ಕಾಮುಕ ಮುಖ್ಯ ಶಿಕ್ಷಕನ ಬಂಧನ

ಮೈಸೂರು,ಮಾ.5: ಜಿಲ್ಲೆಯ ಎಚ್‌.ಡಿ.ಕೋಟೆ ಸರ್ಕಾರಿ ಶಾಲೆಯ ಲೈಂಗಿಕ ಕಿರುಕುಳದ
ಆರೋಪಿ ಮುಖ್ಯ ಶಿಕ್ಷಕ ಗಿರೀಶ್ ನನ್ನು ಬಂಧಿಸಲಾಗಿದೆ.

ಆರೋಪಿ ಗಿರೀಶ್ ಹುಬ್ಬಳ್ಳಿಯ ಅಜ್ಞಾತ ಸ್ಥಳದಲ್ಲಿ ಅಡಗಿದ್ದ.ಎಚ್‌.ಡಿ.ಕೋಟೆ ಪೊಲೀಸರು ಹುಡುಕಿ ವಶಕ್ಕೆ ಪಡೆದು
ಪೊಲೀಸ್‌ ವಾಹನದಲ್ಲಿ ಮೈಸೂರಿನತ್ತ ಕರೆತರುತ್ತಿದ್ದಾರೆ.

ಶಾಲೆಯಲ್ಲೇ ಈ ಮುಖ್ಯ ಶಿಕ್ಷಕ ಮಹಾಶಯ ಮತ್ತು ಬರುವ ಮಾತ್ರೆ ಕೊಟ್ಟು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.ಈ ಬಗ್ಗೆ ಮಕ್ಕಳು ಪೋಷಕರಿಗೆ ತಿಳಿಸಿದ್ದರು.ನಂತರ ಪೋಷಕರು ಪ್ರತಿಭಟನೆ ಮಾಡಿ ಶಿಕ್ಷಕನ ಬಂಧನಕ್ಕೆ ಆಗ್ರಹಿಸಿದ್ದರು.

ಈ ಮುಖ್ಯ ಶಿಕ್ಷಕನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿತ್ತು.

ಕಾಮುಕ ಮುಖ್ಯ ಶಿಕ್ಷಕನ ಬಂಧನ Read More

ಕೆಎಂಪಿಕೆ ಟ್ರಸ್ಟ್ ನಿಂದ ಹಾಡಿ ಜನರಿಗೆ ಹೋದಿಕೆ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ

ಮೈಸೂರು: ಮಳೆ,ಚಳಿ ಹಿನ್ನೆಲೆಯಲ್ಲಿ
ಎಚ್ ಡಿ ಕೋಟೆಯ ಕಾಡಿನಲ್ಲಿ ಹಾಡಿ ಜನಾಂಗದವರಿಗೆ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ನಿಂದ ಹೊದಿಕೆ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್ ಮಾತನಾಡಿ,ಇತ್ತೀಚಿಗೆ ಜಿಲ್ಲೆಯಲ್ಲಿ ವ್ಯಾಪಕವಾದ ಚಳಿ ಪ್ರಾರಂಭವಾಗಿದ್ದು ಮಳೆಯೂ ಸುರಿಯುತ್ತಿದೆ ಹಾಗಾಗಿ ವಾತಾವರಣದಲ್ಲಿನ ಉಷ್ಣಾಂಶ ಕಡಿಮೆಯಾಗಿದೆ ಹಾಗಾಗಿ ದೇಹಕ್ಕೆ ವಿವಿಧ ರೀತಿಯ ತೊಂದರೆಗಳಾಗುತ್ತವೆ. ಆದ್ದರಿಂದ ಮುಂಜಾಗ್ರತೆ ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಶೀತ, ನೆಗಡಿ, ಜ್ವರ, ಅಜೀರ್ಣ, ಅಲರ್ಜಿಯಂತ ಸಮಸ್ಯೆಗಳು ಕಂಡುಬರುತ್ತದೆ. ಚಳಿಯ ತೀರ್ವತೆಯಿಂದ ರಕ್ತ ಸಂಚಾರದಲ್ಲಿ ತೊಂದರೆಯಾಗುವ ಸಾಧ್ಯತೆ ಇದ್ದು ಪಾಶ್ರ್ವವಾಯು, ಅಧಿಕ ಮಧುಮೇಹ, ಕಡಿಮೆ ರಕ್ತದೊತ್ತಡ, ಹೃದಯಘಾತಗಳಾಗುವ ಸಂಭವ ಹೆಚ್ಚಾಗಿರುತ್ತದೆ.ಹಾಗಾಗಿ ಆರೋಗ್ಯದ ‌ಬಗೆಗೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು.

ಸ್ವಚ್ಚತೆ ಕಾಪಾಡಿಕೊಳ್ಳಿ, ಜಂಕ್‍ಪುಢಗಳ ಸೇವನೆ ಮಾಡಬೇಡಿ. ಯೋಗ, ಧ್ಯಾನ, ವ್ಯಾಯಾಮ, ನಡಿಗೆಯಂತಹ ದೈಹಿಕ ಚಟುವಟಿಕೆಗಳನ್ನು ಮಾಡಬೇಕು. ವಿಟಾಮಿನ್-ಡಿ ಹೊಂದಿರುವ ಸೂರ್ಯನ ಬೆಳೆಕು ಪಡೆಯಬೇಕು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಬಹುದಾಗಿದೆ ಎಂದು ತಿಳಿಹೇಳಿದರು.

ಮಧುಮೇಹ ಹೊಂದಿರುವವರು ತಪ್ಪದೇ ಔಷಧಿಗಳನ್ನು ತೆಗೆದುಕೊಳ್ಳಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು, ನಿಯಮಿತವಾಗಿ ನೀರು ಕುಡಿಯಿರಿ. ಚಳಿಯಲ್ಲಿ ಸುತ್ತಾಟ ಮಾಡುವುದು ಬೇಡ ಎಂದು ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್ ,
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ , ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಕ್ರಪಾಣಿ, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಮೋಹನ್ ಕುಮಾರ್ ಗೌಡ ಮತ್ತಿತರರು ಹಾಜರಿದ್ದರು.

ಕೆಎಂಪಿಕೆ ಟ್ರಸ್ಟ್ ನಿಂದ ಹಾಡಿ ಜನರಿಗೆ ಹೋದಿಕೆ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ Read More

ಎಚ್.ಡಿ. ಕೋಟೆಯಲ್ಲಿ ಹುಲಿ ಪ್ರತ್ಯಕ್ಷ;ಆತಂಕದಲ್ಲಿ ಜನತೆ:ಕಾರ್ಯಚರಣೆ ಸ್ಟಾರ್ಟ್

ಎಚ್.ಡಿ. ಕೋಟೆ: ಪಟ್ಟಣದ ಹೆಬ್ಬಳ್ಳ, ಸ್ಟೇಡಿಯಂ ಬಡಾವಣೆಯ ಹಿಂಭಾಗ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ನಾಗಮ್ಮ ಬಸವರಾಜು ಅವರ ಜಮೀನಿನಲ್ಲಿ ಜಮೀನು ನೋಡಿಕೊಳ್ಳುವ ಚಂದ್ರು ಅವರ ಮೇಲೆ ಹುಲಿ ದಾಳಿ ಮಾಡಲು ಮುಂದಾಗಿದೆ‌.
ತಂತಿಭೇಲಿ ಇದ್ದುದರಿಂದ ಅವರು ಹುಲಿ ದಾಳಿಯಿಂದ ಬಾಚಾವಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಎರಡು ಆನೆಗಳ ಮೂಲಕ ಕಾರ್ಯಾಚರಣೆ ಆರಂಭಿಸಲಾಗಿದೆ. ದಸರಾ ಆನೆಗಳಾದ ಬಳ್ಳೆ ಆನೆ ಶಿಬಿರಕ್ಕೆ ನೂತನವಾಗಿ ಬಂದಿರುವ ಮಹೇಂದ್ರ ಮತ್ತು ಭೀಮ ಆನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.50 ಕ್ಕೂ ಹೆಚ್ಚಿನ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪಟ್ಟಣದ ಹೆಬ್ಬಳ್ಳ ಗ್ರಾಮದ ಬಳಿ ಮತ್ತು ಟೈಗರ್ ಬ್ಲಾಕ್ ಬಳಿ ಹುಲಿ ಇರುವ ಬಗ್ಗೆ ಮಾಹಿತಿ ದೊರೆತ ಹಿನ್ನಲೆ ಎರಡೂ ಕಡೆ ಒಂದೊಂದು ದಸರಾ ಆನೆಗಳ ಸಹಾಯದಿಂದ ಕಾರ್ಯಾಚಣೆ ಆರಂಭಿಸಲಾಗಿದೆ.

ಹೆಬ್ಬಳ್ಳ ಸಮೀಪದ ದಯಾನಂದ ಅವರ ಜಮೀನಿನ ಸಮೀಪ ಹುಲಿ ಕಂಡು ತಕ್ಷಣ ವಿಡಿಯೋವನ್ನು ಮಾಡಿ ಅರಣ್ಯ ಇಲಾಖೆಗೆ ಕಳುಹಿಸಿದ್ದಾರೆ.

ನಂತರ ಟೈಗರ್ ಬ್ಲಾಕ್ ನಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಆನೆಯನ್ನು ಹೆಬ್ಬಳ್ಳಕ್ಕೆ ಕರೆಸಿಕೊಂಡು ಎರಡು ಆನೆಗಳು, ನುರಿತ ವೈದ್ಯರು ಹಾಗೂ ನುರಿತ ಅರವಳಿಕೆ ತಜ್ಞರ ಮೂಲಕ ಕಾರ್ಯಾಚರಣೆ ಆರಂಭಿಸಿದ್ದಾರೆ.

ಆನೆಗಳ ಮೂಲಕ ಕಾರ್ಯಾಚರಣೆ ಆರಂಭವಾದ ಒಂದು ಗಂಟೆಯ ಬಳಿಕ ಹುಲಿ ಕಾಣಿಸಿಕೊಂಡಿದೆ.ಆದರೆ ಹುಲಿ ದೂರವಿದ್ದ ಕಾರಣ ಅರವಳಿಕೆ ನೀಡಲು ಸಾಧ್ಯವಾಗಿಲಿಲ್ಲ.

ಹುಲಿಯ ಹೆಜ್ಜೆಯ ಜಾಡನ್ನಿಡಿದು ಕಾರ್ಯಾಚರಣೆ ಮುಂದುವರಿದಿದೆ.

ಸುದ್ದಿ ಹರಡುತ್ತಿದ್ದಂತೆ, ಸ್ಥಳಕ್ಕೆ ನೂರಾರು ಮಂದಿ ಜಮಾಯಿಸಿದ್ದರು. ಇದರಿಂದ ಜಮೀನುಗಳಲ್ಲಿ ಹಿಂಗಾರು ಬೆಳೆಗೆ ಬಿತ್ತನೆ ಮಾಡಿದ್ದ ರಾಗಿ, ಜೋಳ ಮತ್ತು ಭತ್ತದ ಫಸಲು ಹಾನಿಯಾಗಿದೆ.

ಹುಲಿಯು ಎರಡು ಮರಿಗಳೊಂದಿಗೆ ಸಂಚರಿಸುವುದನ್ನು ಹೆಬ್ಬಳ್ಳ, ಶಾಂತಿಪುರ, ಎಚ್.ಡಿ. ಕೋಟೆ ಪಟ್ಟಣ ಸೇರಿದಂತೆ ಹಲವು ಮಂದಿ ನೋಡಿದ್ದು, ಕಾರ್ಯಾಚರಣೆ ವೇಳೆ ಕೂಡಾ ಮರಿಗಳು ಮತ್ತು ಹುಲಿ ಚೆಲ್ಲಾಪಿಲ್ಲಿಯಾಗಿ ಚಲಿಸುವುದನ್ನು ಅರಣ್ಯ ಸಿಬ್ಬಂದಿ ಮತ್ತು ಸಾರ್ವಜನಿಕರು ಕಂಡಿದ್ದು, ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದಾರೆ.

ಎಚ್.ಡಿ. ಕೋಟೆಯಲ್ಲಿ ಹುಲಿ ಪ್ರತ್ಯಕ್ಷ;ಆತಂಕದಲ್ಲಿ ಜನತೆ:ಕಾರ್ಯಚರಣೆ ಸ್ಟಾರ್ಟ್ Read More

ಹೆಚ್ ಡಿ ಕೋಟೆಯಲ್ಲಿ ಒಂದೇ ಜಮೀನಿನಲ್ಲಿಸೆರೆಸಿಕ್ಕ 5 ನೆ ಚಿರತೆ: ಗಾಬರಿಗೊಂಡ ಜನ

ಎಚ್‌.ಡಿ.ಕೋಟೆ: ಇತ್ತೀಚೆಗಷ್ಟೇ ಹೆಚ್ ಡಿ ಕೋಟೆಯ ಜಮೀನಿನಲ್ಲಿ ಚಿರತೆ ಸೆರೆಯಾಗಿದ್ದರ ಬೆನ್ನಲ್ಲೇ ಮುಂಜಾನೆ ಮತ್ತೊಂದು‌ ಚಿರತೆ ಸೆರೆಸಿಕ್ಕಿದ್ದು ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಒಂದೇ ತಿಂಗಳಲ್ಲಿ ಒಂದೇ ಜಮೀನಿನಲ್ಲಿ ಇದು ಸೇರಿ ಐದು ಚಿರತೆ ಸೆರೆಯಾದಂತಾಗಿದೆ.
ನಾಲ್ಕನೆ ಚಿರತೆ ಸೆರೆ ಸಿಕ್ಕಾಗಲೇ ರೈತರು ಇನ್ನೂ ಹೆಚ್ಚು ಚಿರತೆಗಳು ಇರನಹುದೆಂದು ಅನುಮಾನ ವ್ಯಕ್ತಪಡಿಸಿ ಅರಣ್ಯ ಇಲಾಖೆಗೆ ಮತ್ತೆ ಬೋನು ಇಡುವಂತೆ ಒತ್ತಾಯಿಸಿದ್ದರು.

ಅವರ ಅನುಮಾನ ನಿಜವಾಗಿದೆ,
ಕಳೆದ ವಾರದ ಹಿಂದೆ ಚಿರತೆ ಸಿಕ್ಕಿದ ಸಮೀಪದಲ್ಲೇ ಇನ್ನೊಂದು ಗಂಡು ಚಿರತೆ ಸಿಕ್ಕಿಬಿದ್ದಿದೆ.

‌ಸಾಕು ಪ್ರಾಣಿಗಳನ್ನು ಕೊಂದು ಭೀತಿ ಸೃಷ್ಟಿಸಿದ್ದ 7ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಒಂದೇ ಜಮೀನಿನಲ್ಲಿ ಐದನೇ ಚಿರತೆ ಬೋನಿಗೆ ಸಿಕ್ಕಿರುವುದು ನೋಡಿ ಜನ ಅಚ್ವರಿಗೊಂಡಿದ್ದಾರೆ,ಜತೆಗೆ ಆತಂಕವೂ ಹೆಚ್ಚಾಗಿದೆ.

ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯ ಸಮೀಪದ ಮಾಜಿ‌ ಶಾಸಕ ದಿವಂಗತ ಎನ್.ನಾಗರಾಜು ಅವರ ಜಮೀನಿನಲ್ಲಿ ಹೀಗೆ ಒಂದರ‌ ಹಿಂದೆ ಒಂದು ಚಿರತೆ ಸಿಕ್ಕಿಬಿದ್ದಿವೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸೆರೆಸಿಕ್ಕ ಚಿರತೆಯನ್ನು ಅರಣ್ಯಕ್ಕೆ ಬಿಡಲು ಸಿಬ್ಬಂದಿ ನಿರ್ಧಾರಿಸಿದ್ದಾರೆ.ಇತ್ತ ಪಟ್ಟಣದ ಜನ ಚಿರತೆ ನೋಡಲು ಸೇರುತ್ತಲೇ ಇದ್ದಾರೆ.

ಹೆಚ್ ಡಿ ಕೋಟೆಯಲ್ಲಿ ಒಂದೇ ಜಮೀನಿನಲ್ಲಿಸೆರೆಸಿಕ್ಕ 5 ನೆ ಚಿರತೆ: ಗಾಬರಿಗೊಂಡ ಜನ Read More