ಬೈಕ್ ಗೆ ಬಸ್ ಡಿಕ್ಕಿ:ಮೂವರು ಯುವಕರ ದು*ರ್ಮರಣ

ಹಾಸನ: ಜಿಲ್ಲೆಯ ಹೊಳೆನರಸೀಪುರ ‌ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಹೊಳೆನರಸಿಪುರ ತಾಲೂಕಿನ ಯಡೆಗೌಡನ ಹಳ್ಳಿ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.

ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ತರುಣ್ (19), ರೇವಂತ್ (26) ಹಾಗೂ ಗಾಂಧಿನಗರ ಬಡಾವಣೆಯ ಇರ್ಫಾನ್ (20) ಮೃತಪಟ್ಟ ಯುವಕರು.

ಇರ್ಫಾನ್ ಸ್ಥಳದಲ್ಲಿ ಮೃತಪಟ್ಟರೆ ಉಳಿದಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮರಣ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನದಿಂದ ಮೈಸೂರು ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಮೈಸೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ

ಈ ಸಂಬಂಧ ಹಳ್ಳಿ ಮೈಸೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬೈಕ್ ಗೆ ಬಸ್ ಡಿಕ್ಕಿ:ಮೂವರು ಯುವಕರ ದು*ರ್ಮರಣ Read More

ಕುಡಿದ ಮತ್ತಿನಲ್ಲಿ ತಂದೆ,ಅಣ್ಣನನ್ನು ಕೊಂದ ಪಾಪಿ ತಮ್ಮ

(ವರದಿ:ಸಿಬಿಎಸ್)

ಹಾಸನ: ಕುಡಿದ ಮತ್ತಿನಲ್ಲಿ ತಂದೆ ಹಾಗೂ ಅಣ್ಣನನ್ನು ಪಾಪಿ ತಮ್ಮ ಕೊಲೆ ಮಾಡಿರುವ ಹೇಯ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ನಡೆದಿದೆ.

ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದ್ದು,ದೇವೇಗೌಡ (70), ಮಂಜುನಾಥ್ (50) ಕೊಲೆಯಾದ ನತದೃಷ್ಟ ತಂದೆ,ಮಗ

ಮೋಹನ್ (47) ಎಂಬಾತ ತಂದೆ ಹಾಗೂ ಅಣ್ಣನನ್ನು ಕೊಲೆ ಮಾಡಿದ ಆರೋಪಿ.

ದೇವೇಗೌಡರಿಗೆ ಮಂಜುನಾಥ್ ಹಾಗೂ ಮೋಹನ್ ಇಬ್ಬರು ಗಂಡು ಮಕ್ಕಳು.ವಯಸ್ಸಾಗಿದ್ದರೂ ಇಬ್ಬರಿಗೂ ಮದುವೆ‌ ಆಗಿರಲಿಲ್ಲ.

ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸವಿದ್ದ ಮೋಹನ್.ಮಂಜುನಾಥ್
ತಂದೆ-ತಾಯಿ ಜೊತೆ ವಾಸವಿದ್ದರು.

ಇತ್ತೀಚೆಗೆ‌ ಮೋಹನ್ ಕುಡಿತದ ದಾಸನಾಗಿದ್ದ.
ಆಸ್ತಿ ವಿಚಾರಕ್ಕೆ ಆಗಾಗ ಮನೆಯಲ್ಲಿ ಜಗಳ ನಡೆಯುತ್ತಿತ್ತು.

ಇದೇ‌ವಿಚಾರವಾಗಿ ನಿನ್ನೆ ಕೂಡಾ ಜಗಳ ನಡೆದಿತ್ತು,ಕುಡಿದ ಮತ್ತಿನಲ್ಲಿ ‌ತಂದೆ ಹಾಗೂ‌ ಅಣ್ಣ ಇಬ್ಬರನ್ನು ಬರ್ಬರಬಾಗಿ ಹತ್ಯೆಗೈದ ತಮ್ಮ ಮೋಹನ್ ಪರಾರಿಯಾಗಿದ್ದಾನೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕುಡಿದ ಮತ್ತಿನಲ್ಲಿ ತಂದೆ,ಅಣ್ಣನನ್ನು ಕೊಂದ ಪಾಪಿ ತಮ್ಮ Read More

ಸುಪ್ರೀಂ ಕೋರ್ಟ್​ನಲ್ಲೂ ಪ್ರಜ್ವಲ್‌ ರೇವಣ್ಣ ಜಾಮೀನು ವಜಾ

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿಲ್ಲ,ಹಾಗಾಗಿ ಪರಪ್ಪನ ಅಗ್ರಹಾರವೆ ಗತಿಯಾಗಿದೆ.

ಕಳೆದ ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಜ್ಚಲ್‌, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರು.ಜತೆಗೆ ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.

ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು.

ಪ್ರಜ್ವಲ್‌ ರೇವಣ್ಣ, ಅವರ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧ ಕಳೆದ ಏಪ್ರಿಲ್‌ 28 ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು.

ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲೂ ಪ್ರಜ್ವಲ್‌ ರೇವಣ್ಣ ಜಾಮೀನು ವಜಾ Read More