ರಾಜ್ಯ ಒಕ್ಕಲಿಗರ ಸಂಘದಿಂದ ಸಾಧಕರಿಗೆ ಸನ್ಮಾನ

ಮೈಸೂರು: ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಕೃಷ್ಣಪ್ಪ ರಂಗಮ್ಮ ಎಜುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂಕ ಪಡೆದ ಒಕ್ಕಲಿಗ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಸಾಧಕರನ್ನು ಸನ್ಮಾನಿಸಲಾಯಿತು.

ಮೈಸೂರಿನ ವಿಜಯನಗರದ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಸಮಾರಂಭ ಯಶಸ್ವಿಯಾಗಿ ನಡೆಯಿತು.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 95ಕ್ಕಿಂತ ಹೆಚ್ಚು ಅಂಕ ಪಡೆದ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿ ಶ್ರೀ ಸ್ಪಟಿಕ ಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಂಜಾವಧೂತ ಸ್ವಾಮೀಜಿ ಮತ್ತು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖ ಮಠ ಮೈಸೂರಿನ ಕಾರ್ಯದರ್ಶಿಗಳಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮವನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಉದ್ಘಾಟಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ಡಾ. ಡಿ ಮಾದೇಗೌಡರು, ಸಿ ಆರ್ ಪಿ ಎಫ್ ನಿವೃತ್ತ ಡಿಐಜಿ ಕೆ.ಅರ್ಕೇಶ್, ಆರಕ್ಷಕ ಉಪ ಅಧೀಕ್ಷಕರು ಶಾಂತ ಮಲ್ಲಪ್ಪ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿಗಳಾದ ಡಾ. ಎಂ ಎಸ್ ರಾಮೇಗೌಡ, ಯು ಪಿ ಎಸ್‌ ಸಿ ಶ್ರೇಯಸ್, ರಿಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ವಿನೋದ್ ಭೈರಪ್ಪ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಾಸಕರುಗಳಾದ ಕೆ ಹರೀಶ್ ಗೌಡ, ಜಿ.ಟಿ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರುಗಳಾದ ಸಾ.ರಾ ಮಹೇಶ್, ನಾಗೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣ ಗೌಡ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರಾಜ್ಯ ಒಕ್ಕಲಿಗರ ಸಂಘದ ಕಾಮಗಾರಿ ಅಧ್ಯಕ್ಷ ಸಿ.ಜಿ ಗಂಗಾಧರ್,
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರುಗಳಾದ ಕೆ.ವಿ ಶ್ರೀಧರ್, ಡಾ. ಎಂ ಬಿ ಮಂಜೇಗೌಡ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಮೈಸೂರು ಜಿಲ್ಲಾ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಹನುಮಂತಯ್ಯ ಉಪಸ್ಥಿತರಿದ್ದರು.

ರಾಜ್ಯ ಒಕ್ಕಲಿಗರ ಸಂಘದಿಂದ ಸಾಧಕರಿಗೆ ಸನ್ಮಾನ Read More

ವಿದ್ವಾನ್ ಪ್ರಹ್ಲಾದ್ ರಾವ್ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ನಿಂದ ಗೌರವ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಪೂರ್ವಜರ ಕೆಲಸವನ್ನು ಮುಂದುವರೆಸಿಕೊಂಡು ಬಂದಿರುವ ವಿದ್ವಾನ್ ಪ್ರಹ್ಲಾದ್ ರಾವ್ ಅವರನ್ನು ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ‌ ಸನ್ಮಾನಿಸಲಾಯಿತು.

ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳ ಹಾಗೂ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜೆಯನ್ನು ಸತತ 28ವರ್ಷಗಳಿಂದ ನೆರವೇರಿಸಿಕೊಂಡು ಬರುತ್ತಿದ್ದು
ನಮ್ಮ ಸಂಸ್ಕಾರ ಸಂಸ್ಕೃತಿ ಹಾಗೂ ಪೂರ್ವಜರ ಕೆಲಸವನ್ನು ಮುಂದುವರೆಸಿಕೊಂಡು ಬಂದಿರುವ ವಿದ್ವಾನ್ ಪ್ರಹ್ಲಾದ್ ರಾವ್ ಅವರನ್ನು ಅರಮನೆ ಆವರಣದಲ್ಲಿ ಆನೆಗಳನ್ನು ಮರಳಿ ಕಾಡಿಗೆ ಕಲಿಸುವ ಪೂಜಾ ಕಾರ್ಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಜಿ ರಾಘವೇಂದ್ರ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಎಸ್. ಎನ್ ರಾಜೇಶ್, ರವಿಚಂದ್ರನ್, ಮೋಹನ್, ನಿತಿನ್, ದಿನೇಶ್, ಅಮಿತ್ ಮತ್ತಿತರರು ಹಾಜರಿದ್ದರು.

ವಿದ್ವಾನ್ ಪ್ರಹ್ಲಾದ್ ರಾವ್ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ನಿಂದ ಗೌರವ Read More