ವಿವಾದಿತ ಜಾಗದಲ್ಲಿ ಮದರಸಾ: ಡಿಸಿ ಆದೇಶಕ್ಕೆ ಹೈಕೋರ್ಟ್ ತಡೆ

ಮೈಸೂರು: ಮೈಸೂರಿನ ಕ್ಯಾತಮಾರನಹಳ್ಳಿ ವಿವಾದಿತ ಜಾಗದಲ್ಲಿ ಮದರಸಾ ಮಾಡಲು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕ್ಯಾತಮಾರನಹಳ್ಳಿ ವಿವಾದಿತ ಜಾಗದಲ್ಲಿ ಮದರಸಾ ಮಾಡಲು ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಹೈ ಕೋರ್ಟ್ ತಡೆ ನೀಡಿದ್ದು ಯಥಾಸ್ಥಿತಿ ಕಾಪಾಡುವಂತೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ವಕೀಲ ಅ.ಮ ಭಾಸ್ಕರ್ , ಈಗಾಗಲೇ ವಿವಾದಿತ ಜಾಗದ ವಿಚಾರಕ್ಕೆ ಕೊಲೆ ಆಗಿದೆ. ಅಲ್ಲದೆ ಮದರಸಾ ಮಾಡಲು ಸ್ಥಳೀಯರ ವಿರೋಧವಿದೆ. ವಿವಾದಿತ ಜಾಗ ರೇಸಿಡೆನ್ಸಿಯಲ್ ಆಗಿದ್ದು, ಅಲ್ಲಿ ನರ್ಸರಿ ಅರೇಬಿಕ್ ಶಾಲೆ ತೆರೆಯಲು ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಅನುಮತಿ ನೀಡಿದ್ದರು. ಸದ್ಯ ಹೈಕೋರ್ಟ್ ಡಿಸಿ ಅವರ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ ಎಂದು ತಿಳಿಸಿದರು.

ವಿವಾದಿತ ಸ್ಥಳದಲ್ಲಿ ಮದರಸ ನಡೆಸದಂತೆ ಹೈಕೋರ್ಟ್ ತಡೆ ನೀಡಿ ಯಥಾಸ್ಥಿತಿ ಕಾಪಾಡಿಕೊಂಡು ಹೋಗಲು ಸೂಚನೆ ನೀಡಿದೆ. ಇದು ನಮಗೆ ಮೊದಲ ಹಂತದ ಜಯ ಎಂದು ಕ್ಯಾತಮಾರ‌ನಹಳ್ಳಿ ಗ್ರಾಮಸ್ಥರು ಸಂತಸ‌ ವ್ಯಕ್ತಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಅಲ್ಲಿ ಮದರಸ ತೆರೆಯಬಾರದು. ಈಗಾಗಲೇ ಅದು ಸೂಕ್ಷ್ಮ ಪ್ರದೇಶವಾಗಿದೆ. ಕೋರ್ಟ್ ಆದೇಶವನ್ನ ನಾವು ಗೌರವಿಸುತ್ತೇವೆ ಮತ್ತು ಪಾಲಿಸುತ್ತೇವೆ, ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ವಿವಾದಿತ ಜಾಗದಲ್ಲಿ ಮದರಸಾ: ಡಿಸಿ ಆದೇಶಕ್ಕೆ ಹೈಕೋರ್ಟ್ ತಡೆ Read More

ಮುಡಾ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ 27ಕ್ಕೆ ಮುಂದೂಡಿದೆ.

ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತನಿಖಾ ವರದಿಯನ್ನು ಜನವರಿ 27ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು, ಅರ್ಜಿದಾರರ ಪರ ಮಣಿಂದರ್ ಸಿಂಗ್ ವಾದ ಮಂಡಿಸಿದರು.

ವಾದದ ವೇಳೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮೂಲ ಕಡತಗಳು ನಾಪತ್ತೆಯಾಗಿವೆ ಎಂದು ಸಿಂಗ್ ಆರೋಪಿಸಿದರು.

ನಾವು ಎಲ್ಲವನ್ನೂ ನಿಭಾಯಿಸುತ್ತೇವೆ. ಆದರೆ, ಮೊದಲು ಲೋಕಾಯುಕ್ತರು ಇದುವರೆಗೆ ಮಾಡಿದ ತನಿಖೆಯ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಮುಡಾ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ Read More

ಯಾವುದೇ ತನಿಖೆಗೆ ಹೆದರುವುದಿಲ್ಲ:ಸಿದ್ದರಾಮಯ್ಯ

ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ,ಕಾನೂನಿನಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೈಕೋರ್ಟ್ ಆದೇಶದ ಕುರಿತು ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ,ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ತಿಳಿಸಿದ್ದಾರೆ.

ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ,ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.

ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ,ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ಸಿಎಂ ಬರೆದಿದ್ದಾರೆ.

ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ,ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ,ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ ಎಂದು ಹೇಳಿದ್ದಾರೆ.

ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನನ್ನ ೪೦ ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.

ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಮುಖ್ಯ ಮಂತ್ರಿಗಳು ಮನವಿ ಮಾಡಿದ್ದಾರೆ.

ಯಾವುದೇ ತನಿಖೆಗೆ ಹೆದರುವುದಿಲ್ಲ:ಸಿದ್ದರಾಮಯ್ಯ Read More

ಸಿದ್ದರಾಮಯ್ಯ ರಾಜೀನಾಮೆಗೆ‌ ಅಶೋಕ್ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ನವರ ವಿರುದ್ಧ ರಾಜ್ಯಪಾಲರ ನಿರ್ಧಾರವನ್ನ ಹೈಕೋರ್ಟ್ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರು ಮತ್ತು ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಹೈಕೋರ್ಟ್ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆಗೆ‌ ಅಶೋಕ್ ಆಗ್ರಹ Read More

ಸಿಎಂ ಸಿದ್ದರಾಮಯ್ಯಗೆ ಅಮಂಗಳವಾರ:ಹೈಕೋರ್ಟ್ ನಲ್ಲಿ ಬಿಗ್ ಶಾಕ್

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ‌ ಹೈಕೋರ್ಟ್ ನಲ್ಲಿ ಬಿಗ್ ಶಾಕ್ ಉಂಟಾಗಿದ್ದು,ಮಂಗಳವಾರ ಅಮಂಗಳವಾಗಿದೆ.

ಮುಡಾ‌ ಹಗರಣದಲ್ಲಿ ರಾಜ್ಯಪಾಲರ‌ ಪ್ರಾಸಿಕ್ಯೂಶನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿ ಹೈಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ.

ಸಿದ್ದರಾಮಯ್ಯ ಅವರ‌‌ ವಿರುದ್ಧ ತನಿಖೆ ನಡೆಸಬಹುದು ಎಂದು ನ್ಯಾ. ನಾಗಪ್ರಸನ್ನ ಅವರು ಆದೇಶಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಅಮಂಗಳವಾರ:ಹೈಕೋರ್ಟ್ ನಲ್ಲಿ ಬಿಗ್ ಶಾಕ್ Read More