ಚನ್ನರಾಯಪಟ್ಟಣ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರೂ ಕೈ ಸದಸ್ಯರೂ,ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಬಾಗೇಗೌಡ ಅವರು ಇಂದು ನಿಧನರಾಗಿದ್ದಾರೆ
ಚನ್ನರಾಯಪಟ್ಟಣ ತಾಲೂಕು, ಹಿರೀಸಾವೆ ಹೋಬಳಿ, ಚೆನ್ನೆನಹಳ್ಳಿ ಗ್ರಾಮದ ಬಾಗೇಗೌಡ ಅವರಿಗೆ ಇನ್ನೂ 57 ವರ್ಷಗಳು.
ನಿನ್ನೆ ಇದ್ದಕ್ಕಿದ್ದಂತೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ,ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ವೈದ್ಯರು ಏನಾಗಿದೆ ಎಂದು ತಿಳಿಯುವ ಮೊದಲೇ ಬಾಗೇಗೌಡರು ಇಹಲೊಕ ತ್ಯಜಿಸಿದ್ದಾರೆ.
ಬಾಗೇಗೌಡ ಅವರು ಪತ್ನಿ, ಪುತ್ರ, ಪುತ್ರಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.
ಬಾಗೇಗೌಡ ಅವರು ಗ್ರಾಮದಲ್ಲಿ ಒಳ್ಳೆಯ ಕೆಲಸ ಮಾಡುವ ಮೂಲಕ ಜನಾನುರಾಗಿಯಾಗಿದ್ದರು.ಹಾಗಾಗಿ ಅವರ ನಿಧನಕ್ಕೆ ಇಡೀ ಊರೇ ಕಂಬನಿ ಮಿಡಿದಿದೆ.
ಬಂಧು-ಬಳಗ ಅಷ್ಟೇ ಅಲ್ಲದೆ ಸಾವಿರಾರು ಸ್ನೇಹಿತರು ಸುತ್ತಮುತ್ತಲಿನ ಗ್ರಾಮಸ್ಥರು ಕಾಂಗ್ರೆಸ್ ಹಿರಿಯ ನಾಯಕರು ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಹಾಸನ: ಹಾಸನದಲ್ಲಿ ಆಯೋಜಿಸಿದ್ದ ಜನಕಲ್ಯಾಣೋತ್ಸವ ಸಮಾವೇಶ ಯಶಸ್ವಿಯಾಗಿದ್ದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಕೆಪಿಸಿಸಿ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
ಮೈಸೂರಿನಿಂದ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಅವರು ಮತ್ತು ಅವರ ಸಂಘಡಿಗರು ಸಿದ್ದು ಅಭಿಮಾನಿಗಳು ಹಾಸನಕ್ಕೆ ತೆರಳಿ ಸಮಾವೇಶದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ನಜರ್ಬಾದ್ ನಟರಾಜ್ ಅವರು ಕೈನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರವುಳ್ಳ ಪುಟ್ಟ ಕಟೌಟ್ ಹಿಡಿದು ಸಿದ್ದು ಪರ ಘೋಷಣೆ ಕೂಗುತ್ತ ಸಂಭ್ರಮಿಸಿದರು.
ಈ ವೇಳೆ ಅವರು ಸಂಗಡಿಗರೊಂದಿಗೆ ಸಮಾವೇಶದ ಬ್ಯಾನರ್ ಬಳಿ ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು.
ಹಾಸನ: ಹಾಸನದಲ್ಲಿ ಆಯೋಜಿಸಿದ್ದ ಜನಕಲ್ಯಾಣೋತ್ಸವದ ಅಭೂತಪೂರ್ವ ಯಶಸ್ಸು ಕಂಡಿದೆ,ಇದು ನನಗೆ ಆನೆಬಲ ನೀಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮನದುಂಬಿ ನುಡಿದರು.
ಜನಕಲ್ಯಾಣೋತ್ಸವ ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿಎಂ,ನನ್ನ ಮತ್ತು ಪಕ್ಷದ ಮೇಲಿನ ಪ್ರೀತಿಯಿಂದ ಬಹಳ ದೂರದ ಊರುಗಳಿಂದ ಆಗಮಿಸಿ, ಅನ್ಯಾಯ, ಅಪಪ್ರಚಾರ, ದ್ವೇಷರಾಜಕಾರಣದ ವಿರುದ್ಧದ ನನ್ನ ದನಿಗೆ ದನಿಗೂಡಿಸಿದ್ದೀರಿ, ನನ್ನ ಎಲ್ಲಾ ಅಭಿಮಾನಿಗಳು,ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರಿಗೆ ನಾನು ಚಿರೃಣಿ ಎಂದು ಕೃತಜ್ಞತೆ ಸಲ್ಲಿಸಿದರು
ಈ ಕಾರ್ಯಕ್ರಮದ ಆಯೋಜನೆಗೆ ಶ್ರಮಿಸಿದ ಶೋಷಿತ ಸಮುದಾಯಗಳ ಸಂಘಟನೆಗಳು ಮತ್ತು ಪಕ್ಷದ ನಾಯಕರಿಗೆ ಅನಂತ ಧನ್ಯವಾದಗಳು ಎಂದು ಹೇಳಿದರು.
ಜನತೆಯ ಸೇವೆಯೇ ಜನಾರ್ಧನನ ಸೇವೆ. ಅಧಿಕಾರವೆಂಬುದು ಜನಸೇವೆ ಮಾಡಲು ಒದಗಿಬಂದ ಅವಕಾಶ ಎಂದು ಪ್ರಾಮಾಣಿಕವಾಗಿ ನಂಬಿದವನು ನಾನು ಎಂದು ಸಿದ್ದು ತಿಳಿಸಿದರು.
ಸತ್ಯ, ಧರ್ಮ ಮತ್ತು ನ್ಯಾಯದ ನಡಿಗೆಯಲ್ಲಿ ನನ್ನ ಜೊತೆ ಈ ನಾಡಿನ ಪ್ರಜ್ಞಾವಂತರು, ಶೋಷಿತ ಜನರು ಇದ್ದಾರೆ ಎಂಬುದಕ್ಕೆ ಇಂದು ಸೇರಿರುವ ಜನಸಾಗರ ಸಾಕ್ಷಿ ಎಂದು ಹೇಳಿದರು.
ನಿಮ್ಮೆಲ್ಲರ ಪ್ರೀತಿ – ಆಶೀರ್ವಾದ ಇರುವ ವರೆಗೆ ರಾಜಕೀಯ ವಿರೋಧಿಗಳ ಯಾವ ಷಡ್ಯಂತ್ರ, ಬೆದರಿಕೆಗಳಿಗೆ ನಾನು ಜಗ್ಗುವುದೂ ಇಲ್ಲ, ಕುಗ್ಗುವುದೂ ಇಲ್ಲ, ಎಲ್ಲವನ್ನೂ ಎದುರಿಸಿ ಗೆಲ್ಲುತ್ತೇನೆ, ನಾನು ಸತ್ಯದ ಪರವಾಗಿದ್ದೇನೆ, ಅಂತಿಮವಾಗಿ ಗೆಲ್ಲುವುದು ಸತ್ಯವೇ ಹೊರತು ಬೇರೇನಲ್ಲ ಎಂದು ಸಿದ್ದರಾಮಯ್ಯ ನುಡಿದರು.
ಅರಕಲಗೂಡು: ಸುವರ್ಣ ಕರ್ನಾಟಕ ರಕ್ಷಣಾ ಸೇನೆಯವರು ಕನ್ನಡ ಸೇವೆ ಜೊತೆ,ಜೊತೆಗೆ ಶಾಲಾ,ಕಾಲೇಜುಗಳಿಗೂ ಭೇಟಿ ನೀಡಿ ಪ್ರತಿಭಾವಂತರು,ಕ್ರೀಡಾಪಟುಗಳನ್ನು ಅಭಿನಂದಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.
ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯ ಸಿದ್ದಾಪುರ ಗ್ರಾಮದ ಬಡ ಕುಟುಂಬದ ರೈತ ಸ್ವಾಮಿ ಗೌಡರ ಮಗ ಸುದರ್ಶನ್ ಎಸ್ ಎಂಬ ಯುವಕ ಸೇರಿದಂತೆ ಹಕವಾರು ಪ್ರತಿಭೆಗಳನ್ನು ಸುವರ್ಣ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಅಭಿನಂದಿಸಲಾಯಿತು.
ಸುದರ್ಶನ್ ಅವರು ಅರಕಲಗೂಡು ತಾಲೂಕು ಮಟ್ಟದಲ್ಲಿ 800 ಮೀಟರ್ ರನ್ನಿಂಗ್ ನಲ್ಲಿ ಪ್ರಥಮ ಸ್ಥಾನ, ದಸರಾ ಕ್ರೀಡೆ ರನ್ನಿಂಗ್ ನಲ್ಲಿ ಪ್ರಥಮ ಸ್ಥಾನ ಹಾಗೂ ಹಾಸನ ಜಿಲ್ಲಾ ಮಟ್ಟದಲ್ಲಿ 800 ಮೀಟರ್ ರನ್ನಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಅರಕಲಗೂಡು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.
ಸಿದ್ದಾಪುರ ಗೇಟ್ ನ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವ ಈ ಯುವಕ ಇಡೀ ಕಾಲೇಜು ಹಾಗೂ ಸಿದ್ದಾಪುರ ಗ್ರಾಮ ಹಾಗೂ ಅರಕಲಗೂಡು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಈ ಯುವಕ ಮುಂದೆ ರಾಜ್ಯಮಟ್ಟದಲ್ಲೂ ಜಯಶೀಲರಾಗಿ ಬರಬೇಕು ಎಂದು ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಸಂಸ್ಥಾಪಕ ಅಧ್ಯಕ್ಷ ಡಾ.ಎಸ್.ರಾಘವೇಂದ್ರ ಗೌಡರು ಮತ್ತು ಪದಾಧಿಕಾರಿಗಳು ಹಾರೈಸಿದ್ದಾರೆ.
ಸುದರ್ಶನ್ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಉಜ್ವಲವಾಗಿರಲಿ.ಕಡು ಬಡವನಾದರೂ ಸಾಧನೆ ಎಂಬುದು ಇತಿಹಾಸ ಬರೆಯುವಂತ ಶಿಖರವಾಗಿರಬೇಕು ಎಂದು ಹೇಳಿದ್ದಾರೆ.
ಇಂತಹ ಬಡತನದಲ್ಲಿ ಹುಟ್ಟಿರುವ ಮಕ್ಕಳಿಗೆ ಸರ್ಕಾರ, ಜನಪ್ರತಿನಿಧಿಗಳು,ಶಾಲಾ ಶಿಕ್ಷಕರು ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಪ್ರೋತ್ಸಾಹ ಧನ ಕೊಡುವುದರ ಮೂಲಕ ಇವರ ಮುಂದಿನ ಭವಿಷ್ಯ ಹಾಗೂ ಸಾಧನೆ ಮಾಡಲು ನಾವೆಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಿದ್ದಾಪುರ ಗ್ರಾಮದ ಬಡ ಕುಟುಂಬದ ರೈತ ರಾಜಾ ಚಾರಿ ಮಗ ಕಿರಣ್ ಎಸ್ ಆರ್ ಕೂಡಾ ಸಿದ್ದಾಪುರ ಗೇಟ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದಾರೆ.
ಈ ಯುವಕ ಕೂಡಾ ಅರಕಲಗೂಡು ತಾಲೂಕಿನ 3000 ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಯಶೀಲರಾಗಿ ಕೀರ್ತಿ ತಂದಿದ್ದಾರೆ.
ಜತೆಗೆ ಹಾಸನ ಜಿಲ್ಲಾ 3000 ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅರಕಲಗೂಡು ತಾಲ್ಲೂಕಿಗೆ ಹಾಗೂ ಹಾಸನ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಯುವಕನ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಆಶಿಸಿದೆ.
ಇದೇ ತಾಲೂಕಿನ ಕೊಣನೂರು ಹೋಬಳಿ ಮರಿಯ ನಗರದ ದಿವ್ಯ ಜ್ಯೋತಿ ಶಾಲೆಯ ಹೆಣ್ಣು ಮಕ್ಕಳು ಕೂಡ ಹಾಸನ ಜಿಲ್ಲಾ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅರಕಲಗೂಡು ತಾಲೂಕಿಗೆ ಹಾಗೂ ಹಾಸನ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಈ ಮಕ್ಕಳಿಗೂ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಅಭಿನಂದನೆಗಳನ್ನು ಸಲ್ಲಿಸಿದೆ.
ಈ ಶಾಲೆ ಮಕ್ಕಳು ಕೂಡ ರಾಜ್ಯಮಟ್ಟದಲ್ಲಿ ಜಯಶೀಲರಾಗಿ ಬರಬೇಕೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಈ ಎಲ್ಲಾ ಮಕ್ಕಳಿಗಾಗಿಯೇ ಅಭಿನಂದನ ಕಾರ್ಯಕ್ರಮ ಹಮ್ಮಿಕೊಂಡು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು.
ಜತೆಗೆ ಎಲ್ಲಾ ಮಕ್ಕಳಿಗೂ ಆಯಾ ಶಾಲೆಯ ದೈಹಿಕ ಶಿಕ್ಷಕರಿಗೂ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್, ಅಶೋಕ್ ಹಾಗೂ ಕಾಲೇಜಿನ ಮಕ್ಕಳು ಹಾಗೂ ಸೇನೆಯ ಪದಾಧಿಕಾರಿಗಳಾದ ರಾಜ್ಯ ಮಹಿಳಾ ಅಧ್ಯಕ್ಷೆ ಮಧುಶ್ರೀ ಗೌಡ, ದನಪಾಲ್ ಗೌಡ,ತಾಲೂಕು ಅಧ್ಯಕ್ಷರಾದ ಗಿರೀಶ್, ರಮೇಶ್ ಗೌಡ,ಪ್ರಕಾಶ್ ಗೌಡ, ವೆಂಕಟೇಶ್ವರ, ಯೋಗೇಶ್,ಜಗದೀಶ್ ಗೌಡ, ಆನಂದಾಚಾರ್, ಅನಿತಾಚಾರ್, ಬೇಕ್ರಿ ರಮೇಶ್, ನಂಜೇಗೌಡ,ದಿವಾಕರ್ ಗೌಡ, ಮಣಿ, ಮಲ್ಲೇಶ್, ಒಡೆನೂರು ಮಂಜು, ಶಾಮಿಯಾನ ಕೃಷ್ಣೇಗೌಡ, ಸುನಿಲ್ ಮತ್ತಿತರರು ಕ್ರೀಡಾಪಟುಗಳ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದರು.
ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿಲ್ಲ,ಹಾಗಾಗಿ ಪರಪ್ಪನ ಅಗ್ರಹಾರವೆ ಗತಿಯಾಗಿದೆ.
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
ಪ್ರಜ್ಚಲ್, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರು.ಜತೆಗೆ ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.
ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು.
ಪ್ರಜ್ವಲ್ ರೇವಣ್ಣ, ಅವರ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಳೆದ ಏಪ್ರಿಲ್ 28 ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು.
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ.
ಹಾಸನ: ತನ್ನದೆ ವಿವಾಹ ಆಮಂತ್ರಣ ಪತ್ರಿಕೆ ವಿತರಿಸಿ ವಾಪಸಾಗುತ್ತಿದ್ದ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಹೇಯ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ
ಗ್ರಾಮದ ಹೊರವಲಯದಲ್ಲಿರುವ ಕೆಲವೆ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಕಾನ್ಸ್ ಸ್ಟೇಬಲ್ ರನ್ನು ಡಾಬಾ ವೃತ್ತದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ ಸ್ಟೇಬಲ್, ಬಾಗೇಶಪುರ ಗ್ರಾಮದ ಹರೀಶ್.ವಿ (32) ಕೊಲೆಯಾದ ಕಾನ್ಸ್ ಸ್ಟೇಬಲ್.
ನ. 11 ರಂದು ಹರೀಶ್ ಆವರ ವಿವಾಹ ನಿಗದಿಯಾಗಿತ್ತು. ತಮ್ಮ ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಸಂಬಂಧಿಕರನ್ನು ಆಹ್ವಾನಿಸಿ ರಾತ್ರಿ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು, ದುದ್ದ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು: ಅರಸೀಕೆರೆಯ ಕಲ್ಲುಸದರ ಹಳ್ಳಿ ಬಳಿ ಕರೆಂಟ್ ತಗುಲಿ ಮೂರು ಕರಡಿಗಳು ಮೃತಪಟ್ಟಿರುವುದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯಕಾರಣ ಎಂದು ಕನ್ನಡ ಚಳವಳಿ ಹೋರಾಟಗಾರ ತೇಜಸ್ವಿ ನಾಗಲಿಂಗಸ್ವಾಮಿ ಆರೋಪಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಆನೆ ಮೃತಪಟ್ಟಿತ್ತು, ಈ ಘಟನೆ ಮಾಸುವ ಮುನ್ನವೇ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದ ಇದೇ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಲ್ಲುಸದರ ಹಳ್ಳಿಯ ಅರಣ್ಯ ಅಂಚಿನಲ್ಲಿ ಇಂದು ಬೆಳಿಗ್ಗೆ ವಿದ್ಯುತ್ ತಂತಿ ತಗುಲಿ ಮೂರು ಕರಡಿಗಳು ಸಾವನ್ನಪ್ಪಿವೆ.ವಿಷಯ ತಿಳಿದು ತೀವ್ರ ಬೇಸರ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಕರಡಿಗಳ ಸಾವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳೇ ಹೊಣೆ,ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಂಚಿನ ಪ್ರದೇಶಗಳಲ್ಲಿ ಗಸ್ತು ತಿರುಗಿ ವಿದ್ಯುತ್ ತಂತಿ ಅಥವಾ ಕಂದಕ ಇದ್ದಲ್ಲಿ ಸಂಬಂಧ ಪಟ್ಟವರಿಗೆ ತಿಳಿಸಿ ಸರಿಪಡಿಸಬೇಕು ಎಂದು ತೇಜಸ್ವಿ ಒತ್ತಾಯಿಸಿದ್ದಾರೆ.
ಮೂರು ಕರಡಿಗಳ ಸಾವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಬೇಜವ್ದಾರಿ ಕಾರಣ,ಕೂಡಲೇ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಹಾಸನ: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಏಳು ಜಿಲ್ಲೆಗಳ ಲಕ್ಷಾಂತರ ಮನೆಗಳಿಗೆ ಕುಡಿಯುವ ನೀರು ತಲುಪುವುದು ಖಂಡಿತಾ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ ಎಂದು ಭರವಸೆ ನೀಡಿದರು.
7 ಜಿಲ್ಲೆಗಳ ಮನಗೆ ಕುಡಿಯುವ ನೀರು ತಲುಪಲಿದೆ,ಜತೆಗೆ ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಆಶ್ವಾಸನೆ ನೀಡಿದರು.
ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಜನತೆಗೆ ಸಿದ್ದು ತಿಳಿಹೇಳಿದರು.
ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವೆ,ಅಲ್ಲದೆ ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಇದು ಖಂಡಿತ ಎಂದು ಆಶ್ವಾಸನೆ ನೀಡಿದರು.
ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ವೇಳೆ ಸಿಎಂ ಸೂಚಿಸಿ ದರು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಮತ್ತು ಐದು ತಾಲ್ಲೂಕುಗಳ ಶಾಸಕರು, ಇತರೆ ಜನಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.