ಹಾಂಗ್ ಕಾಂಗ್‌ನಲ್ಲಿ ಭಾರೀ ಬೆಂಕಿ ಅವಘಡ: 13 ಮಂದಿ ದುರ್ಮರಣ
ಹಾಂಗ್ ಕಾಂಗ್: ಹಾಂಗ್ ಕಾಂಗ್‌ನಲ್ಲಿನ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ 13 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ.
ಹಾಂಗ್ ಕಾಂಗ್‌ನ ತೈ ಪೊ ಜಿಲ್ಲೆಯಲ್ಲಿ ಬಹುಮಹಡಿ ಅಪಾರ್ಟ್ಮೆಂಟ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು 9 ಮಂದಿ ಸಜೀವ ದಹನವಾದರೆ ನಾಲ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಸುಮಾರು 700 ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಬೆಂಕಿ ಆರಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ 13 ಜನ ಮೃತಪಟ್ಟಿದ್ದಾರೆ.
ಹಾಂಗ್ ಕಾಂಗ್‌ನಲ್ಲಿ ಭಾರೀ ಬೆಂಕಿ ಅವಘಡ: 13 ಮಂದಿ ದುರ್ಮರಣ Read More