ಹೇಳುತ್ತಿದ್ದಾರೆ ನನಗೆ ಯಾವುದೇ ಭೀತಿಯೋ ಇಲ್ಲ ಎಂದು ಹೇಳಿದರು.

ಮುಡಾ‌ ವಿಚಾರ ಡೈವರ್ಟ್ ಮಾಡಲು ಎಫ್ಐಆರ್ ಹಾಕಲಾಗಿದೀಯಾ ಎಂಬ ಪ್ರಶ್ನೆಗೆ ಪ್ರತಿಯೊಂದು ಕೂಡಾ ಡೈವರ್ಟ್ ಮಾಡೋದಕ್ಕೇನೆ ನಡೆಯುತ್ತಿರೋದು. ಈ ಸರ್ಕಾರ ಎಲ್ಲವನ್ನೂ ಬಿಟ್ಟಿರುವ ಸರ್ಕಾರ. ಯಾವ ಭಯ ಭಕ್ತಿಯೂ ಇಲ್ಲ, ಗೌರವವೂ ಇಲ್ಲ. ಭಂಡ ಸರ್ಕಾರ ಇದು ಎಂದು ಕಮಾರಸ್ವಾಮಿ ಕುಟುಕಿದರು.

ಕುಮಾರಸ್ವಾಮಿ ಹೆದರುವುದು ದೇವರಿಗೆ, ಜನರಿಗೆ ಮಾತ್ರ: ಸಿದ್ದುಗೆ ಹೆಚ್ ಡಿ ಕೆ ಟಾಂಗ್ Read More

ಸಾಕ್ಷ್ಯ ನಾಶ ಮಾಡಿ ಹಗರಣ ಮುಚ್ಚಿ ಹಾಕಲು ವ್ಯವಸ್ಥಿತ ಸಂಚು-ಹೆಚ್ ಡಿ ಕೆ

ಬೆಂಗಳೂರು: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸಗವಾಮಿ,ಮುಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಮತ್ತು ಮುಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ದೂರಿದರು.

ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆಯೂ ಕೇಂದ್ರ ಸಚಿವರು ಅನುಮಾನ ವ್ಯಕ್ತಪಡಿಸಿದರು.

ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ದೂರಿದರು.

ಮೂಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ ಕೈಗೆತ್ತಿಕೊಂಡು ಇಸಿಐಆರ್ ದಾಖಲು ಮಾಡಿದ ಕೂಡಲೇ ಬಿರುಸಿನ ಬೆಳವಣಿಗೆಗಳು ನಡೆದಿವೆ. ಮಂಗಳವಾರ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ಬಂದು ನಿವೇಶನ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ನಂತರ ಎಲ್ಲಾ ನಿವೇಶನಗಳು ಮುಡಾ ವಶಕ್ಕೆ ಹೋಗಿವೆ. ಹದಿನಾಲ್ಕು ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಇದೆಲ್ಲವೂ ಸಂಶಯಾಸ್ಪದವಾಗಿ ಕಾಣುತ್ತಿದೆ, ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಯಾಲಗಳ ಆದೇಶಗಳಿವೆ. ಹೀಗಿದ್ದೂ ಮೂಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆದಿದ್ದಾರೆ, ಅವರಿಗೆ ಈ ಅಧಿಕಾರ ಇಲ್ಲ. ಇಲ್ಲಿ ಸಿಎಂ ಅಧಿಕಾರ ದುರುಪಯೋಗ ಮಾಡಿದ್ದಾರೆ, ಮುಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದ್ದಾರೆ ಆದ್ದರಿಂದ ಕೂಡಲೇ ಅವರನ್ನು ಬಂಧಿಸಬೇಕು ಎಂದು ಹೆಚ್ ಡಿ ಕೆ ಆಗ್ರಹಿಸಿದರು.

ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು. ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸಾಕ್ಷ್ಯ ನಾಶ ಮಾಡಿ ಹಗರಣ ಮುಚ್ಚಿ ಹಾಕಲು ವ್ಯವಸ್ಥಿತ ಸಂಚು-ಹೆಚ್ ಡಿ ಕೆ Read More

ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್:ಹೆಚ್ ಡಿ ಕೆ ಆರೋಪ

ಮಂಡ್ಯ: ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಕೇಂದ್ರ ಸಚಿವ ಮಂಡ್ಯ ಸಂಸದ ಹೆಚ್‌.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ನಾಗಮಂಗಲದ ಗಲಭೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ಇಳಿಸಲು ರಾಮನಗರ, ಚನ್ನಪಟ್ಟಣದಲ್ಲಿ ಗಲಾಟೆ ನಡೆದಿತ್ತು. ಆಗ ಕಾಂಗ್ರೆಸ್‌ನವರೇ ಬೆಂಕಿ ಹಚ್ಚಿ ಗಲಾಟೆ ಮಾಡಿಸಿದ್ದರು ಎಂದು ಹೇಳಿದರು.

ಅದು ಕೋಮು ಗಲಭೆ ಆಗಿರಲಿಲ್ಲ,ಮುಂದೆ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ,ಅದಕ್ಕಾಗಿ ಹೀಗೆ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಗಣೇಶ ಕೂರಿಸಿದವರನ್ನೇ ಎಫ್‌ಐಆರ್‌ನಲ್ಲಿ ಎ1 ಆರೋಪಿಯನ್ನಾಗಿ ಮಾಡಿದ್ದೀರಾ ಇದು ನಿಮ್ಮ ನಡವಳಿಕೆ ಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಪೊಲೀಸರು ತಮ್ಮ ಲೋಪ ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ದಾರೆ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ, ಇದನ್ನು ಹಾಳು ಮಾಡಿಕೊಳ್ಳುವುದು ಬೇಡ ಅಮಾಯಕರನ್ನು ಬಂಧಿಸಿರೋದು ತಪ್ಪು,ಅವರು ಜೈಲಿನಿಂದ ಬರೋದು ಯಾವಾಗ ಎಂದು ಹೆಚ್ ಡಿ ಕೆ ಪ್ರಶ್ನಿಸಿದರು.

ನಾಗಮಂಗಲ ಗಲಭೆ ಪ್ರಕರಣ ಸಂಬಂಧ ನಷ್ಟವಾದ ವ್ಯಾಪರಿಗಳಿಗೆ ವೈಯಕ್ತಿಕವಾಗಿ ನಾನು ಆರ್ಥಿಕ ಸಹಾಯ ಮಾಡುತ್ತೇನೆ. ನನ್ನ ಕೈಯಲ್ಲಿ ಆದಷ್ಟು ಸಹಾಯ ಮಾಡುತ್ತೇನೆ ಎರಡು ಧರ್ಮದವರಿಗೂ ಸಹಾಯ ಮಾಡುತ್ತೇನೆ ಎಂದು ತಿಳಿಸಿದರು.

ಹಳೆ ಮೈಸೂರು ಭಾಗದಲ್ಲಿ ಎರಡು ಸಮಾಜದವರು ಸೌಹಾರ್ದತೆಯಿಂದ ಜೀವನ ಮಾಡುತ್ತಿದ್ದಾರೆ. ರಾಜಕೀಯ ಸಂಘಟನೆಗಾಗಿ ಜನರ ಬದುಕು ಛಿದ್ರ ಮಾಡಬೇಡಿ ಎಂದು ಕುಮಾರಸ್ವಾಮಿ ಹೇಳಿದರು.

ಗೃಹ ಸಚಿವರು ಇದು ಸಣ್ಣ ವಿಷಯ, ಇದಕ್ಕೆ ಮಹತ್ವ ಕೋಡೋದು ಬೇಡಾ ಅಂತಾರೆ. ಈ ರೀತಿ ಹೇಳಿಕೆ ಮೂಲಕ ಜನರಿಗೆ ಯಾವ ಸಂದೇಶ ಕೊಡುತ್ತೀರಾ ಎಂದು ಪ್ರಶ್ನಿಸಿದರು.

ಮೆರವಣಿಗೆಗೆ ಅನುಮತಿ ಕೊಟ್ಟಿದ್ದು ನೀವು. ಮೆರವಣಿಗೆಗೆ ಭದ್ರತೆ ಕೊಡಬೇಕಾಗಿದ್ದು ನೀವು. ಗಣೇಶನ ಮೆರವಣಿಗೆ ವೇಳೆ ಗಣಪತಿಗೆ ಜೈಕಾರ ಹಾಕಿದ್ದಾರೆ. ಆಗ ಮಸೀದಿ ಬಳಿ ಇನ್ನೊಂದು ಜನಾಂಗ ಅವರ ಘೋಷಣೆ ಕೂಗಿದ್ದಾರೆ. ಆಲ್ಲಿ ಎಷ್ಟು ಜನ ಪೊಲೀಸರನ್ನು ಆಯೋಜಿಸಿದ್ದೀರಿ,ಇದನ್ನು ನೋಡಿದ್ರೆ ಈ ಘಟನೆ ಪೂರ್ವನಿಯೋಜಿತ ಅನ್ನಿಸುತ್ತದೆ. ಘಟನೆಗೂ ಮುನ್ನ ಇಲ್ಲಿದ್ದ ಸಿಆರ್‌ಪಿಎಫ್ ವಾಹನವನ್ನು ಕರೆಸಿಕೊಂಡಿದ್ದಾರೆ. ಘಟನೆಯಾದ ಒಂದು ಗಂಟೆಗೆ ಮಾಧ್ಯಮದವರಿಗೆ ಗೊತ್ತಾಗುತ್ತದೆ. ಪೊಲೀಸರಿಗೆ ಯಾಕೆ ಗೊತ್ತಾಗಿಲ್ಲ, ಇದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಈ ಎಫ್‌ಐಆರ್ ನೋಡಿದರೆ ಪರಮೇಶ್ವರ್‌ನ ಗೃಹ ಸಚಿವ ಅನ್ನುವುದಕ್ಕೆ ಆಗುತ್ತಾ ಎಂದು ಹೆಚ್ ಡಿ ಕೆ ಗುಡುಗಿದರು.

ಸ್ಥಳೀಯ ಪೊಲೀಸರ ವೈಫಲ್ಯ ಇಲ್ಲಿ ಎದ್ದು ಕಾಣುತ್ತಿದೆ, ಪ್ರತಿಯೊಂದು ರಾಜಕೀಯ ಎಂದು ಕಾಂಗ್ರೆಸ್ ಹೇಳೋದು ಸರಿಯಲ್ಲ. ಅಮಾಯಕ ಜನರ ಬದುಕು ಬೀದಿಗೆ ಬಂದಿದೆ. ಗಲಭೆಯಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆದಿದ್ದಾರೆ. ಪೊಲೀಸರಿಗೆ ಭದ್ರತೆ ನೀಡದ ದರಿದ್ರ ಸರ್ಕಾರ ಇದು ಎಂದು ಕಿಡಿಕಾರಿದರು.

ರಾಜಾರೋಶವಾಗಿ ತಲ್ವಾರ್ ಇಟ್ಟುಕೊಂಡು ಓಡಾಡುತ್ತಾರೆ,ಪೆಟ್ರೋಲ್ ಬಾಂಬ್ ಎಸೆಯುತ್ತಾರೆ ಎಂದರೆ ಎಷ್ಟು ಧೈರ್ಯ ಇರಬೇಕು ಇವರಿಗೆ ಎಂದು ಕುಮಾರಸ್ವಾಮಿ ಕಾರವಾಗಿ ಪ್ರಶ್ನಿಸಿದರು.

ಮಾಜಿ ಶಾಸಕ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಜೆಡಿಎಸ್ ಮುಖಂಡರು ಈ ವೇಳೆ ಹಾಜರಿದ್ದರು.

ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್:ಹೆಚ್ ಡಿ ಕೆ ಆರೋಪ Read More

ಆಟೋ ಬಿಡಿಭಾಗಗಳ ಮೇಲಿನ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಿ-ಹೆಚ್ ಡಿ ಕೆ

ನವದೆಹಲಿ: ಆಟೋ ಬಿಡಿಭಾಗಗಳ ಮೇಲೆ ಇತರೆ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳಬೇಕೆಂದು ಅಟೋ ಉದ್ಯಮಕ್ಕೆ ಕೇಂದ್ರ ಭಾರೀ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ನವದೆಹಲಿಯಲ್ಲಿ ಎಸಿಎಂಎ 64ನೇ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,ಈ ನಿಟ್ಟಿನಲ್ಲಿ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.

ಅಟೋ ಉದ್ಯಮ ಬಿಡಿಭಾಗಗಳನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲೇಬೇಕು, ಹಾಗೂ ಫೇಮ್ 3 ಜಾರಿಗೆ ಬರುವ ತನಕ ಇಎಂಪಿಎಸ್ ಯೋಜನೆ ಮುಂದುವರಿಸಲಾಗುವುದು ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ ದೇಶೀಯ ಆಟೋ ಬಿಡಿಭಾಗ ಉದ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅಲ್ಲದೆ; ದುಬಾರಿ ಸಾರಿಗೆ, ವೆಚ್ಚಗಳ ಒತ್ತಡಕ್ಕೆ ಸಿಲುಕಿದೆ, ಇಷ್ಟಾದರೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈ ಕ್ಷೇತ್ರದ ರಪ್ತು ವಹಿವಾಟು ಬೆಳವಣಿಗೆಯನ್ನು ಕಂಡಿದೆ ಎಂದು ಹೆಚ್ ಡಿ ಕೆ ತಿಳಿಸಿದರು.

ಈ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ, ಉತ್ಪಾದನಾ ಸಂಪರ್ಕ ಉಪಕ್ರಮ ಗಳನ್ನು ಸಾಕಷ್ಟು ಕೈಗೊಂಡಿದೆ. ಈ ಮೂಲಕ 74,850 ರೂ ಕೋಟಿ ಹೂಡಿಕೆಯನ್ನು ಉತ್ತೇಜಿಸಲಾಗಿದೆ. ಈ ಪೈಕಿ 17,836 ರೂ ಮೊತ್ತ 2024 ಮಾರ್ಚ್ ಹೊತ್ತಿಗೆ ಹೂಡಿಕೆ ಆಗಿದೆ. ಇದರ ಪರಿಣಾಮವಾಗಿ 30,500 ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ. ಇದು ಉದ್ಯಮಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ ಎಂದು ಸಚಿವರು ಹೇಳಿದರು.

ಫೇಮ್ 3 ಯೋಜನೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು. ಅದುವರೆಗೂ ಆಟೋ ಕ್ಷೇತ್ರಕ್ಕೆ ಉತ್ತಜನ ನೀಡಲು EMPS ಯೋಜನೆಯನ್ನು ಮುಂದುವರಿಸಲಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಸಮಾವೇಶದಲ್ಲಿ ಎಸಿಎಂಎ ಅಧ್ಯಕ್ಷೆ ಶ್ರದ್ಧಾ ಸೂರಿ ಮರ್ವಾಹ್, ಎಸ್ ಐ ಎ ಎಂ ಅಧ್ಯಕ್ಷ ವಿನೋದ ಅಗರ್ವಾಲ್, ಸಿಐಐ ಅಧ್ಯಕ್ಷ ಮತ್ತು ಐಟಿಸಿ ವ್ಯವಸ್ಥಾಪಕ ನಿರ್ದೇಶಕ ಸಂಜೀವ ಪೂರಿ, ಮಾರುತಿ ಸುಜುಕಿ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಹಿಸಾಶಿ ತಕೇಚಿ ಮತ್ತು ಎಸ್ ಸಿ ಎಎಲ್ ಇ ಅಧ್ಯಕ್ಷ ಡಾ. ಪವನ್ ಗೋಯಂಕ ಮತ್ತಿತರ ಉದ್ಯಮದ ಗಣ್ಯರು ಹಾಜರಿದ್ದರು.

ಆಟೋ ಬಿಡಿಭಾಗಗಳ ಮೇಲಿನ ಸ್ವಾವಲಂಬನೆ ಸಾಧಿಸಲು ದೊಡ್ಡ ಹೆಜ್ಜೆ ಇಡಿ-ಹೆಚ್ ಡಿ ಕೆ Read More

ಹಾಲಿನ ಖರೀದಿ ದರ ಕಡಿತ- ಹೆಚ್.ಡಿ.ಕೆ‌ ಕಿಡಿ

ಬೆಂಗಳೂರು: ಹಾಲಿನ ಖರೀದಿ ದರದಲ್ಲಿ 1.50 ರೂ ಕಡಿತ ಮಾಡಿರುವ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ವಹಿಸಿ ಹಾಲು ಖರೀದಿ ದರ ಕಡಿತಕ್ಕೆ ತಡೆ ಒಡ್ಡಬೇಕು ಎಂದು ಒತ್ತಾಯಿಸಿದ್ದಾರೆ.

ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ ಎಂದು ಟೀಕಿಸಿದ್ದಾರೆ.

ಕೆಲ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ 1.50 ರೂ ಕಡಿತ ಮಾಡಿವೆ. ಹೊಸ ಖರೀದಿ ದರ 30.50 ರಿಂದ 29 ರೂಗೆ ಕುಸಿದಿದೆ.ಇದರಿಂದ ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಹಾಲಿನ ಖರೀದಿ ದರ ಕಡಿತ- ಹೆಚ್.ಡಿ.ಕೆ‌ ಕಿಡಿ Read More