ಯುಪಿಯಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತ:ಯೋಗಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತವಾಗಿರುತ್ತಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ. ಹಿಂದೂಗಳು ಸೇಫಾಗಿದ್ದರೆ, ಮುಸ್ಲಿಮರೂ ಸೇಫಾಗಿರುತ್ತಾರೆ. 100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ ಎಂದು ತಿಳಿಸಿದರು.

ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನ ಸುರಕ್ಷಿತವಾಗಿದ್ದಾರೆ. ಅವರಿಗೆ ಎಲ್ಲಾ ಧಾರ್ಮಿಕ ಪದ್ದತಿಗಳನ್ನು ಆಚರಿಸುವ ಸ್ವಾತಂತ್ರ್ಯವಿದೆ.100 ಹಿಂದೂ ಕುಟುಂಬಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ. ಆದ್ರೆ 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ‌ವಿಷಾದಿಸಿದರು.

ಹಿಂದೂ ಆಡಳಿತಗಾರರು ಇತರರ ಮೇಲೆ ಅಧಿಪತ್ಯ ಸ್ಥಾಪಿಸಿದ ಉದಾಹರಣೆ ವಿಶ್ವ ಇತಿಹಾಸದಲ್ಲಿ ಇಲ್ಲ. ಇದಕ್ಕೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವೇ ಕಾರಣ, ಇದಕ್ಕೂ ಮುನ್ನ ಪಾಕಿಸ್ತಾನದಲ್ಲೂ ಈ ಉದಾಹರಣೆ ಇತ್ತು. ಅಫ್ಘಾನಿಸ್ತಾನದಲ್ಲೂ ಏನಾಯ್ತು ಅನ್ನೋದು ಗೊತ್ತಿದೆ ಎಂದು ಹೇಳಿದರು.

2017ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಕೊಮುಗಲಭೆ ನಡೆದಿಲ್ಲ, ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತ. ನಾನು ಒಬ್ಬ ಸಾಮಾನ್ಯ ಪ್ರಜೆ, ಉತ್ತರ ಪ್ರದೇಶದ ಪ್ರಜೆ. ಎಲ್ಲರ ಸಂತೋಷಕ್ಕಾಗಿ ಹಾರೈಸುವ ʻಯೋಗಿʼ ನಾನು. ಎಲ್ಲರ ಬೆಂಬಲದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ನಂಬುವವನು ನಾನು.ನಮ್ಮ ಸನಾತನ ಧರ್ಮ ವಿಶ್ವದ ಅತ್ಯಂತ ಪುರಾತನ ಧರ್ಮವಾಗಿದೆ ಎಂದು ತಿಳಿಸಿದರು.

ಯುಪಿಯಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತ:ಯೋಗಿ Read More

ಗಣೇಶೋತ್ಸವದಲ್ಲಿ ಹಿಂದೂ-ಮುಸ್ಲಿಮರಿಂದ ಭಾವೈಕ್ಯತೆ ಸಂದೇಶ

ಮೈಸೂರು: ಗಣೇಶೋತ್ಸವದಲ್ಲಿ ಹಿಂದೂ-ಮುಸ್ಲಿಮರು ಭಾವೈಕ್ಯದ ಸಂದೇಶ
ಸಾರುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ‌

ನಗರದ ಸುಣ್ಣದ ಕೇರಿಯಲ್ಲಿ ಶ್ರೀ ವಿನಾಯಕ ಯುವಕರ ಬಳಗದ ವತಿಯಿಂದ ಗಣೇಶ ಪ್ರತಿಷ್ಠಾಪನೆ ಯಲ್ಲಿ ಮುಸಲ್ಮಾನ್ ಸಮುದಾಯದ ಮುಖಂಡರು
ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ವೇಳೆ ಕಾಂಗ್ರೆಸ್ ಮುಖಂಡ ಜಿ ಶ್ರೀನಾಥ್ ಬಾಬು ಮಾತನಾಡಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಸಮೀಪ ಬರುವುದರಿಂದ ಉಭಯ ಸಮಾಜದ ಬಾಂಧವರು ಈ ಹಬ್ಬಗಳನ್ನು ಶಾಂತಿಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳುವಂತೆ ಕರೆ ನೀಡಿದರು.

ಶ್ರೀ ವಿನಾಯಕರ ಯುವಕರ ಬಳಗದ ಅಧ್ಯಕ್ಷ ಮಂಜುನಾಥ್ ಮಾತನಾಡಿ ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ಧವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ, ಆದರೆ ಕೆಲವು ಕಿಡಿಗೇಡಿಗಳಿಂದ ಎರಡೂ ಸಮಾಜದಲ್ಲಿ ಶಾಂತಿಯನ್ನು ಕದಡವ ಯತ್ನಗಳು ನಡೆಯುತ್ತಿದ್ದು, ಆದ್ದರಿಂದ ಎರಡು ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯ ವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಈ ದಿನ ಈ ಯುವಕರು ಒಟ್ಟಾಗಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತಾ ಬಂದಿರುವುದು ಬಹಳ ಸಂತಸದ ವಿಚಾರ. ಇದೇ ರೀತಿ ಸೌಹಾರ್ದತೆ ಆಚರಣೆ ಪ್ರತಿ ಜಿಲ್ಲೆಯಲ್ಲಿ ಆದರೆ ಉತ್ತಮ ವಾತಾವರಣವನ್ನು ರಾಜ್ಯದಲ್ಲಿ ಕಾಣಲು ಸಾಧ್ಯವಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷಾ ಮಾತನಾಡಿ ಹಿಂದೂ,ಮುಸಲ್ಮಾನ
ಸಮುದಾಯಗಳು ಸೇರಿದಂತೆ ಎಲ್ಲಾ
ಜನಾಂಗದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದು, ಈದ್ ಮಿಲಾದ್ ಹಾಗೂ ಮೊಹರಂನಲ್ಲಿ ಹಿಂದೂಗಳು ಪಾಲ್ಗೊಂಡು ಸೌಹಾರ್ದ ಸಾರುವ ಕೆಲಸಗಳು ಪ್ರತಿ ಜಿಲ್ಲೆಯಲ್ಲೂ ಆಗಬೇಕು ಇಂತಹ ಕಾರ್ಯಕ್ರಮಗಳಿಂದ ಸೌಹಾರ್ದತೆ ಹೆಚ್ಚು ಗಟ್ಟಿಯಾಗುತ್ತದೆ ಎಂದು ಹೇಳಿದರು

ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಶ್ರೀ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಮಂಜುನಾಥ್, ಕಿಶೋರ್ ಕುಮಾರ್, ಜಿ ರಾಘವೇಂದ್ರ, ಬ್ಯಾಂಕ್ ಸಿದ್ದರಾಜು, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷ ಹಿನಕಲ್ ಉದಯ್, ಕಿರಣ್, ಚಕ್ರಪಾಣಿ,ಮುಸಲ್ಮಾನ್ ಸಮುದಾಯದ ಮುಖಂಡರುಗಳಾದ ಗುಲ್ಚನ್ ಪಾಷಾ, ಇರ್ಫಾನ್, ಸೈಯಾದ್, ಇಮ್ರಾನ್ ಪಾಷಾ, ಮಹಮ್ಮದ್, ಶಫಿ ಉಲ್ಲಾ ಖಾನ್ ಹಾಗೂ ಸ್ಥಳೀಯ ಮಕ್ಕಳು ಹಾಜರಿದ್ದರು.

ಗಣೇಶೋತ್ಸವದಲ್ಲಿ ಹಿಂದೂ-ಮುಸ್ಲಿಮರಿಂದ ಭಾವೈಕ್ಯತೆ ಸಂದೇಶ Read More