ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

(ವರದಿ:ಸಿಬಿಎಸ್‌)

ಹಾಸನ: ರಾಜ್ಯದ ನಾನಾ ಕಡೆಗಳಲ್ಲಿ ಇಂದು ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇದರ ಬಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿತು.

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದ ಕೂಡಲೇ ಕೆಲಕಾಲ ಆತಂಕದ ವಾತಾವರಣ‌ ನಿರ್ಮಾಣವಾಗಿತ್ತು.

ವಿಷಯ ತಿಳಿದ ಕೂಡಲೇ ಪೊಲೀಸರು‌ ಸ್ಥಳಕ್ಜೆ ಧಾವಿಸಿ ದರು.

ಬೆದರಿಕೆ ಮೇಲ್‌ನ ಸಾರಾಂಶದ ಪ್ರಿಂಟೌಟ್ ತೆಗೆದು ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ಹೊರಡಿಸಿದ್ದರು.

ಡಿಸಿ ಆದೇಶದಂತೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಪರಿಶೀಲನೆ ನಡುವೆಯೂ ಜಿಲ್ಲಾಧಿಕಾರಿಗಳು ಸಭೆ ಮುಂದುವರೆಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ Read More

ಚನ್ನೇನಹಳ್ಳಿ ಶಾಲೆ ಮಕ್ಕಳ ಬಹುಮುಖ ಪ್ರತಿಭೆ, ಸಾಧನೆಗೆ ಬಹುಮಾನಗಳ ಸುರಿಮಳೆ

ಚನ್ನರಾಯಪಟ್ಟಣ: ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣು ಎಂಬ ಗಾದೆ ಮಾತಿಗೆ ಚೆನ್ನೇನಹಳ್ಳಿ ಶಾಲೆಯ ಪುಟಾಣಿಗಳು ಉದಾಹರಣೆಯಾಗಿದ್ದಾರೆ.

ತಮ್ಮ ಬಹುಮುಖ ಪ್ರತಿಭೆ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸಿದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಚೆನ್ನೆನಹಳ್ಳಿ ಶಾಲೆಯ ಪುಟಾಣಿ ಪೋರರು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳ ಸುರಿಮಳೆ ಗೈದಿದ್ದಾರೆ.

ಇದಕ್ಕೆ ಬಹುಮುಖ್ಯ ಕಾರಣಕರ್ತರು ಎಂದರೆ ಶಾಲೆಯ ಇಬ್ಬರು ಶಿಕ್ಷಕರು ಸಹ ಶಿಕ್ಷಕರಾದ ವಾಣಿಯವರು.

ಪ್ರತಿನಿತ್ಯ ಮಕ್ಕಳಿಗೆ ತಮ್ಮ ತನುಮನ ಧನ ಅರ್ಪಿಸಿ ಪ್ರೀತಿಯಿಂದ ಎಲ್ಲಾ ಸ್ಪರ್ಧೆಯಲ್ಲೂ ಗೆಲ್ಲುವಂತೆ ಮಾಡಿದ್ದಾರೆ, ಇವರ ಬೆನ್ನೆಲುಬಿಗೆ ಮುಖ್ಯ ಶಿಕ್ಷಕರಾದ ಮಂಜೇಗೌಡರು ಸ್ಪೂರ್ತಿ ಯಾಗಿ ನಿಂತು ಮಕ್ಕಳು ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ನೆರವಾಗಿದ್ದಾರೆ.

ಗುರುಗಳ ಮಾರ್ಗದರ್ಶನದಲ್ಲಿ ಪ್ರತಿದಿನ ಜ್ಞಾನವನ್ನು ಹೆಚ್ಚಿಸಿಕೊಳ್ಳುತ್ತಿರುವ ಚನ್ನೇನಹಳ್ಳಿ ಶಾಲೆ ಮಕ್ಕಳ ಪ್ರತಿಭೆಗೆ ಪೋಷಕರು ಗ್ರಾಮಸ್ಥರು ಹಾಗೂ ಶಿಕ್ಷಣ ಇಲಾಖೆ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಚನ್ನೇನಹಳ್ಳಿ ಶಾಲೆ ಮಕ್ಕಳ ಬಹುಮುಖ ಪ್ರತಿಭೆ, ಸಾಧನೆಗೆ ಬಹುಮಾನಗಳ ಸುರಿಮಳೆ Read More

ಜನಸಾಮಾನ್ಯರ ದರ್ಶನಕ್ಕೆ ಆಧ್ಯತೆ:ಹಾಸನ ಎಲ್ಲಾ ಜನಪ್ರತಿನಿಧಿಗಳಿಗೆ ಸಿಎಂ ಅಭಿನಂದನೆ

ಹಾಸನ: ಹಾಸನಾಂಭ ಜಾತ್ರೆಯಲ್ಲಿ ಯಾವುದೇ ರೀತಿಯ ವಿಐಪಿ ಪ್ರತಿಷ್ಠೆಗೆ ಮಣೆ ಹಾಕದೆ,ಜನಸಾಮಾನ್ಯರ ದರ್ಶನಕ್ಕೆ ಆಧ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ
ಸಿದ್ದರಾಮಯ್ಯ ನುಡಿದರು.

ಹಾಸನಾಂಭ ದೇವಿ ಮತ್ತು ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಸಿದ್ದರಾಮಯ್ಯ ಮಾತನಾಡಿದರು.

ನಾನು ಕಳೆದ ವರ್ಷವೂ ದರ್ಶನ ಪಡೆದಿದ್ದೆ. ಈ ವರ್ಷವೂ ದರ್ಶನ‌ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಈ ಬಾರಿ ಅಗತ್ಯಕ್ಕಿಂತ ಹೆಚ್ವು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು ಎನ್ ಡಿ ಆರ್ ಎಫ್ ನಿಧಿ ಜೊತೆಗೆ ರಾಜ್ಯ ಸರ್ಕಾರವೂ ಹೆಚ್ಚುವರಿ ಪರಿಹಾರ ನೀಡುತ್ತಿದೆ, ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿಯಂತಾ ಪರಿಸ್ಥಿತಿ ಬರದಿರಲಿ ಎಂದು ಹಾಸನಾಂಭ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ನಮ್ಮದು ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟ‌ ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಎಲ್ಲಾ ಧರ್ಮದ ದೇವರ ಆಶಯವೂ ಮನುಷ್ಯ ಪ್ರೀತಿ ಮತ್ತು ಸೌಹಾರ್ದದ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು ಎಂದು ನುಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಶಾಸಕ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಹೂಡ ಅಧ್ಯಕ್ಷ ಶಿವಪ್ಪ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಈ ವೇಳೆ ಹಾಜರಿದ್ದರು.

ಜನಸಾಮಾನ್ಯರ ದರ್ಶನಕ್ಕೆ ಆಧ್ಯತೆ:ಹಾಸನ ಎಲ್ಲಾ ಜನಪ್ರತಿನಿಧಿಗಳಿಗೆ ಸಿಎಂ ಅಭಿನಂದನೆ Read More

ಬೈಕ್ ಗೆ ಬಸ್ ಡಿಕ್ಕಿ:ಮೂವರು ಯುವಕರ ದು*ರ್ಮರಣ

ಹಾಸನ: ಜಿಲ್ಲೆಯ ಹೊಳೆನರಸೀಪುರ ‌ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಹೊಳೆನರಸಿಪುರ ತಾಲೂಕಿನ ಯಡೆಗೌಡನ ಹಳ್ಳಿ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.

ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ತರುಣ್ (19), ರೇವಂತ್ (26) ಹಾಗೂ ಗಾಂಧಿನಗರ ಬಡಾವಣೆಯ ಇರ್ಫಾನ್ (20) ಮೃತಪಟ್ಟ ಯುವಕರು.

ಇರ್ಫಾನ್ ಸ್ಥಳದಲ್ಲಿ ಮೃತಪಟ್ಟರೆ ಉಳಿದಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮರಣ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನದಿಂದ ಮೈಸೂರು ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಮೈಸೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ

ಈ ಸಂಬಂಧ ಹಳ್ಳಿ ಮೈಸೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬೈಕ್ ಗೆ ಬಸ್ ಡಿಕ್ಕಿ:ಮೂವರು ಯುವಕರ ದು*ರ್ಮರಣ Read More

ಹಾಸನ ಅಪಘಾತ;ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹಗಳ ಹಸ್ತಾಂತರ

ಹಾಸನ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರು ಮತ್ತು ಗಾಯಾಳುಗಳ ಕುಟುಂಬಕ್ಕೆ ಸ್ಪಂದಿಸುವಂತೆ ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು
ಸೂಚಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿತು.

ಸಿದ್ದರಾಮಯ್ಯ ಹಾಗೂ ಕೃಷ್ಣಬೈರೇಗೌಡರ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮ ತೆಗೆದುಕೊಂಡಿದೆ.

ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.

ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಿನತನಕ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.

ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿ,ಮೃತರ ಕುಟುಂಬದವರಿಗೆ‌ ಸಾಂತ್ವಾನ ಹೇಳಿದ್ದಾರೆ.

ಹಾಸನ ಅಪಘಾತ;ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹಗಳ ಹಸ್ತಾಂತರ Read More

ಹಾಸನದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್: 6 ಮಂದಿ ಸಾ*ವು

(ವರದಿ:ಸಿಬಿಎಸ್)

ಹಾಸನ: ಗಣಪತಿ ವಿಸರ್ಜಿಸಲು ಹೋಗುತ್ತಿದ್ದ ಮೆರವಣಿಗೆ ಮೇಲೆ ಯಮನಂತೆ ಬಂದ ಟ್ರಕ್ ಜನರ ಮೇಲೆ ಹರಿದು ಘನ ಘೋರ ದುರಂತ ಸಂಭವಿಸಿರುವ ಘಟನೆ ಶುಕ್ರವಾರ ಸಂಜೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 323ರ ಪಕ್ಕದ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಈ ಘೋರ ದುರಂತ ಸಂಭವಿಸಿದ್ದು ಸ್ಥಳದಲ್ಲಿ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟ್ರಕ್ ಚಾಲಕ ಸೈಡ್ ಗೆ‌ ಟ್ರಕ್ ತಿರುಗಿಸಲು ಹೋದಾಗ ನಿಯಂತ್ರಣ ತಪ್ಪಿ ಟ್ರಕ್ ಜನರ ಮೇಲೆಯೇ ಹರಿದಿದೆ.

ಹಾಸನ ಕಡೆಯಿಂದ ಹೊಳೆನರಸೀಪುರ ಕಡೆಗೆ ಟ್ರಕ್ ಬರುತ್ತಿತ್ತು

ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅಪಘಾತ ಸ್ಥಳದಲ್ಲಿ ಜನರ ಆಕ್ರಂದನ ಹೇಳತೀರದಾಗಿತ್ತು.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕ ಹೆಚ್.ಡಿ.ರೇವಣ್ಣ ಮತ್ತು ವಿಧಾನ್ ಪರಿಷತ್ ಸದಸ್ಯ ಸೂರಜ್,ಶಾಸಕ ಶ್ರೇಯಸ್ ಪಟೇಲ್ ಮತ್ತಿತರರು ಭೇಟಿ ನೀಡಿ ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.

ಸ್ಥಳಕ್ಕೆ ಎಎಸ್ ಪಿ ತಮ್ಮಯ್ಯ ಮತ್ತಿತರ ಪೊಲೀಸ್ ಅಧಿಕಾರಿಗಳು‌ ಧಾವಿಸಿ ಮುಂದಿನ ಕ್ರಮ ಕೈಗೊಂಡರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೂರಜ್ ರೇವಣ್ಣ ಮಾತನಾಡಿ ಘಟನೆ ನಡೆಯುವ ಸಂದರ್ಭ ದಲ್ಲಿ ಮೆರವಣಿಗೆ ವೇಳೆ ಒಬ್ಬರೇ ಒಬ್ಬ ಪೊಲೀಸರು ಇರಲಿಲ್ಲ ಮಕ್ಕಳು ಸಂಭ್ರಮದಲ್ಲಿ ಡಿಜೆ ಸೌಂಡಿಗೆ ನೃತ್ಯ ಮಾಡುತ್ತಾ ಸಾಗುತ್ತಿದ್ದಾಗ ಟ್ರಕ್ ಯಮನಂತೆ ನುಗ್ಗಿದೆ ಇದನ್ನು ನೋಡಿ ನನಗೆ ಮನಸ್ಸಿಗೆ ತೀವ್ರ ನೋವು ಉಂಟಾಯಿತು ಎಂದು ಹೇಳಿದರು.

ಎಚ್ ಡಿ ರೇವಣ್ಣ ಮಾತನಾಡಿ ಇದಕ್ಕೆ ಕಾರಣ ಪೊಲೀಸರ ವೈಫಲ್ಯ, ರಸ್ತೆಯಲ್ಲಿ ಮೆರವಣಿಗೆ ಸಾಗುವ ಸಂದರ್ಭದಲ್ಲಿ ಸರಿಯಾದ ವ್ಯವಸ್ಥೆ ಮಾಡಿರಲಿಲ್ಲ ವಾಹನ ಸಾಗಲು ಸರಿಯಾದ ವ್ಯವಸ್ತೆ ಮಾಡಿಕೊಟ್ಟಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಹಾಸನದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್: 6 ಮಂದಿ ಸಾ*ವು Read More

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ

ಹಾಸನ: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.

ಹಾಸನದ ಅವರ ನಿವಾಸಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮುಷ್ತಾಕ್ ಅವರಿಗೆ ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಆಹ್ವಾನ ನೀಡಿದರು.

ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಮುಷ್ತಕ್ ಅವರನ್ನು ಆಹ್ವನಿಸಿದರು.

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ Read More

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ-ಸಿಎಂ ಟಾಂಗ್

ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ,ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.

ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ ಯಾವುದೇ ಅನುದಾನ ಅಥವಾ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಈ ಕುರಿತು ಪರಿಶೀಲಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ-ಸಿಎಂ ಟಾಂಗ್ Read More

ಕುಡಿದ ಮತ್ತಿನಲ್ಲಿ ತಂದೆ,ಅಣ್ಣನನ್ನು ಕೊಂದ ಪಾಪಿ ತಮ್ಮ

(ವರದಿ:ಸಿಬಿಎಸ್)

ಹಾಸನ: ಕುಡಿದ ಮತ್ತಿನಲ್ಲಿ ತಂದೆ ಹಾಗೂ ಅಣ್ಣನನ್ನು ಪಾಪಿ ತಮ್ಮ ಕೊಲೆ ಮಾಡಿರುವ ಹೇಯ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ನಡೆದಿದೆ.

ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದ್ದು,ದೇವೇಗೌಡ (70), ಮಂಜುನಾಥ್ (50) ಕೊಲೆಯಾದ ನತದೃಷ್ಟ ತಂದೆ,ಮಗ

ಮೋಹನ್ (47) ಎಂಬಾತ ತಂದೆ ಹಾಗೂ ಅಣ್ಣನನ್ನು ಕೊಲೆ ಮಾಡಿದ ಆರೋಪಿ.

ದೇವೇಗೌಡರಿಗೆ ಮಂಜುನಾಥ್ ಹಾಗೂ ಮೋಹನ್ ಇಬ್ಬರು ಗಂಡು ಮಕ್ಕಳು.ವಯಸ್ಸಾಗಿದ್ದರೂ ಇಬ್ಬರಿಗೂ ಮದುವೆ‌ ಆಗಿರಲಿಲ್ಲ.

ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸವಿದ್ದ ಮೋಹನ್.ಮಂಜುನಾಥ್
ತಂದೆ-ತಾಯಿ ಜೊತೆ ವಾಸವಿದ್ದರು.

ಇತ್ತೀಚೆಗೆ‌ ಮೋಹನ್ ಕುಡಿತದ ದಾಸನಾಗಿದ್ದ.
ಆಸ್ತಿ ವಿಚಾರಕ್ಕೆ ಆಗಾಗ ಮನೆಯಲ್ಲಿ ಜಗಳ ನಡೆಯುತ್ತಿತ್ತು.

ಇದೇ‌ವಿಚಾರವಾಗಿ ನಿನ್ನೆ ಕೂಡಾ ಜಗಳ ನಡೆದಿತ್ತು,ಕುಡಿದ ಮತ್ತಿನಲ್ಲಿ ‌ತಂದೆ ಹಾಗೂ‌ ಅಣ್ಣ ಇಬ್ಬರನ್ನು ಬರ್ಬರಬಾಗಿ ಹತ್ಯೆಗೈದ ತಮ್ಮ ಮೋಹನ್ ಪರಾರಿಯಾಗಿದ್ದಾನೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕುಡಿದ ಮತ್ತಿನಲ್ಲಿ ತಂದೆ,ಅಣ್ಣನನ್ನು ಕೊಂದ ಪಾಪಿ ತಮ್ಮ Read More

ಮೃತ ಮರಿಯ ದೇಹ ಹೊತ್ತು ಅಲೆಯುತ್ತಿರುವ ತಾಯಿ ಆನೆ

(ವರದಿ:ಸಿಬಿಎಸ್)

ಹಾಸನ: ಮರಿ ಸತ್ತು ಮೂರು ದಿನ ಕಳೆದರೂ ತಾಯಿ ಆನೆ ತಾನು ಹೋದಲೆಲ್ಲ ತನ್ನ ಕಂದನ ದೇಹವನ್ನು ಎಳೆದುಕೊಂಡು ಹೋಗುತ್ತಿರುವ ಮನಃ ಕಲಕುವ ದೃಶ್ಯ ಬೇಲೂರು ತಾಲ್ಲೂಕಿನಲ್ಲಿ ಕಂಡು ಬಂದಿದೆ.

ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕ್ನಳ್ಳಿ ಎಸ್ಟೇಟ್ ಬಳಿ‌ ಹೀಗೆ ತಾಯಿ ಆನೆ ಸುತ್ತುವುದನ್ನು ಸ್ಥಳೀಯರು ಕಂಡು ಮಮ್ಮಲ ಮರುಗಿದ್ದಾರೆ.

ಶನಿವಾರ ಗರ್ಭಿಣಿ ಹೆಣ್ಣಾನೆ ಮರಿಯಾನೆಗೆ ಜನ್ಮ ನೀಡಿತ್ತು, ಆದರೆ ಹುಟ್ಟುವ ವೇಳೆ ಮರಿ ಮೃತಪಟ್ಟಿದೆ.

ತಾಯಿ ಆನೆ ತನ್ನ ಕಂದ ಮಿಸುಕಾಡದುದನ್ನು ಕಂಡು ಕಾಲಿನಿಂದ ಒದ್ದು ಬದುಕಿಸುವ ಪ್ರಯತ್ನ ಮಾಡಿದೆ. ಆದರೆ, ಮೃತ ಮರಿ ಮೇಲೇಳಲೇ ಇಲ್ಲ.

ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ.

ಜೋರು ಮಳೆ ಸುರಿಯುತ್ತಿರುವುದರ ಜೊತೆಗೆ ಸತ್ತ ಮರಿಯನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಜನರು ಮರಗುತ್ತಿದ್ದಾರೆ.

ತನ್ನ ಕರುಳ ಕುಡಿ ಇನ್ನೂ ಬದುಕಿದೆ ಎಂಬ ಭ್ರಮೆಯಲ್ಲಿರುವ ಆನೆ, ಯಾರನ್ನೂ ಹತ್ತಿರ ಹೋಗಲು ಬಿಡುತ್ತಿಲ್ಲ.ಅಕ್ಕ,ಪಕ್ಕ ಬೇರೆ ಆನೆಗಳಿದ್ದರೆ ಸಾಂತ್ವನ ಹೇಳುತ್ತಿದ್ದವೋ ಏನೊ,ಈಗ ತಾಯಿ ಆನೆ ಒಂಟಿಯಾಗಿದೆ.ಅದರ ದುಃಖ ಕೇಳುವವರು ಯಾರೂ ಇಲ್ಲದಂತಾಗಿದೆ.

ಭಾನುವಾರ ಅರೇಹಳ್ಳಿ ಸಮೀಪದ ಕೆಸಗುಲಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮರಿಯೊಂದಿಗೆ ತಾಯಿ ಆನೆ ಮೃತಪಟ್ಟಿತ್ತು. ಈ ಘಟನೆ ಮರೆಯುವ ಮುನ್ನವೇ ಮತ್ತೊಂದು ಮರಿ ಮೃತಪಟ್ಟಿರುವುದು ಪ್ರಾಣಿ ಪ್ರಿಯರಿಗೆ ನೋವುಂಟು ಮಾಡಿದೆ.

ಮೃತ ಮರಿಯ ದೇಹ ಹೊತ್ತು ಅಲೆಯುತ್ತಿರುವ ತಾಯಿ ಆನೆ Read More